ಹಾರ್ಲೆ ಡೇವಿಡ್ಸನ್ ಸ್ಟ್ರೀಟ್ 750 ಬೈಕಿನ ಮೇಲೆ ಭರ್ಜರಿ ಡಿಸ್ಕೌಂಟ್

ಹಾರ್ಲೇ ಡೇವಿಡ್ಸನ್ ಕಂಪನಿಯು ತನ್ನ ಸ್ಟ್ರೀಟ್ 750 ಲಿಮಿಟೆಡ್ ಎಡಿಷನ್ ಬೈಕಿನ ಮೇಲೆ ಭರ್ಜರಿ ರಿಯಾಯಿತಿಯನ್ನು ಘೋಷಿಸಿದೆ. ಹಾರ್ಲೆ ಡೇವಿಡ್ಸನ್ ಸ್ಟ್ರೀಟ್ 750 ಭಾರತೀಯ ಮಾರುಕಟ್ಟೆಯಲ್ಲಿ ಬ್ರಾಂಡ್‌ನ ಎಂಟ್ರಿ ಲೆವೆಲ್ ಕ್ರೂಸರ್ ಬೈಕ್ ಆಗಿದೆ.

ಹಾರ್ಲೆ ಡೇವಿಡ್ಸನ್ ಸ್ಟ್ರೀಟ್ 750 ಬೈಕಿನ ಮೇಲೆ ಭರ್ಜರಿ ಡಿಸ್ಕೌಂಟ್

ಹಾರ್ಲೆ ಡೇವಿಡ್ಸನ್ ಸ್ಟ್ರೀಟ್ 750 ಲಿಮಿಟೆಡ್ ಎಡಿಷನ್ ಬೈಕಿನ ಮೇಲೆ ರೂ.65,000 ಗಳವರೆಗೆ ಭರ್ಜರಿ ರಿಯಾಯಿತಿ ನೀಡಿದೆ. ರಿಯಾಯಿತಿ ಘೋಷಿಸಿದ ಬಳಿಕ ಈ ಹಾರ್ಲೆ ಡೇವಿಡ್ಸನ್ ಸ್ಟ್ರೀಟ್ 750 ಬೈಕಿನ ಬೆಲೆಯು ರೂ.4.69 ಲಕ್ಷಗಳಾಗಿದೆ. ಹಾರ್ಲೆ ಡೇವಿಡ್ಸನ್ ಸ್ಟ್ರೀಟ್ 750 ಲಿಮಿಟೆಡ್ ಎಡಿಷನ್ ಬೈಕ್ ಬಿಎಸ್-6 ಆವೃತ್ತಿಯಾಗಿದೆ. ಭಾರತೀಯ ಮಾರುಕಟ್ಟೆಯಲ್ಲಿ ಹಾರ್ಲೆ ಡೇವಿಡ್ಸನ್ ಕಂಪನಿಯು 10 ವರ್ಷಗಳನ್ನು ಪೂರೈಸಿದ ಹಿನ್ನೆಲೆಯಲ್ಲಿ ಹಾರ್ಲೆ ಡೇವಿಡ್ಸನ್ ಸ್ಟ್ರೀಟ್ 750 ಲಿಮಿಟೆಡ್ ಎಡಿಷನ್ ಬೈಕುಗಳನ್ನು ಬಿಡುಗಡೆಗೊಳಿಸಲಾಗಿತ್ತು.

ಹಾರ್ಲೆ ಡೇವಿಡ್ಸನ್ ಸ್ಟ್ರೀಟ್ 750 ಬೈಕಿನ ಮೇಲೆ ಭರ್ಜರಿ ಡಿಸ್ಕೌಂಟ್

ಹೊಸ ಸ್ಟ್ರೀಟ್ 750 ಬೈಕ್ ಅನ್ನು ವಿಶೇಷವಾಗಿಸಲು ಕೇವಲ 300 ಬೈಕುಗಳನ್ನು ಮಾತ್ರ ಬಿಡುಗಡೆಗೊಳಿಸಲಾಗಿತ್ತು. ಭಾರತದಲ್ಲಿ 2020ರ ಹಾರ್ಲೆ ಡೇವಿಡ್ಸನ್ ಸ್ಟ್ರೀಟ್ 750 ಲಿಮಿಟೆಡ್ ಎಡಿಷನ್ ಬೈಕ್, ಹಾರ್ಲೆ ಡೇವಿಡ್ಸನ್ ಕಂಪನಿಯು ಬಿಎಸ್6 ನಿಯಮಗಳಿಗೆ ತಕ್ಕಂತೆ ತಯಾರಿಸಿದ ಮೊದಲ ಬೈಕ್ ಆಗಿದೆ.

