ಹೊಸ ಡುಕಾಟಿ ಪಾನಿಗಲೆ ವಿ2 ಬೈಕ್ ಬಿಡುಗಡೆ ದಿನಾಂಕ ಬಹಿರಂಗ

ಇಟಲಿ ಮೂಲದ ದ್ವಿಚಕ್ರ ವಾಹನ ತಯಾರಕ ಸಂಸ್ಥೆಯಾದ ಡುಕಾಟಿ ತನ್ನ ಪಾನಿಗಲೆ ವಿ2 ಬೈಕನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲಿದೆ. ಈ ಹೊಸ ಡುಕಾಟಿ ಪಾನಿಗಲೆ ವಿ2 ಬೈಕಿನ ಬಿಡುಗಡೆಯ ದಿನಾಂಕ ಬಹಿರಂಗವಾಗಿದೆ.

ಹೊಸ ಡುಕಾಟಿ ಪಾನಿಗಲೆ ವಿ2 ಬೈಕ್ ಬಿಡುಗಡೆ ದಿನಾಂಕ ಬಹಿರಂಗ

ಡುಕಾಟಿ ಕಂಪನಿಯು ಈ ಹೊಸ ಪಾನಿಗಲೆ ವಿ2 ಬೈಕನ್ನು ಕರೋನಾ ಸೋಂಕಿನ ಭೀತಿಯಿಂದ ಭಾರತದಲ್ಲಿ ಬಿಡುಗಡೆಗೊಳಿಸಲು ವಿಳಂಬ ಮಾಡಿದರು. ಇದಿಗ ಡುಕಾಟಿ ತನ್ನ ಪಾನಿಗಲೆ ವಿ2 ಬೈಕನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲು ಸಜ್ಜಾಗುತ್ತಿದೆ. ಈ ಡುಕಾಟಿ ಪಾನಿಗಲೆ ವಿ2 ಬೈಕ್ ಇದೇ ತಿಂಗಳ 26ರಂದು ಭಾರತದಲ್ಲಿ ಬಿಡುಗಡೆಯಾಗಲಿದೆ. ಡುಕಾಟಿ ಕಂಪನಿಯು ಈ ಪಾನಿಗಲೆ ವಿ2 ಬೈಕಿನ ಬುಕ್ಕಿಂಗ್ ಅನ್ನು ಸ್ವೀಕರಿಸಲು ಇತ್ತೀಚೆಗೆ ಪ್ರಾರಂಭಿಸಿದ್ದಾರೆ.

ಹೊಸ ಡುಕಾಟಿ ಪಾನಿಗಲೆ ವಿ2 ಬೈಕ್ ಬಿಡುಗಡೆ ದಿನಾಂಕ ಬಹಿರಂಗ

ಈ ಹೊಸ ಡುಕಾಟಿ ಪಾನಿಗಲೆ ವಿ2 ಬೈಕನ್ನು ಖರೀದಿಸಲು ಬಯಸುವ ಗ್ರಾಹಕರು ಟೋಕನ್ ಮೊತ್ತ ರೂ.1 ಲಕ್ಷ ಪಾವತಿಸಿ ಬುಕ್ಕಿಂಗ್ ಮಾಡಿಕೊಳ್ಳಬಹುದಾಗಿದೆ. ಇನ್ನು ಹೂಸ ಪಾನಿಗಲೆ ವಿ2 ಬೈಕ್ ಕೆಲವು ಬದಲಾವಣೆಯೊಂದಿಗೆ ಬಿಡುಗಡೆಯಾಗಲಿದೆ.

