ಎಲೆಕ್ಟ್ರಿಕ್ ಮಾದರಿಯಲ್ಲಿ ಬಿಡುಗಡೆಯಾಗಲಿವೆ ಯಜ್ಡಿ ಹೊಸ ಕ್ಲಾಸಿಕ್ ಬೈಕ್

ಭಾರತದಲ್ಲಿ ಭಾರೀ ನೀರಿಕ್ಷೆಯೊಂದಿಗೆ ಹೊಸ ರೂಪದಲ್ಲಿ ಬಿಡುಗಡೆಯಾಗಿರುವ ಜಾವಾ ಕ್ಲಾಸಿಕ್ ಬೈಕ್‌ಗಳು ಗ್ರಾಹಕರ ಆಕರ್ಷಣೆಗೆ ಕಾರಣವಾಗಿದ್ದು, ಜಾವಾ ಬೈಕ್‌ಗಳನ್ನು ಮರು ಬಿಡುಗಡೆ ಮಾಡಿರುವ ಕ್ಲಾಸಿಕ್ ಲೆಜೆಂಡ್ ಕಂಪನಿಯು ಇದೀಗ ಯಜ್ಡಿ ಬೈಕ್‌ಗಳ ಮಾರಾಟಕ್ಕೂ ಮರಜೀವ ನೀಡುವ ಸಿದ್ದತೆಯಲ್ಲಿದೆ.

ಎಲೆಕ್ಟ್ರಿಕ್ ಮಾದರಿಯಲ್ಲಿ ಬಿಡುಗಡೆಯಾಗಲಿವೆ ಯಜ್ಡಿ ಹೊಸ ಬೈಕ್

ಹೌದು, ಭಾರತದಲ್ಲಿ ಜಾವಾ ಬೈಕ್‌ಗಳನ್ನು ಹೊಸ ರೂಪದೊಂದಿಗೆ ಬಿಡುಗಡೆ ಮಾಡಿರುವ ಮಹೀಂದ್ರಾ ಅಂಗಸಂಸ್ಥೆಯಾದ ಕ್ಲಾಸಿಕ್ ಲೆಜೆಂಡ್ ಕಂಪನಿಯು ಮುಂದಿನ ಕೆಲವೇ ದಿನಗಳಲ್ಲಿ ಯಜ್ಡಿ ಬೈಕ್‌ಗಳನ್ನು ಸಹ ಹೊಸ ವಿನ್ಯಾಸದಲ್ಲಿ ಬಿಡುಗಡೆಯ ಸುಳಿವು ನೀಡಿದ್ದು, ಬೈಕ್ ಪ್ರಿಯರಲ್ಲಿ ಮತ್ತೊಮ್ಮೆ ಕುತೂಹಲ ಹುಟ್ಟುಹಾಕಿದೆ. ಹೊಸ ಬೈಕ್‌ಗಳನ್ನು ಸಾಮಾನ್ಯ ಎಂಜಿನ್‌ನಲ್ಲಿ ಮಾತ್ರವಲ್ಲದೇ ಎಲೆಕ್ಟ್ರಿಕ್ ಮಾದರಿಯಲ್ಲೂ ಬಿಡುಗಡೆ ಮಾಡುತ್ತಿದ್ದು, ಕ್ಲಾಸಿಕ್ ಬೈಕ್ ಮಾರಾಟದಲ್ಲೂ ಮತ್ತಷ್ಟು ಹೊಸ ಆಯ್ಕೆಗಳನ್ನು ಹೆಚ್ಚಿಸುತ್ತಿದೆ.

ಎಲೆಕ್ಟ್ರಿಕ್ ಮಾದರಿಯಲ್ಲಿ ಬಿಡುಗಡೆಯಾಗಲಿವೆ ಯಜ್ಡಿ ಹೊಸ ಬೈಕ್

ಸದ್ಯ ಜಾವಾ ಮತ್ತು ಯಜ್ಡಿ ಬೈಕ್‌ಗಳ ಮರು ನಿರ್ಮಾಣ ಮತ್ತು ಮಾರಾಟದ ಹಕ್ಕು ಕ್ಲಾಸಿಕ್ ಲೆಜೆಂಡ್ ಪ್ರೈವೆಟ್ ಲಿಮಿಟೆಡ್ ಕಂಪನಿ ಬಳಿಯಿದ್ದು, ಇದು ಮಹೀಂದ್ರಾ ಅಂಗಸಂಸ್ಥೆಯಾಗಿ ಭಾರತದಲ್ಲಿ ಕಾರ್ಯನಿರ್ವಹಣೆ ಮಾಡುತ್ತಿದೆ.

