ಹೆಚ್ಚು ಮೈಲೇಜ್ ಹೊಂದಿರುವ ಇವಿ ಸ್ಕೂಟರ್ ನಿರ್ಮಾಣಕ್ಕಾಗಿ ಸಿಂಪಲ್ ಎನರ್ಜಿ ಜೊತೆಗೂಡಿದ ಬೌನ್ಸ್
ಹೆಚ್ಚುತ್ತಿರುವ ಇಂಧನ ಬೆಲೆಗಳ ಪರಿಣಾಮ ಪರಿಸರ ಸ್ನೇಹಿ ಎಲೆಕ್ಟ್ರಿಕ್ ವಾಹನಗಳ ಮಾರಾಟವು ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಗ್ರಾಹಕರ ಬೇಡಿಕೆಗೆ ಅನುಗುಣವಾಗಿ ಹಲವಾರು ಆಟೋ ಕಂಪನಿಗಳು ವಿವಿಧ ಮಾದರಿಯ ಎಲೆಕ್ಟ್ರಿಕ್ ವಾಹನಗಳನ್ನು ಪರಿಚಯಿಸುತ್ತಿವೆ.

ಹೊಸ ಮಾದರಿಯ ಎಲೆಕ್ಟ್ರಿಕ್ ವಾಹನಗಳ ಉತ್ಪಾದನೆಯಲ್ಲಿ ಈಗಾಗಲೇ ಸಾಂಪ್ರಾದಾಯಿಕ ವಾಹನಗಳನ್ನು ಮಾರಾಟ ಮಾಡುತ್ತಿರುವ ಕಂಪನಿಗಳಿಂತಲೂ ಸ್ಟಾರ್ಟ್-ಅಪ್ ಕಂಪನಿಗಳು ಹೆಚ್ಚು ಗ್ರಾಹಕರ ಗಮನಸೆಳೆಯುವಲ್ಲಿ ಯಶಸ್ವಿಯಾಗುತ್ತಿದ್ದು, ಈಗಾಗಲೇ ಹಲವಾರು ಸ್ಟಾರ್ಟ್-ಅಪ್ ಕಂಪನಿಗಳು ವಿವಿಧ ಮಾದರಿಯ ಇವಿ ವಾಹನಗಳನ್ನು ಮಾರಾಟ ಮಾಡುವಲ್ಲಿ ಮುನ್ನಡೆ ಸಾಧಿಸುತ್ತಿವೆ.

ಈ ನಿಟ್ಟಿನಲ್ಲಿ ಹೊಸ ಪಯತ್ನಕ್ಕೆ ಕೈ ಹಾಕಿರುವ ಬೆಂಗಳೂರು ಮೂಲದ 'ಸಿಂಪಲ್ ಎನರ್ಜಿ' ಕಂಪನಿಯು ಗ್ರಾಹಕರ ಬೇಡಿಕೆಯೆಂತೆ ಅತಿ ಕಡಿಮೆ ಬೆಲೆಯಲ್ಲಿ ಹೆಚ್ಚು ಮೈಲೇಜ್ ನೀಡಬಲ್ಲ ಆಕರ್ಷಕ ಎಲೆಕ್ಟ್ರಿಕ್ ಸ್ಕೂಟರ್ ಮಾದರಿಯೊಂದನ್ನು ಸಿದ್ದಪಡಿಸಿದೆ.

ಹೊಸ ಎಲೆಕ್ಟ್ರಿಕ್ ಮಾದರಿಗೆ ಮಾರ್ಕ್ 2 ಎಂದು ಕರೆದಿರುವ ಸಿಂಪಲ್ ಎನರ್ಜಿ ಕಂಪನಿಯು ಶೀಘ್ರದಲ್ಲೇ ಮಾರಾಟ ಪ್ರಕ್ರಿಯೆಯನ್ನು ಆರಂಭಿಸಲು ಸಿದ್ದವಾಗಿದ್ದು, ಅತಿ ಕಡಿಮೆ ಬೆಲೆಯಲ್ಲಿ ಹೊಸ ಸ್ಕೂಟರ್ ಮಾರಾಟ ಮಾಡುವುದಾಗಿ ಹೇಳಿಕೊಂಡಿದೆ.

