ಬೆನೆಲ್ಲಿ ಇಂಪೀರಿಯಲ್ 400 ಕ್ಲಾಸಿಕ್ ಬೈಕ್ ಖರೀದಿ ಮೇಲೆ ಹೊಸ ಫೈನಾನ್ಸ್ ಆಫರ್

ಬೆನೆಲ್ಲಿ ಇಂಡಿಯಾ ಕಂಪನಿಯು ಬೈಕ್ ಮಾರಾಟ ಹೆಚ್ಚಿಸುವ ನಿಟ್ಟಿನಲ್ಲಿ ಹಲವಾರು ಹೊಸ ಯೋಜನೆಗಳಿಗೆ ಚಾಲನೆ ನೀಡಿದ್ದು, ತನ್ನ ಕ್ಲಾಸಿಕ್ ಬೈಕ್ ಮಾದರಿಯಾದ ಇಂಪೀರಿಯಲ್ 400 ಮಾದರಿಯ ಖರೀದಿಯ ಮೇಲೆ ಆಕರ್ಷಕ ಫೈನಾನ್ಸ್ ಆಫರ್ ಘೋಷಣೆ ಮಾಡಿದೆ.

ಬೆನೆಲ್ಲಿ ಇಂಪೀರಿಯಲ್ 400 ಕ್ಲಾಸಿಕ್ ಬೈಕ್ ಖರೀದಿ ಮೇಲೆ ಹೊಸ ಫೈನಾನ್ಸ್ ಆಫರ್

ಕರೋನಾ ವೈರಸ್‌ನಿಂದಾಗಿ ಹೊಸ ವಾಹನಗಳ ಮಾರಾಟದಲ್ಲಿ ಭಾರೀ ಹಿನ್ನಡೆ ಅನುಭವಿಸಿದ್ದ ಆಟೋ ಕಂಪನಿಗಳು ಇದೀಗ ನಿಧಾನವಾಗಿ ಚೇತರಿಸಿಕೊಳ್ಳುತ್ತಿದ್ದು, ವಾಹನ ಮಾರಾಟ ಹೆಚ್ಚಿಸುವ ನಿಟ್ಟಿನಲ್ಲಿ ವಿವಿಧ ಆಫರ್‌ಗಳು ಮತ್ತು ಸರಳ ಸಾಲ ಸೌಲಭ್ಯಗಳ ಮೂಲಕ ಗ್ರಾಹಕರನ್ನು ಸೆಳೆಯುತ್ತಿವೆ. ಲಾಕ್‌ಡೌನ್‌ನಿಂದಾಗಿ ಏಪ್ರಿಲ್, ಮೇ ಮತ್ತು ಜೂನ್ ಅವಧಿಯಲ್ಲಿ ಭಾರೀ ಪ್ರಮಾಣದ ಮಾರಾಟ ಕುಸಿತ ಕಂಡಿದ್ದ ಆಟೋ ಕಂಪನಿಗಳು ಜುಲೈ ಮತ್ತು ಅಗಸ್ಟ್ ಅವಧಿಯಲ್ಲಿನ ವಾಹನ ಮಾರಾಟದಲ್ಲಿ ಸಾಕಷ್ಟು ಸುಧಾರಣೆ ಕಂಡಿದ್ದು, ಸೆಪ್ಟೆಂಬರ್ ಮತ್ತು ಅಕ್ಟೋಬರ್ ಅವಧಿಯಲ್ಲಿನ ಮಾರಾಟವು ಇನ್ನಷ್ಟು ಹೆಚ್ಚಳವಾಗುವ ನೀರಿಕ್ಷೆಯಿಟ್ಟುಕೊಂಡಿವೆ.

