ಡೀಲರ್ ಬಳಿ ಕಾಣಿಸಿಕೊಂಡ ಬಿಎಸ್-6 ಹೀರೋ ಎಕ್ಸ್‌ಪಲ್ಸ್ 200 ಬೈಕ್
ಹೀರೋ ಮೋಟೊಕಾರ್ಪ್ ಕಂಪನಿಯು ತನ್ನ ಹೊಸ ಬಿಎಸ್-6 ಎಕ್ಸ್‌ಪಲ್ಸ್ 200 ಬೈಕನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲು ಸಜ್ಜಾಗುತ್ತಿದೆ. ಇದೀಗ ಬಿಎಸ್-6 ಹೀರೋ ಎಕ್ಸ್‌ಪಲ್ಸ್ 200 ಬೈಕ್ ಡೀಲರ್‍ಗಳ ಬಳಿ ತಲುಪಲು ಪ್ರಾರಂಭವಾಗಿದೆ.

ಹೊಸ ಹೀರೋ ಎಕ್ಸ್‌ಪಲ್ಸ್ 200 ಬೈಕ್ ಡೀಲರ್ ಬಳಿ ತಲುಪಿರುವುದನ್ನು ಯೂಟ್ಯೂಬ್ ಚಾನೆಲ್‌ವೊಂದು ಬಹಿರಂಗಪಡಿಸಿದೆ.ಈ ಎಂಟ್ರಿ ಲೆವೆಲ್ ಬಿಎಸ್-6 ಎಕ್ಸ್‌ಪಲ್ಸ್ 200 ಬೈಕ್ ಅದೇ 199.6 ಸಿಸಿ ಎಂಜಿನ್ ಅನ್ನು ಹೊಂದಿರುತ್ತದೆ. ಹಿಂದಿನ ಬಿಎಸ್-4 ಎಕ್ಸ್‌ಪಲ್ಸ್ 200 ಮಾದರಿಯಲ್ಲಿಯು ಇದೇ ಎಂಜಿನ್ ಅನ್ನು ಹೊಂದಿತ್ತು. ಕಂಪನಿಯು ಇದೇ ಎಂಜಿನ್ ಅನ್ನು ಬಿಎಸ್-6 ಮಾಲಿನ್ಯ ನಿಯಮಕ್ಕೆ ಅನುಗುಣವಾಗಿ ನವೀಕರಿಸಲಾಗಿದೆ. ಹೊಸ ಮಾದರಿಯಲ್ಲಿ ಏರ್/ಆಯಿಲ್-ಕೂಲಿಂಗ್ ಮತ್ತು ಫ್ಯೂಯಲ್ ಇಂಜೆಕ್ಷನ್ ಅನ್ನು ಸ್ಟ್ಯಾಂಡರ್ಡ್ ಆಗಿ ಅಳವಡಿಸಲಾಗಿದೆ.

ಹೊಸ ಎಕ್ಸ್‌ಪಲ್ಸ್ 200 ಬೈಕಿನ 199.6 ಸಿಸಿ ಎಂಜಿನ್ 8,500 ಆರ್‌ಪಿಎಂನಲ್ಲಿ 17.8 ಬಿಹೆಚ್‌ಪಿ ಪವರ್ ಮತ್ತು 6,400 ಆರ್‌ಪಿಎಂನಲ್ಲಿ 16.4 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಎಂಜಿನ್ ನೊಂದಿಗೆ ಐದು-ಸ್ಪೀಡ್ ಗೇರ್‌ಬಾಕ್ಸ್ ಅನ್ನು ಜೋಡಿಸಲಾಗಿದೆ.
MOST READ: ಬಿಡುಗಡೆಯಾಯ್ತು ಬಹುನಿರೀಕ್ಷಿತ ಹೊಸ ಹೋಂಡಾ ಎಕ್ಸ್-ಬ್ಲೇಡ್ ಬೈಕ್

ಬಿಎಸ್-6 ಮಾಲಿನ್ಯ ನಿಯಮಕ್ಕೆ ಅನುಗುಣವಾಗಿ ನವೀಕರಿಸಿದಾಗ ಇದರ ಪವರ್ ಮತ್ತು ಟಾರ್ಕ್ ಅಂಕಿ ಅಂಶವು ಕಡಿಮೆಯಾಗಿದೆ. ಹೀರೋ ಎಕ್ಸ್‌ಪಲ್ಸ್ 200 ಬೈಕನ್ನು ಬಿಎಸ್-6 ಮಾಲಿನ್ಯ ನಿಯಮಕ್ಕೆ ಅನುಗುಣವಾಗಿ ನವೀಕರಿಸಿದ ಬಳಿಕ ಹಿಂದಿನ ಮಾದರಿಗಿಂತ ತೂಕ ಹೆಚ್ಚಾಗಿದೆ.

