Just In
- 8 hrs ago ಎಲೆಕ್ಟ್ರಿಕ್ ಕಾರು ಖರೀದಿಸಿ ಪರಿಸರ ಪ್ರೇಮ ಮೆರೆದ ನಟಿ: ಬೆಲೆ ಕೇಳಿದ್ರೆ ತಲೆ ತಿರುಗುತ್ತೆ!
- 9 hrs ago ಟೊಯೊಟಾದ ಫಾರ್ಚ್ಯೂನರ್ನಲ್ಲೂ ಸಿಗಲಿದೆ ಹೈಬ್ರಿಡ್: ಇದರ ಮೈಲೇಜ್ ಕೇಳಿ ಸುಸ್ತಾದ ಗ್ರಾಹಕರು!
- 10 hrs ago ನಿಜವಾದ ಮಾನವತಾವಾದಿ: ನಟ ರಾಘವ ಲಾರೆನ್ಸ್ರಿಂದ ವಿಶೇಷ ಚೇತನ ಸಾಧಕರಿಗೆ 13 ಟಿವಿಎಸ್ ಸ್ಕೂಟರ್ ಗಿಫ್ಟ್
- 11 hrs ago ಜನ ಕ್ಯೂ ನಿಂತು ಖರೀದಿಸುತ್ತಿದ್ದ ಮಾರುತಿ ಸ್ವಿಫ್ಟ್ ಕಾರು ಮಾರಾಟದಲ್ಲಿ ಕುಸಿತ: ಕಾರಣವೇನು?
Don't Miss!
- Movies 'ಮಾರ್ಟಿನ್' ಚಿತ್ರದ ನಿರ್ಮಾಪಕ- ನಿರ್ದೇಶಕರ ಮಧ್ಯೆ ಕಿರಿಕ್: ಕೊನೆಗೂ ಸಿಕ್ತು ಸ್ಪಷ್ಟನೆ
- News 11 ಕೋಟಿ ಮಹಿಳೆಯರಿಗೆ ಅಡುಗೆ ಅನಿಲ: ಡಾ. ಕೆ. ಸುಧಾಕರ್
- Sports RCB vs KKR IPL 2024: ಕೆಕೆಆರ್ ವಿರುದ್ಧ ಆರ್ಸಿಬಿ ಹಸಿರು ಜೆರ್ಸಿಯಲ್ಲಿ ಕಣಕ್ಕೆ; ಅಂದೇ ಏಕೆ?
- Lifestyle ಮನೆಯಲ್ಲಿ ಸುಲಭವಾಗಿ ಬೀನ್ಸ್ ಬೆಳೆಯಬಹುದು..! ಹೇಗೆ ನೋಡಿ..!
- Finance ಬಿಸಿಲ ಬೇಗೆಯಿಂದ ರಕ್ಷಿಸಿಕೊಳ್ಳಲು ಟ್ರಾಫಿಕ್ ಪೊಲೀಸರಿಗೆ ರಿಲಿಫ್: ಬಂತು ಹವಾನಿಯಂತ್ರಿತ ಎಸಿ ಹೆಲ್ಮೆಟ್!
- Technology Samsung: ಸ್ಯಾಮ್ಸಂಗ್ನ ಈ ಸರಣಿ ಫೋನ್ಗಳಲ್ಲಿ ಗ್ರೀನ್ ಲೈನ್ ಸಮಸ್ಯೆ! ವರದಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಹೊಸ ನಿಂಜಾ 650 ಬೈಕಿನ ವಿತರಣೆ ಆರಂಭಿಸಿದ ಕವಾಸಕಿ
ಜನಪ್ರಿಯ ದ್ವಿಚಕ್ರ ವಾಹನ ಕಂಪನಿಯಾದ ಕವಾಸಕಿ ತನ್ನ ಬಿಎಸ್-6 ನಿಂಜಾ 650 ಬೈಕನ್ನು ಭಾರತೀಯ ಮಾರುಕಟ್ಟೆಯಲ್ಲಿ ಈ ವರ್ಷದ ಮೇ ತಿಂಗಳಲ್ಲಿ ಬಿಡುಗಡೆಗೊಳಿಸಿತ್ತು. ಇದೀಗ ಈ ಹೊಸ ನಿಂಜಾ 650 ಬೈಕುಗಳ ವಿತರಣೆಯನ್ನು ಪ್ರಾರಂಭಿಸಿದೆ.
