Just In
Don't Miss!
- Movies
ದುಬಾರಿ ಮೊತ್ತಕ್ಕೆ ತನ್ನ ಮನೆ ಮಾರಿದ ಕರಿಶ್ಮಾ ಕಪೂರ್
- News
ಫೆ.6ರಂದು ಮಡಿಕೇರಿಗೆ ಭೇಟಿ ನೀಡಲಿರುವ ರಾಷ್ಟ್ರಪತಿ ರಾಮನಾಥ್ ಕೋವಿಂದ್
- Sports
ಆಸ್ಟ್ರೇಲಿಯಾ ವಿರುದ್ಧ ಆಡ್ತಿರೋದು ಅತೀ ದುರ್ಬಲ ಭಾರತ ತಂಡ ಅನ್ನೋದು ಗೊತ್ತಾ!?
- Finance
ಒಂದೇ ಬಾರಿಗೆ ಲಕ್ಷಾಂತರ ಜನರಿಂದ ಬಳಕೆ: ತಾಂತ್ರಿಕ ತೊಂದರೆ ಎದುರಿಸಿದ 'ಸಿಗ್ನಲ್'
- Lifestyle
ನಿಮ್ಮ ಮಕ್ಕಳ ಕೋಣೆಯನ್ನು ವಾಸ್ತು ಪ್ರಕಾರ ಈ ರೀತಿ ರೆಡಿ ಮಾಡಿ
- Education
NIA Recruitment 2021: 15 ಡೆಪ್ಯುರಿಟಿ ಸೂಪರಿಂಟೆಂಡೆಂಟ್ ಆಫ್ ಪೊಲೀಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ದುಬಾರಿಯಾಯ್ತು ಜನಪ್ರಿಯ ಬಿಎಸ್-6 ಹೋಂಡಾ ಆಕ್ಟಿವಾ 6ಜಿ ಸ್ಕೂಟರ್
ಹೋಂಡಾ ಮೋಟಾರ್ಸೈಕಲ್ ಕಂಪನಿಯು ತನ್ನ ಬಿಎಸ್-6 ಆಕ್ಟಿವಾ 6ಜಿ ಸ್ಕೂಟರ್ ಬೆಲೆಯನ್ನು ಎರಡನೇ ಬಾರಿ ಹೆಚ್ಚಿಸಿದೆ. ಹೋಂಡಾ ಮೋಟಾರ್ಸೈಕಲ್ ಸರಣಿಯಲ್ಲಿ ಅತಿ ಹೆಚ್ಚು ಮಾರಾಟವಾಗುವ ಸ್ಕೂಟರ್ ಪಟ್ಟಿಯಲ್ಲಿ ಬಿಎಸ್-6 ಆಕ್ಟಿವಾ 6ಜಿ ಕೂಡ ಒಂದಾಗಿದೆ.

ಹೊಂಡಾ ಮೋಟಾರ್ಸೈಕಲ್ ಕಂಪನಿಯು ಬಿಎಸ್-6 ಆಕ್ಟಿವಾ 6ಜಿ ಸ್ಕೂಟರಿನ ಬೆಲೆಯನ್ನು 2020ರ ಏಪ್ರಿಲ್ ತಿಂಗಳಲ್ಲಿ ಮೊದಲ ಬಾರಿಗೆ ರೂ.552 ರಷ್ಟು ಬೆಲೆಯನ್ನು ಹೆಚ್ಚಿಸಿದ್ದರು. ಇದೀಗ ಎರಡನೇ ಬಾರಿ ಬಿಎಸ್-6 ಆಕ್ಟಿವಾ 6ಜಿ ಸ್ಕೂಟರಿನ ಬೆಲೆಯನ್ನು ರೂ,955 ಗಳವರೆಗೆ ಹೆಚ್ಚಿಸಲಾಗಿದೆ. ಇದೀಗ ಈ ಬಿಎಸ್-6 ಆಕ್ಟಿವಾ 6ಜಿ ಸ್ಕೂಟರ್ ಸ್ಟ್ಯಾಂಡರ್ಡ್ ರೂಪಾಂತರದ ಬೆಲೆಯು ರೂ.65,419 ಗಳಾದರೆ, ಡಿಲಕ್ಸ್ ರೂಪಾಂತರದ ಬೆಲೆಯು ರೂ.66,919 ಗಳಾಗಿದೆ. ಈ ಬೆಲೆಗಳು ದೆಹಲಿ ಎಕ್ಸ್ ಶೋರೂಂ ಪ್ರಕಾರವಾಗಿದೆ.

ಹೋಂಡಾ ಕಂಪನಿಯು ಬಿಎಸ್-6 ಆಕ್ಟಿವಾ 6ಜಿ ಸ್ಕೂಟರನ್ನು ಈ ವರ್ಷದ ಆರಂಭದಲ್ಲಿ ಬಿಡುಗಡೆಗೊಳಿಸಿದ್ದರು. ಈ ಬಿಎಸ್-6 ಆಕ್ಟಿವಾ 6ಜಿ ಸ್ಕೂಟರನ್ನು ಹೊಸ ಫೀಚರ್ ಗಳು ಮತ್ತು ಉತ್ತಮ ಗ್ರೌಂಡ್ ಕ್ಲಿಯರೆನ್ಸ್ ಮತ್ತು ಉದ್ದವಾದ ವೀಲ್ಬೇಸ್ನೊಂದಿಗೆ ಬಿಡುಗಡೆಗೊಳಿಸಿದ್ದರು.
MOST READ: ಬಿಡುಗಡೆಯಾಯ್ತು ಹೊಸ ಟಿವಿಎಸ್ ಜೆಸ್ಟ್ 110 ಸ್ಕೂಟರ್

2020ರ ಹೋಂಡಾ ಆಕ್ಟಿವಾ 6ಜಿ ಡಿಲಕ್ಸ್ ರೂಪಾಂತರದಲ್ಲಿ ಎಸಿಜಿ ಸ್ಟಾರ್ಟರ್ ಮತ್ತು ಎಲ್ಇಡಿ ಹೆಡ್ಲ್ಯಾಂಪ್ಗಳನ್ನು ಹೊಂದಿದೆ. ಇನ್ನು ಎಂಜಿನ್ ಸ್ಟಾರ್ಟ್/ಸ್ಟಾಪ್ ಬಟನ್ ಮತ್ತು ಫ್ಯುಯಲ್ ಫಿಲ್ಲರ್ ಕ್ಯಾಪ್ ಅನ್ನು ಹೊಂದಿದೆ.

