ಬೆನೆಲ್ಲಿ ಇಂಪೀರಿಯಲ್ 400 ಬೈಕಿನ ಮೇಲೆ ಭರ್ಜರಿ ಇಯರ್ ಎಂಡ್ ಆಫರ್

ಬೆನೆಲ್ಲಿ ಇಂಡಿಯಾ ಕಂಪನಿಯು ಇಂಪೀರಿಯಲ್ 400 ಬೈಕಿನ ಮೇಲೆ ಇಯರ್ ಎಂಡ್ ಆಫರ್ ಅನ್ನು ಘೋಷಿಸಿದೆ. ಬೆನೆಲ್ಲಿ ತನ್ನ ಇಂಪೀರಿಯಲ್ 400 ಬೈಕಿನ ಮೇಲೆ ಬರೊಬ್ಬರಿ ರೂ.12,000 ಗಳವರೆಗಿನ ಆಫರ್ ಅನ್ನು ಘೋಷಿಸಿದೆ.

ಬೆನೆಲ್ಲಿ ಇಂಪೀರಿಯಲ್ 400 ಬೈಕಿನ ಮೇಲೆ ಭರ್ಜರಿ ಇಯರ್ ಎಂಡ್ ಆಫರ್

ಇಂಪೀರಿಯಲ್ 400 ಬೈಕಿನ ಮೇಲಿನ ಇಯರ್ ಎಂಡ್ ಆಫರ್ ಎಲ್ಲಾ ಬೆನೆಲ್ಲಿ ಡೀಲರುಗಳ ಬಳಿ ಸೀಮಿತ ಅವಧಿವರೆಗೆ ಲಭ್ಯವಿರುತ್ತದೆ. ಬೆನಲ್ಲಿ ಕಂಪನಿಯು ಭಾರತೀಯ ಮಾರುಕಟ್ಟೆಯಲ್ಲಿ ಬಿಎಸ್-6 ಮಾಲಿನ್ಯ ನಿಯಮಕ್ಕೆ ಅನುಗುಣವಾಗಿ ಇಂಪೀರಿಯಲ್ 400 ಬೈಕನ್ನು ಮಾತ್ರ ಮಾರಾಟ ಮಾಡಲಾಗುತ್ತಿದೆ. ಬೆನೆಲ್ಲಿ ಕಂಪನಿಯು ವರ್ಷಾಂತ್ಯದಲ್ಲಿ ತನ್ನ ಇಂಪೀರಿಯಲ್ 400 ಬೈಕಿನ ಮಾರಾಟವನ್ನು ಹೆಚ್ಚಿಸಲು ಭರ್ಜರಿ ಆಫರ್ ಅನ್ನು ಘೋಷಿಸಿದೆ.

ಬೆನೆಲ್ಲಿ ಇಂಪೀರಿಯಲ್ 400 ಬೈಕಿನ ಮೇಲೆ ಭರ್ಜರಿ ಇಯರ್ ಎಂಡ್ ಆಫರ್

ಬೆನೆಲ್ಲಿ ತನ್ನ ಇಂಪೀರಿಯಲ್ 400 ಬೈಕಿನ ಮೇಲೆ ಆಕರ್ಷಕ ಫೈನಾನ್ಸ್ ಆಫರ್ ಅನ್ನು ನೀಡಿದೆ. ಬೆನೆಲ್ಲಿ ಇಂಪೀರಿಯಲ್ 400 ಬೈಕಿನ ಮೇಲೆ ರೂ.4,999ರ ಲೋ ಇಎಂಐ ಆಫರ್ ಅನ್ನು ನೀಡಿದೆ. ಇನ್ನು ಸಂಭಾವ್ಯ ಗ್ರಾಹಕರು ಎಕ್ಸ್‌ಶೋರೂಂ ಬೆಲೆಯ ಶೇ.85 ರಷ್ಟು ಗರಿಷ್ಠ ಹಣವನ್ನು ಸಹ ಪಡೆಯಬಹುದು.

