ಹೊಸ ವಿನ್ಯಾಸದೊಂದಿಗೆ ಬಿಡುಗಡೆಯಾಗಲಿದೆ ಬಿಎಸ್-6 ಸ್ಪ್ಲೆಂಡರ್ ಪ್ಲಸ್ ಬೈಕ್

ಭಾರತದಲ್ಲಿ ಮೊದಲ ಬಿಎಸ್-6 ದ್ವಿಚಕ್ರ ವಾಹನವನ್ನು ಬಿಡುಗಡೆ ಮಾಡಿದ ಹೆಗ್ಗಳಿಕೆ ಹೀರೋ ಮೋಟೊಕಾರ್ಪ್ ಅವರಿಗೆ ಸಲ್ಲುತ್ತದೆ. ಇದೀಗ ಹೀರೋ ಮೋಟೊಕಾರ್ಪ್ ಜನಪ್ರಿಯ ಸ್ಪ್ಲೆಂಡರ್ ಪ್ಲಸ್ ಬೈಕ್ ಅನ್ನು ಬಿಎಸ್-6 ಆವೃತ್ತಿಯಲ್ಲಿ ಬಿಡುಗಡೆಗೊಳಿಸಲು ಸಜ್ಜಾಗಿದೆ.

ಹೊಸ ವಿನ್ಯಾಸದೊಂದಿಗೆ ಬಿಡುಗಡೆಯಾಗಲಿದೆ ಬಿಎಸ್-6 ಸ್ಪ್ಲೆಂಡರ್ ಪ್ಲಸ್ ಬೈಕ್

ಹೊಸ ಹೀರೊ ಸ್ಪ್ಲೆಂಡರ್ ಪ್ಲಸ್ ಬೈಕ್‍‍ನಲ್ಲಿ 97.2 ಸಿಸಿ ಏರ್-ಕೂಲ್ಡ್, ಫೋರ್-ಸ್ಟ್ರೋಕ್, ಕಾರ್ಬ್ಯುರೇಟೆಡ್ ಸಿಂಗಲ್ ಸಿಲಿಂಡರ್ ಎಂಜಿನ್ ಅನ್ನು ಹೊಂದಿದೆ. ಈ ಎಂಜಿನ್ 8.36 ಬಿ‍‍ಹೆಚ್‍‍ಪಿ ಪವರ್ ಮತ್ತು 8.05 ಎನ್‍ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಹೊಸ ಬಿ‍ಎಸ್-6 ಮಾಲಿನ್ಯ ನಿಯಮಕ್ಕೆ ಅನುಗುಣವಾಗಿ ಫ್ಯೂಯಲ್ ಇಂಜೆಕ್ಷನ್ ಸಿಸ್ಟಂ ಅನ್ನು ಅಳವಡಿಸಲಾಗಿದೆ. ಈ ಬಿಎಸ್-6 ಸ್ಪ್ಲೆಂಡರ್ ಪ್ಲಸ್ ಬೈಕಿನ ಚಿತ್ರಗಳು ಆನ್‍‍ಲೈನ್‍‍ನಲ್ಲಿ ಬಹಿರಂಗವಾಗಿದೆ.

ಹೊಸ ವಿನ್ಯಾಸದೊಂದಿಗೆ ಬಿಡುಗಡೆಯಾಗಲಿದೆ ಬಿಎಸ್-6 ಸ್ಪ್ಲೆಂಡರ್ ಪ್ಲಸ್ ಬೈಕ್

ಇನ್ನು ಹೊಸ ಸ್ಪ್ಲೆಂಡರ್ ಪ್ಲಸ್ ಬೈಕಿನ ಬಾಡಿಯಲ್ಲಿ ಹೊಸ ಗ್ರಾಫಿಕ್ಸ್ ಗಳ ಬದಲಾವಣೆಗಳನ್ನು ಮಾಡಲಾಗಿದೆ. ಮಾಲಿನ್ಯ ಉಂಟುಮಾಡುವುದನ್ನು ಕಡಿಮೆ ಮಾಡಲು ಹೆಚ್ಚುವರಿಯಾಗಿ ಕಟಲ್ಯಾಟಿಕ್ ಕರ್ನ್‍ವಾಟರ್ ಸಿಸ್ಟಂ ಅನ್ನು ಅಳವಡಿಸಿದ್ದಾರೆ.

