ನ್ಯಾವಿಗೇಷನ್ ಫೀಚರ್‌ನೊಂದಿಗೆ ಬಿಡುಗಡೆಯಾಗಲಿದೆ ರಾಯಲ್ ಎನ್‍ಫೀಲ್ಡ್ ಮೆಟಿಯೋರ್ 350 ಬೈಕ್

ಜನಪ್ರಿಯ ದ್ವಿಚಕ್ರ ತಯಾರಕ ಕಂಪನಿಯಾದ ರಾಯಲ್ ಎನ್‍ಫೀಲ್ಡ್ ತನ್ನ ಮೆಟಿಯೋರ್ 350 ಬೈಕನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲು ಸಜ್ಜಾಗಿದೆ. ಭಾರತದಲ್ಲಿ ಬಿಡುಗಡೆಯಾಗಲಿರುವ ರಾಯಲ್ ಎನ್‍ಫೀಲ್ಡ್ ಮೆಟಿಯೋರ್ ಬಹುನಿರೀಕ್ಷಿತ ಬೈಕುಗಳಲ್ಲಿ ಒಂದಾಗಿದೆ.

ನ್ಯಾವಿಗೇಷನ್ ಫೀಚರ್‌ನೊಂದಿಗೆ ಬಿಡುಗಡೆಯಾಗಲಿದೆ ರಾಯಲ್ ಎನ್‍ಫೀಲ್ಡ್ ಮೆಟಿಯೋರ್ 350 ಬೈಕ್

ರಾಯಲ್ ಎನ್‍ಫೀಲ್ಡ್ ಕಂಪನಿಯು ತನ್ನ ಮೆಟಿಯೋರ್ ಬೈಕನ್ನು ಜೂನ್ ತಿಂಗಳಲ್ಲಿ ಬಿಡುಗಡೆಯಾಗಲಿದೆ ವರದಿಗಳಾಗಿತ್ತು. ಆದರೆ ಕಾರೋನ ಸೋಂಕಿನ ಭೀತಿಯಿಂದ ಈ ಬೈಕಿನ ಬಿಡುಗಡೆಯು ವಿಳಂಬವಾಗಿದೆ. ಈ ಮೆಟಿಯೋರ್ ಬೈಕನ್ನು ಭಾರತದಲ್ಲಿ 2020ರ ಸೆಪ್ಟಂಬರ್ ತಿಂಗಳಲ್ಲಿ ಬಿಡುಗಡೆಗೊಳಿಸಲಿದೆ ಎಂದು ನಿರೀಕ್ಷಿಸುತ್ತೇವೆ. ಹೊಸ ರಾಯಲ್ ಎನ್‍ಫೀಲ್ಡ್ ಮೆಟಿಯೋರ್ 350 ಬೈಕಿನ ಬೆಲೆಯು ಭಾರತದ ಎಕ್ಸ್ ಶೋರೂಂ ಪ್ರಕಾರ ರೂ.1.65 ಲಕ್ಷಗಳಾಗಿರಲಿದೆ ಎಂದು ನಿರೀಕ್ಷಿಸುತ್ತೇವೆ.

ನ್ಯಾವಿಗೇಷನ್ ಫೀಚರ್‌ನೊಂದಿಗೆ ಬಿಡುಗಡೆಯಾಗಲಿದೆ ರಾಯಲ್ ಎನ್‍ಫೀಲ್ಡ್ ಮೆಟಿಯೋರ್ 350 ಬೈಕ್

ಈ ಹೊಸ ರಾಯಲ್ ಎನ್‍ಫೀಲ್ಡ್ ಮೆಟಿಯೋರ್ 350 ಬೈಕ್ ಭಾರತದಲ್ಲಿ ಹಲವು ಬಾರಿ ಸ್ಪಾಟ್ ಟೆಸ್ಟ್ ನಡೆಸಲಾಗಿದೆ. ಸ್ಪಾಟ್ ಟೆಸ್ಟ್ ನಲ್ಲಿ ಈ ಬೈಕಿನಲ್ಲಿ ಎರಡು ಡಿಸ್‌ಪ್ಲೇಯನ್ನು ಹೊಂದಿರುವ ಡಿಜಿಟಲ್ ಇನ್ಸ್ ಟ್ರೂಮೆಂಟ್ ಕ್ಲಸ್ಟರ್ ಅನ್ನು ಹೊಂದಿರುವುದು ಮೋಟಾರ್‌ಬೀಮ್ ಬಹಿರಂಗಪಡಿಸಿದೆ.

