Just In
- 10 hrs ago Honda: ಬಡವರ ಕನಸು ನನಸು.. ಕಡಿಮೆ ಬೆಲೆಗೆ ಸಿಗುತ್ತವೆ ಈ ಬೈಕ್ಗಳು
- 11 hrs ago ಬಹುಕೋಟಿ ಬೆಲೆಯ ಕಾರುಗಳಿದ್ದರೂ ಸಾಮಾನ್ಯ ಮಾರುತಿ ಕಾರಿನಲ್ಲಿ ಓಡಾಡಿದ ರೋಹಿತ್ ಶರ್ಮಾ: ಕಾರಣವೇನು?
- 12 hrs ago HSRP ನಂಬರ್ ಪ್ಲೇಟ್ನಲ್ಲಿ ನಡೆಯುತ್ತಿದೆ ಭಾರೀ ಮೋಸ: ಬುಕ್ ಮಾಡದವರು ಇದನ್ನು ಗಮನಿಸಿ!
- 12 hrs ago Nissan Magnite: ಕಾಮಧೇನುವಾದ ನಿಸ್ಸಾನ್ ಮ್ಯಾಗ್ನೈಟ್.. 6 ಲಕ್ಷ ಬೆಲೆ, 20 ಕಿ.ಮೀ ಮೈಲೇಜ್
Don't Miss!
- News Karnataka LS Election 2024 LIVE: ಇಂದು ದೇಶದಲ್ಲಿ ಎರಡನೇ ಹಂತದ, ರಾಜ್ಯದಲ್ಲಿ ಮೊದಲ ಹಂತದ ಮತದಾನ
- Movies Shobha Shetty ; ನಿಶ್ಚಿತಾರ್ಥದ ಬಗ್ಗೆ ಮಾಹಿತಿ ನೀಡಿದ ನಟಿ ಶೋಭಾ ಶೆಟ್ಟಿ
- Sports IPL 2024 :ಬಲಿಷ್ಠ ಹೈದರಾಬಾದ್ ಬಗ್ಗು ಬಡಿದ ಆರ್ಸಿಬಿ: ಕಮಿನ್ಸ್ ಪಡೆಗೆ ಹೀನಾಯ ಸೋಲು
- Lifestyle ಪುಟ್ಟ ಕಂದಮ್ಮಗಳ ಮುಖದಲ್ಲಿ ನಗು ತರಿಸಲು ಟೀಚರ್ ಮಾಡಿದ ಕೆಲಸ ನೋಡಿ, ಮಕ್ಕಳ ಪಾಲಿನ ದೇವತೆ ಇವರು
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಬಿಎಸ್-6 ಜಾವಾ ಮತ್ತು ಜಾವಾ 42 ಬೈಕುಗಳ ಮಾಹಿತಿ ಬಹಿರಂಗ
ಜಾವಾ ಮೋಟಾರ್ಸೈಕಲ್ ಸಂಸ್ಥೆಯು ತನ್ನ ಬಿಎಸ್-6 ಜಾವಾ ಮತ್ತು ಜಾವಾ 42 ಬೈಕುಗಳ ಮಾಹಿತಿಗಳನ್ನು ಬಹಿರಂಗವಾಗಿದೆ. ಈ ಹೊಸ ಬೈಕುಗಳನ್ನು ಹಿಂದಿನ ಮಾದರಿಗೆ ಹೋಲಿಸಿದರೆ ಪವರ್ ಮತ್ತು ಟಾರ್ಕ್ ಅಂಕಿ ಅಂಶಗಳು ಕಡಿಮೆಯಾಗಿದೆ.
