Just In
Don't Miss!
- News
ಮತ್ತೊಮ್ಮೆ ಮಹಾ ಹಿಂಸಾಚಾರಕ್ಕೆ ಟ್ರಂಪ್ ಬೆಂಬಲಿಗರಿಂದ ಸ್ಕೆಚ್..?
- Movies
ರಾಕಿಂಗ್ ಸ್ಟಾರ್ ಯಶ್ ಗೆ ಮದುವೆ ಆಮಂತ್ರಣ ನೀಡಿದ ಕೃಷ್ಣ-ಮಿಲನಾ ಜೋಡಿ
- Sports
ಭಾರತ vs ಆಸ್ಟ್ರೇಲಿಯಾ 4ನೇ ಟೆಸ್ಟ್ ಸಿಡ್ನಿ, ದಿನ 4, Live ಸ್ಕೋರ್
- Lifestyle
"ಸೋಮವಾರದ ರಾಶಿಫಲ: ಮೇಷ-ಮೀನದವರೆಗಿನ ದಿನ ಭವಿಷ್ಯ"
- Finance
Flipkart Big Saving Days: ಆಪಲ್, ಸ್ಯಾಮ್ಸಂಗ್ ಸೇರಿ ಹಲವು ಬ್ರ್ಯಾಂಡ್ ಗಳ ಆಫರ್
- Education
BEL Recruitment 2021: 205 ಟೆಕ್ನೀಶಿಯನ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಬಿಡುಗಡೆಯಾಯ್ತು ಬಹುನಿರೀಕ್ಷಿತ ಬಿಎಸ್-6 ಮಹೀಂದ್ರಾ ಮೊಜೊ 300 ಬೈಕ್
ಮಹೀಂದ್ರಾ ಟೂ ವ್ಹೀಲರ್ ಕಂಪನಿಯು ತನ್ನ ಬಿಎಸ್-6 ಮೊಜೊ 300 ಬೈಕನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಿದೆ. ಈ ಹೊಸ ಮಹೀಂದ್ರಾ ಮೊಜೊ 300 ಬೈಕಿನ ಬೆಲೆಯು ಭಾರತದ ಎಕ್ಸ್ ಶೋರೂಂ ಪ್ರಕಾರ ರೂ.1.99 ಲಕ್ಷಗಳಾಗಿದೆ.

ಈ ಹೊಸ ಮಹೀಂದ್ರಾ ಮೊಜೊ ಬೈಕಿನಲ್ಲಿ 294.7 ಸಿಸಿ ಎಂಜಿನ್ ಅನ್ನು ಅಳವಡಿಸಲಾಗಿದೆ. ಈ ಎಂಜಿನ್ 25.2 ಬಿಹೆಚ್ಪಿ ಪವರ್ ಮತ್ತು 25.96 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಇನ್ನು ಇದರ ಹಿಂದಿನ ಮಾದರಿಯು 26.3 ಬಿಹೆಚ್ಪಿ ಮತ್ತು 28 ಎನ್ಎಂ ಟಾರ್ಕ್ ಉತ್ಪಾದಿಸುತ್ತಿತ್ತು. ಇದರ ಹಿಂದಿನ ಮಾದರಿಗೆ ಹೋಲಿಸಿದರೆ ಹೊಸ ಬಿಎಸ್ 6 ಮಾದರಿಯ ಬಿಹೆಚ್ಪಿ ಪವರ್ ಮತ್ತು ಟಾರ್ಕ್ ಅಂಕಿ ಅಂಶಗಳು ಕಡಿಮೆಯಾಗಿದೆ. ಇನ್ನು ಎಂಜಿನ್ ನೊಂದಿಗೆ 6-ಸ್ಪೀಡ್ ಗೇರ್ ಬಾಕ್ಸ್ ಅನ್ನು ಜೋಡಿಸಲಾಗಿದೆ.

ಇನ್ನು ಹೊಸ ಮಹೀಂದ್ರಾ ಮೊಜೊ ಬೈಕಿನ ಸಬ್ ಫ್ರೇಮ್ ನಲ್ಲಿ ಬದಲಾವಣೆಗಳನ್ನು ಮಾಡಲಾಗಿದೆ. ಇದರಿಂದ ಹಿಂದಿನ ಬಿಎಸ್ 4 ಮಾದರಿಗಿಂತ ಸೀಟ್ ಎತ್ತರ ಹೆಚ್ಚಾಗಿದೆ.
MOST READ: ಬಿಡುಗಡೆಯಾಯ್ತು ಬಹುನಿರೀಕ್ಷಿತ ಹೊಸ ಹೋಂಡಾ ಎಕ್ಸ್-ಬ್ಲೇಡ್ ಬೈಕ್

ಈ ಹೊಸ ಮಹೀಂದ್ರಾ ಮೊಜೊ 300 ಬೈಕ್ ಗಾರ್ನೆಟ್ ಬ್ಲ್ಯಾಕ್, ರೂಬಿ ರೆಡ್, ರೆಡ್ ಅಗೇಟ್ ಮತ್ತು ಪರ್ಲ್ ಬ್ಲ್ಯಾಕ್ ಎಂಬ ನಾಲ್ಕು ರೀತಿಯ ಬಣ್ಣಗಳ ಆಯ್ಕೆಯಲ್ಲಿ ಲಭ್ಯವಿದೆ.

