ದುಬಾರಿಯಾಯ್ತು ಜನಪ್ರಿಯ ಬಿಎಸ್-6 ರಾಯಲ್ ಎನ್‍ಫೀಲ್ಡ್ ಬುಲೆಟ್ 350 ಬೈಕ್
ರಾಯಲ್ ಎನ್‍ಫೀಲ್ಡ್ ಕಂಪನಿಯು ತನ್ನ ಜನಪ್ರಿಯ ಹೊಸ ಬುಲೆಟ್ 350 ಬೈಕ್ ಅನ್ನು ಭಾರತದಲ್ಲಿ ಕೆಲವೇ ತಿಂಗಳ ಹಿಂದೆ ಬಿಡುಗಡೆಗೊಳಿಸಿದರು. ಬಿಎಸ್-6 ರಾಯಲ್ ಎನ್‍ಫೀಲ್ಡ್ ಬುಲೆಟ್ 350 ಬೈಕಿನ ಬೆಲೆಯನ್ನು ಇದೀಗ ಹೆಚ್ಚಿಸಲಾಗಿದೆ.

ಬುಲೆಟ್ 350 ಅತ್ಯಂತ ಹಳೆಯ ಮತ್ತು ಜನಪ್ರಿಯ ಮಾದರಿಯಾಗಿದೆ. ಇದು ಪ್ರಸ್ತುತ ಬ್ರಾಂಡ್‌ನ ಪೋರ್ಟ್ಫೋಲಿಯೊದಲ್ಲಿ ಮಾರಾಟದಲ್ಲಿದೆ. ಈ ಬುಲೆಟ್ ಬೈಕನ್ನು ಬಿಎಸ್-6 ಮಾಲಿನ್ಯ ನಿಯಮಕ್ಕೆ ಅನುಗುಣವಾಗಿ ನವೀಕರಿಸಲಾಗಿದೆ. ಈ ಬೈಕಿನ ಪ್ರಾರಂಭಿಕ ಬೆಲೆಯು ಭಾರತದ ಎಕ್ಸ್ ಶೋರೂಂ ಪ್ರಕಾರ ರೂ.1.21 ಲಕ್ಷಗಳಾಗಿದೆ ಆದರೆ ಈ ಬೈಕಿನ ಎಲ್ಲಾ ರೂಪಾಂತರಗಳಿಗೆ ರೂ.2,755 ಗಳವರೆಗೆ ಬೆಲೆಯನ್ನು ಹೆಚ್ಚಿಸಲಾಗಿದೆ.

ಹೊಸ ಬುಲೆಟ್ 350 ಬೈಕನ್ನು ಬಿಎಸ್-6 ಮಾಲಿನ್ಯ ನಿಯಯಮಕ್ಕೆ ಅನುಗುಣವಾಗಿ ನವೀಕರಿಸಲಾಗಿದೆ. ಅದನ್ನು ಹೊರತುಪಡಿಸಿ ಇತರೆ ಯಾವುದೇ ಪ್ರಮುಖ ಬದಲಾವಣೆಗನ್ನು ಮಾಡಲಾಗಿಲ್ಲ.
MOST READ: ಹೊಸ ಬಿಎಂಡಬ್ಲ್ಯೂ ಆರ್ 18 ಕ್ರೂಸರ್ ಬೈಕ್ ಖರೀದಿಗೆ ಬುಕ್ಕಿಂಗ್ ಆರಂಭ

ಈ ಹೊಸ ಬೈಕಿನಲ್ಲಿ ರಾಯಲ್ ಎನ್‍ಫೀಲ್ಡ್ ಕ್ಲಾಸಿಕ್ ಬೈಕಿನಲ್ಲಿರುವ ಮಾದರಿಯ ಎಂಜಿನ್ ಅನ್ನು ಅಳವಡಿಸಲಿದೆ. ಕ್ಲಾಸಿಕ್ 350 ಬೈಕಿನಲ್ಲಿರುವ 346 ಸಿಸಿ ಸಿಂಗಲ್ ಸಿಲಿಂಡರ್ ಏರ್-ಕೂಲ್ಡ್ ಎಂಜಿನ್‍ನಂತೆಯೇ ಎಲೆಕ್ಟ್ರಾನಿಕ್ ಫ್ಯೂಯಲ್ ಇಂಜೆಕ್ಷನ್ ಸಿಸ್ಟಂ ಅನ್ನು ಈ ಹೊಸ ಬೈಕಿನಲ್ಲಿ ಅಳವಡಿಸಿದೆ.