ಕಂಪನಿಯು ಈ ವರ್ಷದ ಮಾರ್ಚ್ ತಿಂಗಳಲ್ಲಿ ಈ ಬಿಎಸ್-6 ಜಾವಾ ಮತ್ತು ಜಾವಾ 42 ಬೈಕುಗಳನ್ನು ಬಿಡುಗಡೆಗೊಳಿಸಿದ್ದರು. ಕರೋನಾ ವೈರಸ್ ಪರಿಣಾಮದಿಂದಾಗಿ ದೇಶಾದ್ಯಂತ ಲಾಕ್ಡೌನ್ ಘೋಷಿಸಲ್ಪಟ್ಟಿತು. ಇದರಿಂದಾಗಿ ಈ ಬೈಕುಗಳ ಲಭ್ಯತೆ ಮತ್ತು ವಿತರಣೆಗಳು ಕೂಡ ವಿಳಂಬವಾಗಿದೆ. ಅಲ್ಲದೇ ಭಾರತೀಯ ಮಾರುಕಟ್ಟೆಯಲ್ಲಿ ಜಾವಾ ಬೈಕುಗಳ ಬೇಡಿಕೆಯು ಕಡಿಮೆಯಾಗುತ್ತಿದೆ.
ಈ ಹೊಸ ಎರಡು ಬೈಕುಗಳ ಮಾಹಿತಿಯನ್ನು ಜಾವಾ ಮೋಟಾರ್ಸೈಕಲ್ ಸಂಸ್ಥೆಯು ಬಹಿರಂಗಪಡಿಸಿದೆ. ಈ ಹೊಸ ಎರಡು ಜಾವಾ ಬೈಕುಗಳು 172 ಕೆ,ಜಿ ತೂಕವನ್ನು ಹೊಂದಿದೆ. ಹಿಂದಿನ ಬಿಎಸ್-4 ಮಾದರಿಗೆ ಹೋಲಿಸಿದರೆ 2 ಕೆಜಿ ಅಧಿಕ ತೂಕವಿದೆ.
MOST READ: ಭಾರತಕ್ಕೆ ಲಗ್ಗೆ ಇಡಲಿದೆ ಜನಪ್ರಿಯ ಟ್ರಯಂಫ್ ಸ್ಟ್ರೀಟ್ ಟ್ರಿಪಲ್ ಆರ್ ಬೈಕ್
ಇನ್ನು ಈ ಎರಡು ಬೈಕುಗಳ ಪವರ್ ಮತ್ತು ಟಾರ್ಕ್ ಅಂಕಿ ಅಂಶಗಳು ಕೂಡ ಕಡಿಮೆಯಾಗಿದೆ. ಬಿಎಸ್-6 ಜಾವಾ ಮತ್ತು ಜಾವಾ 42 ಬೈಕುಗಳಲ್ಲಿ ಒಂದೇ ಮಾದರಿಯ 293 ಸಿಸಿ ಸಿಂಗಲ್ ಸಿಲಿಂಡರ್, ಲಿಕ್ವಿಡ್-ಕೂಲ್ಡ್ ಎಂಜಿನ್ ಅನ್ನು ಹೊಂದಿದೆ.
ಈ ಎಂಜಿನ್ 26.2 ಬಿಹೆಚ್ಪಿ ಪವರ್ ಮತ್ತು 27.05 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಇದರ ಹಿಂದಿನ ಬಿಎಸ್-4 ಮಾದರಿಗೆ ಹೋಲಿಸಿದರೆ 0.8 ಬಿಹೆಚ್ಪಿ ಪವರ್ ಮತ್ತು 0.95 ಎನ್ಎಂ ಟಾರ್ಕ್ ಅನ್ನು ಹೆಚ್ಚು ಉತ್ಪಾದಿಸುತ್ತದೆ. ಈ ಎಂಜಿನ್ ನೊಂದಿಗೆ 6-ಸ್ಪೀಡ್ ಗೇರ್ ಬಾಕ್ಸ್ ಅನ್ನು ಜೋಡಿಸಲಾಗಿದೆ.
