ಬಿಡುಗಡೆಗೆ ಸಜ್ಜಾದ ಬಿಎಸ್-6 ಹೋಂಡಾ ಸಿಬಿ ಹಾರ್ನೆಟ್ 160ಆರ್ ಬೈಕ್
ಜಪಾನಿನ ದ್ವಿಚಕ್ರ ವಾಹನ ತಯಾರಕ ಕಂಪನಿಯಾದ ಹೋಂಡಾ ತನ್ನ ಬಿಎಸ್-6 ಸಿಬಿ ಹಾರ್ನೆಟ್ 160ಆರ್ ಬೈಕನ್ನು ಭಾರತದಲ್ಲಿ ಬಿಡುಗಡೆಗೊಳಿಸಲು ಸಜ್ಜಾಗಿದೆ. ಹೊಸ ಹೋಂಡಾ ಸಿಬಿ ಹಾರ್ನೆಟ್ 160ಆರ್ ಬೈಕ್ ಭಾರತೀಯ ಮಾರುಕಟ್ಟೆಯಲ್ಲಿ ಮುಂದಿನ ತಿಂಗಳು ಬಿಡುಗಡೆಯಾಗಲಿದೆ.

ಈ ವರ್ಷದ ಏಪ್ರಿಲ್ ತಿಂಗಳಲ್ಲಿ ಬಿಎಸ್-4 ಹೋಂಡಾ ಸಿಬಿ ಹಾರ್ನೆಟ್ 160ಆರ್ ಬೈಕಿನ ಹೆಸರನ್ನು ವೆಬ್‌ಸೈಟ್‌ನಿಂದ ತೆಗೆದುಹಾಕಲಾಗಿತ್ತು. ಈ ಹೋಂಡಾ ಸಿಬಿ ಹಾರ್ನೆಟ್ 160ಆರ್ ಬೈಕನ್ನು ಸ್ಥಗಿತಗೊಳಿಸಿದ ಬಳಿಕ ಇದೀಗ ಬಿಎಸ್ 6 ಆವೃತ್ತಿಯಲ್ಲಿ ಮತ್ತೊಮ್ಮೆ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲು ಸಜ್ಜಾಗಿದೆ. ಕರೋನಾ ಪರಿಣಾಮದಿಂದಾಗಿ ದೇಶಾದ್ಯಂತ ಲಾಕ್ ಡೌನ್ ಇದ್ದ ಕಾರಣ ಬಿಎಸ್ 6 ಹೋಂಡಾ ಸಿಬಿ ಹಾರ್ನೆಟ್ 160ಆರ್ ಬೈಕ್ ಬಿಡುಗಡೆಯಾಗಲು ವಿಳಂಬವಾಗಿದೆ.

ಹೊಸ ಹೋಂಡಾ ಸಿಬಿ ಹಾರ್ನೆಟ್ 160ಆರ್ ಬೈಕಿನಲ್ಲಿ ಎಲ್‌ಇಡಿ ಹೆಡ್‌ಲ್ಯಾಂಪ್, ಹಝಾರ್ಡ್ ಲ್ಯಾಂಪ್ ಫಂಕ್ಷನ್, ಬ್ಲೂನ್ ಬ್ಯಾಕ್‌ಲೈಟ್, ಹೊಸ ಗ್ರಾಫಿಕ್ಸ್ ಮತ್ತು ಬಣ್ಣಗಳೊಂದಿಗೆ ರಿಫ್ರೆಶ್ಡ್ ಡಿಜಿಟಲ್ ಇನ್ಸ್ ಟ್ರೂಮೆಂಟ್ ನೊಂದಿಗೆ ಹಲವಾರು ಇನ್ನಿತರ ಫೀಚರುಗಳನ್ನು ಹೊಂದಿದೆ.
MOST READ: ಭಾರತಕ್ಕೆ ಲಗ್ಗೆ ಇಡಲಿದೆ ಜನಪ್ರಿಯ ಟ್ರಯಂಫ್ ಸ್ಟ್ರೀಟ್ ಟ್ರಿಪಲ್ ಆರ್ ಬೈಕ್

ಹೋಂಡಾ ಸಿಬಿ ಹಾರ್ನೆಟ್ 160ಆರ್ ಬೈಕನ್ನು 2018ರಲ್ಲಿ ನವೀಕರಿಸಲಾಗಿತ್ತು. ಹೋಂಡಾ ಸಿಂಗಲ್-ಚಾನೆಲ್ ಎಬಿಎಸ್ ಅನ್ನು ಸಹ ಹೊಂದಿದೆ. ಹಿಂದಿನ ಬಿಎಸ್-4 ಸಿಬಿ ಹಾರ್ನೆಟ್ 160ಆರ್ ಬೈಕಿನಲ್ಲಿ 162.71 ಸಿಸಿ ಸಿಂಗಲ್ ಸಿಲಿಂಡರ್ ಎಂಜಿನ್ ಅನ್ನು ಅಳವಡಿಸಲಾಗಿದೆ.

