ಮಾರಾಟದಲ್ಲಿ ಬೆಳವಣಿಗೆಯನ್ನು ಸಾಧಿಸಿದ ಹೀರೋ ಡೆಸ್ಟಿನಿ ಸ್ಕೂಟರ್

ದೇಶದ ಅತಿದೊಡ್ಡ ದ್ವಿಚಕ್ರ ವಾಹನ ಉತ್ಪಾದನಾ ಸಂಸ್ಥೆಯಾಗಿರುವ ಹೀರೋ ಮೋಟೊಕಾರ್ಪ್ ತನ್ನ ಬಿಎಸ್-6 ಡೆಸ್ಟಿನಿ 125 ಸ್ಕೂಟರ್ ಅನ್ನು ಈ ವರ್ಷದ ಆರಂಭದಲ್ಲಿ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಿತು. ಹೀರೋ ಮೋಟೊಕಾರ್ಪ್ ಕಂಪನಿಯು ಈ ಬಿಎಸ್-6 ಡೆಸ್ಟಿನಿ 125 ಸ್ಕೂಟರ್ ಬಾರತೀಯ ಮಾರುಕಟ್ಟೆಯಲ್ಲಿ ಉತ್ತಮ ಬೇಡಿಕೆಯನ್ನು ಪಡೆದುಕೊಂಡಿದೆ.

ಮಾರಾಟದಲ್ಲಿ ಬೆಳವಣಿಗೆಯನ್ನು ಸಾಧಿಸಿದ ಹೀರೋ ಡೆಸ್ಟಿನಿ ಸ್ಕೂಟರ್

ಹೀರೋ ಮೋಟೊಕಾರ್ಪ್ ಕಂಪನಿಯು ಡೆಸ್ಟಿನಿ 125 ಸ್ಕೂಟರ್ ಅನ್ನು 2018ರ ಕೊನೆಯಲ್ಲಿ ಭಾರತದಲ್ಲಿ ಮೊದಲ ಬಾರಿಗೆ ಬಿಡುಗಡೆಗೊಳಿಸಿದ್ದರು. ಸ್ವದೇಶೀ ವಾಹನ ತಯಾರಕರಾದ ಹೀರೋ ತನ್ನ ಡೆಸ್ಟಿನಿ 125 ಸ್ಕೂಟರ್ ಅನ್ನು ಐ3 ಎಸ್ ಸ್ಟಾರ್ಟ್/ಸ್ಟಾಪ್ ತಂತ್ರಜ್ಞಾನವನ್ನು ಒಳಗೊಂಡಿರುವ ಮೊದಲ ಸ್ಕೂಟರ್ ಆಗಿ ಪರಿಚಯಿಸಿತು. ಈ ಡೆಸ್ಟಿನಿ 125 ಸ್ಕೂಟರ್ ಭಾರತೀಯ ಮಾರುಕಟ್ಟೆಯಲ್ಲಿ ಉತ್ತಮವಾಗಿ ಮಾರಾಟವಾಗುತ್ತಿದೆ.

ಮಾರಾಟದಲ್ಲಿ ಬೆಳವಣಿಗೆಯನ್ನು ಸಾಧಿಸಿದ ಹೀರೋ ಡೆಸ್ಟಿನಿ ಸ್ಕೂಟರ್

2020ರ ಆಗಸ್ಟ್ ತಿಂಗಳಲ್ಲಿ ಹೀರೋ ಡೆಸ್ಟಿನಿ 125 ಸ್ಕೂಟರ್ 13,609 ಯು‍‍ನಿ‍‍ಟ್‍ಗಳು ಮಾರಾಟವಾಗಿವೆ. ಕಳೆದ ವರ್ಷದ ಇದೇ ಅವಧಿಯಲ್ಲಿ 9,735 ಯು‍‍ನಿ‍‍ಟ್‍ಗಳು ಮಾರಾಟವಾಗಿತ್ತು. ವರ್ಷದಿಂದ ವರ್ಷಕ್ಕೆ ಶೇ.40 ರಷ್ಟು ಮಾರಾಟದಲ್ಲಿ ಬೆಳವಣಿಗೆಯನ್ನು ಸಾಧಿಸಿದೆ.