ಎಲೆಕ್ಟ್ರಿಕ್ ಮಾದರಿಯಲ್ಲಿ ಬಿಡುಗಡೆಯಾಗಲಿವೆ ಯಜ್ಡಿ ಹೊಸ ಬೈಕ್

ಸದ್ಯ ಮಾರುಕಟ್ಟೆಯಲ್ಲಿರುವ ಜಾವಾ, ಜಾವಾ 42 ಮತ್ತು ಪೆರಾಕ್ ಬೈಕ್‌ಗಳನ್ನು ಕ್ಲಾಸಿಕ್ ಲೆಜೆಂಡ್ ಪ್ರೈವೆಟ್ ಲಿಮಿಟೆಡ್ ಕಂಪನಿಯೇ ಮರು ನಿರ್ಮಾಣ ಮಾಡಿದ್ದು, ಇದು ಜಾಗತಿಕ ಮಾರುಕಟ್ಟೆಯಲ್ಲಿ ಭಾರೀ ಜನಪ್ರಿಯತೆ ಪಡೆದಿರುವ ಬಿಎಸ್ಎ ಮೋಟಾರ್‌ಸೈಕಲ್ ಕಂಪನಿಯ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿದೆ.

ಎಲೆಕ್ಟ್ರಿಕ್ ಮಾದರಿಯಲ್ಲಿ ಬಿಡುಗಡೆಯಾಗಲಿವೆ ಯಜ್ಡಿ ಹೊಸ ಬೈಕ್

ಅಸಲಿಗೆ ಜಾವಾ ಮತ್ತು ಯೆಜ್ಡಿ ಕಂಪನಿಗಳು 90ರ ದಶಕದಲ್ಲೇ ಬಿಎಸ್ಎ ಮೋಟಾರ್‌‌ಸೈಕಲ್ ಕಂಪನಿಯ ಪಾಲಾಗಿದ್ದು, ಭಾರತವನ್ನು ಹೊರತುಪಡಿಸಿ ಯುರೋಪ್ ಮತ್ತು ದಕ್ಷಿಣ ಅಮೆರಿಕದ ಕೆಲವು ರಾಷ್ಟ್ರಗಳಲ್ಲಿ ಮಾತ್ರ ತನ್ನ ಮಾರಾಟ ಜಾಲವನ್ನು ಹೊಂದಿದೆ.

ಎಲೆಕ್ಟ್ರಿಕ್ ಮಾದರಿಯಲ್ಲಿ ಬಿಡುಗಡೆಯಾಗಲಿವೆ ಯಜ್ಡಿ ಹೊಸ ಬೈಕ್

ಹಲವು ಪ್ರಯತ್ನಗಳ ನಂತರ ಮಹೀಂದ್ರಾ ಅಂಗಸಂಸ್ಥೆಯಾದ ಕ್ಲಾಸಿಕ್ ಲೆಜೆಂಡ್ ಪ್ರೈವೆಟ್ ಲಿಮಿಟೆಡ್ ಕಂಪನಿಯು ಬಿಎಸ್ಎ ಕಂಪನಿಯೊಂದಿಗೆ ಮಹತ್ವದ ಒಪ್ಪಂದ ಮಾಡಿಕೊಂಡಿದ್ದು, ಭಾರತದಲ್ಲಿ ಜಾವಾ ನಂತರ ಯಜ್ಡಿ ಬೈಕ್‌ಗಳನ್ನು ಸಹ ಪ್ರಸ್ತುತ ಮಾರುಕಟ್ಟೆ ಬೇಡಿಕೆ ಅನುಸಾರ ಉತ್ಪಾದನೆ ಪುನಾರಂಭಿಸುವ ಬಗ್ಗೆ ಒಪ್ಪಿಗೆ ಪಡೆದುಕೊಂಡಿದೆ.

ಎಲೆಕ್ಟ್ರಿಕ್ ಮಾದರಿಯಲ್ಲಿ ಬಿಡುಗಡೆಯಾಗಲಿವೆ ಯಜ್ಡಿ ಹೊಸ ಬೈಕ್

ಇದರ ಪರಿಣಾಮವೇ ಇಂದು ಜಾವಾ ಬೈಕ್‌ಗಳು ಭಾರತೀಯ ರಸ್ತೆಗೆ ಮರಳಿ ಬಂದಿದ್ದು, ಮುಂದಿನ ಒಂದು ವರ್ಷದೊಳಗೆ ಯಜ್ಡಿ ಬೈಕ್‌ಗಳ ಹೊಸ ರೂಪಾಂತರಗಳನ್ನು ಮಹೀಂದ್ರಾ ಕಂಪನಿಯು ಅನಾವರಣಗೊಳಿಸುವುದು ಬಹುತೇಕ ಖಚಿತ ಎಂದು ಹೇಳಲಾಗಿದೆ.

