ಭಾರತದಲ್ಲಿ ಬಿಡುಗಡೆಯಾಗಲಿದೆ ಹೊಸ ಬಿಎಂಡಬ್ಲ್ಯೂ ಆರ್ 18 ಕ್ರೂಸರ್ ಬೈಕ್

ಬಿಎಂಡಬ್ಲ್ಯು ಮೋಟರ್‌ರಾಡ್ ಕಂಪನಿಯು ತನ್ನ ಹೊಸ ಆರ್ 18 ಕ್ರೂಸರ್ ಆವೃತ್ತಿಯನ್ನು ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಇತ್ತೀಚೆಗೆ ಅನಾವರಣಗೊಳಿಸಿತ್ತು. ಬಿಎಂಡಬ್ಲ್ಯು ಮೋಟರ್‌ರಾಡ್ ಇಂಡಿಯಾ ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ ಹೊಸ ಆರ್ 18 ಕ್ರೂಸರ್ ಬೈಕಿನ ಹೆಸರನ್ನು ಸೇರಿಸಲಾಗಿದೆ.

ಭಾರತದಲ್ಲಿ ಬಿಡುಗಡೆಯಾಗಲಿದೆ ಹೊಸ ಬಿಎಂಡಬ್ಲ್ಯೂ ಆರ್ 18 ಕ್ರೂಸರ್ ಬೈಕ್

ಇದೇ ಕಾರಣದಿಂದಾಗಿ ಈ ಬೈಕ್ ಶೀಘ್ರದಲ್ಲೇ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಬಹುದು. ಈ ಜರ್ಮನ್ ಬ್ರ್ಯಾಂಡ್‍ನ ಹೊಸ ಬಿಎಂಡಬ್ಲ್ಯು ಆರ್ 18 ಕ್ರೂಸರ್ ಅನ್ನು ಕಾನ್ಸೆಪ್ಟ್ ಮಾದರಿಯಾಗಿ ಕಳೆದ ವರ್ಷ ಪ್ರದರ್ಶಿಸಲಾಗಿತ್ತು. ಹೊಸ ಬಿಎಂಡಬ್ಲ್ಯೂ ಆರ್ 18 ಕ್ರೂಸರ್ ಪ್ರೊಡಕ್ಷನ್ ಸ್ಪೆಕ್ ಆವೃತ್ತಿಯು ಬ್ರ್ಯಾಂಡ್‍ನ ಕ್ಲಾಸಿಕ್ ಆರ್ 5 ಬೈಕಿನ ವಿನ್ಯಾಸದಿಂದ ಸ್ಪೋರ್ತಿ ಪಡೆದಿದೆ. ಹೊಸ ಬಿಎಂಡಬ್ಲ್ಯೂ ಆರ್ 18 ಕ್ರೂಸರ್ ಡೊಡ್ಡ ಟಿಯರ್ ಡ್ರಾಪ್ ಫ್ಯೂಯಲ್ ಟ್ಯಾಂಕ್‌ನೊಂದಿಗೆ ರೆಟ್ರೊ-ಮಾರ್ಡನ್ ವಿನ್ಯಾಸವನ್ನು ಹೊಂದಿದೆ.

ಭಾರತದಲ್ಲಿ ಬಿಡುಗಡೆಯಾಗಲಿದೆ ಹೊಸ ಬಿಎಂಡಬ್ಲ್ಯೂ ಆರ್ 18 ಕ್ರೂಸರ್ ಬೈಕ್

ಈ ಬೈಕಿನಲ್ಲಿ ಹಲವಾರು ಆಧುನಿಕ ತಂತ್ರಜ್ಞಾನವನ್ನು ಒಳಗೊಂಡಿದೆ. ಈ ಹೊಸ ಬೈಕಿನಲ್ಲಿ 1800 ಸಿಸಿ ಬಾಕ್ಸರ್ ಎಂಜಿನ್ ಅನ್ನು ಅಳವಡಿಸಲಾಗಿದೆ. ಹೊಸ ಬಿಎಂಡಬ್ಲ್ಯು ಆರ್ 18 ಕ್ರೂಸರ್ ಅನ್ನು ಸ್ಟ್ಯಾಂಡರ್ಡ್ ಮತ್ತು ಫಸ್ಟ್ ಎಡಿಷನ್ ಎಂಬ ಎರಡು ರೂಪಾಂತರಗಳಲ್ಲಿ ನೀಡಲಾಗುತ್ತದೆ.ಇದರಲ್ಲಿ ಫಸ್ಟ್ ಎಡಿಷನ್ ಬೈಕ್ ಆರ್ 5 ಕ್ಲಾಸಿಕ್ ಮಾದರಿಯಂತಿದೆ. ಈ ಬೈಕಿನಲ್ಲಿ ಸ್ಟೈಪಿಂಗ್, ಲೆದರ್ ಬೆಲ್ಟ್ ಮತು ಸ್ಲಾಟ್ಡ್ ಸ್ಕ್ರೂಗಳು ಒಳಗೊಂಡಿದೆ.

