ಬಿಎಸ್-6 ರಾಯಲ್ ಎನ್‍‍ಫೀಲ್ಡ್ ಬುಲೆಟ್ 350 ಬೈಕ್ ಖರೀದಿಗೆ ಬುಕ್ಕಿಂಗ್ ಆರಂಭ

ರಾಯಲ್ ಎನ್‍‍ಫೀಲ್ಡ್ ಕಂಪನಿಯು ತನ್ನ ಹೊಸ ಬುಲೆಟ್ 350 ಬೈಕ್ ಅನ್ನು ಭಾರತೀಯ ಮಾರುಕಟ್ಟೆಯಲ್ಲಿ ಶೀಘ್ರದಲ್ಲೇ ಬಿಡುಗಡೆಗೊಳಿಸಲಿದೆ. ಇದೀಗ ರಾಯಲ್ ಎನ್‍‍ಫೀಲ್ಡ್ ಕಂಪನಿಯು ಬಿಎಸ್-6 ಬುಲೆಟ್ 350 ಬೈಕಿನ ಬುಕ್ಕಿಂಗ್ ಅನ್ನು ಪ್ರಾರಂಭಿಸಿದೆ.

ಬಿಎಸ್-6 ರಾಯಲ್ ಎನ್‍‍ಫೀಲ್ಡ್ ಬುಲೆಟ್ 350 ಬೈಕ್ ಖರೀದಿಗೆ ಬುಕ್ಕಿಂಗ್ ಆರಂಭ

ಬಿಎಸ್-6 ರಾಯಲ್ ಎನ್‍‍ಫೀಲ್ಡ್ ಬುಲೆಟ್ 350 ಬೈಕ್‍‍ಗಾಗಿ ರೂ.10,000 ಪಾವತಿಸಿ ಬುಕ್ಕಿಂಗ್ ಮಾಡಿಕೊಳ್ಳಬಹುದುದಾಗಿದೆ. ಹೊಸ ಬುಲೆಟ್ 350 ಬೈಕನ್ನು ಬಿಎಸ್-6 ಮಾಲಿನ್ಯ ನಿಯಯಮಕ್ಕೆ ಅನುಗುಣವಾಗಿ ನವೀಕರಿಸಲಾಗಿದೆ. ಅದನ್ನು ಹೊರತುಪಡಿಸಿ ಇತರೆ ಯಾವುದೇ ಪ್ರಮುಖ ಬದಲಾವಣೆಗನ್ನು ಮಾಡಲಾಗಿಲ್ಲ. ಈ ಹೊಸ ಬೈಕಿನಲ್ಲಿ ರಾಯಲ್ ಎನ್‍‍ಫೀಲ್ಡ್ ಕ್ಲಾಸಿಕ್ ಬೈಕಿನಲ್ಲಿರುವ ಮಾದರಿಯ ಎಂಜಿನ್ ಅನ್ನು ಅಳವಡಿಸಲಿದೆ.

ಬಿಎಸ್-6 ರಾಯಲ್ ಎನ್‍‍ಫೀಲ್ಡ್ ಬುಲೆಟ್ 350 ಬೈಕ್ ಖರೀದಿಗೆ ಬುಕ್ಕಿಂಗ್ ಆರಂಭ

ಕ್ಲಾಸಿಕ್ 350 ಬೈಕಿನಲ್ಲಿರುವ 346 ಸಿಸಿ ಸಿಂಗಲ್ ಸಿಲಿಂಡರ್ ಏರ್-ಕೂಲ್ಡ್ ಎಂಜಿನ್‍ನಂತೆಯೇ ಎಲೆಕ್ಟ್ರಾನಿಕ್ ಫ್ಯೂಯಲ್ ಇಂಜೆಕ್ಷನ್ ಸಿಸ್ಟಂ ಅನ್ನು ಈ ಹೊಸ ಬೈಕಿನಲ್ಲಿ ಅಳವಡಿಸಲಿದೆ. ಅದರೇ ಬುಲೆಟ್ ಬೈಕಿನಲ್ಲಿರುವ ಎಂಜಿನ್ 19.3 ಬಿ‍‍ಹೆಚ್‍‍ಪಿ ಪವರ್ ಅನ್ನು ಉತ್ಪಾದಿಸುತ್ತದೆ. ಕ್ಲಾಸಿಕ್ 350 ಬೈಕಿನ ಎಂಜಿನ್‍‍ಗೆ ಹೋಲಿಸಿದರೆ 0.71 ಬಿ‍‍ಹೆಚ್‍‍ಪಿ ಪವರ್ ಕಡೆಮೆ ಉತ್ಪಾದಿಸುತ್ತದೆ.