ಹೊಸ ವಿನ್ಯಾಸದೊಂದಿಗೆ ಬಿಡುಗಡೆಯಾಗಲಿದೆ ಬಿಎಸ್-6 ಸ್ಪ್ಲೆಂಡರ್ ಪ್ಲಸ್ ಬೈಕ್

ಬಿಎಸ್-6 ಸ್ಪ್ಲೆಂಡರ್ ಪ್ಲಸ್ ಬೈಕಿನ ಬಹಿರಂಗವಾದ ಚಿತ್ರದಲ್ಲಿ ಈ ಬೈಕ್ ರೆಡ್ ಮತ್ತು ಬ್ಲ್ಯಾಕ್ ಸೇರಿದಂತೆ ವಿವಿಧ ಹೊಸ ಡ್ಯುಯಲ್-ಟೋನ್ ಬಣ್ಣಗಳ ಆಯ್ಕೆಯನ್ನು ಹೊಂದಿದೆ. ಅಲ್ಲದೇ ಸ್ಕ್ಲೈ ಬ್ಲೂ ಮತ್ತು ಬ್ಲ್ಯಾಕ್ ಇದರೊಂದಿಗೆ ಪರ್ಪಲ್ ಮತ್ತು ಬ್ಲ್ಯಾಕ್ ಬಣ್ಣದ ಆಯ್ಕೆಯನ್ನು ಹೊಂದಿದೆ.

ಹೊಸ ವಿನ್ಯಾಸದೊಂದಿಗೆ ಬಿಡುಗಡೆಯಾಗಲಿದೆ ಬಿಎಸ್-6 ಸ್ಪ್ಲೆಂಡರ್ ಪ್ಲಸ್ ಬೈಕ್

ಪ್ರಸ್ತುತ ಭಾರತೀಯ ಮಾರುಕಟ್ಟೆಯಲ್ಲಿ ಮಾರಾಟವಾಗುತ್ತಿರುವ ಸ್ಪ್ಲೆಂಡರ್ ಪ್ಲಸ್ ಬೈಕಿನ ಬೆಲೆಯು ಭಾರತದ ಎಕ್ಸ್ ಶೋರೂಂ ಪ್ರಕಾರ ರೂ.50,860 ಗಳಾಗಿದೆ. ಆದರೆ ಹೊಸ ಬಿಎಸ್-6 ಸ್ಪ್ಲೆಂಡರ್ ಪ್ಲಸ್ ಬೈಕಿನ ಬೆಲೆಯು ತುಸು ಹೆಚ್ಚಿಸಬಹುದು. ಹೊಸ ಸ್ಪ್ಲೆಂಡರ್ ಪ್ಲಸ್ ಬೈಕಿನ ಬೆಲೆಯು ಭಾರತದ ಎಕ್ಸ್ ಶೋರೂಂ ಪ್ರಕಾರ ರೂ.58,000 ದಿಂದ ರೂ.60,000ಗಳವರೆಗೆ ಇರಬಹುದು ಎಂದು ಅಂದಾಜಿಸಲಾಗಿದೆ.

ಹೊಸ ವಿನ್ಯಾಸದೊಂದಿಗೆ ಬಿಡುಗಡೆಯಾಗಲಿದೆ ಬಿಎಸ್-6 ಸ್ಪ್ಲೆಂಡರ್ ಪ್ಲಸ್ ಬೈಕ್

ಹೊಸ ಸ್ಪ್ಲೆಂಡರ್ ಪ್ಲಸ್ ಬೈಕಿನ ಬೆಲೆ ಮತ್ತು ಇತರ ಮಾಹಿತಿಗಳನ್ನು ಹೀರೋ ಮೋಟೊಕಾರ್ಪ್ ಕಂಪನಿಯು ಅಧಿಕೃತವಾಗಿ ಬಹಿರಂಗ ಪಡಿಸಲ್ಲ. ಈ ಹೊಸ ಸ್ಪ್ಲೆಂಡರ್ ಪ್ಲಸ್ ಬೈಕ್ ಅನ್ನು ಮುಂದಿನ ಮಾರ್ಚ್ ತಿಂಗಳಲ್ಲಿ ಬಿಡುಗಡೆಗೊಳಿಸುವ ಸಾಧ್ಯತೆಗಳಿದೆ.

