ಬಿಡುಗಡೆಯಾಯ್ತು ಜನಪ್ರಿಯ ಬಿಎಸ್-6 ಹೋಂಡಾ ಗ್ರಾಜಿಯಾ 125 ಸ್ಕೂಟರ್
ಹೋಂಡಾ ಕಂಪನಿಯು ತನ್ನ ಬಿಎಸ್-6 ಗ್ರಾಜಿಯಾ 125 ಸ್ಕೂಟರ್ ಅನ್ನು ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಿದೆ. ಈ ಹೊಸ ಹೋಂಡಾ ಗ್ರಾಜಿಯಾ 125 ಸ್ಕೂಟರ್ ಬೆಲೆ ಭಾರತದ ಎಕ್ಸ್ ಶೋರೂಂ ಪ್ರಕಾರ ರೂ.73,336 ಗಳಾಗಿದೆ.

ಈ ಹೊಸ ಹೋಂಡಾ ಗ್ರಾಜಿಯಾ 125 ಸ್ಕೂಟರ್‌ಗೆ ವಿಶೇಷ ವಾರಂಟಿ ಪ್ಯಾಕೇಜ್ ಗಳನ್ನು ನೀಡಿದೆ. 2020ರ ಹೋಂಡಾ ಗ್ರಾಜಿಯಾ ಸ್ಕೂಟರ್ ಬಗ್ಗೆ ಹೋಂಡಾ ಮೋಟಾರ್‌ಸೈಕಲ್ ಮತ್ತು ಸ್ಕೂಟರ್ ಇಂಡಿಯಾದ ಡೈರಕ್ಟರ್ ಯದ್ವಿಂದರ್ ಸಿಂಗ್ ಗುಲೇರಿಯಾ ಮಾತನಾಡಿ, ಹೊಸ ಸ್ಕೂಟರ್ ಯುವ ಸವಾರರನ್ನು ಬೆರಗುಗೊಳಿಸುವ ತಯಾರಿಸಿದ್ದೇವೆ. ಈ ಸ್ಕೂಟರ್‌ನಲ್ಲಿ ಉತ್ತಮ ಇಎಸ್‌ಪಿ ತಂತ್ರಜ್ಞಾನವನ್ನು ಹೊಂದಿದೆ ಎಂದು ಹೇಳಿದರು.

ಈ ಹೊಸ ಹೋಂಡಾ ಗ್ರಾಜಿಯಾ 125 ಸ್ಕೂಟರ್ ಮ್ಯಾಟ್ ಸೈಬರ್ ಯೆಲ್ಲೊ, ಪರ್ಲ್ ಸ್ಪಾರ್ಟನ್ ರೆಡ್, ಪರ್ಲ್ ಸೈರನ್ ಬ್ಲೂ ಮತ್ತು ಮ್ಯಾಟ್ ಆಕ್ಸಿಸ್ ಗ್ರೇ ಎಂಬ ನಾಲ್ಕು ಬಣ್ಣಗಳ ಆಯ್ಜೆಯಲ್ಲಿ ಲಭ್ಯವಿದೆ. ಹೊಸ ಹೋಂಡಾ ಗ್ರಾಜಿಯಾ 125 ಸ್ಕೂಟರ್ ಬುಕ್ಕಿಂಗ್ ಅನ್ನು ಕೂಡ ಪ್ರಾರಂಭಿಸಲಾಗಿದೆ. ಈ ಸ್ಕೂಟರ್ ವಿತರಣೆಯನ್ನು ಶೀಘ್ರದಲ್ಲೇ ಪ್ರಾರಂಭಿಸಲಿದೆ.
MOST READ: ಚೀನಾ ಬ್ಯಾಟರಿಯಿಂದ ಎಲೆಕ್ಟ್ರಿಕ್ ಸ್ಕೂಟರ್ ಉತ್ಪಾದಿಸಲಿದೆ ಬಜಾಜ್

ಬಿಎಸ್-6 ಗ್ರಾಜಿಯಾ 125 ಸ್ಕೂಟರ್‌ನಲ್ಲಿ 125 ಸಿಸಿ ಎಚ್‌ಇಟಿ (ಹೋಂಡಾ ಇಕೋ ಟೆಕ್ನಾಲಜಿ) ಬಿಎಸ್‌ವಿಐ ಪಿಜಿಎಂ-ಎಫ್‌ಐ ಎಂಜಿನ್ ಅನ್ನು ಹೊಂದಿದೆ. ಇದರಲ್ಲಿ ಪೇಟೆಂಟ್ ಪಡೆದ ಎಸಿಜಿ ಸ್ಟಾರ್ಟರ್ ಮೋಟರ್ ಇದೆ. ಇದು ಪ್ರತಿ ಬಾರಿಯೂ ತ್ವರಿತ, ಮತ್ತು ಜೋಲ್ಟ್-ಫ್ರೀ ಸ್ಟಾರ್ಟ್ ಆಗುತ್ತದೆ ಎಂದು ಹೇಳಲಾಗಿದೆ.

