ಎಲೆಕ್ಟ್ರಿಕ್ ವಾಹನಗಳ ಉತ್ಪಾದನೆಗಾಗಿ ಭಾರೀ ಪ್ರಮಾಣದ ಹೂಡಿಕೆಗೆ ಮುಂದಾದ ಓಲಾ

ಹೆಚ್ಚುತ್ತಿರುವ ಇಂಧನ ಬೆಲೆಗಳ ಪರಿಣಾಮ ಪರಿಸರ ಸ್ನೇಹಿ ಎಲೆಕ್ಟ್ರಿಕ್ ವಾಹನಗಳ ಮಾರಾಟವು ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಗ್ರಾಹಕರ ಬೇಡಿಕೆಗೆ ಅನುಗುಣವಾಗಿ ಹಲವಾರು ಆಟೋ ಕಂಪನಿಗಳು ವಿವಿಧ ಮಾದರಿಯ ಎಲೆಕ್ಟ್ರಿಕ್ ವಾಹನಗಳನ್ನು ಪರಿಚಯಿಸುತ್ತಿವೆ.

ಎಲೆಕ್ಟ್ರಿಕ್ ವಾಹನಗಳ ಉತ್ಪಾದನೆಗಾಗಿ ಭಾರೀ ಪ್ರಮಾಣದ ಹೂಡಿಕೆಗೆ ಮುಂದಾದ ಓಲಾ

ಹೊಸ ಮಾದರಿಯ ಎಲೆಕ್ಟ್ರಿಕ್ ವಾಹನಗಳ ಉತ್ಪಾದನೆಯಲ್ಲಿ ಈಗಾಗಲೇ ಸಾಂಪ್ರಾದಾಯಿಕ ವಾಹನಗಳನ್ನು ಮಾರಾಟ ಮಾಡುತ್ತಿರುವ ಕಂಪನಿಗಳಿಂತಲೂ ಸ್ಟಾರ್ಟ್-ಅಪ್ ಕಂಪನಿಗಳೇ ಹೆಚ್ಟಿನ ಮಟ್ಟದಲ್ಲಿ ಗ್ರಾಹಕರ ಗಮನಸೆಳೆಯುವಲ್ಲಿ ಯಶಸ್ವಿಯಾಗುತ್ತಿದ್ದು, ಈಗಾಗಲೇ ಹಲವಾರು ಸ್ಟಾರ್ಟ್-ಅಪ್ ಕಂಪನಿಗಳು ವಿವಿಧ ಮಾದರಿಯ ಇವಿ ವಾಹನಗಳನ್ನು ಮಾರಾಟ ಮಾಡುವಲ್ಲಿ ಮುನ್ನಡೆ ಸಾಧಿಸುತ್ತಿವೆ.

ಎಲೆಕ್ಟ್ರಿಕ್ ವಾಹನಗಳ ಉತ್ಪಾದನೆಗಾಗಿ ಭಾರೀ ಪ್ರಮಾಣದ ಹೂಡಿಕೆಗೆ ಮುಂದಾದ ಓಲಾ

ಈ ನಿಟ್ಟಿನಲ್ಲಿ ಹೊಸ ಪಯತ್ನಕ್ಕೆ ಕೈ ಹಾಕಿರುವ ದೇಶದ ಅತಿ ದೊಡ್ಡ ಕ್ಯಾಬ್ ಸೇವಾ ಕಂಪನಿಯಾದ ಓಲಾ ಕೂಡಾ ಇದೀಗ ಹೊಸ ಉದ್ಯಮದಲ್ಲಿ ಭಾರೀ ಪ್ರಮಾಣದ ಹೂಡಿಕೆಗೆ ಸಿದ್ದವಾಗುತ್ತಿದ್ದು, ಭಾರತದಲ್ಲೇ ಅತಿ ದೊಡ್ಡಇವಿ ಸ್ಕೂಟರ್ ನಿರ್ಮಾಣ ಘಟಕವನ್ನು ತೆರೆಯುವ ಯೋಜನೆಯಲ್ಲಿದೆ.

ಎಲೆಕ್ಟ್ರಿಕ್ ವಾಹನಗಳ ಉತ್ಪಾದನೆಗಾಗಿ ಭಾರೀ ಪ್ರಮಾಣದ ಹೂಡಿಕೆಗೆ ಮುಂದಾದ ಓಲಾ

ಹೊಸ ಯೋಜನೆಗಾಗಿ ಈಗಾಗಲೇ ವಿವಿಧ ರಾಜ್ಯ ಸರ್ಕಾರಗಳ ಜೊತೆ ಮಾತುಕತೆ ನಡೆಸಿರುವ ಓಲಾ ಹಿರಿಯ ಅಧಿಕಾರಿಗಳು ಹೊಸ ವಾಹನ ಉತ್ಪಾದನಾ ಘಟಕಕ್ಕಾಗಿ ಒಟ್ಟು 100 ಏಕರೆ ಭೂಸ್ವಾಧೀನ ಪ್ರಕ್ರಿಯೆಗೆ ಪ್ರಸ್ತಾಪ ಸಲ್ಲಿಸಿದ್ದು, ಹೊಸ ವಾಹನ ಉತ್ಪಾದನಾ ಘಟಕ ನಿರ್ಮಾಣಕ್ಕಾಗಿ ಅಂತಿಮ ನಿರ್ಧಾರ ಪ್ರಕಟಿಸುವ ಸಿದ್ದತೆಯಲ್ಲಿದೆ.

