ಮತ್ತಷ್ಟು ದುಬಾರಿಯಾಯ್ತು ಜನಪ್ರಿಯ ಬಿಎಸ್-6 ಯಮಹಾ ಆರ್15 3.0 ಬೈಕ್

ಯಮಹಾ ಕಂಪನಿಯು ಈ ವರ್ಷದ ಆರಂಭದಲ್ಲಿ ಬಿಎಸ್-6 ಆರ್15 3.0 ಬೈಕನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಿತು. ಈ ಹೊಸ ಯಮಹಾ ಆರ್15 3.0 ಬೈಕಿನ ಬೆಲೆಯನ್ನು 2020ರ ಮೇ ತಿಂಗಳಲ್ಲಿ ರೂ.1,000 ಏರಿಕೆ ಮಾಡಲಾಗಿತ್ತು.

ಮತ್ತಷ್ಟು ದುಬಾರಿಯಾಯ್ತು ಜನಪ್ರಿಯ ಬಿಎಸ್-6 ಯಮಹಾ ಆರ್15 3.0 ಬೈಕ್

ಇತ್ತೀಚಿನ ವರದಿಗಳ ಪ್ರಕಾರ, ಯಮಹಾ ಕಂಪನಿಯು ತನ್ನ ಎಂಟ್ರಿ ಲೆವೆಲ್ ಸ್ಪೋರ್ಟ್ಸ್ ಬೈಕ್ ಆರ್15 3.0 ಬೈಕಿನ ಬೆಲೆಯನ್ನು ಮತ್ತೊಮ್ಮೆ ಹೆಚ್ಚಿಸಿದೆ. ಈ ಬಾರಿ ಯಮಹಾ ಕಂಪನಿಯು ಆರ್15 3.0 ಬೈಕಿನ ಎಲ್ಲಾ ಮೂರು ಬಣ್ಣಗಳ ಮಾದರಿಯ ಬೆಲೆಯನ್ನು ರೂ.2,100 ಗಳವರೆಗೆ ಹೆಚ್ಚಿಸಲಾಗಿದೆ. ಈ ಬಿಎಸ್-6 ಯಮಹಾ ಆರ್15 3.0 ಬೈಕಿನ ಥಂಡರ್ ಗ್ರೇ, ರೇಸಿಂಗ್ ಬ್ಲೂ ಮತ್ತು ಡಾರ್ಕ್ ನೈಟ್ ಎಂಬ ಮೂರು ಮಾದರಿಗಳ ಬೆಲೆಗಳು ಕ್ರಮವಾಗಿ ರೂ.1.47 ಲಕ್ಷ, ರೂ.1.49 ಲಕ್ಷ ಮತ್ತು ರೂ.1.50 ಲಕ್ಷಗಳಾಗಿದೆ.

ಮತ್ತಷ್ಟು ದುಬಾರಿಯಾಯ್ತು ಜನಪ್ರಿಯ ಬಿಎಸ್-6 ಯಮಹಾ ಆರ್15 3.0 ಬೈಕ್

ಮೇಲಿನ ಎಲ್ಲಾ ಬೆಲೆಗಳು ಭಾರತದ ಎಕ್ಸ್ ಶೋರೂಂ ಪ್ರಕಾರವಾಗಿದೆ. ಲಾಕ್‌ಡೌನ್ ಸಮಯದಲ್ಲಿ ಕಂಪನಿಯು ದೊಡ್ದ ಮಟ್ಟದಲ್ಲಿ ನಷ್ಟವನ್ನು ಅನುಭವಿಸಿತು. ಇದರಿಂದಾಗಿ ಯಮಹಾ ಕಂಪನಿಯು ಆರ್15 3.0 ಬೈಕಿನ ಬೆಲೆಯನ್ನು ಹೆಚ್ಚಿಸಿದೆ.

