ಬಹಿರಂಗವಾಯ್ತು ಹೊಸ ಬಜಾಜ್ ಪ್ಲಾಟಿನಾ 100 ಬೆಲೆ

ಬಜಾಜ್ ಆಟೋ ಕಂಪನಿಯು ತನ್ನ ಜನಪ್ರಿಯ ಬಜಾಜ್ ಪ್ಲಾಟಿನಾ 100 ಬೈಕಿನ ಇಎಸ್ ಡಿಸ್ಕ್ ಬ್ರೇಕ್ ರೂಪಾಂತರವನ್ನು ಭಾರತೀಯ ಮಾರುಕಟ್ಟೆಗೆ ಬಿಡುಗಡೆಗೊಳಿಸಲು ಸಜ್ಜಾಗುತ್ತಿದೆ. ಬಜಾಜ್ ಕಂಪನಿಯು ಈ ಹೊಸ ಪ್ಲಾಟಿನಾ 100 ಇಎಸ್ ಡಿಸ್ಕ್ ಬ್ರೇಕ್ ರೂಪಾಂತರವನ್ನು ಶೀಘ್ರದಲ್ಲೇ ಬಿಡುಗಡೆಗೊಳಿಸಲಿದೆ.

ಬಹಿರಂಗವಾಯ್ತು ಹೊಸ ಪ್ಲಾಟಿನಾ 100 ಬೈಕಿನ ಡಿಸ್ಕ್ ಬ್ರೇಕ್ ರೂಪಾಂತರದ ಬೆಲೆ

ಹೊಸ ಬಜಾಜ್ ಪ್ಲಾಟಿನಾ 100 ಇಎಸ್ ಡಿಸ್ಕ್ ಬ್ರೇಕ್ ರೂಪಾಂತರದ ಬೆಲೆಯು ರೂ.59,373 ಗಳಾಗಿದೆ ಎಂದು ವರದಿಗಳು ಪ್ರಕಟವಾಗಿದೆ. ಇನ್ನು ಬಜಾಜ್ ಆಟೋ ಕಂಪನಿಯು ತನ್ನ ಜನಪ್ರಿಯ ಪ್ಲಾಟಿನಾ 100 ಬೈಕನ್ನು ಇತ್ತೀಚೆಗೆ ಬಿಎಸ್-6 ಆವೃತ್ತಿಯಲ್ಲಿ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಿತು. ಈ ಪ್ಲಾಟಿನಾ 100 ಮಾದರಿಯು ಭಾರತೀಯ ಮಾರುಕಟ್ಟೆಯಲ್ಲಿ ಅತಿ ಹೆಚ್ಚು ಮೈಲೇಜ್ ನೀಡುವ ಬೈಕುಗಳಲ್ಲಿ ಒಂದಾಗಿದೆ. ಪ್ರಸ್ತುತ ಮಾರುಕಟ್ಟೆಯಲ್ಲಿರುವ ಬಜಾಜ್ ಪ್ಲಾಟಿನಾ 100 ಬೈಕನ್ನು ಕಿಕ್‌ಸ್ಟಾರ್ಟ್ ಮತ್ತು ಎಲೆಕ್ಟ್ರಿಕ್ ಸ್ಟಾರ್ಟ್ ಎಂಬ ಎರಡು ರೂಪಾಂತರಗಳಲ್ಲಿ ಲಭ್ಯವಿದೆ.

ಬಹಿರಂಗವಾಯ್ತು ಹೊಸ ಪ್ಲಾಟಿನಾ 100 ಬೈಕಿನ ಡಿಸ್ಕ್ ಬ್ರೇಕ್ ರೂಪಾಂತರದ ಬೆಲೆ

ಹೆಚ್ಚು ಪರಿಸರ ಸ್ನೇಹಿ ಮಾದರಿಯಾದ ಬಜಾಜ್ ಪ್ಲಾಟಿನಾ 100 ಮಾದರಿಯನ್ನು ಬಿಎಸ್-6 ಮಾಲಿನ್ಯ ನಿಯಮಕ್ಕೆ ಅನುಗುಣವಾಗಿ ನವೀಕರಿಸಲಾಗಿದೆ. ಈ ಬೈಕಿನಲ್ಲಿ ಹೆಚ್ಚಿನ ಮೈಲೇಜ್ ಗಾಗಿ ಮತ್ತು ಕಾರ್ಯಕ್ಷಮತೆಗಾಗಿ ಎಲೆಕ್ಟ್ರಾನಿಕ್ ಫ್ಯೂಯಲ್ ಇಂಜೆಕ್ಷನ್ ಸಿಸ್ಟಂ ಅನ್ನು ಅಳವಡಿಸಲಾಗಿದೆ.

