ಕರೋನಾ ಸಂಕಷ್ಟ: ದ್ವಿಚಕ್ರ ವಾಹನ ಖರೀದಿಸುವ ಗ್ರಾಹಕರಿಗೆ ಸಿಹಿಸುದ್ದಿ ನೀಡಲಿದೆ ಕೇಂದ್ರ ಸರ್ಕಾರ?

ಮಾಹಾಮಾರಿ ಕರೋನಾ ವೈರಸ್‌ ಪರಿಣಾಮ ಬಹುತೇಕ ಆಟೋ ಕಂಪನಿಗಳು ಭಾರೀ ನಷ್ಟ ಅನುಭವಿಸಿದ್ದು, ಲಾಕ್‌ಡೌನ್ ವಿನಾಯ್ತಿ ನಂತರವೂ ಹೊಸ ವಾಹನಗಳ ಮಾರಾಟ ಪ್ರಮಾಣದಲ್ಲಿ ಸಾಕಷ್ಟು ಹಿನ್ನಡೆ ಅನುಭವಿಸುತ್ತಿರುವುದು ಆಟೋ ಕಂಪನಿಗಳಿಗೆ ಭೀತಿ ಉಂಟು ಮಾಡಿದೆ.

ದ್ವಿಚಕ್ರ ವಾಹನ ಖರೀದಿಸುವ ಗ್ರಾಹಕರಿಗೆ ಸಿಹಿಸುದ್ದಿ ನೀಡಲಿದೆ ಸರ್ಕಾರ

ಸದ್ಯ ವೈರಸ್ ಭೀತಿ ಹೆಚ್ಚಳದ ನಡುವೆಯೂ ಹೊಸ ಸುರಕ್ಷಾ ಮಾರ್ಗಸೂಚಿಗಳೊಂದಿಗೆ ವ್ಯಾಪಾರ ವಹಿವಾಟು ಕೈಗೊಂಡಿರುವ ಆಟೋ ಕಂಪನಿಗಳು ಕನಿಷ್ಠ ಪ್ರಮಾಣದ ವಾಹನ ಮಾರಾಟ ಪ್ರಮಾಣವನ್ನು ದಾಖಲಿಸಿದ್ದು, ಬಹುತೇಕ ವಾಹನಗಳ ಮಾರಾಟದಲ್ಲಿ ಶೇ.15ರಿಂದ ಶೇ.40ರಷ್ಟು ಕುಸಿತ ಕಂಡುಬಂದಿದೆ. ವೈರಸ್ ಭೀತಿ ಹಿನ್ನಲೆಯಲ್ಲಿ ಹೊಸ ವಾಹನ ಪ್ರಕ್ರಿಯೆ ಮಂದಗತಿಯಲ್ಲಿ ಸಾಗಿದ್ದು, ಮುಂಬರುವ ದಿನಗಳಲ್ಲಿ ಮಾರಾಟ ಮಾರಾಟದಲ್ಲಿ ಚೇತರಿಕೆ ಕಾಣಬಹುದು ಎನ್ನಲಾಗಿದೆ.

ದ್ವಿಚಕ್ರ ವಾಹನ ಖರೀದಿಸುವ ಗ್ರಾಹಕರಿಗೆ ಸಿಹಿಸುದ್ದಿ ನೀಡಲಿದೆ ಸರ್ಕಾರ

ಕರೋನಾ ಮಹಾಮಾರಿಯಿಂದಾಗಿ ಕೇವಲ ಆಟೋ ಉದ್ಯಮದಲ್ಲಿ ಮಾತ್ರವಲ್ಲ ಎಲ್ಲಾ ವಾಣಿಜ್ಯ ವಹಿವಾಟಿನಲ್ಲೂ ಆರ್ಥಿಕ ಸಂಕಷ್ಟ ಎದುರಾಗಿದ್ದು, ವ್ಯಾಪಾರ ಅಭಿವೃದ್ದಿಯು ಇದೀಗ ಒಂದು ಹೊಸ ಸವಾಲಾಗಿ ಪರಿಣಮಿಸಿದೆ.

