Just In
- 1 hr ago HSRP ನಂಬರ್ ಪ್ಲೇಟ್ನಲ್ಲಿ ನಡೆಯುತ್ತಿದೆ ಭಾರೀ ಮೋಸ: ಬುಕ್ ಮಾಡದವರು ಇದನ್ನು ಗಮನಿಸಿ!
- 1 hr ago Nissan Magnite: ಕಾಮಧೇನುವಾದ ನಿಸ್ಸಾನ್ ಮ್ಯಾಗ್ನೈಟ್.. 6 ಲಕ್ಷ ಬೆಲೆ, 20 ಕಿ.ಮೀ ಮೈಲೇಜ್
- 1 hr ago ಬೈಕಿನಂತೆ ಮೈಲೇಜ್, ಹಿಂದೆಗಿಂತಲೂ ಬಲಿಷ್ಠವಾಗಿ ಸ್ವಿಫ್ಟ್ ಅಖಾಡಕ್ಕೆ: ಖರೀದಿಸಲು ಕ್ಯೂ ನಿಲ್ಲಲು ರೆಡಿಯಾಗಿರಿ!
- 2 hrs ago Tata: ಒಬ್ಬರೇ ಬಂದು 2 ಸಾವಿರ ಟಾಟಾ ಎಲೆಕ್ಟ್ರಿಕ್ ಕಾರುಗಳನ್ನು ಖರೀದಿಸಿ ಹೋಗಿಬಿಟ್ಟರು!
Don't Miss!
- Sports ಅಂತರಾಷ್ಟ್ರೀಯ ಕ್ರಿಕೆಟ್ ವೃತ್ತಿ ಜೀವನಕ್ಕೆ ವಿದಾಯ ಹೇಳಿದ ಪಾಕ್ ತಂಡದ ಮಾಜಿ ನಾಯಕಿ
- News Karnataka Lok Sabha Election 2024: ಮತಗಟ್ಟೆಗಳಲ್ಲಿ ಮೊಬೈಲ್ ಫೋನ್ ನಿಷೇಧ!
- Movies ಸ್ವಿಮ್ಮಿಂಗ್ ಪೂಲ್ನಲ್ಲಿ ಪತಿ ಜೊತೆ ನಟಿಯ ರೊಮ್ಯಾನ್ಸ್; ಟ್ರೋಲ್ ಆಗಿದ್ದು ಚಹಾಲ್ ಪತ್ನಿ
- Lifestyle ಎಲೆಕೋಸಿಗೆ ಕೆಮಿಕಲ್ ಮಿಶ್ರಣ ಮಾಡ್ತಾರೆ ಹುಷಾರ್..! ವಿಡಿಯೋ ವೈರಲ್..!
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಭಾರತದಲ್ಲಿ 31ನೇ ಬೈಕ್ ಮಾರಾಟ ಮಳಿಗೆಗೆ ಚಾಲನೆ ನೀಡಿದ ಬೆನೆಲ್ಲಿ
ಬೆನೆಲ್ಲಿ ಇಂಡಿಯಾ ಕಂಪನಿಯು ದೇಶಿಯ ಮಾರುಕಟ್ಟೆಯಲ್ಲಿನ ಬೈಕ್ ಮಾರಾಟ ಹೆಚ್ಚುವ ಮಾಡುವ ನೀರಿಕ್ಷೆಯೊಂದಿಗೆ ಮಾರಾಟ ಮಳಿಗೆಗಳನ್ನು ವಿಸ್ತರಣಾ ಯೋಜನೆಗೆ ಚಾಲನೆ ನೀಡಿದ್ದು, ದೇಶದ ಪ್ರಮುಖ ನಗರಗಳಲ್ಲಿ ಹಂತ-ಹಂತವಾಗಿ ಹೊಸ ಮಳಿಗೆಗಳಿಗೆ ಚಾಲನೆ ನೀಡಲಿದೆ.
