ಭರ್ಜರಿಯಾಗಿ ಮಾರಾಟವಾಯ್ತು ಬಿಎಸ್-6 ಹೀರೋ ಡೆಸ್ಟಿನಿ 125 ಸ್ಕೂಟರ್

ಕರೋನಾ ಸೋಂಕಿನ ಭೀತಿಯಿಂದ ದೇಶದ ಅತಿದೊಡ್ಡ ದ್ವಿಚಕ್ರ ವಾಹನ ತಯಾರಕ ಉತ್ಪಾದನಾ ಸಂಸ್ಥೆಯಾಗಿರುವ ಹೀರೋ ಮೋಟೊಕಾರ್ಪ್ ತನ್ನ ಸರಣಿಯಲ್ಲಿರುವ ದ್ವಿಚಕ್ರ ವಾಹನಗಳ ಮಾರಾಟದಲ್ಲಿ ದೊಡ್ಡ ಕುಸಿತವನ್ನು ಎದುರಿಸುತ್ತಿದ್ದರೂ, ಆದರೆ ಕಳೆದ ಜುಲೈ ತಿಂಗಳಿನಲ್ಲಿ ಸ್ವದೇಶಿ ದ್ವಿಚಕ್ರ ವಾಹನ ತಯಾರಕರಾದ ಹೀರೋ ಮಾರಾಟದಲ್ಲಿ ಉತ್ತಮ ಚೇತರಿಕೆಯನ್ನು ಕಂಡಿದೆ.

ಭರ್ಜರಿಯಾಗಿ ಮಾರಾಟವಾಯ್ತು ಬಿಎಸ್-6 ಹೀರೋ ಡೆಸ್ಟಿನಿ 125 ಸ್ಕೂಟರ್

2020ರ ಜುಲೈ ತಿಂಗಳಿನಲ್ಲಿ ಹೀರೋ ಮೋಟೊಕಾರ್ಪ್ ಕಂಪನಿಯು ದೇಶಿಯ ಮಾರುಕಟ್ಟೆಯಲ್ಲಿ 5.06 ಲಕ್ಷ ಯೂನಿಟ್‌ಗಳಷ್ಟು ಮಾರಾಟ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಇದು ಇತರ ಎಲ್ಲಾ ದ್ವಿಚಕ್ರ ಕಂಪನಿಗಳ ಮಾರಾಟಗಳಿಗಿಂತ ಅಧಿಕವಾಗಿದೆ. 2020ರ ಜುಲೈ ತಿಂಗಳಿನಲ್ಲಿ ಹೀರೋ ಡೆಸ್ಟಿನಿ 125 ಸ್ಕೂಟರಿನ 13,184 ಯುನಿಟ್‌ಗಳು ಮಾರಾಟವಾಗಿವೆ. ಕಳೆದ ವರ್ಷದ ಇದೇ ಅವಧಿಗೆ ಹೋಲಿಸಿದರೆ ಡೆಸ್ಟಿನಿ 125 ಮಾರಾಟದಲ್ಲಿ ಶೇ.18 ರಷ್ಟು ಬೆಳವಣಿಗೆಯನ್ನು ಸಾಧಿಸಿದೆ.

ಭರ್ಜರಿಯಾಗಿ ಮಾರಾಟವಾಯ್ತು ಬಿಎಸ್-6 ಹೀರೋ ಡೆಸ್ಟಿನಿ 125 ಸ್ಕೂಟರ್

ಇನ್ನು ಹೀರೋ ಮೋಟೊಕಾರ್ಪ್ ಕಂಪನಿಯು ಈ ಬಿಎಸ್-6 ಡೆಸ್ಟಿನಿ 125 ಸ್ಕೂಟರ್ ಬೆಲೆಯನ್ನು ಇತ್ತೀಚೆಗೆ ಎರಡನೇ ಬಾರಿ ಹೆಚ್ಚಿಸಿತ್ತು. ಬಿಎಸ್-6 ಡೆಸ್ಟಿನಿ ಸ್ಕೂಟರ್ ಎಲ್ಎಕ್ಸ್ ಮತ್ತು ವಿಎಕ್ಸ್ ಎಂಬ ಎರಡು ರೂಪಾಂತರಗಳಲ್ಲಿ ಲಭ್ಯವಿದೆ.

