ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಹೊಸ ಹೀರೋ ಎಕ್ಸ್‌ಟ್ರಿಮ್ 200ಎಸ್ ಬೈಕ್

ಜನಪ್ರಿಯ ವಾಹನ ತಯಾರಕ ಕಂಪನಿಯಾದ ಹೀರೋ ಮೋಟೊಕಾರ್ಪ್ ಭಾರತೀಯ ಮಾರುಕಟ್ಟೆಯಲ್ಲಿ ಶೀಘ್ರದಲ್ಲೇ 200 ಸಿಸಿಯ ಎರಡು ಹೊಸ ಬೈಕುಗಳನ್ನು ಬಿಡುಗಡೆಗೊಳಿಸಲಿದೆ. ಹೀರೋ ಮೋಟೊಕಾರ್ಪ್ ಎಕ್ಸ್‌ಟ್ರಿಮ್ 200ಎಸ್ ಮತ್ತು ಎಕ್ಸ್‌ಪಲ್ಸ್ 200ಟಿ ಎಂಬ ಎರಡು ಬೈಕುಗಳನ್ನು ಬಿಡುಗಡೆಗೊಳಿಸಲು ಸಜ್ಜಾಗುತ್ತಿದೆ.

ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಹೊಸ ಹೀರೋ ಎಕ್ಸ್‌ಟ್ರಿಮ್ 200ಎಸ್ ಬೈಕ್

ಹೀರೋ ಮೋಟೊಕಾರ್ಪ್ ತನ್ನ ವೆಬ್‌ಸೈಟ್‌ನಲ್ಲಿ ಬಿಎಸ್ 6 ಎಕ್ಸ್‌ಟ್ರಿಮ್ 200ಎಸ್ ಬೈಕನ್ನು ಶೀಘ್ರದಲ್ಲೇ ಬಿಡುಗಡೆಗೊಳಿಸಲಿದೆ ಎಂದು ತಿಳಿಸಿದೆ. ಮುಂದಿನ ವಾರಗಳಲ್ಲಿ ಈ ಹೊಸ ಹೀರೋ ಎಕ್ಸ್‌ಟ್ರಿಮ್ 200ಎಸ್ ಬೈಕ್ ಬಿಡುಗಡೆಯಾಗಬಹುದೆಂದು ನಿರೀಕ್ಷಿಸುತ್ತೇವೆ. ಬಿಎಸ್ 6 ಎಕ್ಸ್‌ಟ್ರಿಮ್ 200ಎಸ್ ಮೂಲಭೂತವಾಗಿ ಕಂಪನಿಯ ಎಕ್ಸ್‌ಟ್ರಿಮ್ 200ಆರ್ ನೇಕೆಡ್ ಸ್ಟ್ರೀಟ್ ಫೈಟರ್ನ ಸಂಪೂರ್ಣ ಫೇರ್ಡ್ ಆವೃತ್ತಿಯನ್ನು ಆಧರಿಸಿದೆ. ಇದನ್ನು ಕಳೆದ ವರ್ಷ ಭಾರತದಲ್ಲಿ ಬಿಡುಗಡೆ ಮಾಡಲಾಯಿತು.

ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಹೊಸ ಹೀರೋ ಎಕ್ಸ್‌ಟ್ರಿಮ್ 200ಎಸ್ ಬೈಕ್

ಹೊಸ ಹೀರೋ ಎಕ್ಸ್‌ಟ್ರಿಮ್ 200ಎಸ್ ಬೈಕ್ 200ಸಿಸಿ ಏರ್-ಕೂಲ್ಡ್ ಎಂಜಿನ್ ಅನ್ನು ಹೊಂದಿದೆ. ಈ ಎಂಜಿನ್ 8,000 ಆರ್‌ಪಿಎಂನಲ್ಲಿ 18 ಬಿಹೆಚ್‌ಪಿ ಪವರ್ ಮತ್ತು 6,500 ಆರ್‌ಪಿಎಂನಲ್ಲಿ 17.1 ಎನ್‌ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ.