ಬಿಎಸ್-6 ರಾಯಲ್ ಎನ್‍‍ಫೀಲ್ಡ್ ಬುಲೆಟ್ 350 ಬೈಕ್ ಖರೀದಿಗೆ ಬುಕ್ಕಿಂಗ್ ಆರಂಭ

ಟಾರ್ಕ್ ಅಂಕಿ ಅಂಶದಲ್ಲಿ ಯಾವುದೇ ಬದಲಾವಣೆಗಳು ಇಲ್ಲ, ಅದೇ 28 ಎನ್‍ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಇನ್ನು ಈ ಎಂಜಿನ್‍‍ನೊಂದಿಗೆ 5 ಸ್ಪೀಡ್ ಗೇರ್‍‍ಬಾಕ್ಸ್ ಅನ್ನು ಅಳವಡಿಸಲಾಗಿದೆ.

ಬಿಎಸ್-6 ರಾಯಲ್ ಎನ್‍‍ಫೀಲ್ಡ್ ಬುಲೆಟ್ 350 ಬೈಕ್ ಖರೀದಿಗೆ ಬುಕ್ಕಿಂಗ್ ಆರಂಭ

ಬಿಎಸ್-6 ರಾಯಲ್ ಎನ್‍‍ಫೀಲ್ಡ್ ಬುಲೆಟ್ 350 ಬೈಕ್ ಅನ್ನು ಹೊಸ ಬಣ್ಣಗಳ ಆಯ್ಕೆಯಲ್ಲಿ ಬಿಡುಗಡೆಗೊಳಿಸುವ ಸಾಧ್ಯತೆಯಿದೆ. ಎಲೆಕ್ಟ್ರಿಕ್ ಮತ್ತು ಕಿಕ್ ಸ್ಟಾರ್ಟ್ ಎಂಬ ಎರಡು ರೂಪಾಂತರಗಳಲ್ಲಿ ಬಿಡುಗಡೆಗೊಳಿಸುವ ಸಾಧ್ಯತೆಗಳಿದೆ. ಇಎಫ್‍ಐ ಸೇರ್ಪಡೆಯಿಂದ ಸುಮಾರು ರೂ.10,000 ದಿಂದ 12,000ಗಳಷ್ಟು ಬೆಲೆಯನ್ನು ಹೆಚ್ಚಿಸುತ್ತದೆ ಎಂದು ಅಂದಾಜಿಸಲಾಗಿದೆ.

ಬಿಎಸ್-6 ರಾಯಲ್ ಎನ್‍‍ಫೀಲ್ಡ್ ಬುಲೆಟ್ 350 ಬೈಕ್ ಖರೀದಿಗೆ ಬುಕ್ಕಿಂಗ್ ಆರಂಭ

ಬಿಎಸ್-6 ರಾಯಲ್ ಎನ್‍‍ಫೀಲ್ಡ್ ಬೈಕ್ ಟೆಲಿಸ್ಕೋಪಿಕ್ ಫ್ರಂಟ್ ಫೋರ್ಕ್ ಮತ್ತು ಟ್ವಿನ್ ರೇರ್ ಶಾಕ್ ಅಬ್ಸಾರ್ಬರ್ ಅನ್ನು ಹೊಂದಿರಲಿದೆ. ಈ ಬೈಕಿನಲ್ಲಿ ಪ್ರಯಾಣಿಕರ ಸುರಕ್ಷತೆಗೆ ಹೆಚ್ಚಿನ ಪ್ರಾಮುಖ್ಯತೆಯನ್ನು ನೀಡಬಹುದು. ಸುರಕ್ಷತೆಗಾಗಿ 280 ಎಂಎಂ ಫ್ರಂಟ್ ಡಿಸ್ಕ್ ಮತ್ತು 153 ಎಂಎಂ ಡ್ರಮ್ ಬೈಕ್ ಅನ್ನು ಹೊಂದಿರಲಿದೆ. ಸಿಂಗಲ್ ಚಾನೆಲ್ ಎಬಿಎಸ್ ಸ್ಟ್ಯಾಡಂರ್ಡ್ ಆಗಿ ಅಳವಡಿಸುತ್ತದೆ.

