ಡೀಲರ್ ಬಳಿ ತಲುಪಿದ ಹೊಸ ಹೀರೋ ಎಕ್ಸ್‌ಟ್ರಿಮ್ 160ಆರ್ ಬೈಕ್

ಹೀರೋ ಮೋಟೊಕಾರ್ಪ್ ಕಂಪನಿಯು ತನ್ನ ಬಹುನಿರೀಕ್ಷಿತ ಎಕ್ಸ್‌ಟ್ರಿಮ್ 160ಆರ್ ಬೈಕನ್ನು ದೇಶಿಯ ಮಾರುಕಟ್ಟೆಯಲ್ಲಿ ಇತ್ತೀಚೆಗೆ ಬಿಡುಗಡೆಗೊಳಿಸಿತ್ತು. ಈ ಹೊಸ ಹೀರೋ ಎಕ್ಸ್‌ಟ್ರಿಮ್ 160ಆರ್ ಬೈಕುಗಳು ಡೀಲರುಗಳ ಬಳಿ ತಲುಪಿದೆ.

ಡೀಲರ್ ಬಳಿ ತಲುಪಿದ ಹೊಸ ಹೀರೋ ಎಕ್ಸ್‌ಟ್ರಿಮ್ 160ಆರ್ ಬೈಕ್

ಈ ಹೊಸ ಬೈಕ್ ಡೀಲರುಗಳ ಬಳಿ ತಲುಪಿರುವುದನ್ನು ಝಿಗ್ ವ್ಹೀಲ್ ಬಹಿರಂಗಪಡಿಸಿದೆ. ಇನ್ನು ಈ ಹೀರೋ ಎಕ್ಸ್‌ಟ್ರಿಮ್ 160ಆರ್ ಬೈಕುಗಳು ಡೀಲರುಗಳ ಬಳಿ ತಲುಪಿರುವುದರಿಂದ ಶೀಘ್ರದಲ್ಲೇ ಈ ಬೈಕುಗಳ ವಿತರಣೆಯನ್ನು ಪ್ರಾರಂಭಿಸಬಹುದು ಎಂದು ನಿರೀಕ್ಷಿಸುತ್ತೇವೆ. ಈ ಹೊಸ ಹೀರೋ ಎಕ್ಸ್‌ಟ್ರಿಮ್ 160ಆರ್ ಬೈಕನ್ನು ಫ್ರಂಟ್ ಡಿಸ್ಕ್ ಮತ್ತು ಡಬಲ್ ಡಿಸ್ಕ್ ಎಂಬ ಎರಡು ರೂಪಾಂತರಗಳಲ್ಲಿ ಬಿಡುಗಡೆಗೊಳಿಸಲಾಗಿದೆ. ಹೊಸ ಹೀರೋ ಎಕ್ಸ್‌ಟ್ರಿಮ್ 160ಆರ್ ಬೈಕಿನ ಫ್ರಂಟ್ ಡಿಸ್ಕ್ ರೂಪಾಂತರದ ಬೆಲೆಯು ರೂ.99,950 ಗಳಾದರೆ, ಡಬಲ್ ಡಿಸ್ಕ್ ರೂಪಾಂತರದ ಬೆಲೆಯು ರೂ.1.03 ಲಕ್ಷಗಳಾಗಿದೆ.

ಡೀಲರ್ ಬಳಿ ತಲುಪಿದ ಹೊಸ ಹೀರೋ ಎಕ್ಸ್‌ಟ್ರಿಮ್ 160ಆರ್ ಬೈಕ್

ಹೊಸ ಹೀರೋ ಎಕ್ಸ್‌ಟ್ರಿಮ್ 160ಆರ್ ಬೈಕನ್ನು ರಾಜಸ್ಥಾನದ ಜೈಪುರದಲ್ಲಿರುವ ಆರ್&ಡಿ ಘಟಕದಲ್ಲಿ ಸಂಪೂರ್ಣವಾಗಿ ವಿನ್ಯಾಸಗೊಳಿಸಿ ಅಭಿವೃದ್ಧಿಪಡಿಸಲಾಗಿದೆ. ಬ್ರ್ಯಾಂಡ್‌ನಿಂದ ಪ್ರೀಮಿಯಂ 160 ಸಿಸಿ ಬಿಎಸ್ 6 ಎಂಜಿನ್ ಅನ್ನು ಈ ಬೈಕಿನಲ್ಲಿ ಅಳವಡಿಸಲಾಗಿದೆ. ಹೊಸ ಬೈಕಿಗೆ ಈ ಎಂಜಿನ್ ಉತ್ತಮ ಕಾರ್ಯಕ್ಷಮತೆಯನ್ನು ನೀಡುತ್ತದೆ.

