ಬಿಡುಗಡೆಯಾಯ್ತು ಹೊಸ ಟ್ರಯಂಫ್ ಬೊನೊವೆಲ್ಲಿ ಸ್ಪೀಡ್‍‍ಮಾಸ್ಟರ್ ಬೈಕ್

ಟ್ರಯಂಫ್ ಇಂಡಿಯಾ ಕಂಪನಿಯು ತನ್ನ ಬಿಎಸ್-6 ಬೊನೊವೆಲ್ಲಿ ಸ್ಪೀಡ್‍‍‍ಮಾಸ್ಟರ್‍ ಬೈಕನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಿದೆ. ಈ ಹೊಸ ಟ್ರಯಂಫ್ ಬೊನೊವೆಲ್ಲಿ ಸ್ಪೀಡ್‍‍ಮಾಸ್ಟರ್ ಬೈಕಿನ ಬೆಲೆಯು ಭಾರತದ ಎಕ್ಸ್ ಶೋರೂಂ ಪ್ರಕಾರ ರೂ.11.33 ಲಕ್ಷ ಗಳಾಗಿದೆ.

ಬಿಡುಗಡೆಯಾಯ್ತು ಹೊಸ ಟ್ರಯಂಫ್ ಬೊನೊವೆಲ್ಲಿ ಸ್ಪೀಡ್‍‍ಮಾಸ್ಟರ್ ಬೈಕ್

ಈ ಹೊಸ ಬೊನೊವೆಲ್ಲಿ ಸ್ಪೀಡ್‍‍ಮಾಸ್ಟರ್ ಬೈಕ್ ಬಿಎಸ್-6 ಅಪ್‌ಡೇಟ್‌ನ ಹೊರತಾಗಿ, ಹೆಚ್ಚುವರಿಯಾಗಿ ಕೋಬಾಲ್ಟ್ ಬ್ಲೂ/ಜೆಟ್ ಬ್ಲ್ಯಾಕ್ ಡ್ಯುಯಲ್-ಟೋನ್ ಕಲರ್ ಆಯ್ಕೆಯನ್ನು ಪಡೆದುಕೊಂಡಿದೆ. ಉಳಿದಂತೆ ಯಾವುದೇ ಪ್ರಮುಖ ಬದಲಾವಣೆಯನ್ನು ಬ್ರಿಟಿಷ್ ಮಾಡರ್ನ್ ಕ್ಲಾಸಿಕ್ ಬಿಎಸ್-6 ಬೊನೊವೆಲ್ಲಿ ಸ್ಪೀಡ್‍‍ಮಾಸ್ಟರ್ ಬೈಕ್ ಹೊಂದಿಲ್ಲ, ಬಿಎಸ್-6 ಬೊನೊವೆಲ್ಲಿ ಸ್ಪೀಡ್‍‍ಮಾಸ್ಟರ್ ಆಕರ್ಷಕ ಲುಕ್ ಅನ್ನು ಹೊಂದಿದೆ.

ಬಿಡುಗಡೆಯಾಯ್ತು ಹೊಸ ಟ್ರಯಂಫ್ ಬೊನೊವೆಲ್ಲಿ ಸ್ಪೀಡ್‍‍ಮಾಸ್ಟರ್ ಬೈಕ್

ಹೊಸ ಟ್ರಯಂಫ್ ಬೊನೊವೆಲ್ಲಿ ಸ್ಪೀಡ್‍‍ಮಾಸ್ಟರ್ ಬೈಕಿನಲ್ಲಿ 1,200 ಸಿಸಿ ಲಿಕ್ವಿಡ್-ಕೂಲ್ಡ್, ಪ್ಯಾರಲಲ್ ಟ್ವಿನ್ ಎಂಜಿನ್ ಅನ್ನು ಹೊಂದಿದೆ. ಈ ಎಂಜಿನ್ 6,250 ಆರ್‌ಪಿಎಂನಲ್ಲಿ 78 ಬಿಹೆಚ್‌ಪಿ ಪವರ್ ಮತ್ತು 4,000 ಆರ್‌ಪಿಎಂನಲ್ಲಿ 107 ಎನ್‌ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ.

