Just In
- 1 hr ago ಪ್ರಸಿದ್ಧ ಪುಣ್ಯಕ್ಷೇತ್ರ ಶೃಂಗೇರಿ ಶಾರದಾಂಬಾ ದರ್ಶನಕ್ಕೆ ತೆರಳಬೇಕೇ.. ಹಾಗಾದರೆ ಈ ಸ್ಟೋರಿ ನೋಡಿ
- 2 hrs ago ಭರ್ಜರಿ ಸಿಹಿಸುದ್ದಿ: ಸ್ಕೋಡಾ ಕೊಡಿಯಾಕ್ ಎಸ್ಯುವಿಯ ಮೇಲೆ ಭರ್ಜರಿ ಡಿಸ್ಕೌಂಟ್
- 2 hrs ago Maruti: ಜಪಾನ್ನಲ್ಲಿ ಗರಿಷ್ಟ ಗುಣಮಟ್ಟದ ಸ್ವಿಫ್ಟ್ ಕಾರು! ಭಾರತಕ್ಕೆ ಮಾತ್ರ ಕಳಪೆ ಗುಣಮಟ್ಟ ಏಕೆ?
- 3 hrs ago ಹೊಸ ಜೀಪ್ ರಾಂಗ್ಲರ್ ಸಂಪೂರ್ಣ ರಿವ್ಯೂ ವಿಡಿಯೋ: ಆಫ್ರೋಡ್ನಲ್ಲಿ ಇದನ್ನು ಮೀರಿಸುವವರಿಲ್ಲ!
Don't Miss!
- News ಬೆಂಗಳೂರು ಗ್ರಾಮಾಂತರ ಕ್ಷೇತ್ರವನ್ನೇ ಗುರಿಯಾಗಿಸಿ ಐಟಿ ದಾಳಿ : ಡಿ ಕೆ ಶಿವಕುಮಾರ್ ಏನಂದ್ರು?
- Technology Poco: ವಿಶೇಷ ಟ್ಯಾಬ್ಲೆಟ್ ಲಾಂಚ್ ಮಾಡಲು ಸಿದ್ಧವಾಗ್ತಿದೆ ಪೊಕೊ! ಸಖತ್ ಸ್ಟೈಲಿಶ್..
- Lifestyle ರುಚಿ ರುಚಿಯ ಸ್ಪೆಷಲ್ ಅಂಬೂರ್ ಬಿರಿಯಾನಿ ಮಾಡಿ ನೋಡಿ..! ಇಲ್ಲಿದೆ ರೆಸಿಪಿ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Sports IPL 2024: ಎಸ್ಆರ್ಹೆಚ್ ಸಂಘಟಿತ ಆಟಕ್ಕೆ ಬ್ರೇಕ್ ಹಾಕಲು ಆರ್ಸಿಬಿ ಏನು ಮಾಡಬೇಕು?
- Movies ತಮನ್ನಾ ಪಾಲಿಗೆ 'ದುಬಾರಿ' ಆಯಿತು 'ಪ್ರಚಾರ' ; ಮಿಲ್ಕಿ ಬ್ಯೂಟಿಯನ್ನ ವಿಚಾರಣೆಗೆ ಕರೆದ ಸೈಬರ್ ಇಲಾಖೆ..!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಅನಾವರಣವಾಯ್ತು ಹೊಸ ಬಿಎಂಡಬ್ಲ್ಯೂ ಆರ್ 18 ಕ್ರೂಸರ್ ಬೈಕ್
ಬಿಎಂಡಬ್ಲ್ಯು ಮೋಟರ್ರಾಡ್ ಕಂಪನಿಯು ತನ್ನ ಹೊಸ ಆರ್ 18 ಕ್ರೂಸರ್ ಪ್ರೊಡಕ್ಷನ್-ಸ್ಪೆಕ್ ಆವೃತ್ತಿಯನ್ನು ಅನಾವರಣಗೊಳಿಸಿದೆ. ಈ ಜರ್ಮನ್ ಬ್ರ್ಯಾಂಡ್ನ ಹೊಸ ಬಿಎಂಡಬ್ಲ್ಯು ಆರ್ 18 ಕ್ರೂಸರ್ ಅನ್ನು ಕಾನ್ಸೆಪ್ಟ್ ಮಾದರಿಯಾಗಿ ಕಳೆದ ವರ್ಷ ಪ್ರದರ್ಶಿಸಲಾಗಿತ್ತು.