MOST READ: ಹೊಸ ಬಿಎಂಡಬ್ಲ್ಯೂ ಆರ್ 18 ಕ್ರೂಸರ್ ಬೈಕ್ ಖರೀದಿಗೆ ಬುಕ್ಕಿಂಗ್ ಆರಂಭ
ಈ ಬೈಕಿನಲ್ಲಿ ತೂಕ ಹೆಚ್ಚಳ ಮತ್ತು ಪವರ್, ಟಾರ್ಕ್ ಕಡಿಮೆಗೊಳಿಸಿರುವುದು ಈ ಬೈಕುಗಳ ಮೇಲೆ ಹೆಚ್ಚಿನ ಪರಿಣಾಮ ಬೀರುವುದಿಲ್ಲ. ತೂಕವನ್ನು ಹೆಚ್ಚಿಸಿರುವುದಕ್ಕೆ ಕಂಪನಿಯು ನಿಖರವಾದ ಕಾರಣವನ್ನು ಕಂಪನಿಯು ಬಹಿರಂಗಪಡಿಸಿಲ್ಲ.
ಬಿಎಸ್-6 ಜಾವಾ ಮತ್ತು ಜಾವಾ 42 ಬೈಕುಗಳನ್ನು ಈ ವರ್ಷದ ಮಾರ್ಚ್ ತಿಂಗಳಲ್ಲಿ ಬಿಡುಗಡೆಗೊಳಿಸಲಾಗಿತ್ತು. ಆದರೆ ಅವುಗಳ ಬೆಲೆಯಲ್ಲಿ ಕೂಡ ಗಮನಾರ್ಹ ಏರಿಕೆ ಕಂಡುಬಂದಿದೆ. ಕಂಪನಿಯು ಜಾವಾ ಮತ್ತು ಜಾವಾ 42 ಬೈಕುಗಳನ್ನು ಸಿಂಗಲ್-ಚಾನೆಲ್ ಎಬಿಎಸ್ ಮತ್ತು ಡ್ಯುಯಲ್-ಚಾನೆಲ್ ಎಬಿಎಸ್ ಎಂಬ ರೂಪಾಂತರಗಳಲ್ಲಿ ಲಭ್ಯವಿದೆ.
MOST READ: ಬಹಿರಂಗವಾಯ್ತು ಬಿಎಸ್-6 ಹೀರೋ ಎಕ್ಸ್ಪಲ್ಸ್ 200 ಬೈಕಿನ ಮಾಹಿತಿ
ಸಿಂಗಲ್-ಚಾನೆಲ್ ಎಬಿಎಸ್ ಹೊಂದಿರುವ ಸ್ಟ್ಯಾಂಡರ್ಡ್ ಜಾವಾ ಬಿಎಸ್-6 ಮಾದರಿಯ ಬೆಲೆಯು ಭಾರತದ ಎಕ್ಸ್ ಶೋರೂಂ ಪ್ರಕಾರ ರೂ.1.73 ಲಕ್ಷಗಳಾಗಿದೆ. ಹಿಂದಿನ ಬಿಎಸ್-4 ಮಾದರಿಗಿಂತ ರೂ.9,000 ರವರೆಗೆ ಹೆಚ್ಚಿಸಿದೆ.
ಇನ್ನು ಬಿಎಸ್-6 ಜಾವಾ ಡ್ಯುಯಲ್-ಚಾನೆಲ್ ಎಬಿಎಸ್ ರೂಪಾಂತರ ಬೆಲೆಯು ಭಾರತದ ಎಕ್ಸ್ ಶೋರೂಂ ಪ್ರಕಾರ ರೂ.1.83 ಲಕ್ಷಗಳಾಗಿದೆ. ಹಿಂದಿನ ಬಿಎಸ್-4 ಮಾದರಿಗಿಂತ ರೂ.10,000 ರವರೆಗೆ ಹೆಚ್ಚಿಸಿದೆ. ಇನ್ನು ಈ ಬೈಕುಗಳ ಪ್ರತಿಸ್ಪರ್ಧಿ ರಾಯಲ್ ಎನ್ಫೀಲ್ಡ್ ಕ್ಲಾಸಿಕ್ 350 ಗೆ ಹೋಲಿಸಿದರೆ ಸುಮಾರು 8 ಬಿಹೆಚ್ಪಿ ಪವರ್ ಹೆಚ್ಚು ಉತ್ಪಾದಿಸುತ್ತದೆ.