ಹೊಸ ಮಹೀಂದ್ರಾ ಮೊಜೊ 300 ಬೈಕ್ ಖರೀದಿಗೆ ಬುಕ್ಕಿಂಗ್ ಆರಂಭ
ಮಹೀಂದ್ರಾ ಟೂ ವ್ಹೀಲರ್ ಕಂಪನಿಯು ತನ್ನ ಬಿಎಸ್-6 ಮೊಜೊ 300 ಬೈಕನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲು ಸಜ್ಜಾಗಿದೆ. ಇದೀಗ ಮಹೀಂದ್ರಾ ಕಂಪನಿಯು ಈ ಬಿಎಸ್-6 ಮೊಜೊ 300 ಬೈಕಿನ ಬುಕ್ಕಿಂಗ್ ಅನ್ನು ಸ್ವೀಕರಿಸಲು ಪ್ರಾರಂಭಿಸಿದೆ.

ಈ ಹೊಸ ಮೊಜೊ 300 ಬೈಕನ್ನು ಖರೀದಿಸಲು ಇಚ್ಚಿಸುವ ಗ್ರಾಹಕರು ಟೋಕನ್ ಮೊತ್ತ ರೂ.5,000 ಪಾವತಿಸಿ ಬುಕ್ಕಿಂಗ್ ಮಾಡಿಕೊಳ್ಳಬಹುದಾಗಿದೆ. ಈ ಹೊಸ ಮಹೀಂದ್ರಾ ಮೊಜೊ 300 ಬೈಕಿನ ಬೆಲೆಯು ಎಕ್ಸ್ ಶೋರೂಂ ಪ್ರಕಾರ ರೂ.1.80 ಲಕ್ಷಗಳಾಗಿರಬಹುದು ಎಂದು ನಿರೀಕ್ಷಿಸುತ್ತೇವೆ. ಮಹೀಂದ್ರಾ ಕಂಪನಿಯು ಈ ಬಿಎಸ್-6 ಮೊಜೊ 300 ಬೈಕನ್ನು ಹೊಸ ಬಣ್ಣಗಳ ಆಯ್ಕೆಯಲ್ಲಿ ಬಿಡುಗಡೆಗೊಳಿಸಲಿದೆ. ಹೊಸ ಮಹೀಂದ್ರಾ ಮೊಜೊ 300 ಬೈಕನ್ನು ಹಿಂದಿನ ಬಿಎಸ್-4 ಮಾದರಿಗೆ ಹೋಲಿಸಿದರೆ ಹೆಚ್ಚಿನ ಯಾವುದೇ ಬದಲಾವಣೆಗಳನ್ನು ಹೊಂದಿಲ್ಲ.

ಈ ಹೊಸ ಮಹೀಂದ್ರಾ ಬಿಎಸ್-6 ಮೊಜೊ 300 ಬೈಕ್ ಗಾರ್ನೆಟ್ ಬ್ಲ್ಯಾಕ್, ರೂಬಿ ರೆಡ್, ರೆಡ್ ಅಗೇಟ್ ಮತ್ತು ಪರ್ಲ್ ಬ್ಲ್ಯಾಕ್ ಬಣ್ಣಗಳ ಆಯ್ಕೆಯಲ್ಲಿ ಲಭ್ಯವಿರಲಿದೆ. ಈ ಹೊಸ ಮಹೀಂದ್ರಾ ಮೊಜೊ 300 ಬೈಕ್ ಈ ತಿಂಗಳು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಬೇಕಿತ್ತು.
MOST READ: ಬಿಡುಗಡೆಯಾಯ್ತು ಬಹುನಿರೀಕ್ಷಿತ ಹೊಸ ಹೋಂಡಾ ಎಕ್ಸ್-ಬ್ಲೇಡ್ ಬೈಕ್

ಆದರೆ ಕರೋನ ಸೋಂಕಿನ ಭೀತಿಯಿಂದ ಈ ಹೊಸ ಬೈಕಿನ ಬಿಡುಗಡೆಯು ವಿಳಂಬವಾಗಿದೆ. ಇದೀಗ ಮಹೀಂದ್ರಾ ಕಂಪನಿಯು ಹೊಸ ಮೊಜೊ 300 ಬೈಕನ್ನು ಬಿಡುಗಡೆಗೊಳಿಸಲು ಸಜ್ಜಾಗುತ್ತಿದೆ.

