ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಬಿಎಸ್-6 ಮಹೀಂದ್ರಾ ಮೊಜೊ ಬೈಕ್
ಮಹೀಂದ್ರಾ ಟೂ ವ್ಹೀಲರ್ ಕಂಪನಿಯು ತನ್ನ ಬಿಎಸ್-6 ಮೊಜೊ ಬೈಕನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲು ಸಜ್ಜಾಗಿದೆ. ಬಿಎಸ್-6 ಮಹೀಂದ್ರಾ ಮೊಜೊ ಬೈಕ್ ಈ ತಿಂಗಳ ಅಂತ್ಯದ ವೇಳೆಗೆ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಲಿದೆ.

ಈ ಹೊಸ ಮಹೀಂದ್ರಾ ಮೊಜೊ ಬೈಕಿನ ಎಂಜಿನ್ ಅನ್ನು ಬಿಎಸ್-6 ಮಾಲಿನ್ಯ ನಿಯಮಕ್ಕೆ ಅನುಗುಣವಾಗಿ ನವೀಕರಿಸಿರುವುದನ್ನು ಹೊರತುಪಡಿಸಿ ಇತರ ಯಾವುದೇ ಬದಲಾವಣೆಗಳನ್ನು ಮಾಡಲಾಗಿಲ್ಲ. ಮಹೀಂದ್ರಾ ಮೊಜೊ ಬೈಕನ್ನು 2015ರಲ್ಲಿ ಮೊದಲ ಬಾರಿಗೆ ಬಿಡುಗಡೆಗೊಳಿಸಿದ್ದರು. ಮಹೀಂದ್ರಾ ಮೊಚೊ ಮಾರುಕಟ್ಟೆಯಲ್ಲಿ ಹೆಚ್ಚು ಮಾರಾಟವಾಗುವ ಟೂರಿಂಗ್ ಬೈಕುಗಳಲ್ಲಿ ಒಂದಾಗಿದೆ. ಈ ಬೈಕಿನಲ್ಲಿ ಆಕರ್ಷಕ ಟ್ವಿನ್ ಹೆಡ್ ಲ್ಯಾಂಪ್ ಸೆಟಪ್ ಅನ್ನು ಹೊಂದಿದೆ.

ಈ ಬೈಕಿನಲ್ಲಿ ದೊಡ್ಡ ಫ್ಯೂಯಲ್ ಟ್ಯಾಂಕ್ ಅನ್ನು ಹೊಂದಿದೆ. ಮಹೀಂದ್ರಾ ಮೊಜೊ ಎರಡು ರೂಪಾಂತರಗಳಲ್ಲಿ ಮಾರಾಟ ಮಾಡಲಾಗುತ್ತದೆ. ಇದು ಬೇಸ್-ಸ್ಪೆಕ್ ಯುಟಿ 300 ಮತ್ತು ಟಾಪ್-ಸ್ಪೆಕ್ ಎಕ್ಸ್‌ಟಿ 300 ಎಂಬ ಎರಡು ರೂಪಾಂತರಗಳಲ್ಲಿ ಲಭ್ಹವಿರಲಿದೆ. ಈ ಎರಡು ಬೈಕುಗಳು ಹೆಚ್ಚಿನ ಫೀಚರ್ ಗಳು ಒಂದೇ ಮಾದರಿಯಲ್ಲಿದೆ.
MOST READ: ಬಹಿರಂಗವಾಯ್ತು ಬಿಎಸ್-6 ಹೀರೋ ಎಕ್ಸ್‌ಪಲ್ಸ್ 200 ಬೈಕಿನ ಮಾಹಿತಿ

ಕಳೆದ ವರ್ಷ ಮಹೀಂದ್ರಾ ಮೊಜೊ 300 ಎಬಿಎಸ್ ಮಾದರಿಯನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಿದ್ದರು. ಈ ಬೈಕ್ ಭಾರತೀಯ ಗ್ರಾಹಕರನ್ನು ಸೆಳೆಯುವಲ್ಲಿ ಯಶ್ವಸಿಯಾಗಿತ್ತು. ಈ ಬೈಕ್ ಉತ್ತಮ ಸಂಖ್ಯೆಯಲ್ಲಿ ಮಾರಾಟವಾಗಿತ್ತು.

ಹೆಚ್ಚಿನ ಗ್ರಾಹಕರ ಗಮನಸೆಳೆದಿರುವುದಿರುವುದರಿಂದ ಈ ಬೈಕನ್ನು ಬಿಎಸ್-6 ಮಾಲಿನ್ಯ ನಿಯಮಕ್ಕೆ ಅನುಗುಣವಾಗಿ ನವೀಕರಿಸಿ ಬಿಡುಗಡೆಗೊಳಿಸಲು ಮುಂದಾಗಿದೆ. ಆದರೆ ಕೇವಲ ಎಂಜಿನ್ ಅನ್ನು ನವೀಕರಿಸಿ ಬಿಡುಗಡೆಗೊಳಿಸಲಾಗುತ್ತಿದೆ ಎಂದು ನಿರೀಕ್ಷಿಸುತ್ತೆವೆ.
MOST READ: ಭಾರತಕ್ಕೆ ಲಗ್ಗೆ ಇಡಲಿದೆ ಜನಪ್ರಿಯ ಟ್ರಯಂಫ್ ಸ್ಟ್ರೀಟ್ ಟ್ರಿಪಲ್ ಆರ್ ಬೈಕ್

