ದುಬಾರಿಯಾಯ್ತು ಜನಪ್ರಿಯ ಬಿಎಸ್-6 ಬಜಾಜ್ ಪಲ್ಸರ್ ಎನ್ಎಸ್200 ಬೈಕ್
ಬಜಾಜ್ ಆಟೋ ಕಂಪನಿಯು ತನ್ನ ಜನಪ್ರಿಯ ಮಾದರಿಯಾದ ಪಲ್ಸರ್ ಎನ್ಎಸ್200 ಬೈಕ್ ಅನ್ನು ಬಿಎಸ್-6 ಆವೃತ್ತಿಯಲ್ಲಿ ಈ ವರ್ಷದ ಏಪ್ರಿಲ್ ತಿಂಗಳಿನಲ್ಲಿ ಬಿಡುಗಡೆಗೊಳಿಸಿತ್ತು. ಇದೀಗ ಈ ಜನಪ್ರಿಯ ಬಜಾಜ್ ಪಲ್ಸರ್ ಎನ್ಎಸ್ 200 ಬೈಕಿನ ಬೆಲೆಯನ್ನು ಹೆಚ್ಚಿಸಿದೆ.

ಬಿಎಸ್-6 ಬಜಾಜ್ ಪಲ್ಸರ್ ಎನ್ಎಸ್ 200 ಬೈಕಿನ ಬೆಲೆಯನ್ನು ರೂ.999 ಗಳವರೆಗ ಹೆಚ್ಚಿಸಿದೆ. ಇದೀಗ ಬಿಎಸ್-6 ಬಜಾಜ್ ಪಲ್ಸರ್ ಎನ್ಎಸ್ 200 ಬೈಕಿನ ಬೆಲೆಯು ಪುಣೆಯ ಎಕ್ಸ್ ಶೋರೂಂ ಪ್ರಕಾರ ರೂ.1,28,506 ಗಳಾಗಿದೆ. ಇನ್ನು ಬಿಎಸ್-6 ಬಜಾಜ್ ಪಲ್ಸರ್ ಎನ್ಎಸ್200 ಬೈಕ್ ಅನ್ನು ಹಿಂದಿನ ಬಿಎಸ್-4 ಮಾದರಿಗೆ ಹೋಲಿಸಿದರೆ ಯಾವುದೇ ಕಾಸ್ಮೆಟಿಕ್ ನವೀಕರಣಗಳನ್ನು ಮಾಡಲಾಗಿಲ್ಲ. ಸೆಮಿ ಡಿಜೆಟಲ್ ಇನ್ಸ್ ಟ್ರೂಮೆಂಟ್ ಕನ್ಸೋಲ್ ಅನ್ನು ಕೂಡ ಬದಲಾವಣೆ ಮಾಡಲಾಗಿಲ್ಲ.

ಈ ಬಿಎಸ್-6 ಪಲ್ಸರ್ ಎನ್‍ಎಸ್200 ಕಪ್ಪು, ಬಿಳಿ, ಕೆಂಪು ಮತ್ತು ಹಳದಿ ಎಂಬ ನಾಲ್ಕು ಬಣ್ಣ ಆಯ್ಕೆಗಳಲ್ಲಿ ಲಭ್ಯವಿದೆ. ಬಿಎಸ್- 6 ಪಲ್ಸರ್ ಎನ್ಎಸ್ 200 ಬೈಕ್ ಫ್ಯೂಯಲ್ ಇಂಜೆಕ್ಷನ್ ನವೀಕರಿಸಲಾಗಿದೆ.
MOST READ: ಭಾರತಕ್ಕೆ ಲಗ್ಗೆ ಇಡಲಿದೆ ಜನಪ್ರಿಯ ಟ್ರಯಂಫ್ ಸ್ಟ್ರೀಟ್ ಟ್ರಿಪಲ್ ಆರ್ ಬೈಕ್

ಭಾರತದಲ್ಲಿ ಬಿಡುಗಡೆಯಾಗಿರುವ ಬಿಎಸ್-6 ಪಲ್ಸರ್ ಎನ್‍ಎಸ್200 ಬೈಕಿನಲ್ಲಿ 99.5 ಸಿಸಿ, ನಾಲ್ಕು-ವಾಲ್ವ್, ಲಿಕ್ವಿಡ್-ಕೂಲ್ಡ್ ಎಂಜಿನ್ ಅನ್ನು ಅಳವಡಿಸಲಾಗಿದೆ. ಈ ಎಂಜಿನ್ 24.2 ಬಿಹೆಚ್ಪಿ ಪವರ್ ಮತ್ತು 18.5 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ.