ಮಹೀಂದ್ರಾ ಕಂಪನಿಯು ಈ ಬಿಎಸ್-6 ಮೊಜೊ 300 ಬೈಕಿನ ಬುಕ್ಕಿಂಗ್ ಅನ್ನು ಸ್ವೀಕರಿಸಲು ಈಗಗಾಲೇ ಪ್ರಾರಂಭಿಸಿದೆ. ಈ ಹೊಸ ಮೊಜೊ 300 ಬೈಕನ್ನು ಖರೀದಿಸಲು ಇಚ್ಚಿಸುವ ಗ್ರಾಹಕರು ಟೋಕನ್ ಮೊತ್ತ ರೂ.5,000 ಪಾವತಿಸಿ ಬುಕ್ಕಿಂಗ್ ಮಾಡಿಕೊಳ್ಳಬಹುದಾಗಿದೆ.
MOST READ: ಭಾರತಕ್ಕೆ ಲಗ್ಗೆ ಇಡಲಿದೆ ಜನಪ್ರಿಯ ಟ್ರಯಂಫ್ ಸ್ಟ್ರೀಟ್ ಟ್ರಿಪಲ್ ಆರ್ ಬೈಕ್

ಇನ್ನು ಹೊಸ ಮಹೀಂದ್ರಾ ಮೊಜೊ ಬೈಕಿನಲ್ಲಿ ಟ್ವಿನ್-ಪಾಡ್ ಹೆಡ್ಲ್ಯಾಂಪ್, ಸ್ಟೆಪ್-ಅಪ್ ಸಿಂಗಲ್ ಪೀಸ್ ಸೀಟ್, ಒಡೋಮೀಟರ್ ಮತ್ತು ಟ್ರಿಪ್-ಮೀಟರ್, ಸೈಡ್ ಮೌಂಟೆಡ್ ಎಕ್ಸಾಸ್ಟ್ ಸಿಸ್ಟ, ಸೆಮಿ ಡಿಜಿಟಲ್ ಕ್ಲಸ್ಟರ್ ಮತ್ತು ದೊಡ್ಡ ರೇಡಿಯೇಟರ್ ಕವರ್ ಅನ್ನು ಹೊಂದಿದೆ.

ಮಹೀಂದ್ರಾ ಮೊಜೊ ಬೈಕನ್ನು ಭಾರತದಲ್ಲಿ 2015ರಲ್ಲಿ ಮೊದಲ ಬಾರಿಗೆ ಬಿಡುಗಡೆಗೊಳಿಸಿದ್ದರು. ಮಹೀಂದ್ರಾ ಮೊಜೊ ಮಾರುಕಟ್ಟೆಯಲ್ಲಿ ಹೆಚ್ಚು ಮಾರಾಟವಾಗುವ ಟೂರಿಂಗ್ ಬೈಕುಗಳಲ್ಲಿ ಒಂದಾಗಿದೆ.
MOST READ: ಬಿಡುಗಡೆಯಾಯ್ತು ಹೊಸ ಟಿವಿಎಸ್ ಜೆಸ್ಟ್ 110 ಸ್ಕೂಟರ್

ಈ ಬೈಕಿನ ಮುಂಭಾಗದಲ್ಲಿ 320 ಎಂಎಂ ಡಿಸ್ಕ್ ಬ್ರೇಕ್ ಮತ್ತು ಹಿಂಭಾಗದಲ್ಲಿ 240 ಎಂಎಂ ಡಿಸ್ಕ್ ಬ್ರೇಕ್ ಅನ್ನು ಅಳವಡಿಸಿದೆ. ಇದರೊಂದಿಗೆ ಡ್ಯುಯಲ್-ಚಾನೆಲ್ ಎಬಿಎಸ್ ಅನ್ನು ಅಳವಡಿಸಿದೆ. ಈ ಬಿಎಸ್-6 ಮಹೀಂದ್ರಾ ಮೊಜೊ 300 ಸಂಸ್ಪೆಕ್ಷನ್ ಗಾಗಿ ಮುಂಭಾಗದಲ್ಲಿ ಟೆಲಿಸ್ಕೋಪಿಕ್ ಫೋರ್ಕ್ಗಳು ಮತ್ತು ಹಿಂಭಾಗದಲ್ಲಿ ಮೊನೊ-ಶಾಕ್ ಸಂಸ್ಪೆಕ್ಷನ್ ಸೆಟಪ್ ಅನ್ನು ಅಳವಡಿಸಲಾಗಿದೆ.

ಹೊಸ ಮಹೀಂದ್ರಾ ಮೊಜೊ 300 ಬೈಕ್ ಆಕರ್ಷಕ ಲುಕ್ ಅನ್ನು ಹೊಂದಿದೆ. ಈ ಹೊಸ ಮಹೀಂದ್ರಾ ಮೊಜೊ 300 ಭಾರತೀಯ ಮಾರುಕಟ್ಟೆಯಲ್ಲಿ ಬಜಾಜ್ ಡೊಮಿನಾರ್ 250 ಬೈಕಿಗೆ ನೇರ ಪೈಪೋಟಿಯನ್ನು ನೀಡುತ್ತದೆ.