MOST READ: ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಬಿಎಸ್-6 ಟಿವಿಎಸ್ ಸ್ಕೂಟಿ ಜೆಸ್ಟ್ 110 ಸ್ಕೂಟರ್

ಭಾರತದಲ್ಲಿ ಬಿಡುಗಡೆಯಾಗಲಿದೆ ಹೊಸ ಬಿಎಂಡಬ್ಲ್ಯೂ ಆರ್ 18 ಕ್ರೂಸರ್ ಬೈಕ್

ಬಿಎಂಡಬ್ಲ್ಯೂ ಆರ್ 18 ಕ್ರೂಸರ್ 1,731 ಎಂಎಂ ವ್ಹೀಲ್ ಬೇಸ್ ಅನ್ನು ಹೊಂದಿರುತ್ತದೆ. ಇದು ದೊಡ್ಡ ಗಾತ್ರದ ಬೈಕ್ ಆಗಿದೆ. ಬಿಎಂಡಬ್ಲ್ಯು ಆರ್ 18 ಕ್ರೂಸರ್ ಬೈಕ್ ಹೋಂಡಾ ಗೋಲ್ಡ್ ವಿಂಗ್ ಮಾದರಿಗಿಂತ ಉದ್ದವಾಗಿದೆ.

ಭಾರತದಲ್ಲಿ ಬಿಡುಗಡೆಯಾಗಲಿದೆ ಹೊಸ ಬಿಎಂಡಬ್ಲ್ಯೂ ಆರ್ 18 ಕ್ರೂಸರ್ ಬೈಕ್

ಹೊಸ ಬಿಎಂಡಬ್ಲ್ಯು ಆರ್ 18 ಕ್ರೂಸರ್ ಬೈಕ್ ತನ್ನ ಪ್ರತಿಸ್ಪರ್ಧಿ ಹಾರ್ಲೆ ಡೇವಿಡ್ಸನ್ ಫ್ಯಾಟ್ ಬಾಯ್ ಗಿಂತ 23ಕೆಜಿ ಹೆಚ್ಚು ಭಾರವನ್ನು ಹೊಂದಿದೆ. ಬಿಎಂಡಬ್ಲ್ಯು ಆರ್ 18 ಕ್ರೂಸರ್ ಬೈಕ್ ರೆಟ್ರೂ ಲುಕ್ ಅನ್ನು ಹೊರತುಪಡಿಸಿ ಉಳಿದಂತೆ ಎಲ್ಲವೂ ಮಾರ್ಡನ್ ಫೀಚರ್‍ಗಳನ್ನು ಒಳಗೊಂಡಿದೆ.

MOST READ: ಬಿಡುಗಡೆಯಾಯ್ತು ಬಹುನೀರಿಕ್ಷಿತ ಹೊಸ ಯಮಹಾ ಬೈಕುಗಳ ಟೀಸರ್

ಭಾರತದಲ್ಲಿ ಬಿಡುಗಡೆಯಾಗಲಿದೆ ಹೊಸ ಬಿಎಂಡಬ್ಲ್ಯೂ ಆರ್ 18 ಕ್ರೂಸರ್ ಬೈಕ್

ಈ ಬೈಕಿನಲ್ಲಿ ಎಲೆಕ್ಟ್ರಾನಿಕ್ಸ್ ಫೀಚರ್‍ಗಳನ್ನು ಅಳವಡಿಸಿದ್ದಾರೆ. ಇದರಲ್ಲಿ ಮೂರು ರೈಡಿಂಗ್ ಮೋಡ್‌ಗಳನ್ನು ಹೊಂದಿದೆ. ಈ ಹೊಸ ಬೈಕ್ ಆಟೋಮ್ಯಾಟಿಕ್ ಸ್ಟೆಬಿಲಿಟಿ ಕಂಟ್ರೋಲ್, ಮೋಟಾರ್ ಸ್ಲಿಪ್ ರೆಗ್ಯೋಲೆಷನ್ ಮತ್ತು ಎಬಿಎಸ್ ಆಗಿದೆ.

