Just In
- 6 hrs ago ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- 7 hrs ago Suzuki Access Electric: ಸುಜುಕಿ ಆಕ್ಸೆಸ್ ಎಲೆಕ್ಟ್ರಿಕ್ ಸ್ಕೂಟರ್ ಈ ವರ್ಷ ಬಿಡುಗಡೆ ಸಾಧ್ಯತೆ!
- 8 hrs ago Royal Enfield Himalayan ಸುಲಭವಾಗಿ ಖರೀದಿಸುವುದು ಹೇಗೆ?: ಇಲ್ಲಿದೆ ಡೌನ್ಪೇಮೆಂಟ್, EMI ಮಾಹಿತಿಗಳು!
- 8 hrs ago ಮಿಂಚಿನ ವೇಗಕ್ಕೆ ಸರಿಸಾಟಿಯಾಗಿ ಬೆಂಗಳೂರಿನ ಹೊಸ ಅಲ್ಟ್ರಾವೈಲೆಟ್ ಬೈಕ್ ಬಿಡುಗಡೆ: 323KM ರೇಂಜ್
Don't Miss!
- Movies ನೀಲಿ ಪ್ರಪಂಚದ ಕರಾಳ ಸತ್ಯವನ್ನ ಹೇಳಿದ ಲಾನಾ ರೋಡ್ಸ್
- Sports DC vs GT IPL 2024: ಅಕ್ಷರ್, ರಿಷಭ್ ಶೈನಿಂಗ್; ಗುಜರಾತ್ ವಿರುದ್ಧ ಡೆಲ್ಲಿ ಜಯಭೇರಿ
- News ದ್ವೇಷ ಉತ್ತೇಜಿಸುವ ಪೋಸ್ಟ್: ಕರ್ನಾಟಕ ಬಿಜೆಪಿ ವಿರುದ್ಧ ದೂರು ದಾಖಲಿಸಿದ ಚುನಾವಣಾ ಆಯೋಗ
- Technology ಒಪ್ಪೋ ಫೈಂಡ್ X7 ಅಲ್ಟ್ರಾ ಕ್ಯಾಮೆರಾ: ಮೊಬೈಲ್ ಫೋಟೋಗ್ರಫಿಗೆ ಅತ್ಯುತ್ತಮ ಫೋನ್!
- Lifestyle 613 ದಿನ ಕೊರೊನಾ ವಿರುದ್ಧ ಹೋರಾಡಿ ವೃತಪಟ್ಟ ವ್ಯಕ್ತಿ..!
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ದಾಖಲೆ ಪ್ರಮಾಣದ ಬುಕ್ಕಿಂಗ್ ಪಡೆದುಕೊಂಡ ಬಿಎಂಡಬ್ಲ್ಯು ಜಿ 310 ಆರ್, ಜಿ 310 ಜಿಎಸ್ ಬೈಕುಗಳು
ಬಿಎಂಡಬ್ಲ್ಯು ಮೋಟೊರಾಡ್ ಕಂಪನಿಯು ತನ್ನ ಹೊಸ ಜಿ 310 ಆರ್ ಮತ್ತು ಜಿ 310 ಜಿಎಸ್ ಬೈಕುಗಳನ್ನು ಭಾರತೀಯ ಮಾರುಕಟ್ಟೆಯಲ್ಲಿ ಇತ್ತೀಚೆಗೆ ಬಿಡುಗಡೆಗೊಳಿಸಿತ್ತು. ಈ ಹೊಸ ಬಿಎಂಡಬ್ಲ್ಯು ಜಿ 310 ಬೈಕುಗಳು ಭಾರತೀಯ ಮಾರುಕಟ್ಟೆಯಲ್ಲಿ ಉತ್ತಮ ಬೇಡಿಕೆಯನ್ನು ಪಡೆದುಕೊಂಡಿದೆ.
