ದುಬಾರಿಯಾಯ್ತು ಬಿಎಸ್-6 ಬಜಾಜ್ ಡೋಮಿನಾರ್ 250 ಬೈಕ್
ಜನಪ್ರಿಯ ದ್ವಿಚಕ್ರ ವಾಹನ ತಯಾರಕ ಕಂಪನಿಯಾದ ಬಜಾಜ್ ಆಟೋ ಈ ವರ್ಷದ ಆರಂಭದಲ್ಲಿ ಬಿಎಸ್-6 ಡೋಮಿನಾರ್ 250 ಬೈಕನ್ನು ಬಿಡುಗಡೆಗೊಳಿಸಿತು. ಬಜಾಜ್ ಕಂಪನಿಯು ಎರಡನೇ ಬಾರಿಗೆ ಈ ಬಿಎಸ್-6 ಡೋಮಿನಾರ್ 250 ಬೈಕಿನ ಬೆಲೆಯನ್ನು ಹೆಚ್ಚಿಸಿದೆ.

ಬಜಾಜ್ ಡೋಮಿನಾರ್ 250 ಬೈಕ್ ಒಂದೇ ರೂಪಾಂತರದಲ್ಲಿ ಲಭ್ಯವಿದೆ. ಈ ಬಿಎಸ್-6 ಡೋಮಿನಾರ್ 250 ಬೈಕ್ ಬಜಾಜ್ ಆಟೋ ಕಂಪನಿಯು ಮೊದಲ ಬಾರಿಗೆ ಒಂದು ತಿಂಗಳ ಹಿಂದೆ ರೂ.4,090 ರಷ್ಟು ಹೆಚ್ಚಿಸಲಾಗಿತ್ತು. ಇದೀಗ ಈ ಬಿಎಸ್-6 ಬಜಾಜ್ ಡೋಮಿನಾರ್ 250 ಬೈಕಿನ ಬೆಲೆಯನ್ನು ಎರಡನೇ ಬಾರಿ ರೂ.1,625 ಗಳವರೆಗೆ ಹೆಚ್ಚಿಸಲಾಗಿದೆ. ಬೆಲೆ ಏರಿಕೆಯ ಬಳಿಕ, ಬಿಎಸ್-6 ಡೋಮಿನಾರ್ 250 ಬೈಕಿನ ಬೆಲೆಯು ದೆಹಲಿಯ ಎಕ್ಸ್ ಶೋರೂಂ ಪ್ರಕಾರ ರೂ.1,65,715 ಗಳಾಗಿದೆ.

ಹೊಸ ಬಜಾಜ್ ಡೋಮಿನಾರ್ 250 ಬೈಕ್ ತನ್ನದೆ ಸರಣಿಯ ಡೋಮಿನಾರ್ 400 ಬೈಕಿನ ಮಾದರಿಯಲ್ಲಿದೆ. ಆದರೆ ಡೋಮಿನಾರ್ 250 ಬೈಕಿನಲ್ಲಿ ಕೆಲವು ಬದಲಾವಣೆಗಳನ್ನು ಹೊಂದಿದೆ. ಹೊಸ ಡೋಮಿನಾರ್ 250 ಬೈಕ್ 'ಡಿ250' ಬ್ಯಾಡ್ಜ್ ನೊಂದಿಗೆ ಕೆಂಪು ಬಣ್ಣವನ್ನು ಹೊಂದಿದೆ. ಬಜಾಜ್ ಡೋಮಿನಾರ್ 250 ಬೈಕ್ ಸ್ಪೂರ್ಟಿ ವಿನ್ಯಾಸದೊಂದಿಗೆ ಆಕರ್ಷಕ ಲುಕ್ ಅನ್ನು ಹೊಂದಿದೆ.
MOST READ: ಬಿಡುಗಡೆಯಾಯ್ತು ಹೊಸ ಕವಾಸಕಿ ವಲ್ಕನ್ ಎಸ್ ಬೈಕ್

ಹೊಸ ಬಜಾಜ್ ಡೋಮಿನಾರ್ 250 ಬೈಕಿನಲ್ಲಿ ಕೆಟಿಎಂ 250 ಡ್ಯೂಕ್‍ನಲ್ಲಿರುವಂತಹ 248 ಸಿಸಿ ಸಿಂಗಲ್ ಸಿಲಿಂಡರ್ ಲಿಕ್ವಿಡ್ ಕೂಲ್ಡ್ ಎಂಜಿನ್ ಅನ್ನು ಹೊಂದಿದೆ. ಈ ಎಂಜಿನ್ 26.6 ಬಿಹೆಚ್‍ಪಿ ಪವರ್ ಮತ್ತು 23.5 ಎನ್‌ಎಂ ಟಾರ್ಕ್ ಉತ್ಪಾದಿಸುತ್ತದೆ. ಈ ಎಂಜಿನ್‍ನೊಂದಿಗೆ 6 ಸ್ಪೀಡ್ ಗೇರ್‍ಬಾಕ್ಸ್ ಅನ್ನು ಜೋಡಿಸಲಾಗಿದೆ.