MOST READ: ದುಬಾರಿಯಾಯ್ತು ಜನಪ್ರಿಯ ಬಿಎಸ್-6 ಹೋಂಡಾ ಆಕ್ಟಿವಾ 6ಜಿ ಸ್ಕೂಟರ್

ಭರ್ಜರಿಯಾಗಿ ಮಾರಾಟವಾಯ್ತು ಬಿಎಸ್-6 ಹೀರೋ ಡೆಸ್ಟಿನಿ 125 ಸ್ಕೂಟರ್

ಕಳೆದ ಬಾರಿ ಎಂಟ್ರಿ ಲೆವೆಲ್ ಎಲ್‌ಎಕ್ಸ್ ರೂಪಾಂತರದ ಬೆಲೆಯನ್ನು ರೂ.1,000 ಗಳವರೆಗೆ ಮತ್ತು ಟಾಪ್-ಸ್ಪೆಕ್ ವಿಎಕ್ಸ್ ರೂಪಾಂತರದ ಬೆಲೆಯನ್ನು ರೂ.1,300 ಗಳವರೆಗೆ ಹೆಚ್ಚಿಸಿದ್ದರು. ಇದೀಗ ಎರಡನೇ ಬಾರಿ ಎಂಟ್ರಿ ಲೆವೆಲ್ ಎಲ್‌ಎಕ್ಸ್ ರೂಪಾಂತರದ ಬೆಲೆಯನ್ನು ರೂ.1,890 ಗಳವರೆಗೆ ಮತ್ತು ಟಾಪ್-ಸ್ಪೆಕ್ ವಿಎಕ್ಸ್ ರೂಪಾಂತರದ ಬೆಲೆಯನ್ನು ರೂ.1,950 ಗಳವರೆಗೆ ಹೆಚ್ಚಿಸಲಾಗಿದೆ.

ಭರ್ಜರಿಯಾಗಿ ಮಾರಾಟವಾಯ್ತು ಬಿಎಸ್-6 ಹೀರೋ ಡೆಸ್ಟಿನಿ 125 ಸ್ಕೂಟರ್

ಇದೀಗ ಎಂಟ್ರಿ ಲೆವೆಲ್ ಎಲ್‌ಎಕ್ಸ್ ರೂಪಾಂತರದ ಬೆಲೆಯು ರೂ.67,200ಗಳಾದರೆ, ಟಾಪ್-ಸ್ಪೆಕ್ ವಿಎಕ್ಸ್ ರೂಪಾಂತರದ ಬೆಲೆಯು ರೂ.70,050 ಗಳಾಗಿದೆ. ಈ ಎಲ್ಲಾ ಬೆಲೆಗಳು ಭಾರತದ ಎಕ್ಸ್ ಶೋರೂಂ ಪ್ರಕಾರವಾಗಿದೆ.

MOST READ: ಬಿಡುಗಡೆಯಾಯ್ತು ಕಡಿಮೆ ಬೆಲೆಯ ಜಿಮೊಪೈ ಮಿಸೊ ಮಿನಿ ಎಲೆಕ್ಟ್ರಿಕ್ ಸ್ಕೂಟರ್

ಭರ್ಜರಿಯಾಗಿ ಮಾರಾಟವಾಯ್ತು ಬಿಎಸ್-6 ಹೀರೋ ಡೆಸ್ಟಿನಿ 125 ಸ್ಕೂಟರ್

ಹೊಸ ಹೀರೋ ಡೆಸ್ಟಿನಿ 125 ಸ್ಕೂಟರ್ 124 ಸಿಸಿ ಸಿಂಗಲ್ ಸಿಲಿಂಡರ್ ಫ್ಯೂಯಲ್-ಇಂಜೆಕ್ಟ್ ಎಂಜಿನ್ ಹೊಂದಿದೆ. ಈ ಎಂಜಿನ್ 7,000 ಆರ್‌ಪಿಎಂನಲ್ಲಿ 9 ಬಿಹೆಚ್‌ಪಿ ಪವರ್ ಮತ್ತು 5,500 ಆರ್‌ಪಿಎಂನಲ್ಲಿ 10.4 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ.