MOST READ: ಹೊಸ ಡುಕಾಟಿ ಪಾನಿಗಲೆ ವಿ2 ಬೈಕ್ ಬಿಡುಗಡೆ ದಿನಾಂಕ ಬಹಿರಂಗ

ನ್ಯಾವಿಗೇಷನ್ ಫೀಚರ್‌ನೊಂದಿಗೆ ಬಿಡುಗಡೆಯಾಗಲಿದೆ ರಾಯಲ್ ಎನ್‍ಫೀಲ್ಡ್ ಮೆಟಿಯೋರ್ 350 ಬೈಕ್

ಇದರಲ್ಲಿ ಕ್ಲಾಕ್, ಫ್ಯೂಯಲ್ ಗೇಜ್, ಓಡೋಮೀಟರ್ ಮತ್ತು ಟ್ರಿಪ್ ಮೀಟರ್‌ನಂತಹ ಮಾಹಿತಿಯನ್ನು ಪ್ರದರ್ಶಿಸಿದರೆ, ಇನ್ನೊಂದು ಟಿಎಫ್‌ಟಿ ಯುನಿಟ್ ನಲ್ಲಿ ಟರ್ನ್-ಬೈ-ಟರ್ನ್ ನ್ಯಾವಿಗೇಷನ್ ಮಾಹಿತಿಯನ್ನು ನೀಡುತ್ತದೆ. ಈ ಡಿಜಿಟಲ್ ಕ್ಲಸ್ಟರ್ ಅನ್ನು ಬ್ಲೂಟೂತ್ ಮೂಲಕ ಕನೆಕ್ಟ್ ಮಾಡಬಹುದಾಗಿದೆ.

ನ್ಯಾವಿಗೇಷನ್ ಫೀಚರ್‌ನೊಂದಿಗೆ ಬಿಡುಗಡೆಯಾಗಲಿದೆ ರಾಯಲ್ ಎನ್‍ಫೀಲ್ಡ್ ಮೆಟಿಯೋರ್ 350 ಬೈಕ್

ರಾಯಲ್ ಎನ್‌ಫೀಲ್ಡ್ ಮೆಟಿಯೋರ್ 350 ಬೈಕಿನಲ್ಲಿ ವೃತ್ತಕಾರದ ಹೆಡ್ ಲ್ಯಾಂಪ್, ಅಲಾಯ್ ವ್ಹೀಲ್ ಮತ್ತು ಬ್ಲ್ಯಾಕ್ ಔಟ್ ಎಕ್ಸಾಟ್ ಅನ್ನು ಹೊಂದಿದೆ. ರಾಯಲ್ ಎನ್‌ಫೀಲ್ಡ್ ಕಂಪನಿಯು ಥಂಡರ್‍‍ಬರ್ಡ್ ಎಕ್ಸ್ 350 ಬೈಕಿನ ಬದಲಾಗಿ ಹೊಸ ಮೆಟಿಯೋರ್ 350 ಬೈಕನ್ನು ಬಿಡುಗಡೆಗೊಳಿಸುತ್ತಿದೆ.

MOST READ: ಬಿಡುಗಡೆಯಾಯ್ತು ಹೊಸ ಟ್ರಯಂಫ್ ಬೊನೊವೆಲ್ಲಿ ಸ್ಪೀಡ್‍‍ಮಾಸ್ಟರ್ ಬೈಕ್

ನ್ಯಾವಿಗೇಷನ್ ಫೀಚರ್‌ನೊಂದಿಗೆ ಬಿಡುಗಡೆಯಾಗಲಿದೆ ರಾಯಲ್ ಎನ್‍ಫೀಲ್ಡ್ ಮೆಟಿಯೋರ್ 350 ಬೈಕ್

ಈ ಬೈಕಿನಲ್ಲಿ 346 ಸಿಸಿ ಏರ್-ಕೂಲ್ಡ್ ಸಿಂಗಲ್ ಸಿಲಿಂಡರ್ ಎಂಜಿನ್‌ ಅನ್ನು ಅಳವಡಿಸಲಾಗಿದೆ. ಈ ಎಂಜಿನ್ ಫ್ರಿ ಕ್ಯಾಟಲಿಕ್ ಕರ್ನವಾಟರ್ ಅನ್ನು ಎಕ್ಸಾಸ್ಟ್ ಸಿಸ್ಟಂನೊಂದಿಗೆ ಜೋಡಿಸಲಾಗಿದೆ. ಈ ಎಂಜಿನ್ ಉತ್ತಮ ಇಂಧನ ಧಕ್ಷತೆಯನು ಹೊಂದಿದೆ. ಪ್ರಸ್ತುತ ಟ್ಯಾಪೆಟ್-ವಾಲ್ವ್ ಯುಸಿಇ 346 ಸಿಸಿ ಎಂಜಿನ್‌ಗಳಿಗಿಂತ ಹೆಚ್ಚಿನ ಕಾರ್ಯಕ್ಷಮತೆಯನ್ನು ನೀಡುತ್ತದೆ.

