ಬಿಎಸ್-6 ಡೋಮಿನಾರ್ 250 ಬೈಕಿನ ಬೆಲೆ ಹೆಚ್ಚಿಸಿದ ಬಜಾಜ್ ಆಟೋ
ಬಜಾಜ್ ಆಟೋ ಕಂಪನಿಯು ಈ ವರ್ಷದ ಆರಂಭದಲ್ಲಿ ಬಿಎಸ್-6 ಡೋಮಿನಾರ್ 250 ಬೈಕನ್ನು ಬಿಡುಗಡೆಗೊಳಿಸಿತು. ಇದೀಗ ಬಜಾಜ್ ಕಂಪನಿಯು ಮೊದಲ ಬಾರಿಗೆ ಈ ಬಿಎಸ್-6 ಡೋಮಿನಾರ್ 250 ಬೈಕಿನ ಬೆಲೆಯನ್ನು ಹೆಚ್ಚಿಸಿದೆ.

ಬಜಾಜ್ ಡೋಮಿನಾರ್ 250 ಬೈಕ್ ಒಂದೇ ರೂಪಾಂತರದಲ್ಲಿ ಲಭ್ಯವಿದೆ. ಈ ಬಿಎಸ್-6 ಡೋಮಿನಾರ್ 250 ಬೈಕ್ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಿ ಸುಮಾರು ಆರು ತಿಂಗಳ ಬಳಿಕ ಬಜಾಜ್ ಆಟೋ ಕಂಪನಿಯು ಮೊದಲ ಬಾರಿಗೆ ಬೆಲೆಯನ್ನು ಹೆಚ್ಚಿಸಿದೆ. ಈ ಬಿಎಸ್-6 ಬಜಾಜ್ ಡೋಮಿನಾರ್ 250 ಬೈಕಿನ ಬೆಲೆಯನ್ನು ರೂ.4,090 ರಷ್ಟು ಹೆಚ್ಚಿಸಲಾಗಿದೆ. ಇದೀಗ ಈ ಬಿಎಸ್-6 ಬಜಾಜ್ ಡೋಮಿನಾರ್ 250 ಬೈಕಿನ ಬೆಲೆಯು ರೂ.1.64 ಲಕ್ಷಗಳಾಗಿದೆ.

ಹೊಸ ಬಜಾಜ್ ಡೋಮಿನಾರ್ 250 ಬೈಕ್ ತನ್ನದೆ ಸರಣಿಯ ಡೋಮಿನಾರ್ 400 ಬೈಕಿನ ಮಾದರಿಯಲ್ಲಿದೆ. ಆದರೆ ಡೋಮಿನಾರ್ 250 ಬೈಕಿನಲ್ಲಿ ಕೆಲವು ಬದಲಾವಣೆಗಳನ್ನು ಹೊಂದಿದೆ. ಹೊಸ ಡೋಮಿನಾರ್ 250 ಬೈಕ್ 'ಡಿ250' ಬ್ಯಾಡ್ಜ್ ನೊಂದಿಗೆ ಕೆಂಪು ಬಣ್ಣವನ್ನು ಹೊಂದಿದೆ. ಬಜಾಜ್ ಡೋಮಿನಾರ್ 250 ಬೈಕ್ ಸ್ಪೂರ್ಟಿ ವಿನ್ಯಾಸದೊಂದಿಗೆ ಆಕರ್ಷಕ ಲುಕ್ ಅನ್ನು ಹೊಂದಿದೆ.
MOST READ: ಬಿಡುಗಡೆಯ ಸನಿಹದಲ್ಲಿ ಬಹುನಿರೀಕ್ಷಿತ ಬಿಎಸ್-6 ಹೀರೋ ಬೈಕುಗಳು

ಹೊಸ ಬಜಾಜ್ ಡೋಮಿನಾರ್ 250 ಬೈಕಿನಲ್ಲಿ ಕೆಟಿಎಂ 250 ಡ್ಯೂಕ್‍ನಲ್ಲಿರುವಂತಹ 248 ಸಿಸಿ ಸಿಂಗಲ್ ಸಿಲಿಂಡರ್ ಲಿಕ್ವಿಡ್ ಕೂಲ್ಡ್ ಎಂಜಿನ್ ಅನ್ನು ಹೊಂದಿದೆ. ಈ ಎಂಜಿನ್ 26.6 ಬಿಹೆಚ್‍ಪಿ ಪವರ್ ಮತ್ತು 23.5 ಎನ್‌ಎಂ ಟಾರ್ಕ್ ಉತ್ಪಾದಿಸುತ್ತದೆ. ಈ ಎಂಜಿನ್‍ನೊಂದಿಗೆ 6 ಸ್ಪೀಡ್ ಗೇರ್‍ಬಾಕ್ಸ್ ಅನ್ನು ಜೋಡಿಸಲಾಗಿದೆ.