ದೇಶಾದ್ಯಂತ ಕೆಲವೇ ಕೆಲವು ನಗರಗಳಲ್ಲಿ ಮಾತ್ರವೇ ಮಾರಾಟ ಮಳಿಗೆ ಹೊಂದಿರುವ ಬೆನೆಲ್ಲಿ ಕಂಪನಿಯು ಇದೀಗ 31ನೇ ಮಾರಾಟ ಮಳಿಗೆಯನ್ನು ಪುದಚೇರಿಯಲ್ಲಿ ಆರಂಭಗೊಳಿಸಿದ್ದು, ಒಂದೇ ಸೂರಿನಡಿ ಮಾರಾಟ ಮಳಿಗೆ ಮತ್ತು ಸರ್ವಿಸ್ ಸೆಂಟರ್ ತೆರೆಯಲಾಗಿದೆ. ಹೊಸ ಶೋರೂಂನಲ್ಲಿ ಟಿಆರ್ಕೆ 502, ಟಿಆರ್ಕೆ 505 ಎಕ್ಸ್, ಲಿಯೊನ್ಸಿನೊ 500, 302 ಎಸ್, 302 ಆರ್ ಮತ್ತು ಇತ್ತೀಚೆಗೆ ಬಿಡುಗಡೆಯಾದ ಇಂಪೀರಿಯರ್ 400 ಬಿಎಸ್-6 ಮಾದರಿಯು ಖರೀದಿಗೆ ಲಭ್ಯವಿದೆ.
ದೇಶಿಯ ಮಾರುಕಟ್ಟೆಯಲ್ಲಿ ಸದ್ಯ ಮಾಹಾವೀರ್ ಗ್ರೂಪ್ ಜೊತೆಗೂಡಿ ಕಾರ್ಯನಿರ್ವಹಿಸುತ್ತಿರುವ ಬೆನೆಲ್ಲಿ ಇಂಡಿಯಾ ಕಂಪನಿಯು ಮಧ್ಯಮ ಕ್ರಮಾಂಕದ ಸ್ಟ್ರೀಟ್ ಬೈಕ್ ಮಾದರಿಗಳೊಂದಿಗೆ ಕ್ಲಾಸಿಕ್ ಬೈಕ್ ಮಾದರಿಗಳ ಮಾರಾಟಕ್ಕೂ ಹೆಚ್ಚಿನ ಒತ್ತು ನೀಡುತ್ತಿದ್ದು, ಇಂಪೀರಿಯಲ್ 400 ನಂತರ ನಂತರ ಮತ್ತಷ್ಟು ಹೊಸ ಬೈಕ್ ಮಾದರಿಗಳನ್ನು ಬಿಡುಗಡೆ ಮಾಡುವ ಯೋಜನೆಯಲ್ಲಿದೆ.
ಎಪ್ರಿಲ್ 1ರಿಂದ ಜಾರಿಗೆ ಬಂದಿರುವ ಹೊಸ ಬಿಎಸ್-6 ಎಮಿಷನ್ ಪ್ರಕಾರ ತನ್ನ ಪ್ರಮುಖ ಬೈಕ್ ಮಾದರಿಗಳನ್ನು ಉನ್ನತೀಕರಿಸಿರುವ ಬೆನೆಲ್ಲಿ ಕಂಪನಿಯು ಇಂಪೀರಿಯರ್ 400 ಬೈಕ್ ಮಾದರಿಯ ಮಾರಾಟದಲ್ಲಿ ಉತ್ತಮ ಬೇಡಿಕೆ ಪಡೆದುಕೊಳ್ಳುತ್ತಿದೆ.
ಹೊಸ ಬೆನೆಲ್ಲಿ ಇಂಪೀರಿಯೇಲ್ 400 ಆರಂಭಿಕ ಬೆಲೆಯು ಭಾರತದಲ್ಲಿ ದೆಹಲಿ ಎಕ್ಸ್ ಶೋರೂಂ ಪ್ರಕಾರ ರೂ.1.99 ಲಕ್ಷಗಳಾಗಿದ್ದು, ರಾಯಲ್ ಎನ್ಫೀಲ್ಡ್ ಬೈಕ್ಗಳಿಗೆ ಪೈಪೋಟಿಯಾಗಿ ಬಿಡುಗಡೆಯಾಗಿರುವ ಹೊಸ ಬೈಕ್ ಮಾದರಿಯು ಕ್ಲಾಸಿಕ್ ಬೈಕ್ ಪ್ರಿಯರನ್ನು ಸೆಳೆಯುತ್ತಿದೆ.