ಭರ್ಜರಿಯಾಗಿ ಮಾರಾಟವಾಯ್ತು ಬಿಎಸ್-6 ಹೀರೋ ಡೆಸ್ಟಿನಿ 125 ಸ್ಕೂಟರ್

ಹಿಂದಿನ ಬಿಎಸ್-4 ಮಾದರಿಗೆ ಹೋಲಿಸಿದರೆ ಶೇ.11 ಮೈಲೇಜ್ ಅಂಕಿ ಅಂಶಗಳು ಹೆಚ್ಚಾಗಿದೆ ಎಂದು ಕಂಪನಿ ಹೇಳಿಕೊಂಡಿದೆ. ಈ ಹೊಸ ಹೀರೋ ಡೆಸ್ಟಿನಿ 125 ಸ್ಕೂಟರ್ ಆಕರ್ಷಕ ಲುಕ್ ಹೊಂದಿದೆ.

MOST READ: ಬಿಡುಗಡೆಯಾಯ್ತು ಹೊಸ ಟ್ರಯಂಫ್ ಬೊನೊವೆಲ್ಲಿ ಸ್ಪೀಡ್‍‍ಮಾಸ್ಟರ್ ಬೈಕ್

ಭರ್ಜರಿಯಾಗಿ ಮಾರಾಟವಾಯ್ತು ಬಿಎಸ್-6 ಹೀರೋ ಡೆಸ್ಟಿನಿ 125 ಸ್ಕೂಟರ್

ಬಿಎಸ್-6 ಡೆಸ್ಟಿನಿ ಸ್ಕೂಟರ್ ನಲ್ಲಿ ಸ್ಟಾರ್ಟ್/ಸ್ಟಾಪ್ ಟೆಕ್ನಾಲಜಿ, ಸೆಮಿ ಡಿಜಿಟಲ್ ಇನ್ಸ್ ಟ್ರೂಮೆಂಟ್ ಕ್ಲಸ್ಟರ್, ಡ್ಯುಯಲ್-ಟೆಕ್ಸ್ಚರ್ ಸೀಟುಗಳು, ಅಲಾಯ್ ವ್ಹೀಲ್ಸ್, ಸುತ್ತಲೂ ಕ್ರೋಮ್ ಎಕ್ಸಟ್ ಗಳು, ಮೊಬೈಲ್ ಚಾರ್ಜಿಂಗ್ ಮತ್ತು ಬೂಟ್ ಲ್ಯಾಂಪ್ ಅನ್ನು ಒಳಗೊಂಡಿದೆ.

ಭರ್ಜರಿಯಾಗಿ ಮಾರಾಟವಾಯ್ತು ಬಿಎಸ್-6 ಹೀರೋ ಡೆಸ್ಟಿನಿ 125 ಸ್ಕೂಟರ್

ಈ ಸ್ಕೂಟರಿನಲ್ಲಿ ಸಸ್ಪೆಂಕ್ಷನ್ ಗಾಗಿ ಮುಂಭಾಗದಲ್ಲಿ ಟೆಲಿಸ್ಕೋಪಿಕ್ ಸಸ್ಪೆಂಷನ್ ಮತ್ತು ಹಿಂಭಾಗದಲ್ಲಿ ಹೈಡ್ರಾಲಿಕ್ ಸಸ್ಪೆಂಷನ್ ಸೆಟಪ್ ಅನ್ನು ಹೊಂದಿದೆ. ಇನ್ನು ಈ ಸ್ಕೂಟರ್ ನಲ್ಲಿ ಸುರಕ್ಷತೆಗಾಗಿ ಇಂಟಿಗ್ರೇಟೆಡ್ ಬ್ರೇಕಿಂಗ್ ಸಿಸ್ಟಂನಿಂದ ಬೆಂಬಲಿತವಾಗಿ ಎರಡು ತುದಿಗಳಲ್ಲಿ ಡ್ರಮ್ ಬ್ರೇಕ್‌ಗಳನ್ನು ಹೊಂದಿದೆ.

Article Published On: Saturday, August 29, 2020, 11:48 [IST]
English summary
Hero Destini 125 Recorded 18% Sales Growth In July 2020. Read In Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+