MOST READ: ದುಬಾರಿಯಾಯ್ತು ಬಿಎಸ್-6 ಟಿವಿಎಸ್ ಎನ್‌ಟಾರ್ಕ್ 125 ಸ್ಕೂಟರ್

ಮಾರಾಟದಲ್ಲಿ ಬೆಳವಣಿಗೆಯನ್ನು ಸಾಧಿಸಿದ ಹೀರೋ ಡೆಸ್ಟಿನಿ ಸ್ಕೂಟರ್

ಬಿಎಸ್-6 ಡೆಸ್ಟಿನಿ ಸ್ಕೂಟರ್ ಎಲ್ಎಕ್ಸ್ ಮತ್ತು ವಿಎಕ್ಸ್ ಎಂಬ ಎರಡು ರೂಪಾಂತರಗಳಲ್ಲಿ ಲಭ್ಯವಿದೆ. ಇದರಲ್ಲಿ ಎಂಟ್ರಿ ಲೆವೆಲ್ ಎಲ್‌ಎಕ್ಸ್ ರೂಪಾಂತರದ ಬೆಲೆಯು ರೂ.67,200ಗಳಾದರೆ, ಟಾಪ್-ಸ್ಪೆಕ್ ವಿಎಕ್ಸ್ ರೂಪಾಂತರದ ಬೆಲೆಯು ರೂ.70,050 ಗಳಾಗಿದೆ. ಈ ಎಲ್ಲಾ ಬೆಲೆಗಳು ಭಾರತದ ಎಕ್ಸ್ ಶೋರೂಂ ಪ್ರಕಾರವಾಗಿದೆ.

ಮಾರಾಟದಲ್ಲಿ ಬೆಳವಣಿಗೆಯನ್ನು ಸಾಧಿಸಿದ ಹೀರೋ ಡೆಸ್ಟಿನಿ ಸ್ಕೂಟರ್

ಹೊಸ ಹೀರೋ ಡೆಸ್ಟಿನಿ 125 ಸ್ಕೂಟರ್ 124 ಸಿಸಿ ಸಿಂಗಲ್ ಸಿಲಿಂಡರ್ ಫ್ಯೂಯಲ್-ಇಂಜೆಕ್ಟ್ ಎಂಜಿನ್ ಹೊಂದಿದೆ. ಈ ಎಂಜಿನ್ 7,000 ಆರ್‌ಪಿಎಂನಲ್ಲಿ 9 ಬಿಹೆಚ್‌ಪಿ ಪವರ್ ಮತ್ತು 5,500 ಆರ್‌ಪಿಎಂನಲ್ಲಿ 10.4 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ.

MOST READ: ಎಪ್ರಿಲಿಯಾ ಎಸ್‌ಎಕ್ಸ್‌ಆರ್ 160 ಸ್ಕೂಟರ್ ಟೀಸರ್ ಚಿತ್ರ ಬಿಡುಗಡೆ

ಮಾರಾಟದಲ್ಲಿ ಬೆಳವಣಿಗೆಯನ್ನು ಸಾಧಿಸಿದ ಹೀರೋ ಡೆಸ್ಟಿನಿ ಸ್ಕೂಟರ್

ಹಿಂದಿನ ಬಿಎಸ್-4 ಮಾದರಿಗೆ ಹೋಲಿಸಿದರೆ ಶೇ.11 ಮೈಲೇಜ್ ಅಂಕಿ ಅಂಶಗಳು ಹೆಚ್ಚಾಗಿದೆ ಎಂದು ಕಂಪನಿ ಹೇಳಿಕೊಂಡಿದೆ. ಈ ಹೊಸ ಹೀರೋ ಡೆಸ್ಟಿನಿ 125 ಸ್ಕೂಟರ್ ಆಕರ್ಷಕ ಲುಕ್ ಅನ್ನು ಹೊಂದಿದೆ.

ಮಾರಾಟದಲ್ಲಿ ಬೆಳವಣಿಗೆಯನ್ನು ಸಾಧಿಸಿದ ಹೀರೋ ಡೆಸ್ಟಿನಿ ಸ್ಕೂಟರ್

ಬಿಎಸ್-6 ಡೆಸ್ಟಿನಿ ಸ್ಕೂಟರ್ ನಲ್ಲಿ ಸ್ಟಾರ್ಟ್/ಸ್ಟಾಪ್ ಟೆಕ್ನಾಲಜಿ, ಸೆಮಿ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಡ್ಯುಯಲ್-ಟೆಕ್ಸ್ಚರ್ ಸೀಟುಗಳು, ಅಲಾಯ್ ವ್ಹೀಲ್ಸ್, ಸುತ್ತಲೂ ಕ್ರೋಮ್ ಎಕ್ಸಟ್ ಗಳು, ಮೊಬೈಲ್ ಚಾರ್ಜಿಂಗ್ ಮತ್ತು ಬೂಟ್ ಲ್ಯಾಂಪ್ ಅನ್ನು ಒಳಗೊಂಡಿದೆ.