ಬಿಎಂಡಬ್ಲ್ಯು ಕಂಪನಿಯು ತನ್ನ ಹೊಸ ಜಿ 310 ಆರ್ ಮತ್ತು ಜಿ 310 ಜಿಎಸ್ ಬೈಕುಗಳಿಗಾಗಿ 1,000ಕ್ಕೂ ಹೆಚ್ಚು ಬುಕ್ಕಿಂಗ್ ಗಳನ್ನು ಪಡೆದುಕೊಂಡಿದೆ. ಈ ಹೊಸ ಬಿಎಂಡಬ್ಲ್ಯು ಜಿ 310 ಆರ್ ಬೈಕಿನ ಬೆಲೆಯು ರೂ.2.45 ಲಕ್ಷಗಳಾದರೆ, ಜಿ 310 ಜಿಎಸ್ ಬೈಕಿನ ಬೆಲೆಯು ರೂ.2.85 ಲಕ್ಷಗಳಾಗಿದೆ. ಈ ಎಲ್ಲಾ ಬೆಲೆಗಳು ಎಕ್ಸ್ ಶೋರೂಂ ಪ್ರಕಾರವಾಗಿದೆ. ಹೊಸ ಬಿಎಂಡಬ್ಲ್ಯು ಜಿ 310 ಆರ್ ಬೈಕಿನ ಬಗ್ಗೆ ಹೇಳುವುದಾದರೆ, ಹೆಚ್ಚು ಕೈಗೆಟುಕುವಂತಿದ್ದರೂ, ಹೊಸ ಜಿ 310 ಆರ್ ಹೆಚ್ಚುವರಿ ಪೀಚರ್ ಗಳನ್ನು ಪಡೆದುಕೊಂಡಿದೆ.
ಈ ಬೈಕಿನ ಸ್ಟೈಲಿಂಗ್ ಬಗ್ಗೆ ಹೇಳುವುದಾದರೆ, ಕೆಲವು ನವೀಕರಣಗಳನ್ನು ಮಾಡಲಾಗಿದೆ.ಹೊಸ ಬಿಎಂಡಬ್ಲ್ಯು ಜಿ 310 ಆರ್ ಬೈಕ್ ಹೆಡ್ಲ್ಯಾಂಪ್, ಟರ್ನ್ ಸಿಗ್ನಲ್ಗಳು ಮತ್ತು ಟೈಲ್ ಲ್ಯಾಂಪ್ಗಾಗಿ ಎಲ್ಇಡಿ ಲೈಟಿಂಗ್ ಅನ್ನು ನವೀಕರಿಸಲಾಗಿದೆ. 2020ರ ನವೀಕರಣದ ಭಾಗವಾಗಿ, ಜಿ 310 ಆರ್ ಪ್ಯಾಲೆಟ್ಗೆ ಬಿಎಂಡಬ್ಲ್ಯು ಹೊಸ ಬಣ್ಣಗಳನ್ನು ಸೇರಿಸಿದೆ.
MOST READ: ಹೊಸ ಬಣ್ಣದ ಆಯ್ಕೆಯನ್ನು ಪಡೆದುಕೊಂಡ 2021ರ ಕವಾಸಕಿ ನಿಂಜಾ 1000 ಎಸ್ಎಕ್ಸ್ ಬೈಕ್
ಹೊಸ ಬಿಎಂಡಬ್ಲ್ಯು ಜಿ 310 ಆರ್, ಜಿ 310 ಜಿಎಸ್ ಬೈಕುಗಳಲ್ಲಿ 313 ಸಿಸಿ ಸಿಂಗಲ್-ಸಿಲಿಂಡರ್ ಲಿಕ್ವಿಡ್-ಕೂಲ್ಡ್ ಎಂಜಿನ್ ಅನ್ನು ಹೊಂದಿರಲಿದೆ. ಈ ಎಂಜಿನ್ 9,700 ಆರ್ಪಿಎಂನಲ್ಲಿ 34 ಬಿಹೆಚ್ಪಿ ಮತ್ತು 7,700 ಆರ್ಪಿಎಂನಲ್ಲಿ 28 ಎನ್ಎಂ ಪೀಕ್ ಟಾರ್ಕ್ ಅನ್ನು ಉತ್ಪಾದಿಸುತ್ತದೆ.
ಈ ಎಂಜಿನ್ ನೊಂದಿಗೆ 6-ಸ್ಪೀಡ್ ಗೇರ್ ಬಾಕ್ಸ್ ಅನ್ನು ಜೋಡಿಸಲಾಗುತ್ತದೆ. ತನ್ನ ಪ್ರತಿಸ್ಪರ್ಧಿಗ ಬೈಕುಗಳಗಿಂತ ಹೆಚ್ಚಿನ ಪವರ್ ಮತ್ತು ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಎರಡು ಬೈಕುಗಳು ಹೆಚ್ಚು ಅಗ್ರೇಸಿವ್ ಲುಕ್ ಅನ್ನು ಹೊಂದಿರುವುದರಿಂದ ಹೆಚ್ಚಿನ ಯುವಗ್ರಾಹಕರನ್ನು ಸೆಳೆಯಬಹುದು.