MOST READ: ಬಿಎಸ್-6 ಎಂಜಿನ್‍‍ನಲ್ಲಿ ಬಿಡುಗಡೆಯಾಯ್ತು ಜನಪ್ರಿಯ ಟೆವಿಎಸ್ ಸ್ಪೋರ್ಟ್ ಬೈಕ್

ಬಹಿರಂಗವಾಯ್ತು ಹೊಸ ಪ್ಲಾಟಿನಾ 100 ಬೈಕಿನ ಡಿಸ್ಕ್ ಬ್ರೇಕ್ ರೂಪಾಂತರದ ಬೆಲೆ

ಬಜಾಜ್ ಪ್ಲಾಟಿನಾ 100 ಬೈಕಿನಲ್ಲಿ 102 ಸಿಸಿ ಸಿಂಗಲ್ ಸಿಲಿಂಡರ್ ಏರ್-ಕೂಲ್ಡ್ ಎಂಜಿನ್ ಅನ್ನು ಅಳವಡಿಸಲಾಗಿದೆ. ಈ ಎಂಜಿನ್ 7,500 ಆರ್‌ಪಿಎಂನಲ್ಲಿ 7.7 ಬಿಹೆಚ್‍ಪಿ ಪವರ್ ಮತ್ತು 5,500 ಆರ್‌ಪಿಎಂನಲ್ಲಿ 8.34 ಎನ್ಎಂ ಟಾರ್ಕ್ ಅನ್ನು ಉತ್ಪಾಸುತ್ತದೆ. ಈ ಎಂಜಿನ್ ನೊಂದಿಗೆ 4-ಸ್ಪೀಡ್ ಗೇರ್ ಬಾಕ್ಸ್ ಅನ್ನು ಅಳವಡಿಸಲಾಗಿದೆ. ಈ ಹೊಸ ಬಜಾಜ್ ಪ್ಲಾಟಿನಾ 100 ಬೈಕ್ ಪ್ರತಿ ಗಂಟೆಗೆ 90 ಕಿ.ಮೀ ಕ್ರಮಿಸುತ್ತದೆ.

ಬಹಿರಂಗವಾಯ್ತು ಹೊಸ ಪ್ಲಾಟಿನಾ 100 ಬೈಕಿನ ಡಿಸ್ಕ್ ಬ್ರೇಕ್ ರೂಪಾಂತರದ ಬೆಲೆ

ಬಜಾಜ್ ಪ್ಲಾಟಿನಾ 100 ಬೈಕ್ ಬಿಎಸ್-6 ಮಾಲಿನ್ಯ ನಿಯಮಕ್ಕೆ ಅನುಗುಣವಾಗಿ ನವೀಕರಿಸುವುದರ ಹೊರತಾಗಿ ಈ ಬೈಕಿನ ವಿನ್ಯಾಸದಲ್ಲಿಯು ಕೆಲವು ಬದಲಾವಣೆಗಳನ್ನು ಮಾಡಲಾಗಿದೆ. ಈ ಬೈಕಿನಲ್ಲಿ ಹೊಸ ಬಣ್ಣದ ವಿಂಡ್‌ಸ್ಕ್ರೀನ್ ಅಳವಡಿಸಿದೆ.

MOST READ: ಬಹಿರಂಗವಾಯ್ತು ಬಿಎಸ್-6 ಹೀರೋ ಎಕ್ಸ್‌ಪಲ್ಸ್ 200 ಬೈಕಿನ ಮಾಹಿತಿ

ಬಹಿರಂಗವಾಯ್ತು ಹೊಸ ಪ್ಲಾಟಿನಾ 100 ಬೈಕಿನ ಡಿಸ್ಕ್ ಬ್ರೇಕ್ ರೂಪಾಂತರದ ಬೆಲೆ

ಈ ಹೊಸ ಬೈಕಿನಲ್ಲಿ ಎಲ್ಇಡಿ ಡಿಆರ್ಎಲ್ ಜೊತೆಯಲ್ಲಿ ಆಕರ್ಷಕ ಹೆಡ್‌ಲ್ಯಾಂಪ್ ಅನ್ನು ಹೊಂದಿದೆ. ಹೆಚ್ಚುವರಿಯಾಗಿ ಈ ಬೈಕಿನಲ್ಲಿ ಉದ್ದದ ಡಬಲ್ ಸ್ಪ್ರಿಂಗ್ ರೇರ್ ಸಂಸ್ಪೆಕ್ಷನ್, ಸ್ಪ್ರಿಂಗ್-ಸಾಫ್ಟ್ ಸೀಟ್, ಡೈರೆಕ್ಷನಲ್ ಟಯರ್ ಮತ್ತು ರಬ್ಬರ್ ಸೈಡ್‌ವಾಲ್‌ ಅನ್ನು ಹೊಂದಿದೆ.

