ದುಬಾರಿಯಾಯ್ತು ಜನಪ್ರಿಯ ಬಜಾಜ್ ಅವೆಂಜರ್ ಬೈಕುಗಳು

ಬಜಾಜ್ ಕಂಪನಿಯು ತನ್ನ ಅವೆಂಜರ್ ಸ್ಟ್ರೀಟ್ 160 ಕ್ರೂಸರ್ ಮತ್ತು ಅವೆಂಜರ್ 220 ಕ್ರೂಸ್ ಬೈಕುಗಳ ಬೆಲೆಯನ್ನು ಹೆಚ್ಚಿಸಿದೆ. ಬಜಾಜ್ ಕಂಪನಿಯ ಸರಣಿಯಲ್ಲಿ ಅವೆಂಜರ್ ಸ್ಟ್ರೀಟ್ 160 ಕ್ರೂಸರ್ ಮತ್ತು ಅವೆಂಜರ್ 220 ಕ್ರೂಸ್ ಜನಪ್ರಿಯ ಮಾದರಿಗಳಾಗಿದೆ.

ದುಬಾರಿಯಾಯ್ತು ಜನಪ್ರಿಯ ಬಜಾಜ್ ಅವೆಂಜರ್ ಬೈಕುಗಳು

ಮೊದಲಿಗೆ ಬಜಾಜ್ ಕಂಪನಿಯು ಅವೆಂಜರ್ ಸ್ಟ್ರೀಟ್ 160 ಕ್ರೂಸರ್ ಬೈಕಿನ ಬೆಲೆಯನ್ನು ರೂ.3,706 ಗಳವರೆಗೆ ಹೆಚ್ಚಿಸಲಾಗಿದೆ. ಇದೀಗ ಬಜಾಜ್ ಅವೆಂಜರ್ ಸ್ಟ್ರೀಟ್ 160 ಕ್ರೂಸರ್ ಬೈಕಿನ ಬೆಲೆಯು ರೂ.1 ಲಕ್ಷದ ಗಡಿಯನ್ನು ಸಮೀಪಿಸಿದೆ. ಬೆಲೆ ಏರಿಕೆಯ ಬಳಿಕ ಬಜಾಜ್ ಅವೆಂಜರ್ ಸ್ಟ್ರೀಟ್ 160 ಕ್ರೂಸರ್ ಬೈಕಿನ ಬೆಲೆಯು ರೂ.99,597 ಗಳಾಗಿದೆ.

ದುಬಾರಿಯಾಯ್ತು ಜನಪ್ರಿಯ ಬಜಾಜ್ ಅವೆಂಜರ್ ಬೈಕುಗಳು

ಭಾರತೀಯ ಮಾರುಕಟ್ಟೆಯಲ್ಲಿ ತನ್ನ ಬಿಎಸ್-6 ಅಪ್‌ಡೇಟ್‌ನ ನಂತರ ಅವೆಂಜರ್ ಸ್ಟ್ರೀಟ್ 160 ಕ್ರೂಸರ್ ಮಾದರಿಯ ಬೆಲೆಯು ಎರಡನೇ ಬಾರಿ ಏರಿಕೆಯಾಗಿದೆ. ಬೆಲೆಯನ್ನು ಹೊರತುಪಡಿಸಿ ಇತರ ಬದಲಾವಣೆಗಳು ಯಾವುದು ಇಲ್ಲ.

MOST READ: ದುಬಾರಿಯಾಯ್ತು ಜನಪ್ರಿಯ ಬಿಎಸ್-6 ಯಮಹಾ ಎಂಟಿ-15 ಬೈಕ್

ದುಬಾರಿಯಾಯ್ತು ಜನಪ್ರಿಯ ಬಜಾಜ್ ಅವೆಂಜರ್ ಬೈಕುಗಳು

ಅವೆಂಜರ್ ಸ್ಟ್ರೀಟ್ 160 ಬೈಕಿನಲ್ಲಿ 160 ಸಿಸಿ ಸಿಂಗಲ್ ಸಿಲಿಂಡರ್, ಏರ್-ಕೂಲ್ಡ್ ಎಂಜಿನ್ ಅನ್ನು ಹೊಂದಿದೆ. ಈ ಎಂಜಿನ್ ನಲ್ಲಿ ಸಹ ಫ್ಯೂಯಲ್ ಇಂಜೆಕ್ಷನ್ ಟೆಕ್ನಾಲಜಿಯನ್ನು ಅಳವಡಿಸಲಾಗಿದೆ.

ದುಬಾರಿಯಾಯ್ತು ಜನಪ್ರಿಯ ಬಜಾಜ್ ಅವೆಂಜರ್ ಬೈಕುಗಳು

ಹೊಸ ಅವೆಂಜರ್ ಸ್ಟ್ರೀಟ್ 160 ಬೈಕಿನಲ್ಲಿರುವ ಎಂಜಿನ್ 14.8 ಬಿಹೆಚ್‌ಪಿ ಪವರ್ ಹಾಗೂ 13.7 ಎನ್ಎಂ ಟಾರ್ಕ್ ಉತ್ಪಾದಿಸುತ್ತದೆ. ಈ ಎಂಜಿನ್‌ನಲ್ಲಿ 5-ಸ್ಪೀಡಿನ ಗೇರ್‌ಬಾಕ್ಸ್ ಜೋಡಿಸಲಾಗಿದೆ.

