ಮಾರಾಟದಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಟಿವಿಎಸ್ ರೇಡಿಯಾನ್ ಬೈಕ್

ಜನಪ್ರಿಯ ದ್ವಿಚಕ್ರ ವಾಹನ ಉತ್ಪಾದನಾ ಕಂಪನಿಯಾದ ಟಿವಿಎಸ್ ಮೋಟಾರ್ ತನ್ನ ರೇಡಿಯಾನ್ 110ಸಿಸಿ ಬೈಕನ್ನು ಮೊದಲ ಬಾರಿಗೆ ಭಾರತದಲ್ಲಿ 2018ರ ಆಗಸ್ಟ್‌ನಲ್ಲಿ ಬಿಡುಗಡೆಗೊಳಿಸಿತ್ತು. ಇದೀಗ ಈ ಟಿವಿಎಸ್ ರೇಡಿಯಾನ್ ಬೈಕ್ ಮಾರಾಟದಲ್ಲಿ ಹೊಸ ಮೈಲುಗಲ್ಲು ಸಾಧಿಸಿದೆ.

ಮಾರಾಟದಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಟಿವಿಎಸ್ ರೇಡಿಯಾನ್ ಬೈಕ್

ಬಿಡುಗಡೆಯಾದಾಗಿನಿಂದ ಇಲ್ಲಿಯವರೆಗೆ ಟಿವಿಎಸ್ ರೇಡಿಯಾನ್ ಬೈಕಿನ ಮೂರು ಲಕ್ಷ ಯೂನಿಟ್‌ಗಳು ಮಾರಾಟವಾಗಿ ಹೊಸ ಮೈಲುಗಲ್ಲು ಮುಟ್ಟಿದೆ. ಇದೀಗ ಟಿವಿಎಸ್ ರೇಡಿಯಾನ್ ಬೈಕ್ ಹೊಸ ರೀಗಲ್ ಬ್ಲೂ ಮತ್ತು ಕ್ರೋಮ್ ಪರ್ಪಲ್ ಎಂಬ ಎರಡು ಹೊಸ ಬಣ್ಣಗಳನ್ನು ಪಡೆದುಕೊಂಡಿದೆ. ಹೊಸ ಬಣ್ಣಗಳ ಆಯ್ಕೆಯನ್ನು ಹೊರತಾಗಿ ಉಳಿದ ಯಾವುದೇ ಬದಲಾವಣೆಗಳನ್ನು ಹೊಂದಿರುವುದಿಲ್ಲ.

ಮಾರಾಟದಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಟಿವಿಎಸ್ ರೇಡಿಯಾನ್ ಬೈಕ್

ಟಿವಿಎಸ್ ಮೋಟಾರ್ ತನ್ನ ಬಿಎಸ್-6 ರೇಡಿಯಾನ್ ಬೈಕನ್ನು ಭಾರತದಲ್ಲಿ 2020ರ ಏಪ್ರಿಲ್‌ ತಿಂಗಳಲ್ಲಿ ಬಿಡುಗಡೆಗೊಳಿಸಿತು. ಈ ಹೊಸ ಟಿವಿಎಸ್ ರೇಡಿಯಾನ್ ಬೈಕಿನ ಪ್ರಾರಂಭಿಕ ಬೆಲೆಯು ದೆಹಲಿ ಎಕ್ಸ್ ಶೋರೂಂ ಪ್ರಕಾರ ರೂ.59,942 ಗಳಾಗಿದೆ.