MOST READ: ಬಿಡುಗಡೆಯಾಯ್ತು ಬಹುನಿರೀಕ್ಷಿತ ಹೊಸ ಹೋಂಡಾ ಎಕ್ಸ್-ಬ್ಲೇಡ್ ಬೈಕ್

ಮತ್ತಷ್ಟು ದುಬಾರಿಯಾಯ್ತು ಜನಪ್ರಿಯ ಬಿಎಸ್-6 ಯಮಹಾ ಆರ್15 3.0 ಬೈಕ್

ಯಮಹಾ ಆರ್ 15ವಿ 3.0 ಮಾದರಿಯಲ್ಲಿ 155 ಸಿಸಿ, ಸಿಂಗಲ್ ಸಿಲಿಂಡರ್, ಲಿಕ್ವಿಡ್-ಕೂಲ್ಡ್ ಎಂಜಿನ್ ಎಂಜಿನ್ ಅನ್ನು ಹೊಂದಿದೆ. ಈ ಎಂಜಿನ್ 18.3 ಬಿಹೆಚ್‍ಪಿ ಪವರ್ ಮತ್ತು 14.1 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಎಂಜಿನ್ ಸ್ಲಿಪ್ಪರ್ ಅಸಿಸ್ಟೆಡ್ ಕ್ಲಚ್ನೊಂದಿಗೆ ಸ್ಟ್ಯಾಂಡರ್ಡ್ ಸಿಕ್ಸ್-ಸ್ಪೀಡ್ ಗೇರ್ ಬಾಕ್ಸ್ ಜೋಡಿಸಲಾಗಿದೆ.

ಮತ್ತಷ್ಟು ದುಬಾರಿಯಾಯ್ತು ಜನಪ್ರಿಯ ಬಿಎಸ್-6 ಯಮಹಾ ಆರ್15 3.0 ಬೈಕ್

ಈ ಹೊಸ ಯಮಹಾ ಆರ್ 15ವಿ 3.0 ಬೈಕಿನಲ್ಲಿ ಎಲ್ಇಡಿ ಹೆಡ್‌ಲ್ಯಾಂಪ್ ಮತ್ತು ಟೈಲ್-ಲ್ಯಾಂಪ್, ಇನ್ಸ್ ಟ್ರೂಮೆಂಟ್ ಕ್ಲಸ್ಟರ್ ಗಾಗಿ ಸಂಪೂರ್ಣ ಡಿಜಿಟಲ್ ಎಲ್‌ಸಿಡಿ, ಮತ್ತು ಸ್ಪ್ಲಿಟ್-ಸ್ಟೈಲ್ ಸ್ಟೆಪ್-ಅಪ್ ಸೀಟ್ ಅನ್ನು ಹೊಂದಿದೆ. ಇನ್ನು ಈ ಹೊಸ ಮಾದರಿಯಲ್ಲಿ ರೇಡಿಯಲ್ ಟಯರ್, ಡ್ಯುಯಲ್ ಡ್ಯುಯಲ್-ಹಾರ್ನ್ ಮತ್ತು ಸೈಡ್-ಸ್ಟ್ಯಾಂಡ್ ಆಕ್ಟಿವೇಟೆಡ್ ಎಂಜಿನ್ ಕಟ್-ಆಫ್ ಫೀಚರುಗಳನ್ನು ಒಳಗೊಂಡಿವೆ.

MOST READ: ಭಾರತಕ್ಕೆ ಲಗ್ಗೆ ಇಡಲಿದೆ ಜನಪ್ರಿಯ ಟ್ರಯಂಫ್ ಸ್ಟ್ರೀಟ್ ಟ್ರಿಪಲ್ ಆರ್ ಬೈಕ್

ಮತ್ತಷ್ಟು ದುಬಾರಿಯಾಯ್ತು ಜನಪ್ರಿಯ ಬಿಎಸ್-6 ಯಮಹಾ ಆರ್15 3.0 ಬೈಕ್

ಈ ಹೊಸ ಯಮಹಾ ಆರ್ 15ವಿ 3.0 ಬೈಕಿನಲ್ಲಿ ಸಸ್ಪೆಂಕ್ಷನ್ ಗಾಗಿ ಮುಂಭಾಗದಲ್ಲಿ ಟೆಲಿಸ್ಕೋಪಿಕ್ ಫೋರ್ಕ್ ಮತ್ತು ಹಿಂಭಾಗದಲ್ಲಿ ಮೊನೊ-ಶಾಕ್ ಸಸ್ಪೆಂಕ್ಷನ್ ಸೆಟಪ್ ಅನ್ನು ಅಳವಡಿಸಲಾಗಿದೆ.