ಎಲೆಕ್ಟ್ರಿಕ್ ವಾಹನಗಳ ಉತ್ಪಾದನೆಗಾಗಿ ಭಾರೀ ಪ್ರಮಾಣದ ಹೂಡಿಕೆಗೆ ಮುಂದಾದ ಓಲಾ

ಓಲಾ ಕಂಪನಿಯು ಹೊಸ ಎಲೆಕ್ಟ್ರಿಕ್ ಸ್ಕೂಟರ್ ಉತ್ಪಾದನಾ ಘಟಕದಲ್ಲಿ ವಾರ್ಷಿಕವಾಗಿ 20 ಲಕ್ಷ ಯುನಿಟ್ ಉತ್ಪಾದನೆ ಮಾಡುವ ಗುರಿಹೊಂದಿದ್ದು, ಹೊಸ ಯೋಜನೆಗಾಗಿ ಈಗಾಗಲೇ ನೆದರ್ಲ್ಯಾಂಡ್ ಮೂಲದ ಎಟರ್ಗೋ ಎನ್ನುವ ಎಲೆಕ್ಟ್ರಿಕ್ ವಾಹನ ಉತ್ಪಾದನಾ ಕಂಪನಿಯೊಂದಿಗೆ ಸಹಭಾಗೀತ್ವಕ್ಕಾಗಿ ಮಾತುಕತೆ ನಡೆಸಿದೆ.

ಎಲೆಕ್ಟ್ರಿಕ್ ವಾಹನಗಳ ಉತ್ಪಾದನೆಗಾಗಿ ಭಾರೀ ಪ್ರಮಾಣದ ಹೂಡಿಕೆಗೆ ಮುಂದಾದ ಓಲಾ

ಒಂದೇ ವಾಹನ ಉತ್ಪಾದನಾ ಘಟಕದಲ್ಲಿ ವಿವಿಧ ಸ್ಕೂಟರ್ ಕಂಪನಿಗಳ ಉತ್ಪನ್ನಗಳ ನಿರ್ಮಾಣಕ್ಕಾಗಿ ಒಂದೇ ಸೂರಿನಡಿ ಸೌಲಭ್ಯ ಒದಗಿಸಲಿರುವ ಓಲಾ ಕಂಪನಿಯು ಭಾರೀ ಪ್ರಮಾಣದ ಆದಾಯ ನೀರಿಕ್ಷೆಯಲ್ಲಿದ್ದು, ಶೀಘ್ರದಲ್ಲೇ ಹೊಸ ಯೋಜನೆ ಬಗೆಗೆ ಮತ್ತಷ್ಟು ಮಾಹಿತಿ ಹಂಚಿಕೊಳ್ಳುವುದಾಗಿ ಮಾಧ್ಯಮ ಸಂಸ್ಥೆಯೊಂದರ ಸಂದರ್ಶನದಲ್ಲಿ ಓಲಾ ಸ್ಪಷ್ಟನೆ ನೀಡಿದೆ.

ಎಲೆಕ್ಟ್ರಿಕ್ ವಾಹನಗಳ ಉತ್ಪಾದನೆಗಾಗಿ ಭಾರೀ ಪ್ರಮಾಣದ ಹೂಡಿಕೆಗೆ ಮುಂದಾದ ಓಲಾ

ಇನ್ನು ಪೆಟ್ರೋಲ್ ಮತ್ತು ಡೀಸೆಲ್ ವಾಹನಗಳ ಬಳಕೆಯನ್ನು ತಗ್ಗಿಸುವುದಕ್ಕಾಗಿ ಮತ್ತು ಎಲೆಕ್ಟ್ರಿಕ್ ವಾಹನಗಳ ಬಳಕೆ ಉತ್ತೇಜಿಸಲು ವಿಶ್ವಾದ್ಯಂತ ಪ್ರಮುಖ ರಾಷ್ಟ್ರಗಳು ಹಲವಾರು ಯೋಜನೆಗಳನ್ನು ಜಾರಿಗೆ ತಂದಿದ್ದು, ಭಾರತದಲ್ಲೂ ಕೇಂದ್ರ ಸರ್ಕಾರವು ಫೇಮ್ 2 ಯೋಜನೆ ಅಡಿ ಇವಿ ವಾಹನಗಳ ಬಳಕೆಗೆ ಉತ್ತೇಜಿಸುತ್ತಿದೆ.