ಹೊಸ ವಿನ್ಯಾಸದೊಂದಿಗೆ ಬಿಡುಗಡೆಯಾಗಲಿದೆ ಬಿಎಸ್-6 ಸ್ಪ್ಲೆಂಡರ್ ಪ್ಲಸ್ ಬೈಕ್

ಇನ್ನು ಇತ್ತೀಚೆಗೆ ಬಿಡುಗಡೆಗೊಳಿಸಿದ ಬಿಎಸ್-6 ಹೆಚ್ಎಫ್ ಡಿಲಕ್ಸ್ ಬೈಕ್ ಮಾದರಿಯು ಗ್ರಾಹಕರ ಬೇಡಿಕೆಯೆಂತೆ ಎರಡು ವೆರಿಯೆಂಟ್‌ಗಳಲ್ಲಿ ಖರೀದಿಗೆ ಲಭ್ಯವಿದ್ದು, ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕ ವೆರಿಯೆಂಟ್ ರೂ.55,925 ಮತ್ತು ಹೈ ಎಂಡ್ ವೆರಿಯೆಂಟ್ ರೂ.57,250 ಬೆಲೆ ಹೊಂದಿದೆ.

ಹೊಸ ವಿನ್ಯಾಸದೊಂದಿಗೆ ಬಿಡುಗಡೆಯಾಗಲಿದೆ ಬಿಎಸ್-6 ಸ್ಪ್ಲೆಂಡರ್ ಪ್ಲಸ್ ಬೈಕ್

ಹೆಚ್ಎಫ್ ಡಿಲಕ್ಸ್ ಹೊಸ ಬೈಕ್ ಮಾದರಿಯು ಬಿಎಸ್-6 ಪ್ರೇರಿತ 100 ಸಿಸಿ ಸಿಂಗಲ್ ಸಿಲಿಂಡರ್ ಏರ್ ಕೂಲ್ಡ್ ಎಂಜಿನ್ ಹೊಂದಿದೆ. ಈ ಎಂಜಿನ್ 7.9-ಬಿ‍ಹೆಚ್‍ಪಿ ಪವರ್ ಮತ್ತು 8-ಎನ್ಎಂ ಟಾರ್ಕ್‌ ಅನ್ನು ಉತ್ಪಾದಿಸುತ್ತದೆ.

ಹೊಸ ವಿನ್ಯಾಸದೊಂದಿಗೆ ಬಿಡುಗಡೆಯಾಗಲಿದೆ ಬಿಎಸ್-6 ಸ್ಪ್ಲೆಂಡರ್ ಪ್ಲಸ್ ಬೈಕ್

ಹೀರೋ ಮೋಟೊಕಾರ್ಪ್ ಬಿ‍ಎಸ್ 6 ಎಂಜಿನ್ ಹೊಂದಿರುವ ಹೀರೊ ಪ್ಲೆಷರ್ ಪ್ಲಸ್ 110 ಎಫ್‍ಐ ಸ್ಕೂಟರ್ ಅನ್ನು ದೇಶಿಯ ಮಾರುಕಟ್ಟೆಯಲ್ಲಿ ಇತ್ತೀಚೆಗೆ ಬಿಡುಗಡೆಗೊಳಿಸಲಾಗಿತ್ತು. ಇದೀಗ ಹೀರೋ ಮೋಟೊಕಾರ್ಪ್ ತನ್ನ ಜನಪ್ರಿಯ ಮಾದರಿಯಾದ ಸ್ಪ್ಲೆಂಡರ್ ಬೈಕ್ ಅನ್ನು ಮುಂದಿನ ಮಾರ್ಚ್ ತಿಂಗಳಲ್ಲಿ ಬಿಡುಗಡೆಗೊಳಿಸಲು ಸಜ್ಜಾಗುತ್ತಿದೆ.

Article Published On: Thursday, February 13, 2020, 12:12 [IST]
English summary
Upcoming BS6 Hero Splendor Plus FI Pics Leaked. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+