MOST READ: ಬಿಡುಗಡೆಯಾಯ್ತು ಹೊಸ ಕವಾಸಕಿ ವಲ್ಕನ್ ಎಸ್ ಬೈಕ್
ಹೊಸ ಜಿ 310 ಆರ್ ಮತ್ತು ಜಿ 310 ಜಿಎಸ್ ಬೈಕುಗಳು 143 ಕಿ.ಮೀ ಟಾಪ್ ಸ್ಪೀಡ್ ಅನ್ನು ಹೊಂದಿದೆ. ಈ ಎರಡು ಹೊಸ ಬೈಕುಗಳು ಕೇವಲ 7.17 ಸೆಕೆಂಡುಗಳಲ್ಲಿ 0 ದಿಂದ 100 ಕಿ.ಮೀ ವೇಗವನ್ನು ಕ್ರಮಿಸುತ್ತದೆ.
ಈ ಬಿಎಂಡಬ್ಲ್ಯು ಜಿ 310 ಜಿಎಸ್ ಬೈಕಿನಲ್ಲಿ ಹೊಸ ಹೆಡ್ಲೈಟ್ ಪಡೆಯುತ್ತದೆ, ಇನ್ನು ಎಲ್ಇಡಿ ಡೇಟೈಮ್ ರನ್ನಿಂಗ್ ಜೊತೆ ಲೈಟ್ ಸ್ಟ್ರಿಪ್ ಅನ್ನು ಸಹ ಹೊಂದಿದೆ. ಈ ಬೈಕಿನಲ್ಲಿ ಜಿಎಸ್' ಅಕ್ಷರಗಳು ಈಗ ದೊಡ್ಡದಾಗಿದೆ ಮತ್ತು ಎಡಿವಿ ಶೈಲಿಯ ಬೀಕ್ ಅಪ್ ಫ್ರಂಟ್ 'ರ್ಯಾಲಿ' ಸ್ಟಿಕ್ಕರ್ ಅನ್ನು ಸಹ ಪಡೆಯುತ್ತದೆ.
MOST READ: ದುಬಾರಿಯಾಯ್ತು ಜನಪ್ರಿಯ ಬಜಾಜ್ ಪಲ್ಸರ್ ಎನ್ಎಸ್ ಬೈಕುಗಳು
ದೊಡ್ಡ ಬಿಎಂಡಬ್ಲ್ಯು ಆರ್ 1250 ಜಿಎಸ್ ಮಾದರಿಗಳಿಂದ ಹಲವಾರು ಫೀಚರ್ ಗಳನ್ನು ಎರವಲು ಪಡೆಯಲಾಗಿದೆ. ಇದರಲ್ಲಿ ಅಗ್ರೇಸಿವ್ ಲುಕ್ ಅನ್ನು ಹೊಂದಿದೆ. ಎಂಡಬ್ಲ್ಯು ಆರ್ 1250 ಜಿಎಸ್ ಮಾದರಿಯ ವಿಂಡ್ಸ್ಕ್ರೀನ್ ಅನ್ನು ಹೊಂದಿದೆ.
ಇನ್ನು ಹೊಸ ಜಿ 310 ಜಿಎಸ್ ಅನ್ನು ಹೊಂದಾಣಿಕೆ ಮಾಡಬಹುದಾದ ಕ್ಲಚ್ ಮತ್ತು ಹ್ಯಾಂಡ್ಬ್ರೇಕ್ ಲಿವರ್ ಅಳವಡಿಸಲಾಗಿದೆ. ನಾಲ್ಕು ಹೊಂದಾಣಿಕೆ ಮಟ್ಟಗಳಿವೆ. ಇದನ್ನು ಗ್ರಾಹಕರು ತಮಗೆ ಸಹಕಾರಿಯಾಗುವಂತೆ ಕಸ್ಟಮೈಸ್ ಮಾಡಬಹುದು.
ಹೊಸ ಬಿಎಂಡಬ್ಲ್ಯು ಜಿ 310 ಆರ್ ಭಾರತೀಯ ಮಾರುಕಟ್ಟೆಯಲ್ಲಿ ಕೆಟಿಎಂ ಡ್ಯೂಕ್ 390, ಬಜಾಜ್ ಡೊಮಿನಾರ್ 400 ಮತ್ತು ಟಿವಿಎಸ್ ಅಪಾಚೆ ಆರ್ಆರ್310 ಬೈಕುಗಳಿಗೆ ಪೈಪೋಟಿ ನೀಡಿದರೆ, ಜಿ 310 ಜಿಎಸ್ ಮಾದರಿಯು ಕೆಟಿಎಂ 390 ಅಡ್ವೆಂಚರ್ ಮತ್ತು ರಾಯಲ್ ಎನ್ಫೀಲ್ಡ್ ಹಿಮಾಲಯನ್ ಬೈಕುಗಳಿಗೆ ಪೈಪೋಟಿ ನೀಡುತ್ತದೆ.