MOST READ: ಬಿಡುಗಡೆಯಾಯ್ತು ಹೊಸ ಟ್ರಯಂಫ್ ಬೊನೊವೆಲ್ಲಿ ಸ್ಪೀಡ್‍‍ಮಾಸ್ಟರ್ ಬೈಕ್

ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಹೊಸ ಹೀರೋ ಎಕ್ಸ್‌ಟ್ರಿಮ್ 200ಎಸ್ ಬೈಕ್

ಈ ಎಂಜಿನ್ ಅನ್ನು 5-ಸ್ಪೀಡ್ ಗೇರ್‌ಬಾಕ್ಸ್‌ಗೆ ಜೋಡಿಸಲಾಗಿದೆ. ಇನ್ನು ಬಿಎಸ್ 6 ಹೀರೋ ಎಕ್ಸ್‌ಪಲ್ಸ್ 200 ಪಡೆಯುವ ಆಯಿಲ್-ಕೂಲರ್ ಅನ್ನು ಸಹ ನಾವು ನಿರೀಕ್ಷಿಸುತ್ತೇವೆ. ಈ ಎರಡು ಬೈಕುಗಳ ಎಂಜಿನ್ ಅನ್ನು ಬಿಎಸ್-6 ಮಾಲಿನ್ಯ ನಿಯಮಕ್ಕೆ ಅನುಗುಣವಾಗಿ ನವೀಕರಿಸಲಾಗಿರುತ್ತದೆ.

ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಹೊಸ ಹೀರೋ ಎಕ್ಸ್‌ಟ್ರಿಮ್ 200ಎಸ್ ಬೈಕ್

ಬಿಎಸ್ 6 ಹೀರೋ ಎಕ್ಸ್‌ಟ್ರಿಮ್ 200ಎಸ್ ಬೈಕ್ ಹೊಸ ಬಣ್ಣಗಳ ಆಯ್ಕೆಯನ್ನು ಪಡೆದುಕೊಳ್ಳಲಿದೆ. ಇನ್ನು ಹೊಸ ಹೀರೋ ಎಕ್ಸ್‌ಟ್ರಿಮ್ 200ಎಸ್ ಸಂಪೂರ್ಣ ಫೇರ್ಡ್ ಮಾದರಿಯಾಗಿದ್ದರೆ, ಎಕ್ಸ್‌ಪಲ್ಸ್ 200ಟಿ ಟೂರರ್ ಮಾದರಿಯಾಗಿದೆ. ಈ ಎರಡು ಬೈಕುಗಳು ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಎಲ್ಇಡಿ ಹೆಡ್ ಲ್ಯಾಂಪ್, ಎಲ್ಇಡಿ ಟೈಲ್ ಲೈಟ್, ಡಿಆರ್‍‍ಎಲ್, ಸ್ಟೈಲಿಶ್ ಅಲಾಯ್ ವ್ಹೀಲ್ ಮತ್ತು ಇತರ ಫೀಚರುಗಳನ್ನು ಒಳಗೊಡಿವೆ.

MOST READ: ಬಿಡುಗಡೆಯಾಯ್ತು ಹೊಸ ಕವಾಸಕಿ ವಲ್ಕನ್ ಎಸ್ ಬೈಕ್

ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಹೊಸ ಹೀರೋ ಎಕ್ಸ್‌ಟ್ರಿಮ್ 200ಎಸ್ ಬೈಕ್

ಹೂಸ ಹೀರೋ ಎಕ್ಸ್‌ಪಲ್ಸ್ 200ಟಿ ತನ್ನ ಹೆಚ್ಚು ಆಫ್-ರೋಡ್-ಆಧಾರಿತ ಎಕ್ಸ್‌ಪಲ್ಸ್ 200 ಬೈಕಿನಿಂದ ಸಾಕಷ್ಟು ಅಂಶಗಳನ್ನು ಎರವಲು ಪಡೆಯುತ್ತದೆ. ಈಗಾಗಲೇ ತನ್ನ ಆಫ್-ರೋಡ್ ಎಕ್ಸ್‌ಪಲ್ಸ್ 200 ಬೈಕನ್ನು ಬಿಎಸ್-6 ಮಾಲಿನ್ಯ ನಿಯಮಕ್ಕೆ ಅನುಗುಣವಾಗಿ ನವೀಕರಿಸಿ ಬಿಡುಗಡೆಗೊಳಿಸಿದೆ.

ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಹೊಸ ಹೀರೋ ಎಕ್ಸ್‌ಟ್ರಿಮ್ 200ಎಸ್ ಬೈಕ್

ಹೊಸ ಎರಡು ಬೈಕುಗಳು ಹೀರೋ ಮೊಟೊಕಾರ್ಪ್‌ನ ‘ಎಕ್ಸ್' ಸರಣೆಯ ಭಾಗಿವಾಗಿದ್ದು, ಇದರ ಸರಣಿಯಲ್ಲಿ ಒಟ್ಟು ಐದು ಮಾದರಿಗಳನ್ನು ಹೊಂದಿದೆ. ಇದರಲ್ಲಿ ಎಕ್ಸ್‌ಪಲ್ಸ್ 200, ಎಕ್ಸ್‌ಪಲ್ಸ್ 200ಟಿ, ಎಕ್ಸ್‌ಟ್ರಿಮ್ 200ಆರ್, ಎಕ್ಸ್‌ಟ್ರಿಮ್ 200ಎಸ್ ಮತ್ತು ಇತ್ತೀಚೆಗೆ ಬಿಡುಗಡೆಗೊಳಿಸಿದ ಎಕ್ಸ್‌ಟ್ರಿಮ್ 160ಆರ್ ಬೈಕ್ ಒಳಗೊಂಡಿದೆ.

MOST READ: ಹೊಸ ಬಣ್ಣದ ಆಯ್ಕೆಯನ್ನು ಪಡೆದುಕೊಂಡ 2021ರ ಕವಾಸಕಿ ನಿಂಜಾ 1000 ಎಸ್‌ಎಕ್ಸ್ ಬೈಕ್

ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಹೊಸ ಹೀರೋ ಎಕ್ಸ್‌ಟ್ರಿಮ್ 200ಎಸ್ ಬೈಕ್

ಇದರಲ್ಲಿ ಎಕ್ಸ್‌ಟ್ರಿಮ್ 160ಆರ್ ಮತ್ತು ಎಕ್ಸ್‌ಪಲ್ಸ್ 200 ಬೈಕುಗಳನ್ನು ಈಗಾಗಲೇ ಬಿಎಸ್-6 ಮಾಲಿನ್ಯ ನಿಯಮಕ್ಕೆ ಅನುಗುಣವಾಗಿ ನವೀಕರಿಸಿ ಬಿಡುಗಡೆಗೊಳಿಸಿದೆ. ಇನ್ನು ಎಕ್ಸ್‌ಟ್ರಿಮ್ 200ಎಸ್ ಮತ್ತು ಎಕ್ಸ್‌ಪಲ್ಸ್ 200ಟಿ ಬೈಕುಗಳನ್ನು ಶೀಘ್ರದಲ್ಲೇ ಬಿಡುಗಡೆಗೊಳಿಸಲಿದೆ.

ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಹೊಸ ಹೀರೋ ಎಕ್ಸ್‌ಟ್ರಿಮ್ 200ಎಸ್ ಬೈಕ್

ಹೊಸ ಹೀರೋ ಎಕ್ಸ್‌ಟ್ರಿಮ್ 200ಎಸ್ ಮತ್ತು ಎಕ್ಸ್‌ಪಲ್ಸ್ 200ಟಿ ಮಾದರಿಗಳು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾದ ಬಳಿಕ ಟಿವಿಎಸ್ ಅಪಾಚೆ ಆರ್‌ಟಿಆರ್ 200 4ವಿ, ಬಜಾಜ್ ಪಲ್ಸರ್ ಎನ್ಎಸ್ 200 ಮತ್ತು ಬಜಾಜ್ ಪಲ್ಸರ್ ಆರ್ಎಸ್ 200 ಬೈಕುಗಳಿಗೆ ಪೈಪೋಟಿಯನ್ನು ನೀಡುತ್ತದೆ. ಈ ಎರಡು ಬೈಕುಗಳು ಶೀಘ್ರದಲ್ಲೇ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಲಿದೆ.

Article Published On: Thursday, October 29, 2020, 15:53 [IST]
English summary
Hero Xtreme 200S BS6 Launch Soon. Read In Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+