ಇನ್ನು ಈ ಬಿಎಸ್-6 ಹೋಂಡಾ ಆಕ್ಟಿವಾ 6ಜಿ ಸ್ಕೂಟರ್ ನಲ್ಲಿ ಸಸ್ಪೆಂಕ್ಷನ್ ಗಾಗಿ ಮುಂಭಾಗದಲ್ಲಿ ಟೆಲಿಸ್ಕೋಪಿಕ್ ಫೋರ್ಕ್ಸ್ ಮತ್ತು ಹಿಂಭಾಗದಲ್ಲಿ ಮೂರು ಹಂತದ ಸಸ್ಪೆಂಕ್ಷನ್ ಸೆಟಪ್ ಅನ್ನು ಹೊಂದಿದೆ. ಇನ್ನು ಅಂಡರ್-ಸೀಟ್ 18-ಲೀಟರ್ ಸಾಮಥ್ಯವನ್ನು ಹೊಂದಿದೆ.
MOST READ: ಬಿಡುಗಡೆಯಾಯ್ತು ಬಹುನಿರೀಕ್ಷಿತ ಹೊಸ ಹೋಂಡಾ ಎಕ್ಸ್-ಬ್ಲೇಡ್ ಬೈಕ್

ಬಿಎಸ್-6 ಹೋಂಡಾ ಆಕ್ಟಿವಾ 6ಜಿ ಸ್ಕೂಟರಿನಲ್ಲಿ 109 ಸಿಸಿ ಸಿಂಗಲ್-ಸಿಲಿಂಡರ್, ಏರ್-ಕೂಲ್ಡ್ ಎಂಜಿನ್ ಅನ್ನು ಹೊಂದಿದೆ. ಈ ಎಂಜಿನ್ 7.79 ಬಿಹೆಚ್ಪಿ ಪವರ್ ಮತ್ತು 8.79 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ.

ಸ್ಕೂಟರ್ ಕಂಪನಿಯ ಪಿಜಿಎಂ-ಫೈ ತಂತ್ರಜ್ಞಾನವನ್ನು ಸಹ ಹೊಂದಿದೆ. ಇದರಿಂದಾಗಿ ಈ ಬಿಎಸ್-6 ಹೋಂಡಾ ಆಕ್ಟಿವಾ 6ಜಿ ಸ್ಕೂಟರಿಗೆ ಉತ್ತಮ ಕಾರ್ಯಕ್ಷಮತೆ ಮತ್ತು ಹೆಚ್ಚಿನ ಮೈಲೇಜ್ ಅನ್ನು ನೀಡುತ್ತದೆ.
MOST READ: ಬಿಡುಗಡೆಯ ಸನಿಹದಲ್ಲಿ ಬಹುನಿರೀಕ್ಷಿತ ಬಿಎಸ್-6 ಹೀರೋ ಬೈಕುಗಳು

ಬಿಎಸ್-6 ಹೋಂಡಾ ಆಕ್ಟಿವಾ 6ಜಿ ಸ್ಕೂಟರ್ ಬ್ಲ್ಯಾಕ್, ಡ್ಯಾಝಲ್ ಯೆಲ್ಲೊ, ಗ್ಲಿಟರ್ ಬ್ಲೂ ಮೆಟಾಲಿಕ್, ಮ್ಯಾಟ್ ಆಕ್ಸಿಸ್ ಗ್ರೇ ಮೆಟಾಲಿಕ್, ಪರ್ಲ್ ಪ್ರೆಷಿಯಸ್ ವೈಟ್ ಮತ್ತು ಪರ್ಲ್ ಸ್ಪಾರ್ಟನ್ ರೆಡ್ ಎಂಬ ಆರು ಬಣ್ಣಗಳ ಆಯ್ಕೆಗಳಲ್ಲಿ ಲಭ್ಯವಿದೆ.

ಬಿಎಸ್-6 ಹೋಂಡಾ ಆಕ್ಟಿವಾ 6ಜಿ ಸ್ಕೂಟರ್ ಭಾರತೀಯ ಮಾರುಕಟ್ಟೆಯಲ್ಲಿ ಉತ್ತಮವಾಗಿ ಮಾರಾಟವಾಗುತ್ತಿದೆ. ಕರೋನಾ ಸೋಂಕಿನ ಭೀತಿಯ ನಡುವೆಯು ಈ ಸ್ಕೂಟರ್ ದಾಖಲೆಯ ಮಟ್ಟದಲ್ಲಿ ಮಾರಾಟವಾಗುತ್ತಿದೆ. ಬಿಎಸ್-6 ಹೋಂಡಾ ಆಕ್ಟಿವಾ 6ಜಿ ಬೆಲೆ ಹೆಚ್ಚಿಸಿರುವುದು ಮಾರಾಟದ ಮೇಲೆ ಪಾರಿಣಾಮ ಬೀರುವುದಿಲ್ಲವೆಂದು ನಿರೀಕ್ಷಿಸುತ್ತೇವೆ.