ಮತ್ತಷ್ಟು ದುಬಾರಿಯಾಯ್ತು ಜನಪ್ರಿಯ ಬಿಎಸ್-6 ಯಮಹಾ ಆರ್15 3.0 ಬೈಕ್

ಇನ್ನು ಈ ಹೊಸ ಬೈಕಿನಲ್ಲಿ ಬ್ರೇಕಿಂಗ್ ಸಿಸ್ಟಂಗಾಗಿ ಮುಂಭಾಗದಲ್ಲಿ 282 ಎಂಎಂ ಮತ್ತು ಹಿಂಭಾಗದಲ್ಲಿ 220 ಎಂಎಂ ಡಿಸ್ಕ್ ಬ್ರೇಕ್ ಅನ್ನು ಅಳವಡಿಸಲಾಗಿದೆ. ಇದರೊಂದಿಗೆ ಡ್ಯುಯಲ್ ಚಾನೆಲ್ ಎಬಿಎಸ್ ಅನ್ನು ಸ್ಟ್ಯಾಂಡರ್ಡ್ ಆಗಿ ಅಳವಡಿಸಲಾಗಿದೆ.

MOST READ: ಬಿಡುಗಡೆಯ ಸನಿಹದಲ್ಲಿ ಬಹುನಿರೀಕ್ಷಿತ ಬಿಎಸ್-6 ಹೀರೋ ಬೈಕುಗಳು

ಮತ್ತಷ್ಟು ದುಬಾರಿಯಾಯ್ತು ಜನಪ್ರಿಯ ಬಿಎಸ್-6 ಯಮಹಾ ಆರ್15 3.0 ಬೈಕ್

ಈ ಬಿಎಸ್-6 ಯಮಹಾ ಆರ್15 3.0 ಬೈಕ್ ಭಾರತೀಯ ಮಾರುಕಟ್ಟೆಯಲ್ಲಿ ಕೆಟಿಎಂ ಆರ್‌ಸಿ 200 ಮತ್ತು ಸುಜುಕಿ ಜಿಕ್ಸರ್ ಎಸ್‌ಎಫ್‌ ಬೈಕುಗಳಿಗೆ ಪೈಪೋಟಿಯನ್ನು ನೀಡುತ್ತದೆ. ಈ ಹೊಸ ಯಮಹಾ ಆರ್15 3.0 ಬೈಕ್ ಅಗ್ರೇಸಿವ್ ಲುಕ್ ಅನ್ನು ಹೊಂದಿದೆ.

ಮತ್ತಷ್ಟು ದುಬಾರಿಯಾಯ್ತು ಜನಪ್ರಿಯ ಬಿಎಸ್-6 ಯಮಹಾ ಆರ್15 3.0 ಬೈಕ್

ಬಿಎಸ್-6 ಯಮಹಾ ಆರ್15 3.0 ಬೈಕ್ ಭಾರತೀಯ ಮಾರುಕಟ್ಟೆಯಲ್ಲಿ ಅತ್ಯಂತ ಉತ್ತಮ ಸ್ಪೋರ್ಟ್ಸ್ ಬೈಕ್‌ಗಳಲ್ಲಿ ಒಂದಾಗಿದೆ. ಬಿಎಸ್-6 ಯಮಹಾ ಆರ್15 3.0 ಬೈಕಿನ ಬೆಲೆ ಏರಿಕೆ ಮಾಡಿರುವುದರಿಂದ ಮಾರುಕಟ್ಟೆಯಲ್ಲಿ ಬೇಡಿಕೆಯ ಮೇಲೆ ಪರಿಣಾಮ ಬೀರುವುದಿಲ್ಲವೆಂದು ನಿರೀಕ್ಷಿಸುತ್ತೇವೆ.

Most Read Articles

Kannada
Read more on ಯಮಹಾ yamaha
English summary
Yamaha R15 V3.0 Price Increase Announced. Read In Kannada.
Story first published: Tuesday, August 4, 2020, 12:22 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X