ಡೋಮಿನಾರ್ 400 ಮತ್ತು ಹೊಸ ಡೋಮಿನಾರ್ 250 ನಡುವಿನ ಕೆಲವು ವ್ಯತ್ಯಾಸಗಳಿವೆ. ಇದು ಕಡಿಮೆ ವೆಚ್ಚದ ಸ್ವಿಂಗಾರ್ಮ್, ಯುಎಸ್ಡಿ ಫೋರ್ಕ್ ಮತ್ತು ವಿಭಿನ್ನ ಅಲಾಯ್ ವ್ಹೀಲ್ ವಿನ್ಯಾಸವನ್ನು ಹೊಂದಿದೆ.
MOST READ: ಹೊಸ ಬಣ್ಣದ ಆಯ್ಕೆಯನ್ನು ಪಡೆದುಕೊಂಡ 2021ರ ಕವಾಸಕಿ ನಿಂಜಾ 1000 ಎಸ್‌ಎಕ್ಸ್ ಬೈಕ್

ಡೋಮಿನಾರ್ 400 ಬೈಕಿಗೆ ಹೋಲಿಸಿದರೆ ಹೊಸ ಬಜಾಜ್ ಡೋಮಿನಾರ್ 250 ಬೈಕಿನ ಟಯರ್ ಪ್ರೊಫೈಲ್ ಗಳು ಸಹ ಭಿನ್ನವಾಗಿದೆ. ಇನ್ನು ಈ ಬೈಕ್ ಡೋಮಿನಾರ್ 400 ಮಾದರಿಗಿಂತ ತೂಕ ಕಡಿಮೆಯಾಗಿದೆ.
MOST READ: ಬಿಡುಗಡೆಯಾಯ್ತು ಹೊಸ ಟ್ರಯಂಫ್ ಬೊನೊವೆಲ್ಲಿ ಸ್ಪೀಡ್‍ಮಾಸ್ಟರ್ ಬೈಕ್

ಬಜಾಜ್ ಡೋಮಿನಾರ್ 250 ಬೈಕಿನಲ್ಲಿ ಎಲ್ಇಡಿ ಹೆಡ್ ಲ್ಯಾಂಪ್ ಅನ್ನು ಹೊಂದಿದೆ. ಈ ಬೈಕಿನಲ್ಲಿ ಟ್ವಿನ್-ಬ್ಯಾರೆಲ್ ಎಕ್ಸಾಸ್ ಅನ್ನು ಒಳಗೊಂಡಿದೆ. ಇನ್ನು ಈ ಬೈಕಿನಲ್ಲಿ ಫುಲ್ ಡಿಜಿಟಲ್ ಇನ್ಸ್ ಟ್ರೂಮೆಂಟ್ ಕ್ಲಸ್ಟರ್ ಅನ್ನು ಹೊಂದಿದೆ.
MOST READ: ಬಿಡುಗಡೆಯಾಯ್ತು ಹೊಸ ಕವಾಸಕಿ ವಲ್ಕನ್ ಎಸ್ ಬೈಕ್

ಬಿಎಸ್-6 ಬಜಾಜ್ ಡೋಮಿನಾರ್ 250 ಬೈಕಿನಲ್ಲಿ ಸಸ್ಪೆಂಕ್ಷನ್ ಗಳಿಗಾಗಿ ಮುಂಭಾಗದಲ್ಲಿ 37 ಎಂಎಂ ಯುಎಸ್ಡಿ ಫೋರ್ಕ್ಸ್ ಮತ್ತು ಹಿಂಭಾಗದ ಮೊನೊಶಾಕ್ ಅನ್ನು ಹೊಂದಿದೆ.

ಇನ್ನು ಇದರ ಬ್ರೇಕಿಂಗ್ ಸಿಸ್ಟಂ ಬಗ್ಗೆ ಹೇಳುವುದಾದರೆ, ಮುಂಭಾಗದಲ್ಲಿ 300 ಎಂಎಂ ಡಿಸ್ಕ್ ಮತ್ತು ಹಿಂಭಾಗದಲ್ಲಿ 230 ಎಂಎಂ ಡಿಸ್ಕ್ ಬ್ರೇಕ್ ಅನ್ನು ಅಳವಡಿಸಿದೆ. ಇದರೊಂದಿಗೆ ಡ್ಯುಯಲ್-ಚಾನೆಲ್ ಎಬಿಎಸ್ ಅನ್ನು ನೀಡಲಾಗಿದೆ.

ಈ ಬೈಕಿನ ಬೆಲೆಯನ್ನು ಹೆಚ್ಚಿಸಿರುವುದು ಮಾರಾಟದ ಮೇಲೆ ಪರಿಣಾಮವನ್ನು ಬೀರುತ್ತಾ ಎಂಬುದು ಕಾದು ನೋಡಬೇಕು. ಬಜಾಜ್ ಡೋಮಿನಾರ್ 250 ಭಾರತೀಯ ಮಾರುಕಟ್ಟೆಯಲ್ಲಿ ಸುಜುಕಿ ಜಿಕ್ಸರ್ 250 ಮತ್ತು ಯಮಹಾ ಎಫ್‌ಜೆಡ್ 25 ಬೈಕುಗಳಿಗೆ ಪೈಪೋಟಿಯನ್ನು ನೀಡುತ್ತದೆ.


Click it and Unblock the Notifications