MOST READ: ಬಿಡುಗಡೆಯ ಸನಿಹದಲ್ಲಿ ಬಹುನಿರೀಕ್ಷಿತ ಬಿಎಸ್-6 ಹೀರೋ ಬೈಕುಗಳು

ಹಾರ್ಲೆ ಡೇವಿಡ್ಸನ್ ಸ್ಟ್ರೀಟ್ 750 ಬೈಕಿನ ಮೇಲೆ ಭರ್ಜರಿ ಡಿಸ್ಕೌಂಟ್

ಲಿಮಿಟೆಡ್ ಎಡಿಷನ್ ಬೈಕಿನ ವಿನ್ಯಾಸದಲ್ಲಿ ಯಾವುದೇ ಬದಲಾವಣೆಗಳಾಗಿಲ್ಲ. ಆದರೆ ಈ ಬೈಕಿನಲ್ಲಿರುವ ಟ್ಯಾಂಕ್ ಹಾಗೂ ಟೇಲ್ ಸೆಕ್ಷನ್ ಹೊಸ ಇಂಡಿಯನ್ ಮೋಟಿಫ್ ವಿನ್ಯಾಸವನ್ನು ಹೊಂದಿವೆ.

ಹಾರ್ಲೆ ಡೇವಿಡ್ಸನ್ ಸ್ಟ್ರೀಟ್ 750 ಬೈಕಿನ ಮೇಲೆ ಭರ್ಜರಿ ಡಿಸ್ಕೌಂಟ್

ಲಿಮಿಟೆಡ್ ಎಡಿಷನ್ ಬೈಕಿನಲ್ಲಿರುವ ಅಲಾಯ್ ವ್ಹೀಲ್‌ಗಳು ಕಪ್ಪು ಬಣ್ಣವನ್ನು ಹೊಂದಿವೆ. ಮುಂಭಾಗದಲ್ಲಿರುವ ಸಸ್ಪೆಂಷನ್ ಸೆಟಪ್‌ ಫೋರ್ಕ್ ಗೈಟರ್‌ಗಳೂ ಸಹ ಕಪ್ಪು ಬಣ್ಣವನ್ನು ಹೊಂದಿವೆ.

MOST READ: ಭಾರತಕ್ಕೆ ಲಗ್ಗೆ ಇಡಲಿದೆ ಜನಪ್ರಿಯ ಟ್ರಯಂಫ್ ಸ್ಟ್ರೀಟ್ ಟ್ರಿಪಲ್ ಆರ್ ಬೈಕ್

ಹಾರ್ಲೆ ಡೇವಿಡ್ಸನ್ ಸ್ಟ್ರೀಟ್ 750 ಬೈಕಿನ ಮೇಲೆ ಭರ್ಜರಿ ಡಿಸ್ಕೌಂಟ್

ಈ ಕಾಸ್ಮೆಟಿಕ್ ಅಪ್‍‍ಡೇಟ್‍‍ಗಳ ಹೊರತಾಗಿ, 2020ರ ಹೊಸ ಹಾರ್ಲೆ ಡೇವಿಡ್ಸನ್ ಸ್ಟ್ರೀಟ್ 750 ಬೈಕಿನಲ್ಲಿ ಬೇರೆ ಯಾವುದೇ ಬದಲಾವಣೆಗಳಾಗಿಲ್ಲ. ಈ ಬೈಕಿನಲ್ಲಿ ಸ್ಟ್ಯಾಂಡರ್ಡ್ ಮಾದರಿಯ ಬೈಕಿನಲ್ಲಿರುವಂತಹ ಮೆಕಾನಿಕಲ್ ಅಂಶಗಳನ್ನು ಅಳವಡಿಸಲಾಗಿದೆ. ಇವುಗಳಲ್ಲಿ 749 ಸಿಸಿ ವಿ ಟ್ವಿನ್ ಲಿಕ್ವಿಡ್ ಕೂಲ್ಡ್ ಪೆಟ್ರೋಲ್ ಎಂಜಿನ್ ಸೇರಿದೆ.