MOST READ: ಬಿಡುಗಡೆಯಾಯ್ತು ಹೊಸ ಟ್ರಯಂಫ್ ಬೊನೊವೆಲ್ಲಿ ಸ್ಪೀಡ್‍‍ಮಾಸ್ಟರ್ ಬೈಕ್

ಹೊಸ ಡುಕಾಟಿ ಪಾನಿಗಲೆ ವಿ2 ಬೈಕ್ ಬಿಡುಗಡೆ ದಿನಾಂಕ ಬಹಿರಂಗ

ಈ ಹೊಸ ಪಾನಿಗಲೆ ವಿ2 ಬೈಕ್ ಫ್ರಂಟ್ ಫೇರಿಂಗ್, ಮತ್ತು ಸಿಂಗಲ್ ಸೈಡ್ ಸ್ವಿಂಗಾರ್ಮ್ ಅನ್ನು ಒಳಗೊಂಡಿರುತ್ತದೆ. ಈ ಹೊಸ ಡುಕಾಟಿ ಪಾನಿಗಲೆ ವಿ2 ಬೈಕ್ ಆಕರ್ಷಕ ಲುಕ್ ಅನ್ನು ಹೊಂದಿರಲಿದೆ. ಪಾನಿಗಲೆ ವಿ4 ಬೈಕಿನಲ್ಲಿರುವಂತಹ ಕೆಲವು ಸ್ಟೈಲಿಂಗ್ ಅಂಶಗಳು ಹೊಸ ಪಾನಿಗಲೆ ವಿ2 ಬೈಕಿನಲ್ಲಿರುತ್ತದೆ.

ಹೊಸ ಡುಕಾಟಿ ಪಾನಿಗಲೆ ವಿ2 ಬೈಕ್ ಬಿಡುಗಡೆ ದಿನಾಂಕ ಬಹಿರಂಗ

ಈ ಡುಕಾಟಿ ಪಾನಿಗಲೆ ವಿ2 ಬೈಕ್ ಬ್ರ್ಯಾಂಡ್ ಸಿಗ್ನೇಚರ್ ಪ್ರೊಜೆಕ್ಟರ್ ಹೆಡ್ ಲ್ಯಾಂಪ್, ಏರ್ ಡ್ಯಾಮ್ ಮತ್ತು ವಿ-ಆಕಾರದ ಡಿಆರ್ಎಲ್ ಅನ್ನು ಹೊಂದಿರಲಿದೆ. ಡುಕಾಟಿ ಪಾನಿಗಲೆ ವಿ2 ಬೈಕಿನಲ್ಲಿ ಇನ್ಸ್ ಟ್ರೂಮೆಂಟ್ ಕ್ಲಸ್ಟರ್ ಕ್ಲಸ್ಟರ್‌ಗಾಗಿ 4.3-ಇಂಚಿನ ಟಿಎಫ್‌ಟಿ ಡಿಸ್ ಪ್ಲೇಯನ್ನು ಹೊಂದಿರಲಿದೆ. ಈ ಹೊಸ ಬೈಕಿನಲ್ಲಿ ಸ್ಲಂಗ್ ಅಂಡರ್ ಎಕ್ಸಾಸ್ಟ್ ಅನ್ನು ಹೊಂದಿದೆ.

MOST READ: ಬಿಡುಗಡೆಯಾಯ್ತು ಬಹುನಿರೀಕ್ಷಿತ ಹೊಸ ಹೋಂಡಾ ಎಕ್ಸ್-ಬ್ಲೇಡ್ ಬೈಕ್

ಹೊಸ ಡುಕಾಟಿ ಪಾನಿಗಲೆ ವಿ2 ಬೈಕ್ ಬಿಡುಗಡೆ ದಿನಾಂಕ ಬಹಿರಂಗ

ಹೊಸ ಡುಕಾಟಿ ಪಾನಿಗಲೆ ವಿ2 ಬೈಕಿನಲ್ಲಿ ಬ್ರೇಕಿಂಗ್ ಸಿಸ್ಟಂಗಾಗಿ ಬ್ರೆಂಬೊ ಎಂ4.32 ಮೊನೊಬ್ಲೋಕ್ ಕ್ಯಾಲಿಪರ್‌ಗಳು ಮತ್ತು ಮುಂಭಾಗದಲ್ಲಿ ಡ್ಯುಯಲ್ ಡಿಸ್ಕ್ ಹೊಂದಿರುವ ಬ್ರೆಂಬೊ ಮಾಸ್ಟರ್ ಸಿಲಿಂಡರ್‌ಗಳು ಮತ್ತು ಹಿಂಭಾಗದಲ್ಲಿ ಒಂದೇ ಡಿಸ್ಕ್ ಬ್ರೇಕ್ ಅನ್ನು ಹೊಂದಿದೆ.