ಬಿಎಸ್ 6 ಹೋಂಡಾ ಗ್ರಾಜಿಯಾ 125 ಸ್ಕೂಟರ್‌ನಲ್ಲಿ ಪಾಸ್-ಸ್ವಿಚ್, ಹೊಸ ಎಂಜಿನ್ ಸ್ಟಾರ್ಟ್/ ಸ್ಟಾಪ್ ಸ್ವಿಚ್, ಸೀಟ್‌ಗಾಗಿ ಮಲ್ಟಿ-ಫಂಕ್ಷನಲ್ ಸ್ವಿಚ್ ಮತ್ತು ಫ್ಯೂಯಲ್ ಲಿಡ್ ಅನ್ನು ಹೊಂದಿದೆ.
MOST READ: ಭಾರತಕ್ಕೆ ಲಗ್ಗೆ ಇಡಲಿದೆ ಜನಪ್ರಿಯ ಟ್ರಯಂಫ್ ಸ್ಟ್ರೀಟ್ ಟ್ರಿಪಲ್ ಆರ್ ಬೈಕ್

ಬಿಎಸ್ 6 ಹೋಂಡಾ ಗ್ರಾಜಿಯಾ 125 ಸ್ಕೂಟರ್‌ನಲ್ಲಿ 124 ಸಿಸಿ ಸಿಂಗಲ್ ಸಿಲಿಂಡರ್ ಏರ್-ಕೂಲ್ಡ್ ಎಂಜಿನ್ ಅನ್ನು ಅಳವಡಿಸಲಾಗಿದೆ. ಈ ಎಂಜಿನ್ 6000 ಆರ್‍ಪಿಎಂನಲ್ಲಿ 8 ಬಿಹೆಚ್‍ಪಿ ಪವರ್ ಮತ್ತು 5000 ಆರ್‍ಪಿಎಂನಲ್ಲಿ 10.3 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಎಂಜಿನ್ ಅನ್ನು ವಿ-ಟೈಪ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್‌ಗೆ ಜೋಡಿಸಲಾಗಿದೆ.

ಬಿಎಸ್ 6 ಹೋಂಡಾ ಗ್ರಾಜಿಯಾ 125 ಸ್ಕೂಟರ್‌ನಲ್ಲಿ ಸಸ್ಪೆಂಕ್ಷನ್ ಗಾಗಿ ಟೆಲಿಸ್ಕೋಪಿಕ್ ಫ್ರಂಟ್ ಫೋರ್ಕ್ಸ್ ಮತ್ತು ಹಿಂಭಾಗದಲ್ಲಿ ಮೂರು-ರೀತಿಯಲ್ಲಿ ಹೊಂದಾಣಿಕೆ ಮಾಡಬಹುದಾದ ಸ್ಪ್ರಿಂಗ್-ಲೋಡೆಡ್ ಸಸ್ಪೆಂಕ್ಷನ್ ಸೆಟಪ್ ಅನ್ನು ಅಳವಡಿಸಿದ್ದಾರೆ.
MOST READ: ಬಹಿರಂಗವಾಯ್ತು ಬಿಎಸ್-6 ಹೀರೋ ಎಕ್ಸ್‌ಪಲ್ಸ್ 200 ಬೈಕಿನ ಮಾಹಿತಿ

ಇನ್ನು ಈ ಸ್ಕೂಟರ್‌ನಲ್ಲಿ ಬ್ರೇಕಿಂಗ್ ಗಾಗಿ ಮುಂಭಾಗದಲ್ಲಿ 190 ಎಂಎಂ ಡ್ರಮ್ ಬ್ರೇಕ್ ಮತ್ತು ಹಿಂಭಾಗದಲ್ಲಿ 130 ಎಂಎಂ ಡ್ರಮ್ ಬ್ರೇಕ್ ಅನ್ನು ಅಳವಡಿಸಲಾಗಿದೆ.ಹೋಂಡಾ ಗ್ರಾಜಿಯಾ 125 ಸ್ಕೂಟರ್ ಬ್ರ್ಯಾಂಡ್‌ನ ಪ್ರೀಮಿಯಂ 125 ಸಿಸಿ ವಿಭಾಗದಲ್ಲಿ ಜನಪ್ರಿಯ ಸ್ಕೂಟರ್ ಆಗಿದೆ.

ಈ ಹೊಸ ಹೋಂಡಾ ಗ್ರಾಜಿಯಾ 125 ಸ್ಕೂಟರ್ ಭಾರತೀಯ ಮಾರುಕಟ್ಟೆಯಲ್ಲಿ ಯಮಹಾ ಫ್ಯಾಸಿನೊ 125, ಟಿವಿಎಸ್ ಎನ್‍ಟಾರ್ಕ್ 125 ಮತ್ತು ಸುಜುಕಿ ಬರ್ಗ್‌ಮ್ಯಾನ್ ಸ್ಟ್ರೀಟ್ 125 ಸ್ಕೂಟರ್ ಗಳಿಗೆ ಪೈಪೋಟಿ ನೀಡುತ್ತದೆ.


Click it and Unblock the Notifications








