ದುಬಾರಿಯಾಯ್ತು ರಾಯಲ್ ಎನ್‌ಫೀಲ್ಡ್ ಕ್ಲಾಸಿಕ್, ಬುಲೆಟ್ 350 ಬೈಕುಗಳು

ರಾಯಲ್ ಎನ್‌ಫೀಲ್ಡ್ ಕಂಪನಿಯು ಭಾರತೀಯ ಮಾರುಕಟ್ಟೆಯಲ್ಲಿ ತನ್ನ ಸರಣಿಯಲ್ಲಿರುವ ಜನಪ್ರಿಯ ಮಾದರಿಗಳ ಬೆಲೆಯನ್ನು ಹೆಚ್ಚಿಸಲಾಗಿದೆ. ರಾಯಲ್ ಎನ್‌ಫೀಲ್ಡ್ ತನ್ನ ಕ್ಲಾಸಿಕ್ 350 ಮತ್ತು ಬುಲೆಟ್ 350 ಬೈಕುಗಳ ಬೆಲೆಯನ್ನು ಹೆಚ್ಚಿಸಲಾಗಿದೆ.

ದುಬಾರಿಯಾಯ್ತು ರಾಯಲ್ ಎನ್‌ಫೀಲ್ಡ್ ಕ್ಲಾಸಿಕ್, ಬುಲೆಟ್ 350 ಬೈಕುಗಳು

ಇದರಲ್ಲಿ ಮೊದಲಿಗೆ, ರಾಯಲ್ ಎನ್‌ಫೀಲ್ಡ್ ಬುಲೆಟ್ 350 ಬೈಕಿನ ಬೆಲೆಯನ್ನು ರೂ.2,756 ಗಳವರೆಗೆ ಹೆಚ್ಚಿಸಲಾಗಿದೆ. ಬೆಲೆ ಏರಿಕೆಯ ಬಳಿಕ ರಾಯಲ್ ಎನ್‌ಫೀಲ್ಡ್ ಬುಲೆಟ್ 350 ಬೈಕಿನ ಆರಂಭಿಕ ಬೆಲೆಯು ರೂ.1.27 ಲಕ್ಷಗಳಾಗಿದೆ. ರಾಯಲ್ ಎನ್‍‍ಫೀಲ್ಡ್ ಬುಲೆಟ್ 350 ಬ್ರ್ಯಾಂಡ್ ನ ಅತ್ಯಂತ ಹಳೆಯ ಮಾದರಿಯಾಗಿದೆ. ಅಲ್ಲದೇ ಬುಲೆಟ್ 350 ಅತ್ಯಂತ ದೀರ್ಘಕಾಲದಿಂದ ಮಾರಾಟದಲ್ಲಿರುವ ಜನಪ್ರಿಯ ಮಾದರಿಯಾಗಿದೆ.

ದುಬಾರಿಯಾಯ್ತು ರಾಯಲ್ ಎನ್‌ಫೀಲ್ಡ್ ಕ್ಲಾಸಿಕ್, ಬುಲೆಟ್ 350 ಬೈಕುಗಳು

ರಾಯಲ್ ಎನ್‌ಫೀಲ್ಡ್ ಬುಲೆಟ್ 350 ಬೈಕ್ ಬುಲೆಟ್ 350 ಎಕ್ಸ್ 350, 350 ಬ್ಲ್ಯಾಕ್ ಮತ್ತು ಎಕ್ಸ್ 350 ಇಎಸ್ (ಎಲೆಕ್ಟ್ರಿಕ್ ಸ್ಟಾರ್ಟ್) ಎಂಬ ಮೂರು ರೂಪಾಂತರಗಳಲ್ಲಿ ಲಭ್ಯವಿದೆ.

MOST READ: ದುಬಾರಿಯಾಯ್ತು ಜನಪ್ರಿಯ ಬಿಎಸ್-6 ಯಮಹಾ ಎಂಟಿ-15 ಬೈಕ್

ದುಬಾರಿಯಾಯ್ತು ರಾಯಲ್ ಎನ್‌ಫೀಲ್ಡ್ ಕ್ಲಾಸಿಕ್, ಬುಲೆಟ್ 350 ಬೈಕುಗಳು

ರಾಯಲ್ ಎನ್‍‍ಫೀಲ್ಡ್ ಕ್ಲಾಸಿಕ್ 346 ಸಿಸಿ ಸಿಂಗಲ್ ಸಿಲಿಂಡರ್ ಏರ್-ಕೂಲ್ಡ್ ಎಂಜಿನ್‍ ಅನ್ನು ಬುಲೆಟ್ 350 ಬೈಕ್ ಹೊಂದಿದೆ. ಇದರಲ್ಲಿ ಎಲೆಕ್ಟ್ರಾನಿಕ್ ಫ್ಯೂಯಲ್ ಇಂಜೆಕ್ಷನ್ ಸಿಸ್ಟಂ ಅನ್ನು ಈ ಹೊಸ ಬೈಕಿನಲ್ಲಿ ಅಳವಡಿಸಿದೆ.