ಈ ಎಂಜಿನ್ 15 ಬಿಹೆಚ್‍ಪಿ ಪವರ್ ಮತ್ತು 14.5 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಬಿಎಸ್-6 ಹಾರ್ನೆಟ್ 160 ಆರ್ ಬೈಕಿನಲ್ಲಿ ಹೂಸ ಹೋಂಡಾ ಯೂನಿಕಾರ್ನ್ ಬೈಕಿನಲ್ಲಿರುವ 162.7 ಸಿಸಿ ಸಿಂಗಲ್-ಸಿಲಿಂಡರ್ ಎಂಜಿನ್ ಅನ್ನು ಅಳವಡಿಸಬಹುದು.
MOST READ: ಬಹಿರಂಗವಾಯ್ತು ಬಿಎಸ್-6 ಹೀರೋ ಎಕ್ಸ್‌ಪಲ್ಸ್ 200 ಬೈಕಿನ ಮಾಹಿತಿ

ಈ ಎಂಜಿನ್ 12.9 ಬಿಹೆಚ್ ಪವರ್ ಮತ್ತು 14.6 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಹೊಸ ಹಾರ್ನೆಟ್ 160 ಆರ್ ಬೈಕ್ ಕೂಡ ಇದೇ ಅಂಕಿ ಅಂಶದಲ್ಲಿ ಬಿಹೆಚ್‍ಪ್ ಪವರ್ ಮತ್ತು ಟಾರ್ಕ್ ಅನ್ನು ಉತ್ಪಾದಿಸುತ್ತದೆ ಎಂದು ನಿರೀಕ್ಷಿಸುತ್ತೇವೆ.

ಇದರೊಂದಿಗೆ ಹೋಂಡಾ ಕಂಪನಿಯು ದೇಶಿಯ ಮಾರುಕಟ್ಟೆಯಲ್ಲಿ ಬಿಎಸ್-6 ಲಿವೊ ಬೈಕನ್ನು ಬಿಡುಗಡೆಗೊಳಿಸಲು ಸಜ್ಜಾಗುತ್ತಿದೆ. ಹೊಂಡಾ ಕಂಪನಿಯು ಬಿಎಸ್-6 ಲಿವೊ ಬೈಕಿನ ಟೀಸರ್ ಅನ್ನು ಇತ್ತೀಚೆಗೆ ಬಿಡುಗಡೆಗೊಳಿಸಿತ್ತು.
MOST READ: ಬಿಎಸ್-6 ಎಂಜಿನ್‍ನಲ್ಲಿ ಬಿಡುಗಡೆಯಾಯ್ತು ಜನಪ್ರಿಯ ಟೆವಿಎಸ್ ಸ್ಪೋರ್ಟ್ ಬೈಕ್

ಈ ಬಿಎಸ್-6 ಹೋಂಡಾ ಲಿವೊ ಬೈಕ್ ಮುಂದಿನ ತಿಂಗಳು ಭಾರತದಲ್ಲಿ ಬಿಡುಗಡೆಗೊಳಿಸಲಿದೆ. ಬಿಎಸ್-6 ಹೋಂಡಾ ಲಿವೊ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾದ ಬಳಿಕ ಟಿವಿಎಸ್ ಸ್ಟಾರ್ ಸಿಟಿ ಪ್ಲಸ್ ಮತ್ತು ಹೀರೋ ಪ್ಯಾಷನ್ ಪ್ರೊ ಬೈಕುಗಳಿಗೆ ಪೈಪೋಟಿ ನೀಡುತ್ತದೆ.

ಇನ್ನು ಬಿಎಸ್-6 ಹಾರ್ನೆಟ್ 160 ಆರ್ ಬೈಕಿನಲ್ಲಿ ಸಸ್ಪೆಂಕ್ಷನ್ ಗಾಗಿ ಮುಂಭಾಗದಲ್ಲಿ ಟೆಲಿಸ್ಕೋಪಿಕ್ ಫೋರ್ಕ್ಸ್ ಮತ್ತು ಹಿಂಭಾಗದಲ್ಲಿ ಮೊನೊಶಾಕ್ ಅನ್ನು ಅಳವಡಿಸಲಾಗಿದೆ. ಇನ್ನು ಈ ಬೈಕಿನಲ್ಲಿ ಸಿಂಗಲ್-ಚಾನೆಲ್ ಎಬಿಎಸ್‌ನೊಂದಿಗೆ ಬ್ರೇಕಿಂಗ್ ಸಿಸ್ಟಂ ಅನ್ನು ಹೊಂದಿದೆ.


Click it and Unblock the Notifications