ಬೆನೆಲ್ಲಿ ಇಂಪೀರಿಯಲ್ 400 ಕ್ಲಾಸಿಕ್ ಬೈಕ್ ಖರೀದಿ ಮೇಲೆ ಹೊಸ ಫೈನಾನ್ಸ್ ಆಫರ್

ಈ ನಿಟ್ಟಿನಲ್ಲಿ ಗ್ರಾಹಕರನ್ನು ಸೆಳೆಯುತ್ತಿರುವ ಆಟೋ ಕಂಪನಿಗಳು ಹಲವಾರು ಆಫರ್‌ಗಳನ್ನು ನೀಡುತ್ತಿದ್ದು, ಬೆನೆಲ್ಲಿ ಇಂಡಿಯಾ ಕೂಡಾ ಕ್ಲಾಸಿಕ್ ಬೈಕ್ ಮಾದರಿಯಾದ ಇಂಪೀರಿಯಲ್ 400 ಮಾದರಿಯ ಮೇಲೆ ಹೊಸ ಆಫರ್ ನೀಡುತ್ತಿದೆ.

ಬೆನೆಲ್ಲಿ ಇಂಪೀರಿಯಲ್ 400 ಕ್ಲಾಸಿಕ್ ಬೈಕ್ ಖರೀದಿ ಮೇಲೆ ಹೊಸ ಫೈನಾನ್ಸ್ ಆಫರ್

ಹೊಸ ಫೈನಾನ್ಸ್ ಆಫರ್‌ ಅಡಿ ಇಂಪೀರಿಯಲ್ 400 ಬೈಕ್ ಖರೀದಿಸುವ ಗ್ರಾಹಕರಿಗೆ ಅತಿ ಕಡಿಮೆ ಬಡ್ಡಿದರದಲ್ಲಿ ಶೇ.85ರಷ್ಟು ಸಾಲಸೌಲಭ್ಯ ದೊರೆಯಲಿದ್ದು, ರೂ.4,999 ಮಾಸಿಕ ಕಂತು ಮೂಲಕ ಗರಿಷ್ಠ ಅವಧಿಯ ಸಾಲ ಮರುಪಾವತಿಗೆ ಅವಕಾಶ ನೀಡಲಾಗಿದೆ.

ಬೆನೆಲ್ಲಿ ಇಂಪೀರಿಯಲ್ 400 ಕ್ಲಾಸಿಕ್ ಬೈಕ್ ಖರೀದಿ ಮೇಲೆ ಹೊಸ ಫೈನಾನ್ಸ್ ಆಫರ್

ಬೆನೆಲ್ಲಿ ಕಂಪನಿಯು ಘೋಷಣೆ ಮಾಡಿರುವ ಹೊಸ ಆಫರ್ ಸೀಮಿತ ಅವಧಿಗೆ ಮಾತ್ರ ಲಭ್ಯವಿದ್ದು, ಲಾಕ್‌ಡೌನ್‌ನಿಂದ ಹೊಸ ವಾಹನ ಖರೀದಿ ಯೋಜನೆಯನ್ನು ಮುಂದೂಡಿಕೆ ಮಾಡಿರುವ ಗ್ರಾಹಕರಿಗೆ ಇದು ಸಾಕಷ್ಟು ಸಹಕಾರಿಯಾಗಲಿದೆ. ಇನ್ನು ರೂ.6 ಸಾವಿರ ಮುಂಗಡದೊಂದಿಗೆ ಹೊಸ ಬೈಕ್ ಖರೀದಿಗಾಗಿ ಬುಕ್ಕಿಂಗ್ ಮಾಡಬಹುದಾಗಿದ್ದು, ಹೊಸ ಬೈಕ್ ಮಾದರಿಯು ಬಿಎಸ್-6 ಎಂಜಿನ್‌ನೊಂದಿಗೆ ಖರೀದಿಗೆ ಲಭ್ಯವಿದೆ.