ಹೊಸ ಡುಕಾಟಿ ಪಾನಿಗಲೆ ವಿ2 ಬೈಕ್ ಬಿಡುಗಡೆ ದಿನಾಂಕ ಬಹಿರಂಗ

ಹೂಸ ಡುಕಾಟಿ ಪಾನಿಗಲೆ ವಿ2 ಬೈಕಿನಲ್ಲಿ 955 ಸಿಸಿ ಸೂಪರ್‌ಕ್ವಾಡ್ರೊ ಎಲ್-ಟ್ವಿನ್ ಎಂಜಿನ್‌ ಅನ್ನು ಹೊಂದಿದೆ. ಈ ಎಂಜಿನ್ 155 ಬಿಹೆಚ್‌ಪಿ ಪವರ್ ಮತ್ತು 104 ಎನ್ಎಂ ಟಾರ್ಕ್ ಉತ್ಪಾದಿಸುತ್ತದೆ. ಎಂಜಿನ್ ಅನ್ನು 6-ಸ್ಪೀಡ್ ಗೇರ್‌ಬಾಕ್ಸ್‌ಗೆ ಜೋಡಿಸಲಾಗಿದೆ.

MOST READ: ಬಿಡುಗಡೆಯ ಸನಿಹದಲ್ಲಿ ಬಹುನಿರೀಕ್ಷಿತ ಬಿಎಸ್-6 ಹೀರೋ ಬೈಕುಗಳು

ಹೊಸ ಡುಕಾಟಿ ಪಾನಿಗಲೆ ವಿ2 ಬೈಕ್ ಬಿಡುಗಡೆ ದಿನಾಂಕ ಬಹಿರಂಗ

ಡುಕಾಟಿ ಪಾನಿಗಲೆ ವಿ2 ಬೈಕ್ ತನ್ನ ಸಂಪೂರ್ಣ ಎಲೆಕ್ಟ್ರಾನಿಕ್ಸ್ ಕಿಟ್ ಅನ್ನು 959 ಮಾದರಿಯಿಂದ ಎರವಲು ಪಡೆಯುತ್ತದೆ. ಈ ಹೊಸ ಡುಕಾಟಿ ಪಾನಿಗಲೆ ವಿ2 ಬೈಕಿನಲ್ಲಿ ಟ್ರಾಕ್ಷನ್ ಕಂಟ್ರೋಲ್ ಅನ್ನು ನೀಡಿದೆ.

ಹೊಸ ಡುಕಾಟಿ ಪಾನಿಗಲೆ ವಿ2 ಬೈಕ್ ಬಿಡುಗಡೆ ದಿನಾಂಕ ಬಹಿರಂಗ

ಡುಕಾಟಿ ಪಾನಿಗಲೆ ವಿ2 ಉತ್ತಮ ಕಾರ್ಯಕ್ಷಮತೆ ಬೈಕ್ ಆಗಿದೆ. ಹೊಸ ಡುಕಾಟಿ ಪಾನಿಗಲೆ ವಿ2 ಬೈಕನ್ನು ಹಿಂದಿನ ಬಿಎಸ್-4 ಮಾದರಿಗೆ ಹೋಲಿಸಿದರೆ ಹೆಚ್ಚಿನ ಯಾವುದೇ ಬದಲಾವಣೆಗಳನ್ನು ಹೊಂದಿಲ್ಲ. ಆದರೆ ಹಿಂದಿನ ಮಾದರಿಗಿಂತ 5 ಬಿಹೆಚ್‍ಪಿ ಪವರ್ ಹೆಚ್ಚು ಉತ್ಪಾದಿಸುತ್ತದೆ.

More from DriveSpark

Article Published On: Monday, August 17, 2020, 20:06 [IST]
English summary
Ducati Panigale V2 India Launch Date Revealed. Read In Kannada.
Read more on ಡುಕಾಟಿ ducati
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+