ದುಬಾರಿಯಾಯ್ತು ಬಿಎಸ್-6 ಬಜಾಜ್ ಡೋಮಿನಾರ್ 400 ಬೈಕ್

ಬಜಾಜ್ ಆಟೋ ಕಂಪನಿಯು ಈ ವರ್ಷದ ಆರಂಭದಲ್ಲಿ ಬಿಎಸ್-6 ಡೋಮಿನಾರ್ 400 ಬೈಕನ್ನು ಬಿಡುಗಡೆಗೊಳಿಸಿತ್ತು. ಬಜಾಜ್ ಕಂಪನಿಯು ಇದೀಗ ಎರಡನೇ ಬಾರಿಗೆ ಈ ಬಿಎಸ್-6 ಡೋಮಿನಾರ್ 400 ಬೈಕಿನ ಬೆಲೆಯನ್ನು ಹೆಚ್ಚಿಸಿದೆ.

ದುಬಾರಿಯಾಯ್ತು ಬಿಎಸ್-6 ಬಜಾಜ್ ಡೋಮಿನಾರ್ 400 ಬೈಕ್

ಬಜಾಜ್ ಆಟೋ ಕಂಪನಿಯು ಬಿಎಸ್-6 ಡೋಮಿನಾರ್ 400 ಬೈಕನ್ನು ರೂ.1.91 ಲಕ್ಷ ಬೆಲೆಯಲ್ಲಿ ಬಿಡುಗಡೆಗೊಳಿಸಿದ್ದರು. ನಂತರ ಒಂದು ತಿಂಗಳ ಬಳಿಕ ಬಜಾಜ್ ಕಂಪನಿಯು ಡೋಮಿನಾರ್ 400 ಬೈಕಿನ ಬೆಲೆಯನ್ನು ಮೊದಲ ಬಾರಿ ರೂ.3,000 ಹೆಚ್ಚಿಸಿದ್ದರು. ಇದೀಗ ಎರಡನೇ ಬಾರಿ ಈ ಬೈಕಿನ ಬೆಲೆಯನ್ನು ರೂ.1,507 ಗಳವರೆಗೆ ಹೆಚ್ಚಿಸಿದ್ದಾರೆ. ಸದ್ಯ ಈ ಬಿಎಸ್-6 ಡೊಮಿನಾರ್ 400 ಬೈಕಿನ ಬೆಲೆಯು ಎಕ್ಸ್ ಶೋರೂಂ ಪ್ರಕಾರ ರೂ.1.96 ಲಕ್ಷಗಳಾಗಿದೆ.

ದುಬಾರಿಯಾಯ್ತು ಬಿಎಸ್-6 ಬಜಾಜ್ ಡೋಮಿನಾರ್ 400 ಬೈಕ್

ಡೋಮಿನಾರ್ 400, ಬೈಕಿನಲ್ಲಿ 373.3 ಸಿಸಿ ಸಿಂಗಲ್ ಸಿಲಿಂಡರ್, ಲಿಕ್ವಿಡ್ ಕೂಲ್ಡ್, ಡಿಒ‍ಹೆಚ್‍‍ಸಿ ಎಂಜಿನ್ ಅನ್ನು ಹೊಂದಿದೆ. ಈ ಎಂಜಿನ್ 8800 ಆರ್‍‍ಪಿಎಂನಲ್ಲಿ 39.4 ಬಿ‍‍ಹೆಚ್‍‍ಪಿ ಪವರ್ ಮತ್ತು 7000 ಆರ್‍‍ಪಿ‍ಎಂನಲ್ಲಿ 35 ಎನ್‍ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಎಂಜಿನ್‍‍ನೊಂದಿಗೆ 6 ಸ್ಪೀಡ್ ಗೇರ್‍‍ಬಾಕ್ಸ್ ಅನ್ನು ಅಳವಡಿಸಲಾಗಿದೆ.

MOST READ: ಬಿಡುಗಡೆಯಾಯ್ತು ಹೊಸ ಕವಾಸಕಿ ವಲ್ಕನ್ ಎಸ್ ಬೈಕ್

ದುಬಾರಿಯಾಯ್ತು ಬಿಎಸ್-6 ಬಜಾಜ್ ಡೋಮಿನಾರ್ 400 ಬೈಕ್

ಬಿಎಸ್-6 ಬಜಾಜ್ ಡೋಮಿನಾರ್ 400 ಬೈಕಿನಲ್ಲಿ ಡ್ಯುಯಲ್ ಚಾನೆಲ್ ಎಬಿಎಸ್ ಮತ್ತು ಡ್ಯುಯಲ್ ಇನ್ಸ್ ಟ್ರೂಮೆಂಟ್ ಕನ್ಸೋಲ್ ಅಳವಡಿಸಲಾಗಿದೆ. ಈ ಬಜಾಜ್ ಡೋಮಿನಾರ್ 400 ಬೈಕ್ ಬ್ಲ್ಯಾಕ್ ಮತ್ತು ಗ್ರೀನ್ ಬಣ್ಣಗಳಲ್ಲಿ ಲಭ್ಯವಿದೆ.