ಹೊಸ ಕವಾಸಕಿ ನಿಂಜಾ 650 ಬೈಕಿನ ಬೆಲೆಯು ಭಾರತದ ಎಕ್ಸ್ ಶೋರೂಂ ಪ್ರಕಾರ ರೂ.6.24 ಲಕ್ಷಗಳಾಗಿದೆ. 2020ರ ಕವಾಸಕಿ ನಿಂಜಾ 650 ಬೈಕನ್ನು ಹಲವಾರು ಬದಲಾವಣೆಗಳೊಂದಿಗೆ ಬಿಡುಗಡೆಗೊಳಿಸಲಾಗಿತ್ತು. ಹೊಸ ಕವಾಸಕಿ ನಿಂಜಾ 650 ಬೈಕ್ ಆಗ್ರೇಸಿವ್ ಲುಕ್ ಅನ್ನು ಹೊಂದಿದೆ. ಈ ಆಗ್ರೇಸಿವ್ ಲುಕ್ ಹೊಂದಲು ಫೇರಿಂಗ್ ಅನ್ನು ನವೀಕರಿಸಲಾಗಿದೆ. ಇದು ಸ್ವಲ್ಪ ನವೀಕರಿಸಿದ ಗ್ರಾಫಿಕ್ಸ್ ಅನ್ನು ಸಹ ಹೊಂದಿದೆ. ಈ ಹೊಸ 2020ರ ಕವಾಸಕಿ ನಿಂಜಾ 650 ಬೈಕ್ ಆಕರ್ಷಕ ಲಕ್ ಅನ್ನು ಹೊಂದಿದೆ.
ಕವಾಸಕಿ ಕಂಪನಿಯು ಕಳೆದ ವರ್ಷದ ಡಿಸೆಂಬರ್ ತಿಂಗಳಲ್ಲಿ ಈ ಹೊಸ ನಿಂಜಾ 650 ಬೈಕನ್ನು ಅನಾವರಣಗೊಳಿಸಿದ್ದರು. ಹೂಸ ನಿಂಜಾ 650 ಬೈಕ್ ಲೈಮ್ ಗ್ರೀನ್ ಎಬೊನಿ ಮತ್ತು ಪರ್ಲ್ ಫ್ಲಾಟ್ ಸ್ಟಾರ್ಡಸ್ಟ್ ವೈಟ್ ಎರಡು ಬಣ್ಣಗಳ ಆಯ್ಕೆಗಳಲ್ಲಿ ಲಭ್ಯವಿರಲಿದೆ.
MOST READ: ಭಾರತಕ್ಕೆ ಲಗ್ಗೆ ಇಡಲಿದೆ ಜನಪ್ರಿಯ ಟ್ರಯಂಫ್ ಸ್ಟ್ರೀಟ್ ಟ್ರಿಪಲ್ ಆರ್ ಬೈಕ್
ಹೊಸ ಝಡ್ 650 ಬೈಕಿನಲ್ಲಿ 649 ಸಿಸಿಯ ಲಿಕ್ವಿಡ್ ಕೂಲ್ಡ್ ಟ್ವಿನ್ ಬಿಎಸ್ 6 ಎಂಜಿನ್ ಅಳವಡಿಸಲಾಗಿದೆ. ಈ ಎಂಜಿನ್ 8,000 ಆರ್ಪಿಎಂನಲ್ಲಿ 68 ಬಿಹೆಚ್ಪಿ ಪವರ್ ಹಾಗೂ 6,700 ಆರ್ಪಿಎಂನಲ್ಲಿ 65.7 ಎನ್ಎಂ ಟಾರ್ಕ್ ಉತ್ಪಾದಿಸುತ್ತದೆ. ಈ ಎಂಜಿನ್ನೊಂದಿಗೆ 6 ಸ್ಪೀಡಿನ ಗೇರ್ಬಾಕ್ಸ್ ಅಳವಡಿಸಲಾಗಿದೆ.