ಬಹಿರಂಗವಾಯ್ತು ಹೊಸ ಪ್ಲಾಟಿನಾ 100 ಬೈಕಿನ ಡಿಸ್ಕ್ ಬ್ರೇಕ್ ರೂಪಾಂತರದ ಬೆಲೆ

ಈ ಬೈಕಿನಲ್ಲಿ ಪ್ರಯಾಣಿಕರ ಸುರಕ್ಷತೆಗಾಗಿ ಮುಂಭಾಗ 130 ಎಂಎಂ ಮತ್ತು ಹಿಂದಿನ 110 ಎಂಎಂ ಡ್ರಮ್‌ಗಳನ್ನು ಅಳವಡಿಸಲಾಗಿದೆ. ಇದರೊಂದಿಗೆ ಕಾಂಬಿ ಬ್ರೇಕಿಂಗ್ ಸಿಸ್ಟಮ್ (ಸಿಬಿಎಸ್) ಪ್ಲಾಟಿನಂ ಬ್ರೇಕಿಂಗ್ ಸಿಸ್ಟಂ ಅನ್ನು ಹೊಂದಿದೆ. ಇದರೊಂದಿಗೆ ಹೊಸದಾಗಿ ಡಿಸ್ಕ್ ಬ್ರೇಕ್ ಆಯ್ಕೆಯನ್ನು ಹೊಂದಲಿದೆ.

MOST READ: ಭಾರತಕ್ಕೆ ಲಗ್ಗೆ ಇಡಲಿದೆ ಜನಪ್ರಿಯ ಟ್ರಯಂಫ್ ಸ್ಟ್ರೀಟ್ ಟ್ರಿಪಲ್ ಆರ್ ಬೈಕ್

ಬಹಿರಂಗವಾಯ್ತು ಹೊಸ ಪ್ಲಾಟಿನಾ 100 ಬೈಕಿನ ಡಿಸ್ಕ್ ಬ್ರೇಕ್ ರೂಪಾಂತರದ ಬೆಲೆ

2020 ಬಜಾಜ್ ಪ್ಲಾಟಿನಾ 100 ಬೈಕ್ ಗಾತ್ರದಲ್ಲಿ ಬದಲಾಗಿಲ್ಲ ಎಂಬುದನ್ನೂ ಗಮನಿಸಬೇಕಾದ ಸಂಗತಿ. ಬಜಾಜ್ ಪ್ಲಾಟಿನಾ 100 ಬೈಕ್ 2003 ಎಂಎಂ ಉದ್ದ, 713 ಎಂಎಂ ಅಗಲ ಮತ್ತು 1100 ಎಂಎಂ ಎತ್ತರವನ್ನು ಹೊಂದಿದೆ. ಈ ಹೊಸ ಬೈಕ್ 1,255 ಎಂಎಂ ಉದ್ದದ ವ್ಹೀಲ್ ಬೇಸ್‌ ಅನ್ನು ಹೊಂದಿದೆ.

ಬಹಿರಂಗವಾಯ್ತು ಹೊಸ ಪ್ಲಾಟಿನಾ 100 ಬೈಕಿನ ಡಿಸ್ಕ್ ಬ್ರೇಕ್ ರೂಪಾಂತರದ ಬೆಲೆ

ಈ ಬಜಾಜ್ ಪ್ಲಾಟಿನಾ 100 ಬೈಕ್ 200 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಹೊಂದಿದೆ. ಇನ್ನು ಈ ಬಜಾಜ್ ಪ್ಲಾಟಿನಾ 100 ಬೈಕಿನ ಕಿಕ್‌ಸ್ಟಾರ್ಟ್ ರೂಪಾಂತರವು 116 ಕೆಜಿ ಮತ್ತು ಎಲೆಕ್ಟ್ರಿಕ್ ಸ್ಟಾರ್ಟ್ ಮಾದರಿಯು 117.5 ಕೆಜಿ ತೂಕವಿದೆ.

Most Read Articles

Kannada
English summary
Bajaj Platina 100 ES Disc Brake Variant Price Revealed. Deatils In Kannada.
Story first published: Monday, July 6, 2020, 17:16 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X