ಹೊಸ ಬಿಎಂಡಬ್ಲ್ಯೂ ಆರ್ 18 ಕ್ರೂಸರ್ ಪ್ರೊಡಕ್ಷನ್ ಸ್ಪೆಕ್ ಆವೃತ್ತಿಯು ಬ್ರ್ಯಾಂಡ್ನ ಕ್ಲಾಸಿಕ್ ಆರ್ 5 ಬೈಕಿನ ವಿನ್ಯಾಸದಿಂದ ಸ್ಪೋರ್ತಿ ಪಡೆದಿದೆ. ಹೊಸ ಬಿಎಂಡಬ್ಲ್ಯೂ ಆರ್ 18 ಕ್ರೂಸರ್ ಡೊಡ್ಡ ಟಿಯರ್ ಡ್ರಾಪ್ ಫ್ಯೂಯಲ್ ಟ್ಯಾಂಕ್ನೊಂದಿಗೆ ರೆಟ್ರೊ-ಮಾರ್ಡನ್ ವಿನ್ಯಾಸವನ್ನು ಹೊಂದಿದೆ. ಈ ಬೈಕಿನಲ್ಲಿ ಹಲವಾರು ಆಧುನಿಕ ತಂತ್ರಜ್ಞಾನವನ್ನು ಒಳಗೊಂಡಿದೆ. ಈ ಹೊಸ ಬೈಕಿನಲ್ಲಿ 1800 ಸಿಸಿ ಬಾಕ್ಸರ್ ಎಂಜಿನ್ ಅನ್ನು ಅಳವಡಿಸಲಾಗಿದೆ.
ಹೊಸ ಬಿಎಂಡಬ್ಲ್ಯು ಆರ್ 18 ಕ್ರೂಸರ್ ಅನ್ನು ಸ್ಟ್ಯಾಂಡರ್ಡ್ ಮತ್ತು ಫಸ್ಟ್ ಎಡಿಷನ್ ಎಂಬ ಎರಡು ರೂಪಾಂತರಗಳಲ್ಲಿ ನೀಡಲಾಗುತ್ತದೆ.ಇದರಲ್ಲಿ ಫಸ್ಟ್ ಎಡಿಷನ್ ಬೈಕ್ ಆರ್ 5 ಕ್ಲಾಸಿಕ್ ಮಾದರಿಯಂತಿದೆ. ಈ ಬೈಕಿನಲ್ಲಿ ಸ್ಟೈಪಿಂಗ್, ಲೆದರ್ ಬೆಲ್ಟ್ ಮತು ಸ್ಲಾಟ್ಡ್ ಸ್ಕ್ರೂಗಳು ಒಳಗೊಂಡಿದೆ.
ಬಿಎಂಡಬ್ಲ್ಯೂ ಆರ್ 18 ಕ್ರೂಸರ್ 1,731 ಎಂಎಂ ವ್ಹೀಲ್ ಬೇಸ್ ಅನ್ನು ಹೊಂದಿರುತ್ತದೆ. ಇದು ದೊಡ್ಡ ಗಾತ್ರದ ಬೈಕ್ ಆಗಿದೆ. ಬಿಎಂಡಬ್ಲ್ಯು ಆರ್ 18 ಕ್ರೂಸರ್ ಬೈಕ್ ಹೋಂಡಾ ಗೋಲ್ಡ್ ವಿಂಗ್ ಮಾದರಿಗಿಂತ ಉದ್ದವಾಗಿದೆ.
ಹೊಸ ಬಿಎಂಡಬ್ಲ್ಯು ಆರ್ 18 ಕ್ರೂಸರ್ ಬೈಕ್ ತನ್ನ ಪ್ರತಿಸ್ಪರ್ಧಿ ಹಾರ್ಲೆ ಡೇವಿಡ್ಸನ್ ಫ್ಯಾಟ್ ಬಾಯ್ ಗಿಂತ 23ಕೆಜಿ ಹೆಚ್ಚು ಭಾರವನ್ನು ಹೊಂದಿದೆ. ಬಿಎಂಡಬ್ಲ್ಯು ಆರ್ 18 ಕ್ರೂಸರ್ ಬೈಕ್ ರೆಟ್ರೂ ಲುಕ್ ಅನ್ನು ಹೊರತುಪಡಿಸಿ ಉಳಿದಂತೆ ಎಲ್ಲವೂ ಮಾರ್ಡನ್ ಫೀಚರ್ಗಳನ್ನು ಒಳಗೊಂಡಿದೆ.