ಬೆನೆಲ್ಲಿ ಇಂಪೀರಿಯಲ್ 400 ಕ್ಲಾಸಿಕ್ ಬೈಕ್ ಖರೀದಿ ಮೇಲೆ ಹೊಸ ಫೈನಾನ್ಸ್ ಆಫರ್

ಎಪ್ರಿಲ್ 1ರಿಂದ ಜಾರಿಗೆ ಬಂದಿರುವ ಹೊಸ ಬಿಎಸ್-6 ಎಮಿಷನ್‌ ಪ್ರಕಾರ ತನ್ನ ಪ್ರಮುಖ ಬೈಕ್ ಮಾದರಿಗಳನ್ನು ಉನ್ನತೀಕರಿಸಿರುವ ಬೆನೆಲ್ಲಿ ಕಂಪನಿಯು ಇಂಪೀರಿಯರ್ 400 ಬೈಕ್ ಮಾದರಿಯ ಮಾರಾಟದಲ್ಲಿ ಉತ್ತಮ ಬೇಡಿಕೆ ಪಡೆದುಕೊಳ್ಳುತ್ತಿದೆ.

ಬೆನೆಲ್ಲಿ ಇಂಪೀರಿಯಲ್ 400 ಕ್ಲಾಸಿಕ್ ಬೈಕ್ ಖರೀದಿ ಮೇಲೆ ಹೊಸ ಫೈನಾನ್ಸ್ ಆಫರ್

ಹೊಸ ಬೆನೆಲ್ಲಿ ಇಂಪೀರಿಯೇಲ್ 400 ಆರಂಭಿಕ ಬೆಲೆಯು ಭಾರತದಲ್ಲಿ ದೆಹಲಿ ಎಕ್ಸ್ ಶೋರೂಂ ಪ್ರಕಾರ ರೂ.1.99 ಲಕ್ಷಗಳಾಗಿದ್ದು, ರಾಯಲ್ ಎನ್‌ಫೀಲ್ಡ್ ಬೈಕ್‌ಗಳಿಗೆ ಪೈಪೋಟಿಯಾಗಿ ಬಿಡುಗಡೆಯಾಗಿರುವ ಹೊಸ ಬೈಕ್ ಮಾದರಿಯು ಕ್ಲಾಸಿಕ್ ಬೈಕ್ ಪ್ರಿಯರನ್ನು ಸೆಳೆಯುತ್ತಿದೆ.

ಬೆನೆಲ್ಲಿ ಇಂಪೀರಿಯಲ್ 400 ಕ್ಲಾಸಿಕ್ ಬೈಕ್ ಖರೀದಿ ಮೇಲೆ ಹೊಸ ಫೈನಾನ್ಸ್ ಆಫರ್

ಬಿಎಸ್-6 ಬೆನೆಲ್ಲಿ ಇಂಪೀರಿಯಲ್ 400 ಬೈಕ್ ಮಾದರಿಯು 374-ಸಿಸಿ ಸಿಂಗಲ್-ಸಿಲಿಂಡರ್ ಏರ್-ಕೂಲ್ಡ್ ಎಂಜಿನ್‌‌ನೊಂದಿಗೆ ಅತ್ಯುತ್ತಮ ಪರ್ಫಾಮೆನ್ಸ್ ಹೊಂದಿದ್ದು, 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್‌ನೊಂದಿಗೆ 20-ಬಿಎಚ್‌ಪಿ, 29-ಎನ್ಎಂ ಟಾರ್ಕ್ ಉತ್ಪಾದನಾ ಗುಣಹೊಂದಿದೆ.

MOST READ: ಅತಿ ಕಡಿಮೆ ಬೆಲೆಯಲ್ಲಿ ಹೆಚ್ಚು ಮೈಲೇಜ್ ನೀಡುವ ರೆಟ್ರೊ ಎಲೆಕ್ಟ್ರಿಕ್ ಬೈಕ್ ಬಿಡುಗಡೆ