MOST READ: ಬಿಡುಗಡೆಯಾಯ್ತು ಹೊಸ ಕವಾಸಕಿ ವಲ್ಕನ್ ಎಸ್ ಬೈಕ್

ದುಬಾರಿಯಾಯ್ತು ಜನಪ್ರಿಯ ಬಜಾಜ್ ಅವೆಂಜರ್ ಬೈಕುಗಳು

ಇದರೊಂದಿಗೆ ಬಜಾಜ್ ಕಂಪನಿಯು ಬಿಎಸ್-6 ಅವೆಂಜರ್ 220 ಕ್ರೂಸ್ ಬೈಕಿನ ಬೆಲೆಯನ್ನು ಹೆಚ್ಚಿಸಲಾಗಿದೆ. ಈ ಬೈಕಿನ ಬೆಲೆಯನ್ನು ರೂ.960 ಗಳವರೆಗೆ ಬೆಲೆಯನ್ನು ಹೆಚ್ಚಿಸಲಾಗಿದೆ. ಬೆಲೆ ಏರಿಕೆಯ ಬಳಿಕ ಬಿಎಸ್-6 ಅವೆಂಜರ್ 220 ಕ್ರೂಸ್ ಬೈಕಿನ ಬೆಲೆಯು ರೂ.1,21,133 ಗಳಾಗಿದೆ.

ದುಬಾರಿಯಾಯ್ತು ಜನಪ್ರಿಯ ಬಜಾಜ್ ಅವೆಂಜರ್ ಬೈಕುಗಳು

ಬಜಾಜ್ ಅವೆಂಜರ್ ಕ್ರೂಸ್ 220 ಬೈಕಿನಲ್ಲಿ 220 ಸಿಸಿಯ ಸಿಂಗಲ್ ಸಿಲಿಂಡರ್ ಲಿಕ್ವಿಡ್ ಕೂಲ್ಡ್ ಬಿಎಸ್ 6 ಎಂಜಿನ್ ಅಳವಡಿಸಲಾಗಿದೆ. ಈ ಈ ಎಂಜಿನ್ 8,500 ಆರ್‌ಪಿಎಂನಲ್ಲಿ 18.7 ಬಿಹೆಚ್‌ಪಿ ಪವರ್ ಹಾಗೂ 7,000 ಆರ್‌ಪಿಎಂನಲ್ಲಿ 17.5 ಎನ್ಎಂ ಟಾರ್ಕ್ ಉತ್ಪಾದಿಸುತ್ತದೆ. ಈ ಎಂಜಿನ್‌ನಲ್ಲಿ 5-ಸ್ಪೀಡಿನ ಗೇರ್‌ಬಾಕ್ಸ್ ಜೋಡಿಸಲಾಗಿದೆ.

MOST READ: ಬಿಡುಗಡೆಯಾಯ್ತು ಹೊಸ ಟ್ರಯಂಫ್ ಬೊನೊವೆಲ್ಲಿ ಸ್ಪೀಡ್‍‍ಮಾಸ್ಟರ್ ಬೈಕ್

ದುಬಾರಿಯಾಯ್ತು ಜನಪ್ರಿಯ ಬಜಾಜ್ ಅವೆಂಜರ್ ಬೈಕುಗಳು

ಈ ಬೈಕಿನಲ್ಲಿ ಎಂಜಿನ್ ಅಪ್ ಗ್ರೇಡ್ ಹೊರತಾಗಿ, ಅವೆಂಜರ್ ಕ್ರೂಸ್ 220 ಬೈಕಿನಲ್ಲಿ ಬೇರೆ ಯಾವುದೇ ಬದಲಾವಣೆಗಳಾಗಿಲ್ಲ. ವಿನ್ಯಾಸವನ್ನು ಮೊದಲಿನಂತೆ ಉಳಿಸಿಕೊಳ್ಳಲಾಗಿದೆ. ಈ ಬೈಕ್ ಬಹುತೇಕ ಭಾಗಗಳಲ್ಲಿ ಒಂದೇ ಉದ್ದದ ವಿಂಡ್‌ಸ್ಕ್ರೀನ್ ಹಾಗೂ ಕ್ರೋಮ್ ಗಳನ್ನು ಹೊಂದಿದೆ.

ದುಬಾರಿಯಾಯ್ತು ಜನಪ್ರಿಯ ಬಜಾಜ್ ಅವೆಂಜರ್ ಬೈಕುಗಳು

ಬಜಾಜ್ ಆಟೋ ಕಂಪನಿಯು ಬಿಎಸ್-6 ಅವೆಂಜರ್ ಸ್ಟ್ರೀಟ್ 160 ಕ್ರೂಸರ್ ಮತ್ತು ಅವೆಂಜರ್ 220 ಕ್ರೂಸ್ ಬೈಕುಗಳ ಬೆಲೆಯನ್ನು ಹೆಚ್ಚಿಸಲಾಗಿದೆ. ಈ ಬೈಕಿನ ಬೆಲೆಯನ್ನು ಹೆಚ್ಚಿಸಿರುವುದು ಮಾರಾಟದ ಮೇಲೆ ಪರಿಣಾಮವನ್ನು ಬೀರುತ್ತಾ ಎಂಬುದು ಕಾದು ನೋಡಬೇಕು.

Article Published On: Wednesday, September 30, 2020, 19:25 [IST]
English summary
Bajaj Avenger Street 160, Cruise 220 BS6 Price Hiked Again. Read In Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+