ಭಾರತದಲ್ಲಿ ಬಿಡುಗಡೆಯಾಗಲಿದೆ ಹೊಸ ಬಿಎಂಡಬ್ಲ್ಯೂ ಆರ್ 18 ಕ್ರೂಸರ್ ಬೈಕ್

ಹೊಸ ಬಿಎಂಡಬ್ಲ್ಯು ಆರ್ 18 ಕ್ರೂಸರ್ ಬೈಕಿನಲ್ಲಿ ಹೆಡ್ ಲ್ಯಾಂಪ್, ಟೇಲ್ ಲೈಟ್, ಡಿಆರ್‌ಎಲ್‌ ಸೇರಿದಂತೆ ಎಲ್‌ಇಡಿ ಲೈಟಿಂಗ್ ಅನ್ನು ಹೊಂದಿದೆ. ಈ ಬೈಕಿನಲ್ಲಿ ಸಣ್ಣ ಡಿಜೆಟಲ್ ಡಿಸ್‍ಪ್ಲೇ ದೊಡ್ಡ ಅನಲಾಗ್ ಇನ್ಸ್ ಟ್ರೂಮೆಂಟ್ ಕ್ಲಸ್ಟರ್ ಅನ್ನು ಹೊಂದಿದೆ.

MOST READ: ಬಹಿರಂಗವಾಯ್ತು ಬಿಎಸ್-6 ಹೀರೋ ಎಕ್ಸ್‌ಪಲ್ಸ್ 200 ಬೈಕಿನ ಮಾಹಿತಿ

ಭಾರತದಲ್ಲಿ ಬಿಡುಗಡೆಯಾಗಲಿದೆ ಹೊಸ ಬಿಎಂಡಬ್ಲ್ಯೂ ಆರ್ 18 ಕ್ರೂಸರ್ ಬೈಕ್

ಹೊಸ ಬಿಎಂಡಬ್ಲ್ಯು ಆರ್ 18 ಕ್ರೂಸರ್‍ನಲ್ಲಿ 1802 ಸಿಸಿ ಬಾಕ್ಸರ್ ಎಂಜಿನ್ ಅನ್ನು ಅಳವಡಿಸಲಾಗಿದೆ. ಈ ಎಂಜಿನ್ 4,750 ಆರ್‌ಪಿಎಂನಲ್ಲಿ 91 ಬಿಹೆಚ್‌ಪಿ ಪವರ್ ಮತ್ತು 2000 ರಿಂದ 4000 ಆರ್‌ಪಿಎಂ ನಡುವೆ 149 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಎಂಜಿನ್ ನೊಂದಿಗೆ ಆರು-ಸ್ಪೀಡ್ ಗೇರ್‌ಬಾಕ್ಸ್ ಜೋಡಿಸಲಾಗಿದೆ. ಆರ್ 5 ಕ್ಲಾಸಿಕ್‌ನಿಂದ ಸ್ಫೂರ್ತಿ ಪಡೆದ ಹೊಸ ಬಿಎಂಡಬ್ಲ್ಯು ಆರ್ 18 ಕ್ರೂಸರ್ ಸಹ ಎಕ್ಸ್‌ಪೋಸ್ಡ್ ಶಾಫ್ಟ್ ಡ್ರೈವ್‌ನೊಂದಿಗೆ ಬರುತ್ತದೆ.

ಭಾರತದಲ್ಲಿ ಬಿಡುಗಡೆಯಾಗಲಿದೆ ಹೊಸ ಬಿಎಂಡಬ್ಲ್ಯೂ ಆರ್ 18 ಕ್ರೂಸರ್ ಬೈಕ್

ಬಿಎಂಡಬ್ಲ್ಯು ಆರ್ 18 ಜರ್ಮನ್ ಬ್ರಾಂಡ್‌ನಿಂದ ಪೂರ್ಣ ಪ್ರಮಾಣದ ಹೆವಿವೇಯ್ಟ್ ಕ್ರೂಸರ್ ಕೊಡುಗೆಯಾಗಿದೆ. ಈ ಹೊಸ ಬೈಕನ್ನು ಭಾರತೀಯ ಮಾರುಕಟ್ಟೆಯಲ್ಲಿ ಶೀಘ್ರದಲ್ಲೇ ಬಿಡುಗಡೆಗೊಳಿಸಬಹುದು ಎಂದು ನಿರೀಕ್ಷಿಸುತ್ತೇವೆ.

Most Read Articles

Kannada
English summary
BMW R 18 Cruiser Motorcycle Listed On Indian Website. Read in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X