ಅದರೆ ಬುಲೆಟ್ ಬೈಕಿನಲ್ಲಿರುವ ಎಂಜಿನ್ 19.3 ಬಿಹೆಚ್‍ಪಿ ಪವರ್ ಅನ್ನು ಉತ್ಪಾದಿಸುತ್ತದೆ. ಕ್ಲಾಸಿಕ್ 350 ಬೈಕಿನ ಎಂಜಿನ್‍ಗೆ ಹೋಲಿಸಿದರೆ 0.71 ಬಿಹೆಚ್‍ಪಿ ಪವರ್ ಕಡೆಮೆ ಉತ್ಪಾದಿಸುತ್ತದೆ.
MOST READ: ಬಹಿರಂಗವಾಯ್ತು ಬಿಎಸ್-6 ಹೀರೋ ಎಕ್ಸ್‌ಪಲ್ಸ್ 200 ಬೈಕಿನ ಮಾಹಿತಿ

ಟಾರ್ಕ್ ಅಂಕಿ ಅಂಶದಲ್ಲಿ ಯಾವುದೇ ಬದಲಾವಣೆಗಳು ಇಲ್ಲ, ಅದೇ 28 ಎನ್‍ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಇನ್ನು ಈ ಎಂಜಿನ್‍ನೊಂದಿಗೆ 5 ಸ್ಪೀಡ್ ಗೇರ್‍ಬಾಕ್ಸ್ ಅನ್ನು ಅಳವಡಿಸಲಾಗಿದೆ.
| Model | Colour | Old BS6 Price | New BS6 Price | Price Hike |
| Bullet 350 BS6 (Standard) | Bullet Silver and Onyx Black | Rs 1,21,583 | Rs 1,24,338 | Rs 2,755 |
| Black and Forest Green | Rs 1,27,750 | Rs 1,30,505 | Rs 2,755 | |
| Bullet 350 ES BS6 (Electric Start) | Jet Black, Regal Red and Royal Blue | Rs 1,37,194 | Rs 1,39,949 | Rs 2,755 |

ಬಿಎಸ್-6 ರಾಯಲ್ ಎನ್‍ಫೀಲ್ಡ್ ಬುಲೆಟ್ 350 ಬೈಕಿನಲ್ಲಿ ಟೆಲಿಸ್ಕೋಪಿಕ್ ಫ್ರಂಟ್ ಫೋರ್ಕ್ ಮತ್ತು ಟ್ವಿನ್ ರೇರ್ ಶಾಕ್ ಅಬ್ಸಾರ್ಬರ್ ಅನ್ನು ಹೊಂದಿದೆ. ಈ ಬೈಕಿನಲ್ಲಿ ಪ್ರಯಾಣಿಕರ ಸುರಕ್ಷತೆಗೆ ಹೆಚ್ಚಿನ ಪ್ರಾಮುಖ್ಯತೆಯನ್ನು ನೀಡಿದೆ. ಸುರಕ್ಷತೆಗಾಗಿ 280 ಎಂಎಂ ಫ್ರಂಟ್ ಡಿಸ್ಕ್ ಮತ್ತು 153 ಎಂಎಂ ಡ್ರಮ್ ಬೈಕ್ ಅನ್ನು ಹೊಂದಿದೆ. ಸಿಂಗಲ್ ಚಾನೆಲ್ ಎಬಿಎಸ್ ಸ್ಟ್ಯಾಡಂರ್ಡ್ ಆಗಿ ಅಳವಡಿಸಿದೆ.
MOST READ: ಬಿಡುಗಡೆಯಾಯ್ತು ಬಹುನೀರಿಕ್ಷಿತ ಹೊಸ ಯಮಹಾ ಬೈಕುಗಳ ಟೀಸರ್

ರಾಯಲ್ ಎನ್‍ಫೀಲ್ಡ್ ಕಂಪನಿಯು ತನ್ನ ಹೊಸ ಮೆಟಿಯೋರ್ 350 ಫೈರ್‌ಬಾಲ್ ಬೈಕನ್ನು ಭಾರತದಲ್ಲಿ ಬಿಡುಗಡೆಗೊಳಿಸಲು ಸಜ್ಜಾಗುತ್ತಿದೆ. ಹೊಸ ರಾಯಲ್ ಎನ್‍ಫೀಲ್ಡ್ ಮೆಟಿಯೋರ್ 350 ಫೈರ್‌ಬಾಲ್ ಬೈಕಿನ ಬೆಲೆಯು ಭಾರತದ ಎಕ್ಸ್ ಶೋರೂಂ ಪ್ರಕಾರ ರೂ.1.65 ಲಕ್ಷಗಳಾಗಿದೆ.

ಹೊಸ ರಾಯಲ್ ಎನ್‍ಫೀಲ್ಡ್ ಬುಲೆಟ್ 350 ಬೈಕಿನ ಬೆಲೆಯನ್ನು ಹೆಚ್ಚಿಸಿರುವುದು ಮಾರಾಟದ ಮೇಲೆ ಪಾರಿಣಾಮ ಬೀರುವುದಿಲ್ಲವೆಂದು ನಿರೀಕ್ಷಿಸುತ್ತೇವೆ. ರಾಯಲ್ ಎನ್‍ಫೀಲ್ಡ್ ಕಂಪನಿಯ ಸರಣಿಯಲ್ಲಿ ಬುಲೆಟ್ 350 ದೀರ್ಘಕಾಲದಿಂದ ಮಾರಾಟದಲ್ಲಿದೆ ಮತ್ತು ಜನಪ್ರಿಯ ಬೈಕುಗಳಲ್ಲಿ ಒಂದಾಗಿದೆ.


Click it and Unblock the Notifications