ಈ ಬೈಕಿನಲ್ಲಿ ಎಲ್ಇಡಿ ಹೆಡ್ಲೈಟ್, 4.3 ಇಂಚಿನ ಟಿಎಫ್ಟಿ ಕಲರ್ ಇನ್ಸ್ ಟ್ರೂಮೆಂಟೆಷನ್, ಸ್ಮಾರ್ಟ್ ಫೋನ್ ಕನೆಕ್ಟಿವಿಟಿ ಹಾಗೂ ಡನ್ಲಪ್ ಸ್ಪೋರ್ಟ್ಸ್ ಮ್ಯಾಕ್ಸ್ ರೋಡ್ಸ್ಪೋರ್ಟ್ ಟಯರ್ಗಳಿವೆ.
MOST READ: ಬಹಿರಂಗವಾಯ್ತು ಬಿಎಸ್-6 ಹೀರೋ ಎಕ್ಸ್ಪಲ್ಸ್ 200 ಬೈಕಿನ ಮಾಹಿತಿ
ಈ ಬೈಕಿನಲ್ಲಿರುವ ಎಲ್ಇಡಿ ಹೆಡ್ಲೈಟ್ ಹಾಗೂ ಟಿಎಫ್ಟಿ ಇನ್ಸ್ ಟ್ರೂಮೆಂಟೆಷನ್ ಸ್ಕ್ರೀನ್ಗಳು ಈ ಬೈಕಿನ ಲುಕ್ ಅನ್ನು ಮತ್ತಷ್ಟು ಹೆಚ್ಚಿಸುತ್ತವೆ. ಈ ಬೈಕಿನಲ್ಲಿ ಕಡಿಮೆ ತೂಕದ ಚಾಸೀಸ್ ಹಾಗೂ ಆರಾಮದಾಯಕವಾದ ಸೀಟುಗಳನ್ನು ಅಳವಡಿಸಲಾಗಿದೆ.
ಸಸ್ಪೆಂಷನ್ಗಳಿಗಾಗಿ ಈ ಬೈಕಿನಲ್ಲಿ ಮುಂಭಾಗದಲ್ಲಿ 41 ಎಂಎಂನ ಟೆಲಿಸ್ಕೋಪಿಕ್ ಫೋರ್ಕ್ ಹಾಗೂ ಹಿಂಭಾಗದಲ್ಲಿ ಮೊನೊಶಾಕ್ಗಳಿವೆ. ಬ್ರೇಕಿಂಗ್ಗಳಿಗಾಗಿ ಮುಂಭಾಗದಲ್ಲಿ 300 ಎಂಎಂನ ಪೆಟಲ್ ಡಿಸ್ಕ್ ಹಾಗೂ ಹಿಂಭಾಗದಲ್ಲಿ 200 ಎಂಎಂ ಡಿಸ್ಕ್ ಬ್ರೇಕ್ ಅನ್ನು ಹೊಂದಿರಲಿದೆ.
MOST READ: ಹೊಸ ಬಿಎಂಡಬ್ಲ್ಯೂ ಆರ್ 18 ಕ್ರೂಸರ್ ಬೈಕ್ ಖರೀದಿಗೆ ಬುಕ್ಕಿಂಗ್ ಆರಂಭ
2020ರ ಕವಾಸಕಿ ನಿಂಜಾ 650 ಬೈಕಿನ ಮೈಲೇಜ್ ಅಂಕಿ ಅಂಶ ಕೂಡ ಹೆಚ್ಚಾಗಿದೆ. ಕವಾಸಕಿ ಕಂಪನಿಯು ಭಾರತೀಯ ಮಾರುಕಟ್ಟೆಯಲ್ಲಿ ತನ್ನ ಇತರ ಜನಪ್ರಿಯ ಸೂಪರ್ ಬೈಕುಗಳ ಬುಕ್ಕಿಂಗ್ ಅನ್ನು ಕೂಡ ಪ್ರಾರಂಭಿಸಲಾಗಿದೆ.