ಇನ್ನು ಹಿಂದಿನ ಬಿಎಸ್-4 ಮಾದರಿಯ ಬಜಾಜ್ ಪಲ್ಸರ್ ಎನ್ಎಸ್ 200 ಬೈಕಿನ ಇದೆ ಎಂಜಿನ್ 23.5 ಬಿಹೆಚ್ಪಿ ಪವರ್ ಮತ್ತು 18.3 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ.
MOST READ: ಬಿಡುಗಡೆಯಾಯ್ತು ಬಹುನಿರೀಕ್ಷಿತ ಹೊಸ ಹೋಂಡಾ ಎಕ್ಸ್-ಬ್ಲೇಡ್ ಬೈಕ್

ಬಿಎಸ್-6 ಪಲ್ಸರ್ ಎನ್‍ಎಸ್ ಬೈಕಿನಲ್ಲಿ ಸಸ್ಪೆಂಕ್ಷನ್ ಗಾಗಿ ಮುಂಭಾಗದಲ್ಲಿ ಟಿಲಿಸ್ಕೋಪಿಕ್ ಫೋರ್ಕ್ಸ್ ಮತ್ತು ಹಿಂಭಾಗದಲ್ಲಿ ಗ್ಯಾಸ್ ಚಾರ್ಜ್ಡ್ ಮೊನೊಶಾಕ್‍ನೊಂದಿಗೆ ಅದೇ ಟ್ವಿನ್-ಸ್ಪಾರ್ ಪೆರಿಮೆಟರ್ ಫ್ರೇಮ್ ಅನ್ನು ಹೊಂದಿದೆ.

ಇನ್ನು ಈ ಬಿಎಸ್-6 ಪಲ್ಸರ್ ಎನ್ಎಸ್ ಬೈಕಿನ ಬ್ರೇಕಿಂಗ್ ಬಗ್ಗೆ ಹೇಳುವುದಾದರೆ, ಹಿಂದಿನ ಮಾದರಿಯಂತೆ ಬ್ರೇಕಿಂಗ್ ಕೂಡ ಎರಡು ಟಯರ್‍ಗಳಲ್ಲಿ ಡಿಸ್ಕ್ ಬ್ರೇಕ್ ಮತ್ತು ಸಿಂಗಲ್ ಚಾನೆಲ್ ಎಬಿಎಸ್ ಅನ್ನು ಸ್ಟ್ಯಾಂಡರ್ಡ್ ಆಗಿ ನೀಡಲಾಗಿದೆ.
MOST READ: ಬಹಿರಂಗವಾಯ್ತು ಬಿಎಸ್-6 ಹೀರೋ ಎಕ್ಸ್‌ಪಲ್ಸ್ 200 ಬೈಕಿನ ಮಾಹಿತಿ

ಬಿಎಸ್-6 ಪಲ್ಸರ್ ಎನ್ಸ್‍ಎಸ್ 200 ಬೈಕ್ ಭಾರತೀಯ ಮಾರುಕಟ್ಟೆಯಲ್ಲಿ ಅಪಾಚೆ ಆರ್‌ಟಿಆರ್ 200 4 ವಿ, ಯಮಹಾ ಎಫ್‌ಜೆಡ್ 25 ಮತ್ತು ಸುಜುಕಿ ಜಿಕ್ಸರ್ 250 ಬೈಕ್‍ಗಳಿಗೆ ಪೈಪೋಟಿ ನೀಡಲಿದೆ.

ಬಜಾಜ್ ಪಲ್ಸರ್ ಸರಣಿಯ ಬೈಕ್‍ಗಳ ಜನಪ್ರಿಯತೆ ಕಳೆದುಕೊಂಡಿಲ್ಲ. ಹೆಚ್ಚಿನ ಯುವಕರಿಗೆ ಇಂದಿಗೂ ಪಲ್ಸರ್ ಬೈಕ್‍ಗಳ ಕ್ರೇಜ್ ಇದೆ. ಆದರೆ ಬಿಎಸ್-6 ಪಲ್ಸರ್ ಎನ್ಎಸ್ 200 ಬೈಕ್ ವಿನ್ಯಾಸದಲ್ಲಿ ಯಾವುದೇ ಬದಲಾವಣೆಗಳನ್ನು ಮಾಡದೆ ಇರುವುದು ಪಲ್ಸರ್ ಅಭಿಮಾನಿಗಳಿಗೆ ನಿರಾಸೆ ಮೂಡಿಸಿತು.


Click it and Unblock the Notifications