MOST READ: ಬಿಡುಗಡೆಯಾಯ್ತು ಬಹುನಿರೀಕ್ಷಿತ ಹೊಸ ಹೋಂಡಾ ಎಕ್ಸ್-ಬ್ಲೇಡ್ ಬೈಕ್

ಬಿಡುಗಡೆಯಾಯ್ತು ಹೊಸ ಟ್ರಯಂಫ್ ಬೊನೊವೆಲ್ಲಿ ಸ್ಪೀಡ್‍‍ಮಾಸ್ಟರ್ ಬೈಕ್

ಈ ಎಂಜಿನ್‍‍ನ 6-ಸ್ಪೀಡ್ ಗೇರ್‌ಬಾಕ್ಸ್‌ನಲ್ಲಿ ಮಲ್ಟಿ-ಪ್ಲೇಟ್ ಅಸಿಸ್ಟ್ ಕ್ಲಚ್ ಅನ್ನು ಜೋಡಿಸಲಾಗಿದೆ. ಈ ಎಂಜಿನ್‍‍ನಲ್ಲಿ ಮಲ್ಟಿಪಾಯಿಂಟ್ ಫ್ಯೂಯಲ್ ಇಂಜೆಕ್ಷನ್ ಥ್ರೊಟಲ್ ಪ್ರತಿಕ್ರಿಯೆಯನ್ನು ಒಳಗೊಂಡಿದೆ. ಇದು ಹೆಚ್ಚಿನ ಪರ್ಫಾಮೆನ್ಸ್ ಅನ್ನು ಒದಗಿಸುತ್ತದೆ.

ಬಿಡುಗಡೆಯಾಯ್ತು ಹೊಸ ಟ್ರಯಂಫ್ ಬೊನೊವೆಲ್ಲಿ ಸ್ಪೀಡ್‍‍ಮಾಸ್ಟರ್ ಬೈಕ್

ಬಿಎಸ್-6 ಟ್ರಯಂಫ್ ಬೊನೊವೆಲ್ಲಿ ಸ್ಪೀಡ್‍‍ಮಾಸ್ಟರ್ ಬೈಕ್ ಭಾರತೀಯ ಮಾರುಕಟ್ಟೆಯಲ್ಲಿ ಹಾರ್ಲೆ-ಡೇವಿಡ್ಸನ್ 1200 ಕಸ್ಟಂ ಮಾದರಿಗೆ ಪೈಪೋಟಿಯನ್ನು ನೀಡುತ್ತದೆ. ಈ ಹೊಸ ಬೊನೊವೆಲ್ಲಿ ಸ್ಪೀಡ್‍‍ಮಾಸ್ಟರ್ ಬೈಕಿನಲ್ಲಿ ರೌಂಡ್ ಹೆಡ್‌ಲ್ಯಾಂಪ್ ಅನ್ನು ಅಳವಡಿಸಲಾಗಿದೆ.

MOST READ: ಬಿಡುಗಡೆಯ ಸನಿಹದಲ್ಲಿ ಬಹುನಿರೀಕ್ಷಿತ ಬಿಎಸ್-6 ಹೀರೋ ಬೈಕುಗಳು

ಬಿಡುಗಡೆಯಾಯ್ತು ಹೊಸ ಟ್ರಯಂಫ್ ಬೊನೊವೆಲ್ಲಿ ಸ್ಪೀಡ್‍‍ಮಾಸ್ಟರ್ ಬೈಕ್

ಈ ಬೈಕಿನಲ್ಲಿ ಬ್ರೆಂಬೊ 2-ಪಿಸ್ಟನ್ ಫ್ಲೋಟಿಂಗ್ ಕ್ಯಾಲಿಪರ್‌ಗಳೊಂದಿಗಿನ ಟ್ವಿನ್ 310 ಎಂಎಂ ಫ್ರಂಟ್ ಡಿಸ್ಕ್ ಬ್ರೇಕ್‌ಗಳನ್ನು ಅಳವಡಿಸಲಾಗಿದೆ. ಎರಡು ಎಕ್ಸಾಸ್ಟ್ ಗಳು ಕ್ರೋಮ್‌ ಫಿನಿಶಿಂಗ್ ಅನ್ನು ಹೊಂದಿದೆ.