ಸಿಂಪಲ್ ಎನರ್ಜಿ ಕಂಪನಿಯ ಹೊಸ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆಗೂ ಮುನ್ನವೆ ಸದ್ದು ಮಾಡುತ್ತಿದ್ದು, ಹೊಸ ಎಲೆಕ್ಟ್ರಿಕ್ ಸ್ಕೂಟರ್ ಉತ್ಪಾದನೆ ಮೇಲೆ ಮತ್ತಷ್ಟು ಬಂಡವಾಳ ಹೂಡಿಕೆ ಹಲವಾರು ಕಂಪನಿಗಳು ಮುಂದಾಗಿವೆ. ಬೆಂಗಳೂರು ಮೂಲದ ಬೈಕ್ ರೆಂಟಲ್ ಕಂಪನಿಯಾದ ಬೌನ್ಸ್ ಕಂಪನಿಯು ಸಿಂಪಲ್ ಎನರ್ಜಿ ಜೊತೆಗೂಡಿ ಹೊಸ ಮಾದರಿಯ ಇವಿ ಸ್ಕೂಟರ್ ನಿರ್ಮಾಣಕ್ಕೆ ಸಿದ್ದವಾಗಿದ್ದು, ರೆಂಟಲ್ ಸಲ್ಯೂಷನ್‌ಗೆಗಾಗಿ ವಿಶೇಷ ಮಾದರಿಗಳನ್ನು ಸಿದ್ದಪಡಿಸಲು ಮಂದಾಗಿವೆ.

ಸಿಂಪಲ್ ಎನರ್ಜಿ ಕಂಪನಿಯು ಹೊಸ ಮಾರ್ಕ್ 2 ಸ್ಕೂಟರ್ ಮಾದರಿಯಲ್ಲಿ ತೆಗೆದುಹಾಕಬಹುದಾದ ಲೀ-ಅಯಾನ್ ಬ್ಯಾಟರಿ ಪ್ರೇರಣೆಯೊಂದಿಗೆ ಪ್ರತಿ ಚಾರ್ಜ್‌ಗೆ ಗರಿಷ್ಠ 280 ಕಿ.ಮೀ ಮೈಲೇಜ್ ಹಿಂದಿರುಗಿಸಲಿದೆ ಎಂದು ಹೇಳಿಕೊಂಡಿದ್ದು, ಹೋಂ ಚಾರ್ಜರ್ ಮೂಲಕ 40 ನಿಮೀಷಗಳಲ್ಲಿ ಪೂರ್ಣ ಪ್ರಮಾಣದಲ್ಲಿ ಚಾರ್ಜ್ ಮಾಡಬಹುದಾದರೇ ಫಾಸ್ಟ್ ಚಾರ್ಜಿಂಗ್ ಸೆಂಟರ್‌ಗಳಲ್ಲಿ ಕೇವಲ 17 ನೀಮಿಷಗಳಲ್ಲೇ ಸಂಪೂರ್ಣವಾಗಿ ಚಾರ್ಜ್ ಮಾಡಬಹುದಾದ ಬ್ಯಾಟರಿ ಸೌಲಭ್ಯ ಹೊಂದಿದೆ.

ಹೊಸ ಮಾರ್ಕ್ 2 ಇವಿ ಸ್ಕೂಟರ್ ಮತ್ತೊಂದು ಪ್ರಮುಖ ಆಕರ್ಷಣೆಯೆಂದರೆ ಈ ಸ್ಕೂಟರ್ ಎಕಾನಮಿ ಮತ್ತು ಸ್ಪೋರ್ಟ್ ಮೋಡ್‌ಗಳನ್ನು ಹೊಂದಿದ್ದು, ಸ್ಪೋರ್ಟ್ ಮೋಡ್‌ನಲ್ಲಿ ಗಂಟೆಗೆ ಗರಿಷ್ಠ 103ಕಿ.ಮೀ ವೇಗದಲ್ಲಿ ಚಲಿಸಬಹುದು.

ಬಿಡುಗಡೆ ಯಾವಾಗ?
ಇದೇ ವರ್ಷ ಜೂನ್ ಅಥವಾ ಜುಲೈನಲ್ಲಿ ಹೊಸ ಇವಿ ಸ್ಕೂಟರ್ ಬಿಡುಗಡೆ ಯೋಜನೆ ಹೊಂದಿದ್ದ ಸಿಂಪಲ್ ಎನರ್ಜಿ ಕಂಪನಿಯು ಕರೋನಾ ವೈರಸ್ ಪರಿಣಾಮ ಬಿಡುಗಡೆ ಯೋಜನೆಯನ್ನು ಮುಂದಿನ ವರ್ಷ ಜನವರಿ ವೇಳೆಗೆ ಮಾರಾಟ ಪ್ರಕ್ರಿಯೆ ಆರಂಭಿಸುವ ಸಿದ್ದತೆಯಲ್ಲಿದೆ.