ಬಿಎಸ್-6 ಬೆನೆಲ್ಲಿ ಇಂಪೀರಿಯಲ್ 400 ಬೈಕ್ ಮಾದರಿಯು 374-ಸಿಸಿ ಸಿಂಗಲ್-ಸಿಲಿಂಡರ್ ಏರ್-ಕೂಲ್ಡ್ ಎಂಜಿನ್ನೊಂದಿಗೆ ಅತ್ಯುತ್ತಮ ಪರ್ಫಾಮೆನ್ಸ್ ಹೊಂದಿದ್ದು, 5-ಸ್ಪೀಡ್ ಮ್ಯಾನುವಲ್ ಗೇರ್ಬಾಕ್ಸ್ನೊಂದಿಗೆ 20-ಬಿಎಚ್ಪಿ, 29-ಎನ್ಎಂ ಟಾರ್ಕ್ ಉತ್ಪಾದನಾ ಗುಣಹೊಂದಿದೆ.
MOST READ: ಅತಿ ಕಡಿಮೆ ಬೆಲೆಯಲ್ಲಿ ಹೆಚ್ಚು ಮೈಲೇಜ್ ನೀಡುವ ರೆಟ್ರೊ ಎಲೆಕ್ಟ್ರಿಕ್ ಬೈಕ್ ಬಿಡುಗಡೆ
ಬಿಎಸ್-4 ಮಾದರಿಗಿಂತಲೂ ಬೆಲೆಯಲ್ಲಿ ರೂ.20 ಸಾವಿರಕ್ಕೂ ಅಧಿಕ ಬೆಲೆ ಹೊಂದಿರುವ ಇಂಪೀರಿಯಲ್ 400 ಮಾದರಿಯು ತಾಂತ್ರಿಕವಾಗಿ ಮತ್ತಷ್ಟು ಬದಲಾವಣೆ ಪಡೆದುಕೊಂಡಿದ್ದು, ಹೊಸ ಬೈಕಿನ ಮುಂಭಾಗದಲ್ಲಿ 19 ಇಂಚಿನ ಹಾಗೂ ಹಿಂಭಾಗದಲ್ಲಿ 18 ಇಂಚಿನ ಟಯರ್ಗಳನ್ನು ಹೊಂದಿದೆ.
ಕ್ಲಾಸಿಕ್ ಲುಕ್ ನೀಡುವುದಕ್ಕಾಗಿ ವಿಶೇಷ ವಿನ್ಯಾಸವುಳ್ಳ ಹೆಡ್ಲ್ಯಾಂಪ್, ಟ್ವಿನ್ ಪಾಡ್ ಇನ್ಸ್ ಟ್ರೂಮೆಂಟ್ ಕ್ಲಸ್ಟರ್, ಬೈಕಿನ ಮುಂಭಾಗದಲ್ಲಿ ಟೆಲಿಸ್ಕೋಪಿಕ್ ಫೋರ್ಕ್, ಹಿಂಭಾಗದಲ್ಲಿ ಡ್ಯುಯಲ್ ಶಾಕ್ ಅಬ್ಸಾರ್ಬರ್ ಅಳವಡಿಸಲಾಗಿದ್ದು, ಸುರಕ್ಷತೆಗಾಗಿ ಎಬಿಎಸ್, ಡ್ಯುಯಲ್ ಚಾನೆಲ್ ಡಿಸ್ಕ್ ಬ್ರೇಕ್ಗಳನ್ನು ನೀಡಲಾಗಿದೆ.
MOST READ: ಭಾರತದಲ್ಲಿಯೂ ಬಿಡುಗಡೆಯಾಗಲಿದೆ ದುಬಾರಿ ಬೆಲೆಯ ಫೋರ್ಜಾ ಮ್ಯಾಕ್ಸಿ ಸ್ಕೂಟರ್
ಈ ಮೂಲಕ ಇಂಪೀರಿಯೆಲ್ 400 ಬೈಕ್ ಮಾದರಿಯು ಭಾರತೀಯ ಮಾರುಕಟ್ಟೆಯಲ್ಲಿ ಜಾವಾ ಮತ್ತು ರಾಯಲ್ ಎನ್ಫೀಲ್ಡ್ ಕ್ಲಾಸಿಕ್ 350 ಮಾದರಿಗಳಿಗೆ ನೇರ ಪೈಪೋಟಿಯನ್ನು ನೀಡುತ್ತಿದ್ದು, ಮುಂಬರುವ ದಿನಗಳಲ್ಲಿ ಮತ್ತಷ್ಟು ಹೊಸ ಬೈಕ್ ಮಾದರಿಗಳು ಮಾರುಕಟ್ಟೆ ಪ್ರವೇಶಿಸಲು ಸಿದ್ದವಾಗಿವೆ.