ಬಿಡುಗಡೆಯಾಯ್ತು ಹೊಸ ಟ್ರಯಂಫ್ ಬೊನೊವೆಲ್ಲಿ ಸ್ಪೀಡ್‍‍ಮಾಸ್ಟರ್ ಬೈಕ್

ಹೊಸ ಟ್ರಯಂಫ್ ಬೊನೊವೆಲ್ಲಿ ಸ್ಪೀಡ್‍‍ಮಾಸ್ಟರ್ ಬೈಕ್ ಮೂರು ಬಣ್ಣಗಳ ಆಯ್ಕೆಯನ್ನು ಹೊಂದಿದೆ. ಇದರಲ್ಲಿ ಜೆಟ್ ಬ್ಲ್ಯಾಕ್ ಸಿಂಗಲ್-ಟೋನ್ ಬಣ್ಣವಾಗಿದ್ದರೆ, ಉಳಿದ ಎರಡು, ಕೋಬಾಲ್ಟ್ ಬ್ಲೂ/ಜೆಟ್ ಬ್ಲ್ಯಾಕ್ ಮತ್ತು ಫ್ಯೂಷನ್ ವೈಟ್/ಫ್ಯಾಂಟಮ್ ಬ್ಲ್ಯಾಕ್ ಎಂಬ ಡ್ಯುಯಲ್ ಟೂನ್ ಬಣ್ಣಗಳ ಆಯ್ಕೆಯನ್ನು ಹೊಂದಿದೆ.

MOST READ: ದುಬಾರಿಯಾಯ್ತು ಜನಪ್ರಿಯ ಬಿಎಸ್-6 ಹೋಂಡಾ ಆಕ್ಟಿವಾ 6ಜಿ ಸ್ಕೂಟರ್

ಬಿಡುಗಡೆಯಾಯ್ತು ಹೊಸ ಟ್ರಯಂಫ್ ಬೊನೊವೆಲ್ಲಿ ಸ್ಪೀಡ್‍‍ಮಾಸ್ಟರ್ ಬೈಕ್

ಇದರೊಂದಿಗೆ ಟ್ರಯಂಫ್ ಕಂಪನಿಯು ಹೊಸ ಸ್ಟ್ರೀಟ್ ಟ್ವಿನ್ ಬೈಕನ್ನು ಭಾರತದಲ್ಲಿ ಬಿಡುಗಡೆಗೊಳಿಸಿದೆ. ಈ ಬಿಎಸ್-6 ಟ್ರಯಂಫ್ ಸ್ಟ್ರೀಟ್ ಟ್ವಿನ್ ಬೈಕಿನ ಆರಂಭಿಕ ಬೆಲೆಯು ರೂ.7.45 ಲಕ್ಷಗಳಾಗಿದೆ.ಟ್ರಯಂಫ್ ಸ್ಟ್ರೀಟ್ ಟ್ವಿನ್ ಬೈಕ್ ಬಿಎಸ್ 6 ಅಪ್‌ಡೇಟ್‌ನ ಹೊರತಾಗಿ ಉಳಿದತೆ ಬಿಎಸ್-4 ಮಾದರಿಗೆ ಹೋಲುತ್ತದೆ. ಈ ಬೈಕಿನ ವಿನ್ಯಾಸವು 1959ರ ಬೊನೆವೆಲ್ಲಿ ಮಾದರಿಯಂತೆ ಮಾರ್ಡನ್ ಅಂಶಗಳೊಂದಿಗೆ ರೆಟ್ರೊ ಸ್ಟೈಲಿಂಗ್ ಅನ್ನು ಒಳಗೊಂಡಿದೆ.

ಬಿಡುಗಡೆಯಾಯ್ತು ಹೊಸ ಟ್ರಯಂಫ್ ಬೊನೊವೆಲ್ಲಿ ಸ್ಪೀಡ್‍‍ಮಾಸ್ಟರ್ ಬೈಕ್

ಇನ್ನು ಹೊಸ ಟ್ರಯಂಫ್ ಬೊನೊವೆಲ್ಲಿ ಸ್ಪೀಡ್‍‍ಮಾಸ್ಟರ್ ಬೈಕ್ ರೋಡ್ ಮತ್ತು ರೈನ್ ಎಂಬ ಎರಡು ರೈಡಿಂಗ್ ಮೋಡ್ ಗಳನ್ನು ಹೊಂದಿದೆ. ಈ ಹೊಸ ಟ್ರಯಂಫ್ ಬೊನೊವೆಲ್ಲಿ ಸ್ಪೀಡ್‍‍ಮಾಸ್ಟರ್ ಬೈಕಿನ ಬುಕ್ಕಿಂಗ್ ಅನ್ನು ಶೀಘ್ರದಲ್ಲೇ ಪ್ರಾರಂಬಿಸಲಿದೆ. ಇನ್ನು ಈ ಹೊಸ ಬೈಕಿನ ವಿತರಣೆಯನ್ನು ಈ ತಿಂಗಳ ಅಂತ್ಯದಲ್ಲಿ ಪ್ರಾರಂಭಿಸಬಹುದು ಎಂದು ನಿರೀಕ್ಷಿಸುತ್ತೇವೆ.

More from DriveSpark

Article Published On: Monday, August 17, 2020, 15:16 [IST]
English summary
BS6 Triumph Bonneville Speedmaster Launched. Read In Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+