MOST READ: ಭಾರತಕ್ಕೆ ಲಗ್ಗೆ ಇಡಲಿದೆ ಜನಪ್ರಿಯ ಟ್ರಯಂಫ್ ಸ್ಟ್ರೀಟ್ ಟ್ರಿಪಲ್ ಆರ್ ಬೈಕ್

ಡೀಲರ್ ಬಳಿ ತಲುಪಿದ ಹೊಸ ಹೀರೋ ಎಕ್ಸ್‌ಟ್ರಿಮ್ 160ಆರ್ ಬೈಕ್

ಬಿಎಸ್ 6 ಹೀರೋ ಎಕ್ಸ್‌ಟ್ರಿಮ್ 160ಆರ್ ಬೈಕಿನಲ್ಲಿ 163 ಸಿಸಿ ಸಿಂಗಲ್ ಸಿಲಿಂಡರ್ ಏರ್-ಕೂಲ್ಡ್ ಎಂಜಿನ್ ಅನ್ನು ಆಳವಡಿಸಿಸಲಾಗಿದೆ. ಈ ಎಂಜಿನ್ 8500 ಆರ್‌ಪಿಎಂನಲ್ಲಿ 15 ಬಿಹೆಚ್‌ಪಿ ಪವರ್ ಮತ್ತು 6500 ಆರ್‌ಪಿಎಂನಲ್ಲಿ 14 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸುತ್ತದೆ.

ಡೀಲರ್ ಬಳಿ ತಲುಪಿದ ಹೊಸ ಹೀರೋ ಎಕ್ಸ್‌ಟ್ರಿಮ್ 160ಆರ್ ಬೈಕ್

ಈ ಎಂಜಿನ್ ಅನ್ನು ಐದು-ಸ್ಪೀಡ್ ಗೇರ್‌ಬಾಕ್ಸ್‌ನೊಂದಿಗೆ ಜೋಡಿಸಲ್ಪಟ್ಟಿದೆ. ಎಂಜಿನ್ ನಲ್ಲಿ ಹೀರೋನ ಪ್ರೋಗ್ರಾಮ್ ಮಾಡಲಾದ ಫ್ಯೂಯಲ್-ಇಂಜೆಕ್ಷನ್ ಸಿಸ್ಟಂ ಅನ್ನು ಸಹ ಹೊಂದಿದೆ. ಇದು ಅತ್ಯುತ್ತಮ ಕಾರ್ಯಕ್ಷಮತೆ ಮತ್ತು ಹೆಚ್ಚಿನ ದಕ್ಷತೆಯನ್ನು ಒದಗಿಸುತ್ತದೆ.

MOST READ: ಬಿಡುಗಡೆಯಾಯ್ತು ಬಹುನಿರೀಕ್ಷಿತ ಹೊಸ ಹೋಂಡಾ ಎಕ್ಸ್-ಬ್ಲೇಡ್ ಬೈಕ್

ಡೀಲರ್ ಬಳಿ ತಲುಪಿದ ಹೊಸ ಹೀರೋ ಎಕ್ಸ್‌ಟ್ರಿಮ್ 160ಆರ್ ಬೈಕ್

ಹೀರೋ ಎಕ್ಸ್‌ಟ್ರಿಮ್ 160ಆರ್ ಬೈಕ್ ಕೇವಲ 7 ಸೆಕೆಂಡುಗಳಲ್ಲಿ 0 - 60 ಕಿ.ಮೀ ಕ್ರಮಿಸುತ್ತದ ಎಂದು ಹೀರೋ ಹೇಳಿಕೊಂಡಿದೆ. ಹೊಸ ಹೀರೋ ಎಕ್ಸ್‌ಟ್ರಿಮ್ 160ಆರ್ ಬೈಕಿನ ಬೇಸ್ ಸ್ಪೆಕ್ ಮಾದರಿಯು 138.5 ಕೆಜಿ ತೂಕವನ್ನು ಹೊಂದಿದೆ.