ಹೊಸ ಇವಿ ಸ್ಕೂಟರ್ ಬೆಲೆ?
ಅಚ್ಚರಿ ಆದರೂ ಮಾರ್ಕ್ 2 ಇವಿ ಸ್ಕೂಟರ್ ಮಾದರಿಯು ಎಕ್ಸ್‌ಶೋರೂಂ ಪ್ರಕಾರ ರೂ.1.10 ಲಕ್ಷದಿಂದ ರೂ.1.25 ಲಕ್ಷ ಬೆಲೆಯೊಂದಿಗೆ ಮಾರಾಟ ಮಾಡುವುದಾಗಿ ಸುಳಿವು ನೀಡಿರುವ ಸಿಂಪಲ್ ಎನರ್ಜಿ ಕಂಪನಿಯು ಮಾರುಕಟ್ಟೆಯಲ್ಲಿರುವ ಹಲವು ಸ್ಕೂಟರ್ ಮಾದರಿಗಳಿಗೆ ಭರ್ಜರಿ ಪೈಪೋಟಿ ನೀಡುವ ತವಕದಲ್ಲಿದೆ.
MOST READ: ಅತಿ ಕಡಿಮೆ ಬೆಲೆಯಲ್ಲಿ ಹೆಚ್ಚು ಮೈಲೇಜ್ ನೀಡುವ ರೆಟ್ರೊ ಎಲೆಕ್ಟ್ರಿಕ್ ಬೈಕ್ ಬಿಡುಗಡೆ

ಸದ್ಯ ಮಾರುಕಟ್ಟೆಯಲ್ಲಿ ಬಹುತೇಕ ಪ್ರೀಮಿಯಂ ಇವಿ ಸ್ಕೂಟರ್‌ಗಳು ರೂ.1 ಲಕ್ಷದಿಂದ 1.40 ಲಕ್ಷ ಬೆಲೆ ಅಂತರದಲ್ಲಿ ಮಾರಾಟವಾಗುತ್ತಿದ್ದು, ಬ್ಯಾಟರಿಗೆ ಅನುಗುಣವಾಗಿ ಪ್ರತಿ ಚಾರ್ಜ್‌ಗೆ 60ಕಿ.ಮೀ ನಿಂದ 90 ಕಿ.ಮೀ ಮೈಲೇಜ್ ಹೊಂದಿವೆ.

ಆದರೆ ಸಿಂಪಲ್ ಎನರ್ಜಿ ಕಂಪನಿಯು ಸಾಮಾನ್ಯ ಬೆಲೆಯಲ್ಲೇ ಪ್ರತಿ ಚಾರ್ಜ್‌ಗೆ 280ಕಿ.ಮೀ ಹಿಂದಿರುಗಿಸುವ ಭರವಸೆ ನೀಡಿದ್ದು, ಹೊಸ ಸ್ಕೂಟರ್‌ನಲ್ಲಿ ಪ್ರೀಮಿಯಂ ಫೀಚರ್ಸ್‌ಗಳಾದ ಡಿಜಿಟಲ್ ಇನ್‌ಸ್ಟುಮೆಂಟ್ ಕ್ಲಸ್ಟರ್, ಅಲಾಯ್ ವೀಲ್ಹ್, ಡಿಸ್ಕ್ ಬ್ರೇಕ್ ಸೇರಿದಂತೆ ಹಲವಾರು ಹೊಸ ಸೌಲಭ್ಯಗಳನ್ನು ನೀಡಿದೆ.
MOST READ: ಭಾರತದಲ್ಲಿಯೂ ಬಿಡುಗಡೆಯಾಗಲಿದೆ ದುಬಾರಿ ಬೆಲೆಯ ಫೋರ್ಜಾ ಮ್ಯಾಕ್ಸಿ ಸ್ಕೂಟರ್

ಹೊಸ ಯೋಜನೆಗಾಗಿ ಸದ್ಯ ರೂ. 1.30 ಕೋಟಿ ಬಂಡವಾಳದೊಂದಿಗೆ ಬೆಂಗಳೂರಿನ ಯಲಹಂಕದಲ್ಲಿ ಆರಂಭಿಕ ಸ್ಕೂಟರ್ ಉತ್ಪಾದನಾ ಘಟಕವನ್ನು ತೆರೆದಿರುವ ಸಿಂಪಲ್ ಎನರ್ಜಿ ಕಂಪನಿಯು ಮುಂಬರುವ ದಿನಗಳಲ್ಲಿ ಭಾರೀ ಪ್ರಮಾಣದ ಬಂಡವಾಳ ಹೂಡಿಕೆಯ ನೀರಿಕ್ಷೆಯಲ್ಲಿದ್ದು, ಹೊಸ ಸ್ಕೂಟರ್‌ಗಳು ಆರಂಭಿಕವಾಗಿ ಇ-ಕಾಮರ್ಸ್ ಪ್ಲ್ಯಾಟ್‌ಫಾರ್ಮ್‌ಗಳಾದ ಅಮೆಜಾನ್, ಫ್ಲಿಪ್‌ಕಾರ್ಟ್ ನಲ್ಲಿ ಮಾರಾಟಗೊಳ್ಳಲಿವೆ.


Click it and Unblock the Notifications