ದ್ವಿಚಕ್ರ ವಾಹನ ಖರೀದಿಸುವ ಗ್ರಾಹಕರಿಗೆ ಸಿಹಿಸುದ್ದಿ ನೀಡಲಿದೆ ಸರ್ಕಾರ

ಸದ್ಯ ತೀವ್ರ ಕುಸಿತ ಕಂಡಿರುವ ಹೊಸ ವಾಹನ ಮಾರಾಟವು ಮತ್ತೆ ಮೊದಲಿನಂತೆ ಚೇತರಿಸಿಕೊಳ್ಳಲು ತುಸು ಸಮಯಾವಕಾಶ ತೆಗೆದುಕೊಳ್ಳಲಿದ್ದು, ಆಟೋ ತಜ್ಞರ ಪ್ರಕಾರ ವಾಹನ ಮಾರಾಟವು ಮೊದಲಿನ ಸ್ಥಿತಿಗೆ ಬರಲು ಕನಿಷ್ಠ 2 ರಿಂದ 3 ವರ್ಷ ಬೇಕಾಗಬಹುದೆಂದು ಅಂದಾಜಿಸಿದ್ದಾರೆ.

ದ್ವಿಚಕ್ರ ವಾಹನ ಖರೀದಿಸುವ ಗ್ರಾಹಕರಿಗೆ ಸಿಹಿಸುದ್ದಿ ನೀಡಲಿದೆ ಸರ್ಕಾರ

ಭಾರತೀಯ ಆಟೋ ಮೊಬೈಲ್ ಉದ್ಯಮ ಪ್ರಕ್ರಿಯೆಯನ್ನು ನಿರ್ವಹಣೆ ಮಾಡುತ್ತಿರುವ SIAM(ಸೊಸೈಟಿ ಆಫ್ ಇಂಡಿಯನ್ ಆಟೋಮೊಬೈಲ್ ಮ್ಯಾನುಫ್ಯಾಕ್ಟರರ್ಸ್) ಸಂಘವು ಕೂಡಾ ಇದೇ ಅಂಶದ ಮೇಲೆ ಕಳವಳ ವ್ಯಕ್ತಪಡಿಸಿದ್ದು, ಪರಿಸ್ಥಿತಿ ಸುಧಾರಣೆಗಾಗಿ ಕೇಂದ್ರ ಸರ್ಕಾರಕ್ಕೆ ಹಲವು ಬೇಡಿಕೆಗಳನ್ನು ಸಲ್ಲಿಸಿದೆ.

ದ್ವಿಚಕ್ರ ವಾಹನ ಖರೀದಿಸುವ ಗ್ರಾಹಕರಿಗೆ ಸಿಹಿಸುದ್ದಿ ನೀಡಲಿದೆ ಸರ್ಕಾರ

ಆಟೋ ಉತ್ಪಾದನಾ ಕಂಪನಿಗಳ ಬೇಡಿಕೆ ಕುರಿತಂತೆ ಭಾರತೀಯ ಕೈಗಾರಿಕಾ ಒಕ್ಕೂಟದ ಸದಸ್ಯರೊಂದಿಗೆ ಮಹತ್ವದ ಸಮಾಲೋಚನೆ ನಡೆಸಿರುವ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ದ್ವಿಚಕ್ರ ವಾಹನಗಳ ಮೇಲಿನ ಜಿಎಸ್‌ಟಿ ಕಡಿತ ಮಾಡುವ ಕುರಿತಾಗಿ ಸುಳಿವು ನೀಡಿದ್ದಾರೆ.

ದ್ವಿಚಕ್ರ ವಾಹನ ಖರೀದಿಸುವ ಗ್ರಾಹಕರಿಗೆ ಸಿಹಿಸುದ್ದಿ ನೀಡಲಿದೆ ಸರ್ಕಾರ

ಕೈಗಾರಿಕಾ ಒಕ್ಕೂಟದ ಮನವಿ ಕುರಿತು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಚಿವೆ ನಿರ್ಮಲಾ ಸೀತಾರಾಮನ್ ಅವರು ದ್ವಿಚಕ್ರ ವಾಹನಗಳನ್ನು ಐಷಾರಾಮಿ ವಸ್ತು ಎಂದು ಪರಿಗಣಿಸಲಾಗುವುದಿಲ್ಲ. ಈ ಹಿನ್ನಲೆಯಲ್ಲಿ ಆಟೋ ಉದ್ಯಮ ಸುಧಾರಣೆಗಾಗಿ ದ್ವಿಚಕ್ರ ವಾಹನಗಳ ಮೇಲೆ ಜಿಎಸ್‌ಟಿ ಕಡಿತ ಮಾಡುವ ಬಗ್ಗೆ ಜಿಎಸ್‌ಟಿ ಕೌನ್ಸಿಲ್ ಜೊತೆ ಚರ್ಚೆ ನಂತರ ಈ ಬಗ್ಗೆ ತೀರ್ಮಾನ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.

