ದುಬಾರಿಯಾಯ್ತು ಜನಪ್ರಿಯ ಬಿಎಸ್-6 ಬಜಾಜ್ ಪಲ್ಸರ್ ಎನ್‍ಎಸ್ 160

ಬಜಾಜ್ ಆಟೋ ಕಂಪನಿಯು ತನ್ನ ಬಿಎಸ್-6 ಪಲ್ಸರ್ ಎನ್‍ಎಸ್ 160 ಬೈಕನ್ನು ಈ ವರ್ಷದ ಏಪ್ರಿಲ್ ತಿಂಗಳಿನಲ್ಲಿ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಿತ್ತು. ಇದೀಗ ಬಜಾಜ್ ಕಂಪನಿಯು ಬಿಎಸ್-6 ಪಲ್ಸರ್ ಎನ್‍ಎಸ್ 160 ಬೈಕಿನ ಬೆಲೆಯನ್ನು ಹೆಚ್ಚಿಸಿದೆ.

ದುಬಾರಿಯಾಯ್ತು ಜನಪ್ರಿಯ ಬಿಎಸ್-6 ಬಜಾಜ್ ಪಲ್ಸರ್ ಎನ್‍ಎಸ್ 160

ಬಿಎಸ್-6 ಪಲ್ಸರ್ ಎನ್‍ಎಸ್ 160 ಬೈಕಿನ ಬೆಲೆಯನ್ನು ರೂ.2,247 ಗಳವರೆಗೆ ಹೆಚ್ಚಿಸಿದೆ. ಇದೀಗ ಈ ಬೈಕಿನ ಬೆಲೆಯು ಭಾರತದ ಎಕ್ಸ್ ಶೋರೂಂ ಪ್ರಕಾರ ರೂ.1,06,899 ಗಳಾಗಿದೆ. ಈ ಬಜಾಜ್ ಪಲ್ಸರ್ ಎನ್‍ಎಸ್ 160 ಬಿಎಸ್-6, 160.3 ಸಿಸಿ ಸಿಂಗಲ್ ಸಿಲಿಂಡರ್, ಆಯಿಲ್ ಕೂಲ್ಡ್ ಎಂಜಿನ್ ಅನ್ನು ಹೊಂದಿದೆ. ಈ ಎಂಜಿನ್ ಫ್ಯೂಯಲ್ ಇಂಜೆಕ್ಷನ್ ಸಿಸ್ಟಂ ಅನ್ನು ಹೊಂದಿದೆ. ಈ ಎಂಜಿನ್ ಹೆಚ್ಚಿನ ನಿಖರವಾದ ಥ್ರೊಟಲ್ ಪ್ರತಿಕ್ರಿಯೆ ಮತ್ತು ಉತ್ತಮ ಇಂಧನ ದಕ್ಷತೆಯನ್ನು ಹೊಂದಿದೆ.

ದುಬಾರಿಯಾಯ್ತು ಜನಪ್ರಿಯ ಬಿಎಸ್-6 ಬಜಾಜ್ ಪಲ್ಸರ್ ಎನ್‍ಎಸ್ 160

ಹೊಸ ಪಲ್ಸರ್ ಎನ್‍ಎಸ್ 160 ಎಂಜಿನ್ 9,000 ಆರ್‍‍ಪಿಎಂನಲ್ಲಿ 17.2 ಬಿ‍‍ಹೆಚ್‍ಪಿ ಪವರ್ ಅನ್ನು ಉತ್ಪಾದಿಸುತ್ತದೆ. ಹಿಂದಿನ ಪಲ್ಸರ್ ಎನ್‍ಎಸ್ 160 ಬೈಕಿನ ಬಿಎಸ್-4 ಎಂಜಿನ್ 15.2 ಬಿ‍‍ಹೆಚ್‍ಪಿ ಪವರ್ ಅನ್ನು ಉತ್ಪಾದಿಸುತ್ತಿತ್ತು.

MOST READ: ದುಬಾರಿಯಾಯ್ತು ಜನಪ್ರಿಯ ಬಿ‍ಎಸ್-6 ಬಜಾಜ್ ಪಲ್ಸರ್ ಎನ್ಎಸ್200 ಬೈಕ್

ದುಬಾರಿಯಾಯ್ತು ಜನಪ್ರಿಯ ಬಿಎಸ್-6 ಬಜಾಜ್ ಪಲ್ಸರ್ ಎನ್‍ಎಸ್ 160

ಹಿಂದಿನ ಮಾದರಿಗಿಂತ ತುಸು ಹೆಚ್ಚು ಬಿ‍ಹೆಚ್‍‍ಪಿ ಪವರ್ ಅನ್ನು ಉತ್ಪಾದಿಸುತ್ತದೆ. ಇನ್ನು ಈ ಎಂಜಿನ್ 6500 ಆರ್‍‍ಪಿಎಂನಲ್ಲಿ 14.6 ಎನ್‍ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಟಾರ್ಕ್ ಉತ್ಪಾದನೆಯಲ್ಲಿ ಯಾವುದೇ ಬದಲಾವಣೆಗಳಾಗಿಲ್ಲ.