ದುಬಾರಿಯಾಯ್ತು ಬಿಎಸ್-6 ಬಜಾಜ್ ಡೋಮಿನಾರ್ 400 ಬೈಕ್

ಬಿಎಸ್-6 ಬಜಾಜ್ ಡೊಮಿನಾರ್ 400 ಬೈಕಿನಲ್ಲಿ ಫುಲ್ ಎಲ್ಇಡಿ ಲೈಟಿಂಗ್, ಟ್ವಿನ್ ಬ್ಯಾರೆಲ್ ಎಕ್ಸಾಸ್ಟ್, ಸಿಂಗಲ್-ಪೀಸ್ ಹ್ಯಾಂಡಲ್ ಬಾರ್ ಮತ್ತು ಡೈಮಂಡ್-ಕಟ್ ಅಲಾಯ್ ವ್ಹೀಲ್ ಅನ್ನು ಹೊಂದಿದೆ.

MOST READ: ಬಿಡುಗಡೆಯಾಯ್ತು ಹೊಸ ಟ್ರಯಂಫ್ ಬೊನೊವೆಲ್ಲಿ ಸ್ಪೀಡ್‍‍ಮಾಸ್ಟರ್ ಬೈಕ್

ದುಬಾರಿಯಾಯ್ತು ಬಿಎಸ್-6 ಬಜಾಜ್ ಡೋಮಿನಾರ್ 400 ಬೈಕ್

ಬಿಎಸ್-6 ಬಜಾಜ್ ಡೊಮಿನಾರ್ 400 ಬೈಕ್ 13-ಲೀಟರ್ ಫ್ಯೂಯಲ್ ಟ್ಯಾಂಕ್ ಹೊಂದಿದೆ. ಈ ಬೈಕಿನಲ್ಲಿ ಸಸ್ಪೆಂಕ್ಷನ್ ಗಳಿಗಾಗಿ ಮುಂಭಾಗದಲ್ಲಿ ಯುಎಸ್ಡಿ ಫೋರ್ಕ್ ಮತ್ತು ಹಿಂಭಾಗದಲ್ಲಿ ಮೊನೊ ಶಾಕ್ ಸೆಟಪ್ ಅನ್ನು ಹೊಂದಿದೆ.

ದುಬಾರಿಯಾಯ್ತು ಬಿಎಸ್-6 ಬಜಾಜ್ ಡೋಮಿನಾರ್ 400 ಬೈಕ್

ಇದರೊಂದಿಗೆ ಬಜಾಜ್ ಕಂಪನಿಯು ಬಿಎಸ್-6 ಡೋಮಿನಾರ್ 250 ಬೈಕಿನ ಬೆಲೆಯನ್ನು ಮೊದಲ ಬಾರಿಗೆ ಹೆಚ್ಚಿಸಿದೆ. ಈ ಬಿಎಸ್-6 ಬಜಾಜ್ ಡೋಮಿನಾರ್ 250 ಬೈಕಿನ ಬೆಲೆಯನ್ನು ರೂ.4,090 ರಷ್ಟು ಹೆಚ್ಚಿಸಲಾಗಿದೆ. ಇದೀಗ ಈ ಬಿಎಸ್-6 ಬಜಾಜ್ ಡೋಮಿನಾರ್ 250 ಬೈಕಿನ ಬೆಲೆಯು ರೂ.1.64 ಲಕ್ಷಗಳಾಗಿದೆ.

MOST READ: ದುಬಾರಿಯಾಯ್ತು ಬಿಎಸ್-6 ಟಿವಿಎಸ್ ಎನ್‌ಟಾರ್ಕ್ 125 ಸ್ಕೂಟರ್

ದುಬಾರಿಯಾಯ್ತು ಬಿಎಸ್-6 ಬಜಾಜ್ ಡೋಮಿನಾರ್ 400 ಬೈಕ್

ಡೋಮಿನಾರ್ 400 ಮತ್ತು ಹೊಸ ಡೋಮಿನಾರ್ 250 ನಡುವಿನ ಕೆಲವು ವ್ಯತ್ಯಾಸಗಳಿವೆ. ಇದು ಕಡಿಮೆ ವೆಚ್ಚದ ಸ್ವಿಂಗಾರ್ಮ್, ಯುಎಸ್ಡಿ ಫೋರ್ಕ್ ಮತ್ತು ವಿಭಿನ್ನ ಅಲಾಯ್ ವ್ಹೀಲ್ ವಿನ್ಯಾಸಗಳಾಗಿದೆ

ದುಬಾರಿಯಾಯ್ತು ಬಿಎಸ್-6 ಬಜಾಜ್ ಡೋಮಿನಾರ್ 400 ಬೈಕ್

ಬಿಎಸ್-6 ಡೋಮಿನಾರ್ 400 ಬೈಕ್ ಭಾರತೀಯ ಮಾರುಕಟ್ಟೆಯಲ್ಲಿ ಜಾವಾ, ರಾಯಲ್ ಎನ್‍‍ಫೀಲ್ಡ್ ಕ್ಲಾಸಿಕ್ 350 ಮತ್ತು ಮೊಜೊ 300 ಬೈಕ್‍‍ಗಳಿಗೆ ಪೈಪೋಟಿಯನ್ನು ನೀಡುತ್ತದೆ. ಈ ಬೈಕಿನ ಬೆಲೆಯನ್ನು ಹೆಚ್ಚಿಸಿರುವುದು ಮಾರಾಟದ ಮೇಲೆ ಪರಿಣಾಮವನ್ನು ಬೀರುತ್ತಾ ಎಂಬುದು ಕಾದು ನೋಡಬೇಕು.

Most Read Articles

Kannada
English summary
Bajaj Dominar 400 BS6 Price Inching Towards The INR 2 Lakh Mark. Read In Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X