Royal Enfield Bullet 350
Variant Price
Bullet X 350 ₹1.27 Lakh
Bullet 350 Black ₹1.33 Lakh
Bullet X 350 ES ₹1.42 Lakh
ದುಬಾರಿಯಾಯ್ತು ರಾಯಲ್ ಎನ್‌ಫೀಲ್ಡ್ ಕ್ಲಾಸಿಕ್, ಬುಲೆಟ್ 350 ಬೈಕುಗಳು

ಅದರೆ ಬುಲೆಟ್ ಬೈಕಿನಲ್ಲಿರುವ ಎಂಜಿನ್ 19.3 ಬಿ‍‍ಹೆಚ್‍‍ಪಿ ಪವರ್ ಅನ್ನು ಉತ್ಪಾದಿಸುತ್ತದೆ. ಕ್ಲಾಸಿಕ್ 350 ಬೈಕಿನ ಎಂಜಿನ್‍‍ಗೆ ಹೋಲಿಸಿದರೆ 0.71 ಬಿ‍‍ಹೆಚ್‍‍ಪಿ ಪವರ್ ಕಡೆಮೆ ಉತ್ಪಾದಿಸುತ್ತದೆ.

MOST READ: ಬಿಡುಗಡೆಯ ಸನಿಹದಲ್ಲಿ ಬಹುನಿರೀಕ್ಷಿತ ಬಿಎಸ್-6 ಹೀರೋ ಬೈಕುಗಳು

ದುಬಾರಿಯಾಯ್ತು ರಾಯಲ್ ಎನ್‌ಫೀಲ್ಡ್ ಕ್ಲಾಸಿಕ್, ಬುಲೆಟ್ 350 ಬೈಕುಗಳು

ಟಾರ್ಕ್ ಅಂಕಿ ಅಂಶದಲ್ಲಿ ಯಾವುದೇ ಬದಲಾವಣೆಗಳು ಇಲ್ಲ, ಅದೇ 28 ಎನ್‍ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಇನ್ನು ಈ ಎಂಜಿನ್‍‍ನೊಂದಿಗೆ 5 ಸ್ಪೀಡ್ ಗೇರ್‍‍ಬಾಕ್ಸ್ ಅನ್ನು ಅಳವಡಿಸಲಾಗಿದೆ.

ದುಬಾರಿಯಾಯ್ತು ರಾಯಲ್ ಎನ್‌ಫೀಲ್ಡ್ ಕ್ಲಾಸಿಕ್, ಬುಲೆಟ್ 350 ಬೈಕುಗಳು

ಬಿಎಸ್-6 ರಾಯಲ್ ಎನ್‍‍ಫೀಲ್ಡ್ ಬುಲೆಟ್ 350 ಬೈಕಿನಲ್ಲಿ ಟೆಲಿಸ್ಕೋಪಿಕ್ ಫ್ರಂಟ್ ಫೋರ್ಕ್ ಮತ್ತು ಟ್ವಿನ್ ರೇರ್ ಶಾಕ್ ಅಬ್ಸಾರ್ಬರ್ ಅನ್ನು ಹೊಂದಿದೆ. ಈ ಬೈಕಿನಲ್ಲಿ 280 ಎಂಎಂ ಫ್ರಂಟ್ ಡಿಸ್ಕ್ ಮತ್ತು 153 ಎಂಎಂ ಡ್ರಮ್ ಬೈಕ್ ಅನ್ನು ಹೊಂದಿದೆ. ಸಿಂಗಲ್ ಚಾನೆಲ್ ಎಬಿಎಸ್ ಸ್ಟ್ಯಾಡಂರ್ಡ್ ಆಗಿ ಅಳವಡಿಸಿದೆ.

MOST READ: ಆಗಸ್ಟ್ ತಿಂಗಳ ಮಾರಾಟ ವರದಿ ಪ್ರಕಟಿಸಿದ ಸುಜುಕಿ ಮೋಟಾರ್‌ಸೈಕಲ್

ದುಬಾರಿಯಾಯ್ತು ರಾಯಲ್ ಎನ್‌ಫೀಲ್ಡ್ ಕ್ಲಾಸಿಕ್, ಬುಲೆಟ್ 350 ಬೈಕುಗಳು

ಇನ್ನು ರಾಯಲ್ ಎನ್‌ಫೀಲ್ಡ್ ಕ್ಲಾಸಿಕ್ 350 ಬೈಕಿನ ಬೆಲೆಯನ್ನು ರೂ.1,838 ಗಳವರೆಗೆ ಹೆಚ್ಚಿಸಿದೆ. ಬೆಲೆ ಏರಿಕೆಯ ಬಳಿಕ, ರಾಯಲ್ ಎನ್‌ಫೀಲ್ಡ್ ಕ್ಲಾಸಿಕ್ 350 ಬೈಕಿನ ಆರಂಭಿಕ ಬೆಲೆಯು ರೂ.1.61 ಲಕ್ಷಗಳಾಗಿದೆ.