ದುಬಾರಿಯಾಯ್ತು ಜನಪ್ರಿಯ ಬಿಎಸ್-6 ಬಜಾಜ್ ಪಲ್ಸರ್ ಎನ್‍ಎಸ್ 160

ಬಿಎಸ್-6 ಪಲ್ಸರ್ ಎನ್‍ಎಸ್ 160 ಬೈಕಿನ ವಿನ್ಯಾಸದಲ್ಲಿಯು ಹೆಚ್ಚಿನ ಯಾವುದೇ ಬದಲಾವಣೆಗಳನ್ನು ಮಾಡಲಾಗಿಲ್ಲ. ಹೊಸ ಬೈಕ್ 2017 ಎಂಎಂ ಉದ್ದ, 804 ಎಂಎಂ ಅಗಲ, 1060 ಎಂಎಂ ಎತ್ತರ ಮತ್ತು 1372 ಎಂಎಂ ವ್ಹೀಲ್‍‍ಬೇಸ್ ಅನ್ನು ಹೊಂದಿದೆ.

MOST READ: ಬಿಡುಗಡೆಯಾಯ್ತು ಬಹುನಿರೀಕ್ಷಿತ ಹೊಸ ಹೋಂಡಾ ಎಕ್ಸ್-ಬ್ಲೇಡ್ ಬೈಕ್

ದುಬಾರಿಯಾಯ್ತು ಜನಪ್ರಿಯ ಬಿಎಸ್-6 ಬಜಾಜ್ ಪಲ್ಸರ್ ಎನ್‍ಎಸ್ 160

ಪಲ್ಸರ್ ಎನ್‍ಎಸ್ 160 ಬೈಕಿನ ವಿನ್ಯಾಸವು ಪಲ್ಸರ್ ಎನ್‍ಎಸ್200 ಬೈಕಿನ ಮಾದರಿಯಂತಿದೆ. ಹೊಸ ಪಲ್ಸರ್ ಎನ್‍ಎಸ್160 ಬೈಕ್ ಅಗ್ರೆಸಿವ್ ಲುಕ್ ನೊಂದಿಗೆ ಈ ಬೈಕಿನ ವಿನ್ಯಾಸವು ಆಕರ್ಷಕವಾಗಿದೆ.

ದುಬಾರಿಯಾಯ್ತು ಜನಪ್ರಿಯ ಬಿಎಸ್-6 ಬಜಾಜ್ ಪಲ್ಸರ್ ಎನ್‍ಎಸ್ 160

ಈ ಪಲ್ಸರ್ ಎನ್‍ಎಸ್ 160 ಬೈಕಿನ ಮುಂಭಾಗದಲ್ಲಿ ಟೆಲಿಸ್ಕೋಪಿಕ್ ಸಸ್ಪೆಂಷನ್ ಮತ್ತು ಹಿಂಭಾಗದಲ್ಲಿ ಹೊಂದಾಣಿಕೆ ಮಾಡಬಹುದಾದ ಮೊನೊಶಾಕ್ ಸಸ್ಪೆಂಷನ್ ಹೊಂದಿದೆ. ಈ ಬೈಕಿನಲ್ಲಿ ಬ್ರೇಕಿಂಗ್ ಸಿಸ್ಟಂನಲ್ಲಿ 260 ಎಂಎಂ ಡಿಸ್ಕ್ ಮತ್ತು ಹಿಂಭಾಗದಲ್ಲಿ 230 ಎಂಎಂ ಡಿಸ್ಕ್ ಅನ್ನು ಅಳವಡಿಸಲಾಗಿದೆ.

MOST READ: ಭಾರತಕ್ಕೆ ಲಗ್ಗೆ ಇಡಲಿದೆ ಜನಪ್ರಿಯ ಟ್ರಯಂಫ್ ಸ್ಟ್ರೀಟ್ ಟ್ರಿಪಲ್ ಆರ್ ಬೈಕ್

ದುಬಾರಿಯಾಯ್ತು ಜನಪ್ರಿಯ ಬಿಎಸ್-6 ಬಜಾಜ್ ಪಲ್ಸರ್ ಎನ್‍ಎಸ್ 160

ಇದರೊಂದಿಗೆ ಸಿಂಗಲ್ ಚಾನೆಲ್ ಎಬಿಎಸ್ ಅನ್ನು ಸ್ಟ್ಯಾಡಂರ್ಡ್ ಆಗಿ ಅಳವಡಿಸಲಾಗಿದೆ. ಬಿಎಸ್-6 ಪಲ್ಸರ್ ಎನ್‍ಎಸ್ 160 ಬೈಕ್ ಪೋಸಿಲ್ ಗ್ರೇ, ವೈಲ್ಡ್ ರೆಡ್ ಮತ್ತು ಸ್ಯಾಫೈರ್ ಬ್ಲೂ ಬಣ್ಣಗಳ ಆಯ್ಕೆಯನ್ನು ಹೊಂದಿದೆ.

ದುಬಾರಿಯಾಯ್ತು ಜನಪ್ರಿಯ ಬಿಎಸ್-6 ಬಜಾಜ್ ಪಲ್ಸರ್ ಎನ್‍ಎಸ್ 160

ಹೊಸ ಪಲ್ಸರ್ ಎನ್‍ಎಸ್ 160 ಬೈಕ್ ಭಾರತೀಯ ಮಾರುಕಟ್ಟೆಯಲ್ಲಿ ಸುಜುಕಿ 160 ಜಿಕ್ಸರ್, ಯಮಹಾ ಎಫ್‍‍ಝಡ್ 160 4ವಿ ಮತ್ತು ಹೀರೋ ಎಕ್ಸ್‌ಟ್ರೀಮ್‌ 160ಆರ್‍ ಬೈಕ್‍‍ಗಳಿಗೆ ಪೈಪೋಟಿಯನ್ನು ನೀಡುತ್ತದೆ.

Article Published On: Thursday, July 16, 2020, 20:14 [IST]
English summary
BS6 Bajaj Pulsar NS 160 Now Costs INR 2.2K More Details. Read In Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+