ಮಹೀಂದ್ರಾ ಮೊಜೊ ಬೈಕನ್ನು ಭಾರತದಲ್ಲಿ 2015ರಲ್ಲಿ ಮೊದಲ ಬಾರಿಗೆ ಬಿಡುಗಡೆಗೊಳಿಸಿದ್ದರು. ಮಹೀಂದ್ರಾ ಮೊಜೊ ಮಾರುಕಟ್ಟೆಯಲ್ಲಿ ಹೆಚ್ಚು ಮಾರಾಟವಾಗುವ ಟೂರಿಂಗ್ ಬೈಕುಗಳಲ್ಲಿ ಒಂದಾಗಿದೆ. ಈ ಬೈಕಿನಲ್ಲಿ ಆಕರ್ಷಕ ಟ್ವಿನ್ ಹೆಡ್ ಲ್ಯಾಂಪ್ ಸೆಟಪ್ ಅನ್ನು ಹೊಂದಿದೆ.
MOST READ: ಭಾರತಕ್ಕೆ ಲಗ್ಗೆ ಇಡಲಿದೆ ಜನಪ್ರಿಯ ಟ್ರಯಂಫ್ ಸ್ಟ್ರೀಟ್ ಟ್ರಿಪಲ್ ಆರ್ ಬೈಕ್

ಈ ಬೈಕಿನಲ್ಲಿ ದೊಡ್ಡ ಫ್ಯೂಯಲ್ ಟ್ಯಾಂಕ್ ಅನ್ನು ಹೊಂದಿದೆ. ಹೊಸ ಮಹೀಂದ್ರಾ ಮೊಜೊ ಬೈಕಿನ ಬಗ್ಗೆ ಹೆಚ್ಚಿನ ಮಾಹಿತಿಗಳು ಲಭ್ಯವಾಗಿಲ್ಲ. ಮಹೀಂದ್ರಾ ಗ್ರೂಪ್‌ನ ಭಾಗವಾಗಿರುವ ಜಾವಾ ಮತ್ತು ಜಾವಾ 42 ಬೈಕುಗಳಲ್ಲಿ ಇರುವ ಮಾದರಿಯ ಎಂಜಿನ್ ಅನ್ನು ಹೊಸ ಮಹೀಂದ್ರಾ ಮೊಜೊ ಬೈಕಿನಲ್ಲಿ ಅಳವಡಿಸುವ ಸಾಧ್ಯತೆಗಳಿದೆ.

ಹೊಸ ಮೊಜೊ ಬೈಕಿನಲ್ಲಿ 293 ಸಿಸಿ ಸಿಂಗಲ್-ಸಿಲಿಂಡರ್, ಲಿಕ್ವಿಡ್-ಕೂಲ್ಡ್ ಎಂಜಿನ್ ಅನ್ನು ಅಳವಡಿಸಬಹುದು. ಈ ಎಂಜಿನ್ 26.2 ಬಿಹೆಚ್‍ಪಿ ಪವರ್ ಮತ್ತು 27.05 ಎನ್ಎಂ ಟಾರ್ಕ್ ಉತ್ಪಾದಿಸುತ್ತದೆ.
MOST READ: ಹೊಸ ಬಿಎಂಡಬ್ಲ್ಯೂ ಆರ್ 18 ಕ್ರೂಸರ್ ಬೈಕ್ ಖರೀದಿಗೆ ಬುಕ್ಕಿಂಗ್ ಆರಂಭ

ಹಿಂದಿನ ಬಿಎಸ್-4 ಮಾದರಿಗೆ ಹೋಲಿಸಿದರೆ 0.8 ಬಿಹೆಚ್‌ಪಿ ಪವರ್ ಮತ್ತು 0.95 ಎನ್ಎಂ ಟಾರ್ಕ್ ಕಡಿಮೆಯಾಗಿದೆ. ಈ ಎಂಜಿನ್ ನೊಂದಿಗೆ 6-ಸ್ಪೀಡ್ ಗೇರ್ ಬಾಕ್ಸ್ ಅನ್ನು ಅಳವಡಿಸಲಾಗಿದೆ. ಈ ಬೈಕಿನ ಮುಂಭಾಗದಲ್ಲಿ 320 ಎಂಎಂ ಡಿಸ್ಕ್ ಬ್ರೇಕ್ ಮತ್ತು ಹಿಂಭಾಗದಲ್ಲಿ 240 ಎಂಎಂ ಡಿಸ್ಕ್ ಬ್ರೇಕ್ ಅನ್ನು ಅಳವಡಿಸಿದೆ.

ಇದರೊಂದಿಗೆ ಡ್ಯುಯಲ್-ಚಾನೆಲ್ ಎಬಿಎಸ್ ಅನ್ನು ಅಳವಡಿಸಿದೆ. ಬೈಕಿನ ಸಂಸ್ಪೆಕ್ಷನ್ ಗಾಗಿ ಮುಂಭಾಗದಲ್ಲಿ ಟೆಲಿಸ್ಕೋಪಿಕ್ ಫೋರ್ಕ್‌ಗಳು ಮತ್ತು ಹಿಂಭಾಗದಲ್ಲಿ ಮೊನೊ-ಶಾಕ್ ಸಂಸ್ಪೆಕ್ಷನ್ ಸೆಟಪ್ ಅನ್ನು ಅಳವಡಿಸಲಾಗಿದೆ. ಈ ಹೊಸ ಮಹೀಂದ್ರಾ ಮೊಜೊ 300 ಭಾರತೀಯ ಮಾರುಕಟ್ಟೆಯಲ್ಲಿ ಬಜಾಜ್ ಡೊಮಿನಾರ್ 250 ಬೈಕಿಗೆ ನೇರ ಪೈಪೋಟಿಯನ್ನು ನೀಡುತ್ತದೆ.


Click it and Unblock the Notifications