ಹೊಸ ಮಹೀಂದ್ರಾ ಮೊಜೊ ಬೈಕಿನ ಬಗ್ಗೆ ಹೆಚ್ಚಿನ ಮಾಹಿತಿಗಳು ಲಭ್ಯವಾಗಿಲ್ಲ. ಮಹೀಂದ್ರಾ ಗ್ರೂಪ್‌ನ ಭಾಗವಾಗಿರುವ ಜಾವಾ ಮತ್ತು ಜಾವಾ 42 ಬೈಕುಗಳಲ್ಲಿ ಇರುವ ಮಾದರಿಯ ಎಂಜಿನ್ ಅನ್ನು ಹೊಸ ಮಹೀಂದ್ರಾ ಮೊಜೊ ಬೈಕಿನಲ್ಲಿ ಅಳವಡಿಸುವ ಸಾಧ್ಯತೆಗಳಿದೆ.

ಹೊಸ ಮೊಜೊ ಬೈಕಿನಲ್ಲಿ 293 ಸಿಸಿ ಸಿಂಗಲ್-ಸಿಲಿಂಡರ್, ಲಿಕ್ವಿಡ್-ಕೂಲ್ಡ್ ಎಂಜಿನ್ ಅನ್ನು ಅಳವಡಿಸಬಹುದು. ಈ ಎಂಜಿನ್ 26.2 ಬಿಹೆಚ್‍ಪಿ ಪವರ್ ಮತ್ತು 27.05 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಹಿಂದಿನ ಬಿಎಸ್-4 ಮಾದರಿಗೆ ಹೋಲಿಸಿದರೆ 0.8 ಬಿಹೆಚ್‌ಪಿ ಮತ್ತು 0.95 ಎನ್ಎಂ ಟಾರ್ಕ್ ಕಡಿಮೆಯಾಗಿದೆ. ಈ ಎಂಜಿನ್ ನೊಂದಿಗೆ 6-ಸ್ಪೀಡ್ ಗೇರ್ ಬಾಕ್ಸ್ ಅನ್ನು ಅಳವಡಿಸಲಾಗಿದೆ.
MOST READ: ಹೊಸ ಬಿಎಂಡಬ್ಲ್ಯೂ ಆರ್ 18 ಕ್ರೂಸರ್ ಬೈಕ್ ಖರೀದಿಗೆ ಬುಕ್ಕಿಂಗ್ ಆರಂಭ

ಈ ಬೈಕಿನ ಮುಂಭಾಗದಲ್ಲಿ 320 ಎಂಎಂ ಡಿಸ್ಕ್ ಬ್ರೇಕ್ ಮತ್ತು ಹಿಂಭಾಗದಲ್ಲಿ 240 ಎಂಎಂ ಡಿಸ್ಕ್ ಬ್ರೇಕ್ ಅನ್ನು ಅಳವಡಿಸಿದೆ. ಇದರೊಂದಿಗೆ ಬೈಬ್ರೆ ಮೂಲದ ಡ್ಯುಯಲ್-ಚಾನೆಲ್ ಎಬಿಎಸ್ ಅನ್ನು ಅಳವಡಿಸಿದೆ. ಬೈಕಿನ ಸಂಸ್ಪೆಕ್ಷನ್ ಗಾಗಿ ಮುಂಭಾಗದಲ್ಲಿ ಟೆಲಿಸ್ಕೋಪಿಕ್ ಫೋರ್ಕ್‌ಗಳು ಮತ್ತು ಹಿಂಭಾಗದಲ್ಲಿ ಮೊನೊ-ಶಾಕ್ ಸಂಸ್ಪೆಕ್ಷನ್ ಸೆಟಪ್ ಅನ್ನು ಅಳವಡಿಸಳಾಗಿದೆ.

ಮಹೀಂದ್ರಾ ಮೊಜೊ ಬೈಕ್ ಭಾರತೀಯ ಮಾರುಕಟ್ತೆಯಲ್ಲಿ ಗ್ರಾಹಕರನ್ನು ಸೆಳೆಯುವಲ್ಲಿ ಯಶ್ವಸಿಯಾಗಿದೆ. ಇದೀಗ ಮಹೀಂದ್ರಾ ಕಂಪನಿಯು ಈ ಹೊಸ ಮೊಜೊ ಬೈಕನ್ನು ಬಿಎಸ್-6 ಮಾಲಿನ್ಯ ನಿಯಮಕ್ಕೆ ಅನುಗುಣವಾಗಿ ನವೀಕರಿಸಿ ಬಿಡುಗಡೆಗೊಳಿಸಲು ಮುಂದಾಗಿದೆ.


Click it and Unblock the Notifications