ಡೋಮಿನಾರ್ 400 ಮತ್ತು ಹೊಸ ಡೋಮಿನಾರ್ 250 ನಡುವಿನ ಕೆಲವು ವ್ಯತ್ಯಾಸಗಳಿವೆ. ಇದು ಕಡಿಮೆ ವೆಚ್ಚದ ಸ್ವಿಂಗಾರ್ಮ್, ಯುಎಸ್ಡಿ ಫೋರ್ಕ್ ಮತ್ತು ವಿಭಿನ್ನ ಅಲಾಯ್ ವ್ಹೀಲ್ ವಿನ್ಯಾಸವನ್ನು ಹೊಂದಿದೆ.
MOST READ: ದುಬಾರಿಯಾಯ್ತು ಬಿಎಸ್-6 ಟಿವಿಎಸ್ ಎನ್‌ಟಾರ್ಕ್ 125 ಸ್ಕೂಟರ್

ಡೋಮಿನಾರ್ 400 ಬೈಕಿಗೆ ಹೋಲಿಸಿದರೆ ಹೊಸ ಬಜಾಜ್ ಡೋಮಿನಾರ್ 250 ಬೈಕಿನ ಟಯರ್ ಪ್ರೊಫೈಲ್‍ಗಳು ಸಹ ಭಿನ್ನವಾಗಿದೆ. ಇನ್ನು ಈ ಬೈಕ್ ಡೋಮಿನಾರ್ 400 ಮಾದರಿಗಿಂತ ತೂಕ ಕಡಿಮೆಯಾಗಿದೆ.

ಬಜಾಜ್ ಡೋಮಿನಾರ್ 250 ಬೈಕಿನಲ್ಲಿ ಎಲ್ಇಡಿ ಹೆಡ್ ಲ್ಯಾಂಪ್ ಅನ್ನು ಹೊಂದಿದೆ. ಈ ಬೈಕಿನಲ್ಲಿ ಟ್ವಿನ್-ಬ್ಯಾರೆಲ್ ಎಕ್ಸಾಸ್ ಅನ್ನು ಒಳಗೊಂಡಿದೆ. ಇನ್ನು ಈ ಬೈಕಿನಲ್ಲಿ ಫುಲ್ ಡಿಜಿಟಲ್ ಇನ್ಸ್ ಟ್ರೂಮೆಂಟ್ ಕ್ಲಸ್ಟರ್ ಅನ್ನು ಹೊಂದಿದೆ.
MOST READ: ಬಿಡುಗಡೆಯಾಯ್ತು ಹೊಸ ಕವಾಸಕಿ ವಲ್ಕನ್ ಎಸ್ ಬೈಕ್

ಬಜಾಜ್ ಡೋಮಿನಾರ್ ಬೈಕಿನಲ್ಲಿ ಸಸ್ಪೆಂಕ್ಷನ್ ಗಳಿಗಾಗಿ ಮುಂಭಾಗದಲ್ಲಿ 37 ಎಂಎಂ ಯುಎಸ್ಡಿ ಫೋರ್ಕ್ಸ್ ಮತ್ತು ಹಿಂಭಾಗದ ಮೊನೊಶಾಕ್ ಅನ್ನು ಹೊಂದಿದೆ. ಇದರ ಬ್ರೇಕಿಂಗ್ ಸಿಸ್ಟಂ ಬಗ್ಗೆ ಹೇಳುವುದಾದರೆ, ಮುಂಭಾಗದಲ್ಲಿ 300 ಎಂಎಂ ಡಿಸ್ಕ್ ಮತ್ತು ಹಿಂಭಾಗದಲ್ಲಿ 230 ಎಂಎಂ ಡಿಸ್ಕ್ ಬ್ರೇಕ್ ಅನ್ನು ಅಳವಡಿಸಿದೆ. ಇದರೊಂದಿಗೆ ಡ್ಯುಯಲ್-ಚಾನೆಲ್ ಎಬಿಎಸ್ ಅನ್ನು ನೀಡಲಾಗಿದೆ.

ಈ ಬಜಾಜ್ ಡೋಮಿನಾರ್ 250 ಭಾರತೀಯ ಮಾರುಕಟ್ಟೆಯಲ್ಲಿ ಸುಜುಕಿ ಜಿಕ್ಸರ್ 250 ಮತ್ತು ಯಮಹಾ ಎಫ್‌ಜೆಡ್ 25 ಬೈಕುಗಳಿಗೆ ಪೈಪೋಟಿಯನ್ನು ನೀಡುತ್ತದೆ. ಈ ಬೈಕಿನ ಬೆಲೆಯನ್ನು ಹೆಚ್ಚಿಸಿರುವುದು ಮಾರಾಟದ ಮೇಲೆ ಪರಿಣಾಮವನ್ನು ಬೀರುತ್ತಾ ಎಂಬುದು ಕಾದು ನೋಡಬೇಕು.


Click it and Unblock the Notifications