MOST READ: ವಾಹನ ಮಾಲೀಕರ ನೆರವಿಗೆ ಧಾವಿಸಿದ ಕೇಂದ್ರ ಸರ್ಕಾರ, ದಾಖಲೆಗಳ ಮಾನ್ಯತಾ ಅವಧಿ ವಿಸ್ತರಿಸಿದ ಸಾರಿಗೆ ಇಲಾಖೆ

ದ್ವಿಚಕ್ರ ವಾಹನ ಖರೀದಿಸುವ ಗ್ರಾಹಕರಿಗೆ ಸಿಹಿಸುದ್ದಿ ನೀಡಲಿದೆ ಸರ್ಕಾರ

ಇನ್ನು ಕೇಂದ್ರ ಸರ್ಕಾರವು ಭಾರೀ ಪ್ರಮಾಣದ ತೆರಿಗೆ ಆದಾಯದ ನಷ್ಟ ಅನುಭವಿಸುತ್ತಿದ್ದು, ಆದಾಯ ಕ್ರೂಢೀಕರಣಕ್ಕಾಗಿ ವಿವಿಧ ಆದಾಯ ಮೂಲಗಳನ್ನು ಉತ್ತೇಜಿಸಲು ದ್ವಿಚಕ್ರ ವಾಹನಗಳ ಖರೀದಿ ಮೇಲೆ ಜಿಎಸ್‌ಟಿ ವಿನಾಯ್ತಿ ನೀಡುವ ಸಾಧ್ಯತೆಗಳಿವೆ.

ದ್ವಿಚಕ್ರ ವಾಹನ ಖರೀದಿಸುವ ಗ್ರಾಹಕರಿಗೆ ಸಿಹಿಸುದ್ದಿ ನೀಡಲಿದೆ ಸರ್ಕಾರ

ಒಂದು ವೇಳೆ ಕೇಂದ್ರ ಸರ್ಕಾರವು ದ್ವಿಚಕ್ರ ವಾಹನಗಳ ಖರೀದಿ ಮೇಲೆ ಜಿಎಸ್‌ಟಿ ವಿನಾಯ್ತಿ ನೀಡಿದ್ದೆ ಆದಲ್ಲಿ ಹೊಸ ವಾಹನ ಮಾರಾಟವು ಮತ್ತಷ್ಟು ಹೆಚ್ಚಳವಾಗಲಿದ್ದು, ಇದರಿಂದ ಕೇಂದ್ರ ಸರ್ಕಾರಕ್ಕೂ ಭಾರೀ ಪ್ರಮಾಣದ ಆದಾಯ ಹರಿದುಬರುವ ನೀರಿಕ್ಷೆಯಿದೆ.

MOST READ: ಬಜಾಜ್ ಅವೆಂಜರ್‌ಗೆ ಪೈಪೋಟಿಯಾಗಿ ಟಿವಿಎಸ್ ರೊನಿನ್ ಬಿಡುಗಡೆಗೆ ಸಿದ್ದತೆ

ದ್ವಿಚಕ್ರ ವಾಹನ ಖರೀದಿಸುವ ಗ್ರಾಹಕರಿಗೆ ಸಿಹಿಸುದ್ದಿ ನೀಡಲಿದೆ ಸರ್ಕಾರ

ಆದರೆ ನಾಳೆ ನಡೆಯಲಿರುವ ಜಿಎಸ್‌ಟಿ ಕೌನ್ಸಿಲ್ ಸಭೆಯಲ್ಲಿ ತೆಗೆದುಕೊಳ್ಳುವ ತೀರ್ಮಾನಗಳ ಮೇಲೆ ದ್ವಿಚಕ್ರ ವಾಹನಗಳ ಮಾರಾಟ ಚೇತರಿಕೆಗೆ ಸಹಕಾರಿಯಾಗಲಿದ್ದು, ಸದ್ಯ ದ್ವಿಚಕ್ರ ವಾಹನಗಳ ಖರೀದಿ ಮೇಲೆ ಶೇ.28ರಷ್ಟು ಜಿಎಸ್‌ಟಿ ವಿಧಿಸಲಾಗುತ್ತಿದೆ.

Article Published On: Wednesday, August 26, 2020, 21:16 [IST]
English summary
According to reports, Union Govt is planning to reduce GST Rate on two-wheelers soon.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+