ಹೊಸ ಹೀರೋ ಎಕ್ಸ್‌ಪಲ್ಸ್ 200 ಬೈಕ್ 157 ಕೆಜೆ ತೂಕವನ್ನು ಹೊಂದಿದೆ. ಬಿಎಸ್-6 ಎಕ್ಸ್‌ಪಲ್ಸ್ ಬೈಕಿನಲ್ಲಿ ಎಕ್ಸಾಸ್ಟ್ ಪೈಪಿನ ಸ್ಥಾನವನ್ನು ಬದಲಾಯಿಸಲಾಗಿದೆ. ಈ ಬೈಕಿನ ಎಂಜಿನ್ ಬೆಲ್ಲಿ-ಪ್ಯಾನ್ ಅನ್ನು ಮರುವಿನ್ಯಾಸಗೊಳಿಸಲಾಗಿದೆ. ಇದು ಈ ಬೈಕಿನ ಗ್ರೌಂಡ್ ಕ್ಲಿಯರೆನ್ಸ್ ಮೇಲೆ ಪರಿಣಾಮ ಬೀರಬಹುದೇ ಎಂದು ನೋಡಬೇಕಾಗಿದೆ.
MOST READ: ದುಬಾರಿಯಾಯ್ತು ಜನಪ್ರಿಯ ಬಿಎಸ್-6 ಬಜಾಜ್ ಪಲ್ಸರ್ ಎನ್ಎಸ್200 ಬೈಕ್

ಈ ಬೈಕಿನಲ್ಲಿ ಸವಾರನ ಸುರಕ್ಷತೆಗಾಗಿ ಹೆಚ್ಚಿನ ಪ್ರಾಮುಖ್ಯತೆಯನ್ನು ನೀಡಿದೆ. ಹೊಸ ಎಕ್ಸ್‌ಪಲ್ಸ್ 200 ಬೈಕಿನ ಮುಂಭಾಗದಲ್ಲಿ 37 ಎಂಎಂ ಲಾಂಗ್-ಟ್ರಾವೆಲ್ ಟೆಲಿಸ್ಕೋಪಿಕ್ ಫೋರ್ಕ್‌ಗಳನ್ನು ಮತ್ತು ಹಿಂಭಾಗದಲ್ಲಿ 10-ಹಂತದ ಹೊಂದಾಣಿಕೆ ಮಾಡಬಹುದಾದ ಮೊನೊ-ಶಾಕ್ ಅನ್ನು ಹೊಂದಿರುತ್ತದೆ.

ಬ್ರೇಕಿಂಗ್ ಸಿಸ್ಟಂಗಾಗಿ ಮುಂಭಾಗದಲ್ಲಿ 276 ಎಂಎಂ ಪೆಟಲ್ ಡಿಸ್ಕ್ ಮತ್ತು ಹಿಂಭಾಗದಲ್ಲಿ 220 ಎಂಎಂ ಪೆಟಲ್ ಡಿಸ್ಕ್ ಬ್ರೇಕ್ ಅನ್ನು ಅಳವಡಿಸಲಾಗಿದೆ. ಇದರೊಂದಿಗೆ ಸಿಂಗಲ್-ಚಾನೆಲ್ ಎಬಿಎಸ್ ಅನ್ನು ಕೂಡ ಅಳವಡಿಸಲಾಗಿದೆ.
MOST READ: ಭಾರತಕ್ಕೆ ಲಗ್ಗೆ ಇಡಲಿದೆ ಜನಪ್ರಿಯ ಟ್ರಯಂಫ್ ಸ್ಟ್ರೀಟ್ ಟ್ರಿಪಲ್ ಆರ್ ಬೈಕ್
ಇತ್ತೀಚೆಗೆ ಹೀರೋ ಕಂಪನಿಯು ಹೊಸ ಎಕ್ಸ್‌ಪಲ್ಸ್ 200 ಬೈಕಿನ ಅಕ್ಸೆಸರೀಸ್‌ಗಳನ್ನು ಬಹಿರಂಗಪಡಿಸಿದೆ. ಈ ಅಕ್ಸೆಸರೀಸ್‌ಗಳಲ್ಲಿ ಸೀಟ್ ಕವರ್ ಆಯ್ಕೆಗಳು ಮತ್ತು ಮೊಟೊಕ್ರಾಸ್ ಹೆಲ್ಮೆಟ್ ಸೇರಿವೆ.

ಬಿಎಸ್-6 ಹೀರೋ ಎಕ್ಸ್‌ಪಲ್ಸ್ 200 ಒಂದು ಸಮರ್ಥ ಎಂಟ್ರಿ ಲೆವೆಲ್ ಅಡ್ವೆಂಚರ್ ಬೈಕ್ ಆಗಿದೆ. ಆದರೆ ಬಿಎಸ್-6 ಮಾಲಿನ್ಯ ನಿಯಮಕ್ಕೆ ಅನುಗುಣವಾಗಿ ನವೀಕರಿಸಿದಾಗ ಹೀರೋ ಎಕ್ಸ್‌ಪಲ್ಸ್ 200 ಬೈಕಿನಲ್ಲಿ ಪವರ್ ಮತ್ತು ಟಾರ್ಕ್ ಅಂಕಿ ಅಂಶಗಳಲ್ಲಿ ತುಸು ಕಡಿಮೆಯಾಗಿದೆ. ಈ ಬಿಎಸ್-6 ಹೀರೋ ಎಕ್ಸ್‌ಪಲ್ಸ್ 200 ಬೈಕ್ ಹೆಚ್ಚಾಗಿ ಯುವ ಗ್ರಾಹಕರನ್ನು ಸೆಳೆಯುತ್ತದೆ.


Click it and Unblock the Notifications