ಡೀಲರ್ ಬಳಿ ತಲುಪಿದ ಹೊಸ ಹೀರೋ ಎಕ್ಸ್‌ಟ್ರಿಮ್ 160ಆರ್ ಬೈಕ್

ಬಿಎಸ್ 6 ಹೀರೋ ಎಕ್ಸ್‌ಟ್ರಿಮ್ 160ಆರ್ ಬೈಕ್ ಸ್ಪೋರ್ಟಿ ಲುಕ್ ಅನ್ನು ಹೊಂದಿದೆ. ಈ ಬೈಕ್ ಹಲವಾರು ಹೊಸ ಪ್ರೀಮಿಯಂ ಫೀಚರುಗಳನ್ನು ಹೊಂದಿದೆ. ಈ ಬೈಕಿನಲ್ಲಿ ಎಲ್‌ಇಡಿ ಹೆಡ್ ಲ್ಯಾಂಪ್, ಡಿಆರ್‌ಎಲ್‌ ಇಂಡೀಕೆಟರ್ ಮತ್ತು ಟೇಲ್ ಲೈಟ್ ಮತ್ತು ಎಲ್‌ಸಿಡಿ ಇನ್ಸ್ ಟ್ರೂಮೆಂಟ್ ಕ್ಲಸ್ಟರ್ ಅನ್ನು ಹೊಂದಿದೆ.

MOST READ: ಹೊಸ ಬಿಎಂಡಬ್ಲ್ಯೂ ಆರ್ 18 ಕ್ರೂಸರ್ ಬೈಕ್ ಖರೀದಿಗೆ ಬುಕ್ಕಿಂಗ್ ಆರಂಭ

ಡೀಲರ್ ಬಳಿ ತಲುಪಿದ ಹೊಸ ಹೀರೋ ಎಕ್ಸ್‌ಟ್ರಿಮ್ 160ಆರ್ ಬೈಕ್

ಹೊಸ ಹೀರೋ ಎಕ್ಸ್‌ಟ್ರಿಮ್ 160ಆರ್ ಬೈಕಿನಲ್ಲಿ ಸಸ್ಪೆಂಕ್ಷನ್ ಗಾಗಿ ಮುಂಭಾಗದಲ್ಲಿ 37 ಎಂಎಂ ಟೆಲಿಸ್ಕೋಪಿಕ್ ಫೋರ್ಕ್‌ಗಳ ಸೆಟಪ್ ಮತ್ತು ಹಿಂಭಾಗದಲ್ಲಿ ಏಳು-ಹಂತದ ರೈಡರ್-ಹೊಂದಾಣಿಕೆ ಮಾಡಬಹುದಾದ ಮೊನೊಶಾಕ್ ಸಸ್ಪೆಂಕ್ಷನ್ ಸೆಟಪ್ ಅನ್ನು ಅಳವಡಿಸಲಾಗಿದೆ.

ಡೀಲರ್ ಬಳಿ ತಲುಪಿದ ಹೊಸ ಹೀರೋ ಎಕ್ಸ್‌ಟ್ರಿಮ್ 160ಆರ್ ಬೈಕ್

ಇನ್ನು ಈ ಹೊಸ ಬೈಕಿನಲ್ಲಿ ಬ್ರೇಕಿಂಗ್ ಸಿಸ್ಟಂಗಾಗಿ ಮುಂಭಾಗದಲ್ಲಿ 276 ಎಂಎಂ ಪೆಟಲ್ ಡಿಸ್ಕ್ ಮತ್ತು ಹಿಂಭಾಗದಲ್ಲಿ 220 ಎಂಎಂ ಡಿಸ್ಕ್ ಅಥವಾ 130 ಎಂಎಂ ಡ್ರಮ್ ಬ್ರೇಕ್ ಗಳನ್ನು ಅಳವಡಿಸಲಾಗಿದೆ. ಇದರೊಂದಿಗೆ ಚಾನೆಲ್ ಎಬಿಎಸ್ ಅನ್ನು ನೀಡಿದೆ.

More from DriveSpark

Article Published On: Tuesday, July 21, 2020, 18:59 [IST]
English summary
Hero Xtreme 160R Arrives At Outlets Pan-India. Read In Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+