MOST READ: ದುಬಾರಿಯಾಯ್ತು ಜನಪ್ರಿಯ ಬಿಎಸ್-6 ಯಮಹಾ ಎಂಟಿ-15 ಬೈಕ್

ಮಾರಾಟದಲ್ಲಿ ಬೆಳವಣಿಗೆಯನ್ನು ಸಾಧಿಸಿದ ಹೀರೋ ಡೆಸ್ಟಿನಿ ಸ್ಕೂಟರ್

ಈ ಸ್ಕೂಟರಿನಲ್ಲಿ ಸಸ್ಪೆಂಕ್ಷನ್ ಗಾಗಿ ಮುಂಭಾಗದಲ್ಲಿ ಟೆಲಿಸ್ಕೋಪಿಕ್ ಸಸ್ಪೆಂಷನ್ ಮತ್ತು ಹಿಂಭಾಗದಲ್ಲಿ ಹೈಡ್ರಾಲಿಕ್ ಸಸ್ಪೆಂಷನ್ ಸೆಟಪ್ ಅನ್ನು ಹೊಂದಿದೆ. ಇನ್ನು ಈ ಸ್ಕೂಟರ್ ನಲ್ಲಿ ಸುರಕ್ಷತೆಗಾಗಿ ಇಂಟಿಗ್ರೇಟೆಡ್ ಬ್ರೇಕಿಂಗ್ ಸಿಸ್ಟಂನಿಂದ ಬೆಂಬಲಿತವಾಗಿ ಎರಡು ತುದಿಗಳಲ್ಲಿ ಡ್ರಮ್ ಬ್ರೇಕ್‌ಗಳನ್ನು ಹೊಂದಿದೆ.

ಮಾರಾಟದಲ್ಲಿ ಬೆಳವಣಿಗೆಯನ್ನು ಸಾಧಿಸಿದ ಹೀರೋ ಡೆಸ್ಟಿನಿ ಸ್ಕೂಟರ್

ಇನ್ನು ಭಾರತದಲ್ಲಿ ಕಳೆದ ತಿಂಗಳ ದ್ವಿಚಕ್ರ ಮಾರಾಟದಲ್ಲಿ ಹೀರೋ ಮೋಟೊಕಾರ್ಪ್ ಅಗ್ರಸ್ಥಾನದಲ್ಲಿದೆ. ಆದರೆ ಮಾರಾಟದಲ್ಲಿ ಹೀರೋನ ಸ್ಕೂಟರ್ ಗಳು ಹೆಚ್ಚಿನ ಕೊಡುಗೆಯನ್ನು ನೀಡಲಿಲ್ಲ. 2020ರ ಆಗಸ್ಟ್ ತಿಂಗಳಲ್ಲಿ ಹೀರೋ ಕೇವಲ 40 ಸಾವಿರ ಯೂನಿಟ್ ಸ್ಕೂಟರ್‌ಗಳನ್ನು ಮಾರಾಟ ಮಾಡಿದೆ. ಇದು ವರ್ಷದಿಂದ ವರ್ಷಕ್ಕೆ 22.05 ರಷ್ಟು ಕುಸಿತವಾಗಿದೆ.

ಮಾರಾಟದಲ್ಲಿ ಬೆಳವಣಿಗೆಯನ್ನು ಸಾಧಿಸಿದ ಹೀರೋ ಡೆಸ್ಟಿನಿ ಸ್ಕೂಟರ್

ಬಿಎಸ್-6 ಹೀರೋ ಡೆಸ್ಟಿನಿ ಭಾರತೀಯ ಮಾರುಕಟ್ಟೆಯಲ್ಲಿ ಹೋಂಡಾ ಆಕ್ಟಿವಾ 125 ಸ್ಕೂಟರ್ ಗೆ ಪೈಪೋಟಿ ನೀಡುತ್ತದೆ. ಬಿಎಸ್-6 ಡೆಸ್ಟಿನಿ ಸ್ಕೂಟರ್ ಮಾರಾಟವು ಹಬ್ಬದ ಸೀಸನ್ ನಲ್ಲಿ ಮತ್ತಷ್ಟು ಹೆಚ್ಚಾಗಬಹುದು ಎಂದು ನಿರೀಕ್ಷಿಸುತ್ತೇವೆ.

Most Read Articles

Kannada
English summary
Hero Destini 125 Records 40% Sales Growth In August 2020. Read In Kannada.
Story first published: Thursday, September 24, 2020, 9:29 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X