MOST READ: ಅತಿ ಕಡಿಮೆ ಬೆಲೆಯಲ್ಲಿ ಹೆಚ್ಚು ಮೈಲೇಜ್ ನೀಡುವ ರೆಟ್ರೊ ಎಲೆಕ್ಟ್ರಿಕ್ ಬೈಕ್ ಬಿಡುಗಡೆ

ಎಲೆಕ್ಟ್ರಿಕ್ ವಾಹನಗಳ ಉತ್ಪಾದನೆಗಾಗಿ ಭಾರೀ ಪ್ರಮಾಣದ ಹೂಡಿಕೆಗೆ ಮುಂದಾದ ಓಲಾ

ಮಾಲಿನ್ಯ ಪ್ರಮಾಣವನ್ನು ಪರಿಣಾಮಕಾರಿಯಾಗಿ ತಗ್ಗಿಸಲು 2030ರ ವೇಳೆಗೆ ಸಂಪೂರ್ಣವಾಗಿ ಎಲೆಕ್ಟ್ರಿಕ್ ವಾಹನಗಳ ಮಾರಾಟ ಗುರಿಹೊಂದಲಾಗಿದ್ದು, ಹಂತ-ಹಂತವಾಗಿ ಪೆಟ್ರೋಲ್ ಮತ್ತು ಡೀಸೆಲ್ ವಾಹನಗಳನ್ನು ತಗ್ಗಿಸಲು ಹಲವಾರು ಕಠಿಣ ಕ್ರಮಗಳನ್ನು ಜಾರಿಗೆ ತರಲಾಗುತ್ತಿದೆ.

ಎಲೆಕ್ಟ್ರಿಕ್ ವಾಹನಗಳ ಉತ್ಪಾದನೆಗಾಗಿ ಭಾರೀ ಪ್ರಮಾಣದ ಹೂಡಿಕೆಗೆ ಮುಂದಾದ ಓಲಾ

ಯುರೋಪಿನ ಪ್ರಮುಖ ರಾಷ್ಟ್ರಗಳಲ್ಲಿ ಈಗಾಗಲೇ ಡೀಸೆಲ್ ವಾಹನಗಳ ಮಾರಾಟದಲ್ಲಿ ಭಾರೀ ಪ್ರಮಾಣದಲ್ಲಿ ಇಳಿಕೆಯಾಗಿದ್ದು, ಪೆಟ್ರೋಲ್, ಪೆಟ್ರೋಲ್ ಹೈಬ್ರಿಡ್ ಮತ್ತು ಪೂರ್ಣ ಎಲೆಕ್ಟ್ರಿಕ್ ವಾಹನಗಳ ಮಾತ್ರ ಲಭ್ಯವಿವೆ. ಮುಂಬರುವ ಕೆಲವೇ ವರ್ಷಗಳಲ್ಲಿ ಪೆಟ್ರೋಲ್ ವಾಹನಗಳ ಮಾರಾಟವನ್ನು ಸಹ ಕಡಿತಗೊಳಿಸುವ ಯೋಜನೆ ಹೊಂದಲಾಗಿದ್ದು, ಭವಿಷ್ಯದಲ್ಲಿ ಎಲೆಕ್ಟ್ರಿಕ್ ವಾಹನಗಳೇ ಪ್ರಮುಖ ಸಾರಿಗೆ ಸಾಧನವಾಗಲಿವೆ.

MOST READ: ಭಾರತದಲ್ಲಿಯೂ ಬಿಡುಗಡೆಯಾಗಲಿದೆ ದುಬಾರಿ ಬೆಲೆಯ ಫೋರ್ಜಾ ಮ್ಯಾಕ್ಸಿ ಸ್ಕೂಟರ್

ಎಲೆಕ್ಟ್ರಿಕ್ ವಾಹನಗಳ ಉತ್ಪಾದನೆಗಾಗಿ ಭಾರೀ ಪ್ರಮಾಣದ ಹೂಡಿಕೆಗೆ ಮುಂದಾದ ಓಲಾ

ಈ ನಿಟ್ಟಿನಲ್ಲಿ ಭವಿಷ್ಯದ ಯೋಜನೆಗಾಗಿ ಭಾರೀ ಪ್ರಮಾಣದ ಹೂಡಿಕೆ ಮಾಡುತ್ತಿರುವ ವಿವಿಧ ಕಂಪನಿಗಳು ಹೊಸ ಉದ್ಯಮದಲ್ಲಿ ಭಾರೀ ಪ್ರಮಾಣದ ಆದಾಯ ನೀರಿಕ್ಷೆಯಲ್ಲಿದ್ದು, ಓಲಾ ಕಂಪನಿಯು ಕೂಡಾ ಇದೀಗ ಎಲೆಕ್ಟ್ರಿಕ್ ವಾಹನಗಳ ಉತ್ಪಾದನೆಯತ್ತ ಮುಖಮಾಡಿದೆ.

Most Read Articles

Kannada
English summary
Ola is planning to enter electric scooter production in India. Read in Kannada.
Story first published: Wednesday, November 4, 2020, 22:05 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X