MOST READ: ಬಿಡುಗಡೆಯಾಯ್ತು ಹೊಸ ಟ್ರಯಂಫ್ ಬೊನೊವೆಲ್ಲಿ ಸ್ಪೀಡ್‍‍ಮಾಸ್ಟರ್ ಬೈಕ್

ಬೆನೆಲ್ಲಿ ಇಂಪೀರಿಯಲ್ 400 ಬೈಕಿನ ಮೇಲೆ ಭರ್ಜರಿ ಇಯರ್ ಎಂಡ್ ಆಫರ್

ಫೈನಾನ್ಸ್ ಆಫರ್ ಜೊತೆಗೆ ಬೆನೆಲ್ಲಿ ಕಂಪನಿಯು ಇಂಪೀರಿಯಲ್ 400 ಬೈಕಿಗೆ 2 ವರ್ಷಗಳ ಕಂಪ್ಲೀಮೆಂಟರಿ ಸರ್ವಿಸ್ ಮತ್ತು 3 ವರ್ಷಗಳ ಅನಿಯಮಿತ ಕೆಎಂಎಸ್ ವಾರಂಟಿಯನ್ನು ನೀಡುತ್ತದೆ. ಈ ಆಫರ್ ಗಳು ಬೆನೆಲ್ಲಿ ಇಂಪೀರಿಯಲ್ 400 ಬೈಕಿನ ಮರಾಟವನ್ನು ಹೆಚ್ಚಿಸಲು ನೆರವಾಗಬಹುದು.

ಬೆನೆಲ್ಲಿ ಇಂಪೀರಿಯಲ್ 400 ಬೈಕಿನ ಮೇಲೆ ಭರ್ಜರಿ ಇಯರ್ ಎಂಡ್ ಆಫರ್

ಇನ್ನು ಬೆನೆಲ್ಲಿ ಇಂಪೀರಿಯಲ್ 400 ಹಿಂದಿನ ಮಾದರಿಯನ್ನು 2019ರಲ್ಲಿ ಬಿಡುಗಡೆಗೊಳಿಸಿದ್ದರು. ಇನ್ನು ಬಿಎಸ್-6 ಬೆನೆಲ್ಲಿ ಇಂಪೀರಿಯಲ್ 400 ಬೈಕಿನಲ್ಲಿ 374 ಸಿಸಿ ಸಿಂಗಲ್-ಸಿಲಿಂಡರ್ ಏರ್-ಕೂಲ್ಡ್ ಎಂಜಿನ್‌ ಅನ್ನು ಅಳವಡಿಸಲಾಗಿದೆ. ಈ ಎಂಜಿನ್ ಅನ್ನು ಬಿಎಸ್-6 ಮಾಲಿನ್ಯ ನಿಯಮಕ್ಕೆ ಅನುಗುಣವಾಗಿ ನವೀಕರಿಸಲಾಗಿದೆ.

MOST READ: ಬಿಡುಗಡೆಯಾಯ್ತು ಹೊಸ ಕವಾಸಕಿ ವಲ್ಕನ್ ಎಸ್ ಬೈಕ್

ಬೆನೆಲ್ಲಿ ಇಂಪೀರಿಯಲ್ 400 ಬೈಕಿನ ಮೇಲೆ ಭರ್ಜರಿ ಇಯರ್ ಎಂಡ್ ಆಫರ್

ಈ ಎಂಜಿನ್ 6000 ಆರ್‌ಪಿಎಂನಲ್ಲಿ 20 ಬಿಹೆಚ್‌ಪಿ ಪವರ್ ಮತ್ತು 3500 ಆರ್‌ಪಿಎಂನಲ್ಲಿ 29 ಎನ್ಎಂ ಪೀಕ್ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಎಂಜಿನ್ ಅನ್ನು 5-ಸ್ಪೀಡ್ ಗೇರ್‌ಬಾಕ್ಸ್‌ಗೆ ಜೋಡಿಸಲಾಗಿದೆ.