MOST READ: ದುಬಾರಿಯಾಯ್ತು ಜನಪ್ರಿಯ ಬಿಎಸ್-6 ಯಮಹಾ ಎಂಟಿ-15 ಬೈಕ್

ಮಾರಾಟದಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಟಿವಿಎಸ್ ರೇಡಿಯಾನ್ ಬೈಕ್

ಹೊಸ ಟಿವಿಎಸ್ ರೇಡಿಯಾನ್ ಬೈಕಿನಲ್ಲಿ ಹಿಂದಿನ ಮಾದರಿಯಲ್ಲಿರುವಂತಹ 109.7 ಸಿಸಿ ಎಂಜಿನ್ ಅನ್ನು ಅಳವಡಿಸಲಾಗಿದೆ. ಈ ಎಂಜಿನ್ ಅನ್ನು ಬಿಎಸ್-6 ಮಾಲಿನ್ಯ ನಿಯಮಕ್ಕೆ ಅನುಗುಣವಾಗಿ ನವೀಕರಿಸಲಾಗಿದೆ. ಈ ಎಂಜಿನ್ 7,350 ಆರ್‌ಪಿಎಂನಲ್ಲಿ 8.08 ಬಿಹೆಚ್‌ಪಿ ಪವರ್ ಮತ್ತು 4,500 ಆರ್‌ಪಿಎಂನಲ್ಲಿ 8.7 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ.

ಮಾರಾಟದಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಟಿವಿಎಸ್ ರೇಡಿಯಾನ್ ಬೈಕ್

ಎಂಜಿನ್ ನೊಂದಿಗೆ ನಾಲ್ಕು-ಸ್ಪೀಡ್ ಗೇರ್‌ಬಾಕ್ಸ್‌ ಜೋಡಿಸಲಾಗಿದೆ. ಈ ಎಂಜಿನ್ ನಲ್ಲಿ ಫ್ಯೂಯಲ್ ಇಂಜೆಕ್ಷನ್ ಅನ್ನು ಸೇರ್ಪಡಿಸಲಾಗಿದೆ. ಇದರಿಂದಾಗಿ ಹೊಸ ಬೈಕಿನ ಮೈಲೇಜ್ 15% ಸುಧಾರಣೆಯಾಗಿದೆ ಎಂದು ಕಂಪನಿ ಹೇಳಿದೆ.

MOST READ: ರಾಯಲ್ ಎನ್‍‍ಫೀಲ್ಡ್ ಬೈಕ್‍‍ಗಳಿಗೆ ಟಕ್ಕರ್ ನೀಡಲು ಸಜ್ಜಾದ ಹೊಸ ಹೋಂಡಾ ಬೈಕ್

ಮಾರಾಟದಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಟಿವಿಎಸ್ ರೇಡಿಯಾನ್ ಬೈಕ್

ಹಿಂದಿನ ಬಿಎಸ್-4 ಟಿವಿಎಸ್ ರೇಡಿಯಾನ್ ಮಾದರಿಯ 109.7 ಸಿಸಿ ಎಂಜಿನ್ 7,000 ಆರ್‌ಪಿಎಂನಲ್ಲಿ 8.2 ಬಿಹೆಚ್‌ಪಿ ಪವರ್ ಮತ್ತು 5,000 ಆರ್‌ಪಿಎಂನಲ್ಲಿ 8.7 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ.

ಮಾರಾಟದಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಟಿವಿಎಸ್ ರೇಡಿಯಾನ್ ಬೈಕ್

ಬಿಎಸ್-6 ರೇಡಿಯಾನ್ ಬೈಕ್ ಡಿಸ್ಕ್ ಬ್ರೇಕ್ ಮತ್ತು ಡ್ರಮ್ ಬ್ರೇಕ್ ಎಂಬ ಎರಡು ರೂಪಾಂತರಗಳಲ್ಲಿ ಲಭ್ಯವಿದೆ. ಇದರಲ್ಲಿ ಡಿಸ್ಕ್ ಬ್ರೇಕ್ ರೂಪಾಂತರವು ಈಗ 118 ಕೆಜಿ ತೂಕವನ್ನು ಹೊಂದಿದ್ದರೆ, ಡ್ರಮ್ ಬ್ರೇಕ್ ರೂಪಾಂತರವು 116 ಕೆಜಿ ತೂಕವನ್ನು ಹೊಂದಿದೆ.