ಬಿಎಸ್-6 ರಾಯಲ್ ಎನ್‍‍ಫೀಲ್ಡ್ ಬುಲೆಟ್ 350 ಬೈಕ್ ಖರೀದಿಗೆ ಬುಕ್ಕಿಂಗ್ ಆರಂಭ

2020ರ ರಾಯಲ್ ಎನ್‍‍ಫೀಲ್ಡ್ ಬುಲೆಟ್ 350 ಬೈಕ್ ಮುಂದಿನ ದಿನಗಳಲ್ಲಿ ಬಿಡುಗಡೆಯಾಗಲಿದೆ. ರಾಯಲ್ ಎನ್‍‍ಫೀಲ್ಡ್ ಕಂಪನಿಯ ಬೈಕ್‍‍ಗಳ ಸರಣಿಯಲ್ಲಿ ಕ್ಲಾಸಿಕ್ 350 ಹೆಚ್ಚು ಜನಪ್ರಿಯ ಮಾದರಿಯಾಗಿದೆ.

ಬಿಎಸ್-6 ರಾಯಲ್ ಎನ್‍‍ಫೀಲ್ಡ್ ಬುಲೆಟ್ 350 ಬೈಕ್ ಖರೀದಿಗೆ ಬುಕ್ಕಿಂಗ್ ಆರಂಭ

ರಾಯಲ್ ಎನ್‍‍‍ಫೀಲ್ಡ್ ಕಂಪನಿಯು ತನ್ನ 500 ಸಿಸಿ ಯು‍ಸಿಇ (ಯುನಿಟ್ ಕನ್‌ಸ್ಟ್ರಕ್ಷನ್ ಎಂಜಿನ್) ಸೆಗ್‍‍ಮೆಂಟ್‍‍ನ ಬೈ‍ಕುಗಳ ಉತ್ಪಾದನೆಯನ್ನು ಶೀಘ್ರದಲ್ಲೇ ಸ್ಥಗಿತಗೊಳಿಸುವುದಾಗಿ ಅಧಿಕೃತವಾಗಿ ಘೋಷಣೆ ಮಾಡಿದೆ. ಈ ಸೆಗೆಮೆಂ‍ಟ್‍ನ ಕ್ಲಾಸಿಕ್ 500, ಬುಲೆಟ್ ಮತ್ತು ಥಂಡರ್‍‍ಬರ್ಡ್ 500 ಬೈಕು‍‍ಗಳ ಉತ್ಪಾದನೆಯನ್ನು ಸ್ಥಗಿತಗೊಳಿಸಿದೆ.

ಬಿಎಸ್-6 ರಾಯಲ್ ಎನ್‍‍ಫೀಲ್ಡ್ ಬುಲೆಟ್ 350 ಬೈಕ್ ಖರೀದಿಗೆ ಬುಕ್ಕಿಂಗ್ ಆರಂಭ

ಆದರೆ ಈ ಸಂದರ್ಭದಲ್ಲಿ 500ಸಿಸಿ ಸೆಗ್‍‍ಮೆಂಟ್‍ ಬೈಕು‍ಗಳ ನೆನಪಿಗಾಗಿ ತಯಾರಕ ಕಂಪನಿಯು ಕ್ಲಾಸಿಕ್ 500 ಟ್ರಿಬ್ಯೂಟ್ ಬ್ಲ್ಯಾಕ್ ಲಿಮೆಟೆಡ್ ಆವೃತ್ತಿಯನ್ನು ಇತ್ತೀಚೆಗೆ ಬಿಡುಗಡೆಗೊಳಿಸಿದೆ.

ಬಿಎಸ್-6 ರಾಯಲ್ ಎನ್‍‍ಫೀಲ್ಡ್ ಬುಲೆಟ್ 350 ಬೈಕ್ ಖರೀದಿಗೆ ಬುಕ್ಕಿಂಗ್ ಆರಂಭ

ಕಳೆದ ತಿಂಗಳಲ್ಲಿ ರಾಯಲ್ ಎನ್‍‍ಫೀಲ್ಡ್ ಬೈಕ್‍‍ಗಳ ಮಾರಾಟದಲ್ಲಿ ಕುಸಿತವಾಗಿತ್ತು. ಹೆಚ್ಚಿನ ಗ್ರಾಹಕರನ್ನು ಗಮನಸೆಳೆಯಲು ತಮ್ಮ ಜನಪ್ರಿಯ ಮಾದರಿಗಳನ್ನು ಬಿಎಸ್-6 ಆವೃತ್ತಿಯಲ್ಲಿ ಬಿಡುಗಡೆಗೊಳಿಸುತ್ತಿದೆ.

Article Published On: Tuesday, February 25, 2020, 18:59 [IST]
English summary
Royal Enfield Bullet 350 BS6 Bookings Open At Dealerships. Read in Kananda.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+