ನ್ಯಾವಿಗೇಷನ್ ಫೀಚರ್‌ನೊಂದಿಗೆ ಬಿಡುಗಡೆಯಾಗಲಿದೆ ರಾಯಲ್ ಎನ್‍ಫೀಲ್ಡ್ ಮೆಟಿಯೋರ್ 350 ಬೈಕ್

ರಾಯಲ್ ಎನ್‌ಫೀಲ್ಡ್ ಮೆಟಿಯೋರ್ 350 ಬೈಕಿನ ಮುಂಭಾಗಲ್ಲಿ ಟೆಲಿಸ್ಕೋಪಿಕ್ ಫೋರ್ಕ್‌ಗಳನ್ನು ಮತ್ತು ಹಿಂಭಾಗದಲ್ಲಿ ಟ್ವಿನ್ ಶಾಕ್ ಸಸ್ಪೆಂಕ್ಷನ್ ಸೆಟಪ್ ಅನ್ನು ಒಳಗೊಂಡಿದೆ.ಈ ಬೈಕಿನಲ್ಲಿ ಸವಾರರ ಸುರಕ್ಷತೆಗಾಗಿ ಹೆಚ್ಚಿನ ಪ್ರಾಮುಖ್ಯತೆಯನ್ನು ನೀಡಿದೆ. ಸುರಕ್ಷತೆಗಾಗಿ ಬೈಕಿನ ಮುಂಭಾಗದಲ್ಲಿ ಮತ್ತು ಹಿಂಭಾಗ ಟಯರ್‍ಗಳಲ್ಲಿ ಡಿಸ್ಕ್ ಬ್ರೇಕ್ ಗಳನ್ನು ನೀಡಲಾಗಿದೆ.

MOST READ: ಬಿಡುಗಡೆಯ ಸನಿಹದಲ್ಲಿ ಬಹುನಿರೀಕ್ಷಿತ ಬಿಎಸ್-6 ಹೀರೋ ಬೈಕುಗಳು

ನ್ಯಾವಿಗೇಷನ್ ಫೀಚರ್‌ನೊಂದಿಗೆ ಬಿಡುಗಡೆಯಾಗಲಿದೆ ರಾಯಲ್ ಎನ್‍ಫೀಲ್ಡ್ ಮೆಟಿಯೋರ್ 350 ಬೈಕ್

ಇದರೊಂದಿಗೆ ಈ ಬೈಕಿನಲ್ಲಿ ಕಂಪನಿಯು ಡ್ಯುಯಲ್ ಚಾನೆಲ್ ಎಬಿಎಸ್ ಅನ್ನು ಸ್ಟ್ಯಾಂಡರ್ಡ್ ಆಗಿ ಅಳವಡಿಸಿದೆ. ಮಾರುಕಟ್ಟೆಯಲ್ಲಿರುವ ಥಂಡರ್‌ಬರ್ಡ್ ನಲ್ಲಿರುವ ಎಂಜಿನ್ ಹೆಚ್ಚಿನ ಪ್ರಮಾಣದ ವೈಬ್ರೆಷನ್ ಅನ್ನು ಹೊಂದಿದೆ.

ನ್ಯಾವಿಗೇಷನ್ ಫೀಚರ್‌ನೊಂದಿಗೆ ಬಿಡುಗಡೆಯಾಗಲಿದೆ ರಾಯಲ್ ಎನ್‍ಫೀಲ್ಡ್ ಮೆಟಿಯೋರ್ 350 ಬೈಕ್

ಆದರೆ ಥಂಡರ್‌ಬರ್ಡ್ ಬೈಕಿನ ಉತ್ತರಾಧಿಕಾರಿಯಾಗಿ ಬರುವ ಹೊಸ ಬೈಕಿನಲ್ಲಿ ಅಳವಡಿಸಲಾಗುವ ಎಂಜಿನ್ ಹೊಸ ಟೆಕ್ನಾಲಜಿಯನ್ನು ಹೊಂದಿರಲಿದ್ದು, ವೈಬ್ರೆಷನ್ ಸಮಸ್ಯೆಯನ್ನು ಹೋಗಲಾಡಿಸಲಿದೆ. ರಾಯಲ್ ಎನ್‌ಫೀಲ್ಡ್ ಮೆಟಿಯೋರ್ ಬೈಕ್ ಥಂಡರ್‌ಬರ್ಡ್ ಎಕ್ಸ್ 350 ಮಾದರಿಯ ಆಕರ್ಷಕ ರೆಟ್ರೂ-ಅರ್ಬನ್ ಕ್ರೂಸರ್ ವಿನ್ಯಾಸವನ್ನು ಹೊಂದಿದೆ.

Most Read Articles

Kannada
English summary
Royal Enfield Meteor 350 Digital Display Offers Navigation. Read In Kannada.
Story first published: Tuesday, August 25, 2020, 15:58 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X