MOST READ: ಬಿಡುಗಡೆಯಾಯ್ತು ಹೊಸ ಕವಾಸಕಿ ವಲ್ಕನ್ ಎಸ್ ಬೈಕ್

ಮಾರಾಟದಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಟಿವಿಎಸ್ ರೇಡಿಯಾನ್ ಬೈಕ್

ಇನ್ನು ಡಿಸ್ಕ್ ಬ್ರೇಕ್ ರೂಪಾಂತರವು ಟ್ಯಾಂಕ್ ಪ್ಯಾಡ್, ಪೆಟ್ರೋಲ್ ಟ್ಯಾಂಕ್ ಕುಶನ್, ಪ್ರೀಮಿಯಂ ಸೀಟ್ ವಿನ್ಯಾಸ, ಕ್ರೋಮ್ ರೇರ್ ವ್ಯೂ ಮಿರರ್ ಮತ್ತು ಹೊಸ ಗ್ರಾಫಿಕ್ಸ್ ಅನ್ನು ಹೊಂದಿದೆ. ಈ ಟಿವಿಎಸ್ ರೇಡಿಯಾನ್ ಬೈಕ್ ಆಕರ್ಷಕ ಲುಕ್ ಅನ್ನು ಹೊಂದಿದೆ.

ಮಾರಾಟದಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಟಿವಿಎಸ್ ರೇಡಿಯಾನ್ ಬೈಕ್

ಇದರೊಂದಿಗೆ ಈ ಬೈಕಿನಲ್ಲಿ ಹ್ಯಾಲೊಜೆನ್ ಹೆಡ್‌ಲ್ಯಾಂಪ್, ಇಂಟಿಗ್ರೇಟೆಡ್ ಎಲ್‌ಇಡಿ ಡಿಆರ್‌ಎಲ್, ಎಲ್‌ಇಡಿ ಟೇಲ್ ಲ್ಯಾಂಪ್‌ಗಳು ಮತ್ತು ಹಿಂಭಾಗದಲ್ಲಿ ಲಗೇಜ್ ರ್ಯಾಕ್ ಅನ್ನು ಹೊಂದಿದೆ.

MOST READ: ದುಬಾರಿಯಾಯ್ತು ಬಿಎಸ್-6 ಟಿವಿಎಸ್ ಎನ್‌ಟಾರ್ಕ್ 125 ಸ್ಕೂಟರ್

ಮಾರಾಟದಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಟಿವಿಎಸ್ ರೇಡಿಯಾನ್ ಬೈಕ್

ಇನ್ನು ಈ ಹೊಸ ಟಿವಿಎಸ್ ರೇಡಿಯಾನ್ ಬೈಕಿನ ಮುಂಭಾಗದಲ್ಲಿ ಟೆಲಿಸ್ಕೋಪಿಕ್ ಫೋರ್ಕ್‌ಗಳು ಮತ್ತು ಹಿಂಭಾಗದಲ್ಲಿ ಡ್ಯುಯಲ್-ಶಾಕ್ಸ್ ಸಸ್ಪೆಂಕ್ಷನ್ ಸೆಟಪ್ ಅನ್ನು ಅಳವಡಿಸಿದೆ.

ಮಾರಾಟದಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಟಿವಿಎಸ್ ರೇಡಿಯಾನ್ ಬೈಕ್

ಹೊಸ ಟಿವಿಎಸ್ ರೇಡಿಯಾನ್ ಬೈಕಿನಲ್ಲಿ ಸಿಂಕ್ರೊನೈಸ್ಡ್ ಬ್ರೇಕಿಂಗ್ ತಂತ್ರಜ್ಞಾನವನ್ನು ಸ್ಟ್ಯಾಂಡರ್ಡ್ ಆಗಿ ಅಳವಡಿಸಲಾಗಿದೆ. ಈ ಬಿಎಸ್-6 ಟಿವಿಎಸ್ ರೇಡಿಯಾನ್ ಬೈಕ್ 79.3 ಕಿ.ಮೀ ಮೈಲೇಜ್ ಅನ್ನು ನೀಡುತ್ತದೆ.

Article Published On: Thursday, September 17, 2020, 15:54 [IST]
English summary
TVS Radeon Gets Two New Colour Schemes To Commemorate Three Lakh Sales Milestone. Read In Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+