Royal Enfield Classic 350
Variant Price
Single-Channel ABS (Chestnut Red, Mercury Silver, Ash, Pure Black, Redditch Red) ₹1.61 Lakh
Dual-Channel ABS Black ₹1.69 Lakh
Dual-Channel ABS Gunmetal Gray with spokes ₹1.71 Lakh
Dual-Channel ABS Gunmetal Gray with alloys ₹1.83 Lakh
Dual-Channel ABS Airborne Blue, Stormrider Sand ₹1.79 Lakh
Dual-Channel ABS Stealth Black, Chrome Black ₹1.86 Lakh
ದುಬಾರಿಯಾಯ್ತು ರಾಯಲ್ ಎನ್‌ಫೀಲ್ಡ್ ಕ್ಲಾಸಿಕ್, ಬುಲೆಟ್ 350 ಬೈಕುಗಳು

ಕ್ಲಾಸಿಕ್ 350 ಬೈಕಿನಲ್ಲಿ ಹಿಂದಿನ ಮಾದರಿಯಂತೆ ಕಾರ್ಬುರೇಟರ್‍‍ಗಳನ್ನು ಒಳಗೊಂಡಿದ್ದರೆ, ಹೊಸ ಬೈಕಿನಲ್ಲಿ ಫ್ಯೂಯಲ್ ಇಂಜೆಕ್ಷನ್ ಸಿಸ್ಟಂ ಅಳವಡಿಸಲಾಗಿದೆ. ಎಂಜಿನ್‍‍ನ ಹೊರತಾಗಿ ಹೊಸ ಬೈಕ್ ಅಲಾಯ್ ವ್ಹೀಲ್‍, ಸ್ಟೀಲ್ತ್ ಬ್ಲಾಕ್ ಹಾಗೂ ಕ್ರೋಮ್ ಬ್ಲಾಕ್‍ ಎಂಬ ಎರಡು ಹೊಸ ಬಣ್ಣಗಳನ್ನು ಹೊಂದಿದೆ.

ದುಬಾರಿಯಾಯ್ತು ರಾಯಲ್ ಎನ್‌ಫೀಲ್ಡ್ ಕ್ಲಾಸಿಕ್, ಬುಲೆಟ್ 350 ಬೈಕುಗಳು

ಈ ಹೊಸ ಬಣ್ಣಗಳ ಜೊತೆಗೆ ಬಿಎಸ್ 6 ಕ್ಲಾಸಿಕ್ 350 ಬೈಕ್ ಅನ್ನು ಸಿಗ್ನಲ್ಸ್ ಏರ್ ಬೋರ್ನ್ ಬ್ಲೂ, ಸಿಗ್ನಲ್ಸ್ ಸ್ಟಾರ್ಮ್ ರೈಡರ್ ಸ್ಯಾಂಡ್, ಗನ್ ಮೆಟಲ್ ಗ್ರೇ ಹಾಗೂ ಕ್ಲಾಸಿಕ್ ಬ್ಲ್ಯಾಕ್ ಬಣ್ಣಗಳಲ್ಲಿ ಲಭ್ಯವಿದೆ.

ದುಬಾರಿಯಾಯ್ತು ರಾಯಲ್ ಎನ್‌ಫೀಲ್ಡ್ ಕ್ಲಾಸಿಕ್, ಬುಲೆಟ್ 350 ಬೈಕುಗಳು

ಕ್ಲಾಸಿಕ್ 350 ಬೈಕ್ ರಾಯಲ್ ಎನ್‍‍ಫೀಲ್ಡ್ ಕಂಪನಿಯ ಜನಪ್ರಿಯ ಬೈಕ್ ಆಗಿದೆ. ಈ ಬೈಕ್ ದೇಶಿಯ ಮಾರುಕಟ್ಟೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮಾರಾಟವಾಗುತ್ತಿದೆ. ಈ ಬೈಕ್ ದೇಶಿಯ ಮಾರುಕಟ್ಟೆಯಲ್ಲಿ ಜಾವಾ ಹಾಗೂ ಬೆನೆಲ್ಲಿ ಇಂಪಿರಿಯಲ್ 400 ಬೈಕ್‍‍ಗಳಿಗೆ ಪೈಪೋಟಿ ನೀಡುತ್ತದೆ.

Most Read Articles

Kannada
English summary
BS6 Royal Enfield Classic, Bullet Prices Increased. Read In Kannada.
Story first published: Tuesday, September 15, 2020, 17:44 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X