ಹಾರ್ಲೆ ಡೇವಿಡ್ಸನ್ ಸ್ಟ್ರೀಟ್ 750 ಬೈಕಿನ ಮೇಲೆ ಭರ್ಜರಿ ಡಿಸ್ಕೌಂಟ್

ಈ ಎಂಜಿನ್ 3,750 ಆರ್‌ಪಿಎಂನಲ್ಲಿ 60 ಎನ್ಎಂ ಟಾರ್ಕ್ ಉತ್ಪಾದಿಸುತ್ತದೆ. ಈ ಎಂಜಿನ್‍‍ಗೆ ಆರು ಸ್ಪೀಡಿನ ಗೇರ್‌ಬಾಕ್ಸ್‌ ಜೋಡಿಸಲಾಗಿದೆ. ಈ ಬೈಕಿನಲ್ಲಿರುವ ಸಸ್ಪೆಂಷನ್ ಕಾರ್ಯಗಳನ್ನು ಮುಂಭಾಗದಲ್ಲಿರುವ ಟೆಲಿಸ್ಕೋಪಿಕ್ ಫ್ರಂಟ್ ಫೋರ್ಕ್ಸ್ ಹಾಗೂ ಹಿಂಭಾಗದಲ್ಲಿರುವ ಟ್ವಿನ್ ಶಾಕ್‍‍‍ಗಳನ್ನು ನಿರ್ವಹಿಸುತ್ತವೆ.

MOST READ: ಬಿಡುಗಡೆಯಾಯ್ತು ಬಹುನಿರೀಕ್ಷಿತ ಹೊಸ ಹೋಂಡಾ ಎಕ್ಸ್-ಬ್ಲೇಡ್ ಬೈಕ್

ಹಾರ್ಲೆ ಡೇವಿಡ್ಸನ್ ಸ್ಟ್ರೀಟ್ 750 ಬೈಕಿನ ಮೇಲೆ ಭರ್ಜರಿ ಡಿಸ್ಕೌಂಟ್

ಬ್ರೇಕಿಂಗ್‍‍ಗಳಿಗಾಗಿ ಎರಡೂ ತುದಿಯಲ್ಲಿ ಡಿಸ್ಕ್ ಬ್ರೇಕ್‌ಗಳಿವೆ. ಡ್ಯುಯಲ್ ಚಾನೆಲ್ ಎಬಿಎಸ್ ಸ್ಟ್ಯಾಂಡರ್ಡ್ ಆಗಿ ನೀಡಲಾಗುತ್ತದೆ. ಲೈವ್‌ವೈರ್ ಎಲೆಕ್ಟ್ರಿಕ್ ಬೈಕಿನ ಅನಾವರಣದ ಜೊತೆಗೆ ಹಾರ್ಲೆ ಡೇವಿಡ್ಸನ್ ಸ್ಟ್ರೀಟ್ 750 ಲಿಮಿಟೆಡ್ ಎಡಿಷನ್ ಬೈಕ್ ಅನ್ನು ಬಿಡುಗಡೆಗೊಳಿಸಲಾಯಿತು.

ಹಾರ್ಲೆ ಡೇವಿಡ್ಸನ್ ಸ್ಟ್ರೀಟ್ 750 ಬೈಕಿನ ಮೇಲೆ ಭರ್ಜರಿ ಡಿಸ್ಕೌಂಟ್

ಹಾರ್ಲೆ ಡೇವಿಡ್ಸನ್ ಸ್ಟ್ರೀಟ್ 750 ಬೈಕ್ ದೇಶಿಯ ಮಾರುಕಟ್ಟೆಯಲ್ಲಿ ರಾಯಲ್ ಎನ್‌ಫೀಲ್ಡ್ ಕಾಂಟಿನೆಂಟಲ್ ಜಿಟಿ 650 ಹಾಗೂ ಇಂಟರ್‌ಸೆಪ್ಟರ್ 650 ಬೈಕುಗಳಿಗೆ ಪೈಪೋಟಿ ನೀಡುತ್ತದೆ. ಈ ಬೈಕಿನ ಮಾರಾಟವನ್ನು ಹೆಚ್ಚಿಸಲು ಅಮೇರಿಕಾ ಮೂಲದ ಹಾರ್ಲೆ ಡೇವಿಡ್ಸನ್ ಕಂಪನಿಯು ಭರ್ಜರಿ ರಿಯಾಯಿತಿಯನ್ನು ನೀಡಲಾಗಿದೆ.

More from DriveSpark

Article Published On: Monday, August 10, 2020, 17:18 [IST]
English summary
Harley-Davidson Street 750 Prices Reduced. Read In Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+