MOST READ: ದ್ವಿಚಕ್ರ ವಾಹನಗಳ ಖರೀದಿ ಮೇಲೆ ಹೊಸ ಲೋನ್ ಆಫರ್ ಘೋಷಿಸಿದ ಹೋಂಡಾ

ಎಲೆಕ್ಟ್ರಿಕ್ ಮಾದರಿಯಲ್ಲಿ ಬಿಡುಗಡೆಯಾಗಲಿವೆ ಯಜ್ಡಿ ಹೊಸ ಬೈಕ್

ಜಾವಾ ಹೊಸ ಕ್ಲಾಸಿಕ್ ಬೈಕ್‌ಗಳು 300ಸಿಸಿ ವಿಭಾಗದಲ್ಲಿ ಸದ್ದು ಮಾಡಲಿದ್ದರೆ ಯಜ್ಡಿ ಹೊಸ ಬೈಕ್ ಮಾದರಿಗಳು 250ಸಿಸಿ ಸಾಮರ್ಥ್ಯ ಎಂಜಿನ್‌‌ನೊಂದಿಗೆ ಮಾರುಕಟ್ಟೆ ಲಗ್ಗೆಯಿಡಲಿದ್ದು, ರೆಟ್ರೋ ಲುಕ್‌ನೊಂದಿಗೆ ಸುಧಾರಿತ ಮಾದರಿಯ ತಾಂತ್ರಿಕ ಸೌಲಭ್ಯಗಳನ್ನು ಪಡೆದುಕೊಳ್ಳಲಿವೆ.

ಎಲೆಕ್ಟ್ರಿಕ್ ಮಾದರಿಯಲ್ಲಿ ಬಿಡುಗಡೆಯಾಗಲಿವೆ ಯಜ್ಡಿ ಹೊಸ ಬೈಕ್

ಇದಷ್ಟೇ ಅಲ್ಲದೇ ಬಿಎಸ್ಎ ಮೋಟಾರ್‌ಸೈಕಲ್ ಸಂಸ್ಥೆಯ ಕೆಲವು ಪ್ರೀಮಿಯಂ ಬೈಕ್‌ಗಳು ಸಹ ಭಾರತಕ್ಕೆ ಎಂಟ್ರಿ ನೀಡುವ ನೀರಿಕ್ಷೆಗಳಿದ್ದು, ಸದ್ಯ ವಿದೇಶಿ ಮಾರುಕಟ್ಟೆಯಲ್ಲಿರುವ ಬಿಎಸ್ಎ 550ಸಿಸಿ, 750ಸಿಸಿ ಬೈಕ್‌ಗಳನ್ನೇ ಭಾರತದಲ್ಲೂ ಮಾರಾಟ ಆರಂಭಿಸುವ ಚಿಂತನೆ ನಡೆದಿದೆ.

MOST READ: ಬಜಾಜ್ ಅವೆಂಜರ್‌ಗೆ ಪೈಪೋಟಿಯಾಗಿ ಟಿವಿಎಸ್ ರೊನಿನ್ ಬಿಡುಗಡೆಗೆ ಸಿದ್ದತೆ

ಎಲೆಕ್ಟ್ರಿಕ್ ಮಾದರಿಯಲ್ಲಿ ಬಿಡುಗಡೆಯಾಗಲಿವೆ ಯಜ್ಡಿ ಹೊಸ ಬೈಕ್

ಜೊತೆಗೆ ಮಾರುಕಟ್ಟೆಯಲ್ಲಿನ ಬೇಡಿಕೆ ಅನುಸಾರವಾಗಿ ಎಲೆಕ್ಟ್ರಿಕ್ ಕ್ಲಾಸಿಕ್ ಬೈಕ್ ಮಾದರಿಯನ್ನು ಅಭಿವೃದ್ದಿಗೊಳಿಸುವ ಯೋಜನೆಯಿದ್ದು, ಜಾವಾ ಬೈಕಿನಲ್ಲೂ ಕೂಡಾ ಎಲೆಕ್ಟ್ರಿಕ್ ಆವೃತ್ತಿಯನ್ನು ಅಭಿವೃದ್ದಿಗೊಳ್ಳುತ್ತಿರುವ ಕ್ಲಾಸಿಕ್ ಲೆಜೆಂಡ್ ಕಂಪನಿಯೇ ಖಚಿತಪಡಿಸಿದೆ.

Most Read Articles

Kannada
English summary
Classic Legends Yezdi Could Bring Back In Electric Bike. Read in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X