ಬೆನೆಲ್ಲಿ ಇಂಪೀರಿಯಲ್ 400 ಕ್ಲಾಸಿಕ್ ಬೈಕ್ ಖರೀದಿ ಮೇಲೆ ಹೊಸ ಫೈನಾನ್ಸ್ ಆಫರ್

ಬಿಎಸ್-4 ಮಾದರಿಗಿಂತಲೂ ಬೆಲೆಯಲ್ಲಿ ರೂ.20 ಸಾವಿರಕ್ಕೂ ಅಧಿಕ ಬೆಲೆ ಹೊಂದಿರುವ ಇಂಪೀರಿಯಲ್ 400 ಮಾದರಿಯು ತಾಂತ್ರಿಕವಾಗಿ ಮತ್ತಷ್ಟು ಬದಲಾವಣೆ ಪಡೆದುಕೊಂಡಿದ್ದು, ಹೊಸ ಬೈಕಿನ ಮುಂಭಾಗದಲ್ಲಿ 19 ಇಂಚಿನ ಹಾಗೂ ಹಿಂಭಾಗದಲ್ಲಿ 18 ಇಂಚಿನ ಟಯರ್‌ಗಳನ್ನು ಹೊಂದಿದೆ.

ಬೆನೆಲ್ಲಿ ಇಂಪೀರಿಯಲ್ 400 ಕ್ಲಾಸಿಕ್ ಬೈಕ್ ಖರೀದಿ ಮೇಲೆ ಹೊಸ ಫೈನಾನ್ಸ್ ಆಫರ್

ಕ್ಲಾಸಿಕ್ ಲುಕ್ ನೀಡುವುದಕ್ಕಾಗಿ ವಿಶೇಷ ವಿನ್ಯಾಸವುಳ್ಳ ಹೆಡ್‌ಲ್ಯಾಂಪ್, ಟ್ವಿನ್ ಪಾಡ್ ಇನ್ಸ್ ಟ್ರೂಮೆಂಟ್ ಕ್ಲಸ್ಟರ್‌, ಬೈಕಿನ ಮುಂಭಾಗದಲ್ಲಿ ಟೆಲಿಸ್ಕೋಪಿಕ್ ಫೋರ್ಕ್, ಹಿಂಭಾಗದಲ್ಲಿ ಡ್ಯುಯಲ್ ಶಾಕ್ ಅಬ್ಸಾರ್ಬರ್ ಅಳವಡಿಸಲಾಗಿದ್ದು, ಸುರಕ್ಷತೆಗಾಗಿ ಎಬಿಎಸ್, ಡ್ಯುಯಲ್ ಚಾನೆಲ್ ಡಿಸ್ಕ್ ಬ್ರೇಕ್‌ಗಳನ್ನು ನೀಡಲಾಗಿದೆ.

MOST READ: ಭಾರತದಲ್ಲಿಯೂ ಬಿಡುಗಡೆಯಾಗಲಿದೆ ದುಬಾರಿ ಬೆಲೆಯ ಫೋರ್ಜಾ ಮ್ಯಾಕ್ಸಿ ಸ್ಕೂಟರ್

ಬೆನೆಲ್ಲಿ ಇಂಪೀರಿಯಲ್ 400 ಕ್ಲಾಸಿಕ್ ಬೈಕ್ ಖರೀದಿ ಮೇಲೆ ಹೊಸ ಫೈನಾನ್ಸ್ ಆಫರ್

ಈ ಮೂಲಕ ಇಂಪೀರಿಯೆಲ್ 400 ಬೈಕ್ ಮಾದರಿಯು ಭಾರತೀಯ ಮಾರುಕಟ್ಟೆಯಲ್ಲಿ ಜಾವಾ ಮತ್ತು ರಾಯಲ್ ಎನ್‌ಫೀಲ್ಡ್ ಕ್ಲಾಸಿಕ್ 350 ಮಾದರಿಗಳಿಗೆ ನೇರ ಪೈಪೋಟಿಯನ್ನು ನೀಡುತ್ತಿದ್ದು, ಮುಂಬರುವ ದಿನಗಳಲ್ಲಿ ಮತ್ತಷ್ಟು ಹೊಸ ಬೈಕ್ ಮಾದರಿಗಳು ಮಾರುಕಟ್ಟೆ ಪ್ರವೇಶಿಸಲು ಸಿದ್ದವಾಗಿವೆ.

Article Published On: Friday, September 25, 2020, 13:37 [IST]
English summary
Benelli Imperiale 400 Finance Scheme Announced In India. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+