ಬೆನೆಲ್ಲಿ ಇಂಪೀರಿಯಲ್ 400 ಬೈಕಿನ ಮೇಲೆ ಭರ್ಜರಿ ಇಯರ್ ಎಂಡ್ ಆಫರ್

ಎಂಜಿನ್ ಅನ್ನು ಬಿಎಸ್-6 ಮಾಲಿನ್ಯ ನಿಯಮಕ್ಕೆ ಅನುಗುಣವಾಗಿ ನವೀಕರಿಸಲಾಗಿರುವುದನ್ನು ಹೊರತುಪಡಿಸಿದರೆ ಇತರ ಯಾವುದೇ ಬದಲಾವಣೆಗಳನ್ನು ಮಾಡಲಾಗಿಲ್ಲ. ಹೊಸ ಇಂಪೀರಿಯಲ್ 400 ಬೈಕ್, ಮುಂಭಾಗದಲ್ಲಿ 19 ಇಂಚಿನ ಹಾಗೂ ಹಿಂಭಾಗದಲ್ಲಿ 18 ಇಂಚಿನ ಟಯರ್‌ಗಳನ್ನು ಹೊಂದಿದೆ.

MOST READ: ಹೊಸ ಬಣ್ಣದ ಆಯ್ಕೆಯನ್ನು ಪಡೆದುಕೊಂಡ 2021ರ ಕವಾಸಕಿ ನಿಂಜಾ 1000 ಎಸ್‌ಎಕ್ಸ್ ಬೈಕ್

ಬೆನೆಲ್ಲಿ ಇಂಪೀರಿಯಲ್ 400 ಬೈಕಿನ ಮೇಲೆ ಭರ್ಜರಿ ಇಯರ್ ಎಂಡ್ ಆಫರ್

ಬೆನೆಲ್ಲಿ ಇಂಪೀರಿಯಲ್ 400 ಬೈಕ್ ಕ್ಲಾಸಿಕ್ ಲುಕ್ ಆನ್ನು ಹೊಂದಿದೆ. ಈ ಬೆನೆಲ್ಲಿ ಇಂಪೀರಿಯಲ್ 400 ಬೈಕ್ ಮುಂಭಾಗದಿಂದ ಆಕರ್ಷಕವಾಗಿ ಕಾಣುತ್ತದೆ. ಕ್ಲಾಸಿಕ್ ಲುಕ್ ಗಾಗಿ ದುಂಡಾಗಿರುವ ಹೆಡ್‌ಲ್ಯಾಂಪ್‌ಗಳನ್ನು ನೀಡಲಾಗಿದೆ. ಇದರ ಜೊತೆಗೆ ಈ ಬೈಕ್‌ನಲ್ಲಿ ಟ್ವಿನ್ ಪಾಡ್ ಇನ್ಸ್ ಟ್ರೂಮೆಂಟ್ ಕ್ಲಸ್ಟರ್‌ ನೀಡಲಾಗಿದೆ.

ಬೆನೆಲ್ಲಿ ಇಂಪೀರಿಯಲ್ 400 ಬೈಕಿನ ಮೇಲೆ ಭರ್ಜರಿ ಇಯರ್ ಎಂಡ್ ಆಫರ್

ಬೆನೆಲ್ಲಿ ಇಂಪೀರಿಯಲ್ 400 ಬೈಕ್ ಭಾರತೀಯ ಮಾರುಕಟ್ಟೆಯಲ್ಲಿ ಜಾವ ಬೈಕುಗಳಿಗೆ ಮತ್ತು ರಾಯಲ್ ಎನ್‌ಫೀಲ್ಡ್ ಕ್ಲಾಸಿಕ್ 350 ಮಾದರಿಗೆ ನೇರ ಪೈಪೋಟಿಯನ್ನು ನೀಡುತ್ತದೆ. ಇಂಪೀರಿಯಲ್ 400 ಬೈಕಿನ ಮೇಲೆ ಭರ್ಜರಿ ಆಫರ್ ಅನ್ನು ನೀಡಿರುವುದರಿಂದ ಈ ಮಾರಾಟವನ್ನು ಹೆಚ್ಚಿಸಲು ಸಹಾಯವಾಗಬಹುದು.

More from DriveSpark

Article Published On: Wednesday, December 23, 2020, 18:55 [IST]
English summary
Benelli Imperiale 400 Year-End Offers. Read In Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+