ಈ ಬೈಕಿನಲ್ಲಿ ಎಲೆಕ್ಟ್ರಾನಿಕ್ಸ್ ಫೀಚರ್ಗಳನ್ನು ಅಳವಡಿಸಿದ್ದಾರೆ. ಇದರಲ್ಲಿ ಮೂರು ರೈಡಿಂಗ್ ಮೋಡ್ಗಳನ್ನು ಹೊಂದಿದೆ. ಈ ಹೊಸ ಬೈಕ್ ಆಟೋಮ್ಯಾಟಿಕ್ ಸ್ಟೆಬಿಲಿಟಿ ಕಂಟ್ರೋಲ್, ಮೋಟಾರ್ ಸ್ಲಿಪ್ ರೆಗ್ಯೋಲೆಷನ್ ಮತ್ತು ಎಬಿಎಸ್ ಆಗಿದೆ.
ಹೊಸ ಬಿಎಂಡಬ್ಲ್ಯು ಆರ್ 18 ಕ್ರೂಸರ್ ಬೈಕಿನಲ್ಲಿ ಹೆಡ್ ಲ್ಯಾಂಪ್, ಟೇಲ್ ಲೈಟ್, ಡಿಆರ್ಎಲ್ ಸೇರಿದಂತೆ ಎಲ್ಇಡಿ ಲೈಟಿಂಗ್ ಅನ್ನು ಹೊಂದಿದೆ. ಈ ಬೈಕಿನಲ್ಲಿ ಸಣ್ಣ ಡಿಜೆಟಲ್ ಡಿಸ್ಪ್ಲೇ ದೊಡ್ಡ ಅನಲಾಗ್ ಇನ್ಸ್ ಟ್ರೂಮೆಂಟ್ ಕ್ಲಸ್ಟರ್ ಅನ್ನು ಹೊಂದಿದೆ.
ಹೊಸ ಬಿಎಂಡಬ್ಲ್ಯು ಆರ್ 18 ಕ್ರೂಸರ್ನಲ್ಲಿ 1802 ಸಿಸಿ ಬಾಕ್ಸರ್ ಎಂಜಿನ್ ಅನ್ನು ಅಳವಡಿಸಲಾಗಿದೆ. ಈ ಎಂಜಿನ್ 4,750 ಆರ್ಪಿಎಂನಲ್ಲಿ 91 ಬಿಹೆಚ್ಪಿ ಪವರ್ ಮತ್ತು 2000 ರಿಂದ 4000 ಆರ್ಪಿಎಂ ನಡುವೆ 149 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಎಂಜಿನ್ ನೊಂದಿಗೆ ಆರು-ಸ್ಪೀಡ್ ಗೇರ್ಬಾಕ್ಸ್ ಜೋಡಿಸಲಾಗಿದೆ. ಆರ್ 5 ಕ್ಲಾಸಿಕ್ನಿಂದ ಸ್ಫೂರ್ತಿ ಪಡೆದ ಹೊಸ ಬಿಎಂಡಬ್ಲ್ಯು ಆರ್ 18 ಕ್ರೂಸರ್ ಸಹ ಎಕ್ಸ್ಪೋಸ್ಡ್ ಶಾಫ್ಟ್ ಡ್ರೈವ್ನೊಂದಿಗೆ ಬರುತ್ತದೆ.
ಬಿಎಂಡಬ್ಲ್ಯು ಆರ್ 18 ಜರ್ಮನ್ ಬ್ರಾಂಡ್ನಿಂದ ಪೂರ್ಣ ಪ್ರಮಾಣದ ಹೆವಿವೇಯ್ಟ್ ಕ್ರೂಸರ್ ಕೊಡುಗೆಯಾಗಿದೆ. ಈ ಹೊಸ ಬೈಕ್ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸುವುದರ ಬಗ್ಗೆ ಯಾವುದೇ ಮಾಹಿತಿ ಇಲ್ಲ. ಈ ಬೈಕ್ ಭಾರತದಲ್ಲಿ ಮಾರಾಟ ಮಾಡಿದರೆ ಇದನ್ನು ಸಿಬಿಯು ಮೂಲಕ ತಂದು ಸೀಮಿತ ಸಂಖ್ಯೆಯಲ್ಲಿ ಮಾರಾಟ ಮಾಡಬಹುದು.