Just In
- 9 min ago
ಭಾರತದಲ್ಲಿ ಬಿಡುಗಡೆಗೆ ಸಜ್ಜಾದ ಹೊಸ ಬಜಾಜ್ ಸಿಟಿ 110 ಎಕ್ಸ್ ಬೈಕ್
- 2 hrs ago
ಮಕ್ಕಳಿಗಾಗಿ 60-70 ಕಿ.ಮೀ ಮೈಲೇಜ್ ನೀಡುವ ಮಿನಿ ಎಲೆಕ್ಟ್ರಿಕ್ ಜೀಪ್ ತಯಾರಿಸಿದ ತಂದೆ
- 3 hrs ago
ಮಿನಿ ಎಂಪಿವಿ ಕಾರು ಮಾರಾಟದಲ್ಲಿ ರೆನಾಲ್ಟ್ ಟ್ರೈಬರ್ ಹೊಸ ಮೈಲಿಗಲ್ಲು
- 4 hrs ago
ಎಕ್ಸ್ಯುವಿ700 ಬಿಡುಗಡೆಯ ನಂತರ ತಾತ್ಕಾಲಿಕವಾಗಿ ಮಾರಾಟದಿಂದ ಸ್ಥಗಿತವಾಗಲಿದೆ ಎಕ್ಸ್ಯುವಿ500
Don't Miss!
- News
ಮಡಿಕೇರಿ ವಿಶೇಷ; ಕೊಡವರ ಹೊಸ ವರ್ಷ ಎಡಮ್ಯಾರ್
- Sports
ಐಪಿಎಲ್ 2021 : ಕೊಲ್ಕತ್ತಾ ನೈಟ್ ರೈಡರ್ಸ್ vs ಮುಂಬೈ ಇಂಡಿಯನ್ಸ್, ಯಾರು ಮೇಲುಗೈ?
- Finance
ಮುತ್ತೂಟ್ ಫೈನಾನ್ಸ್ ಮಧ್ಯಂತರ ಲಾಭಾಂಶ ಘೋಷಣೆ: ಪ್ರತಿ ಷೇರಿಗೆ 20 ರೂಪಾಯಿ
- Movies
ಕಹಿಯೇ ಹೆಚ್ಚಿದ್ದರು ಸಿಹಿಯಾಗಿ ಯುಗಾದಿ ಶುಭಾಶಯ ಕೋರಿದ ಸಿನಿ ತಾರೆಯರು
- Lifestyle
ಅಧ್ಯಯನ: ಸ್ಥೂಲಕಾಯದವರ ಸ್ಮರಣಾ ಶಕ್ತಿ ಕಾಪಾಡುತ್ತೆ ಬೆಣ್ಣೆಹಣ್ಣು
- Education
WCL Recruitment 2021: 44 ಮೆಡಿಕಲ್ ಸ್ಪೆಷಲಿಸ್ಟ್ ಮತ್ತು ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಅತಿ ಕಡಿಮೆ ಬೆಲೆಯಲ್ಲಿ ಬಿಎಸ್ಐ ಸರ್ಟಿಫೈಡ್ ಟ್ರೆಡ್ ಹೆಲ್ಮೆಟ್ ಬಿಡುಗಡೆ
ಸುರಕ್ಷಿತ ಬೈಕ್ ಚಾಲನೆಯನ್ನು ಖಾತ್ರಿಪಡಿಸಲು ಗುಣಮಟ್ಟದ ಹೆಲ್ಮೆಟ್ ಬಳಕೆಗೆ ಹೆಚ್ಚಿನ ಒತ್ತುನೀಡಲಾಗುತ್ತಿದ್ದು, ಡೆಟಲ್ ಹೆಲ್ಮೆಟ್ ಉತ್ಪಾದನಾ ಕಂಪನಿಯು ಬಿಎಸ್ಐ(ಬ್ಯೂರೋ ಆಫ್ ಇಂಡಿಯನ್ ಸ್ಟ್ಯಾಂಡರ್ಡ್ಸ್) ಪ್ರಮಾಣೀಕೃತ ಹೆಲ್ಮೆಟ್ ಮಾದರಿಯೊಂದನ್ನು ಬಿಡುಗಡೆ ಮಾಡಿದೆ.

ಸದ್ಯ ಮಾರುಕಟ್ಟೆಯಲ್ಲಿ ಮಾರುಕಟ್ಟೆಯಲ್ಲಿ ಅತ್ಯುತ್ತಮ ಗುಣಮಟ್ಟದ ಹಲವಾರು ಹೆಲ್ಮೆಟ್ ಮಾದರಿಗಳು ಮಾರುಕಟ್ಟೆಯಲ್ಲಿ ಲಭ್ಯವಿದ್ದರೂ ಗುಣಮಟ್ಟ ಮತ್ತು ಬ್ರಾಂಡ್ ನೆಮ್ ಆಧರಿಸಿ ಕನಿಷ್ಠ ರೂ. 1 ಸಾವಿರದಿಂದ ರೂ. 50 ಸಾವಿರ ತನಕವು ಬೆಲೆ ಹೊಂದಿವೆ. ಆದರೆ ಎಲ್ಲಾ ವರ್ಗದ ಗ್ರಾಹಕರಿಗೂ ದುಬಾರಿ ಬೆಲೆಯ ಹೆಲ್ಮೆಟ್ ಖರೀದಿ ಸಾಧ್ಯವಿಲ್ಲವಾದರೂ ಸುರಕ್ಷಿತ ಬೈಕ್ ಪ್ರಯಾಣಕ್ಕೆ ಕನಿಷ್ಠ ಬೆಲೆಯಲ್ಲಿಯಾದರೂ ಒಂದು ಗುಣಮಟ್ಟದ ಹೆಲ್ಮೆಟ್ ಬಳಕೆ ಅತಿಅವಶ್ಯಕವಾಗಿದೆ.

ಈ ನಿಟ್ಟಿನಲ್ಲಿ ಮಾರುಕಟ್ಟೆಯ ಅಧ್ಯಯನ ನಡೆಸಿರುವ ಡೆಟಲ್ ಹೆಲ್ಮೆಟ್ ಉತ್ಪಾದನಾ ಕಂಪನಿಯು ಟ್ರೆಡ್ ಎನ್ನುವ ಹೆಲ್ಮೆಟ್ ಮಾದರಿಯನ್ನು ಹೊಸ ಸುರಕ್ಷಾ ಮಾನದಂಡಗಳೊಂದಿಗೆ ಅಭಿವೃದ್ದಿಗೊಳಿಸಿದ್ದು, ಹೊಸ ಹೆಲ್ಮೆಟ್ ಮಾದರಿಯು ರೂ. 699ಕ್ಕೆ ಖರೀದಿಗೆ ಲಭ್ಯವಿದೆ.

ಓಪನ್ ಫೇಸ್ ಹೆಲ್ಮೆಟ್ ಮಾದರಿಯಾಗಿರುವ ಟ್ರೆಡ್ ಹೆಲ್ಮೆಟ್ ಉತ್ಪನ್ನವು ಪಾಲಿಕಾರ್ಬೊನೇಟ್ (ಪಿಸಿ) ನಿಂದ ತಯಾರಿಸ್ಪಟ್ಟಿದ್ದು, ಸ್ಕ್ರ್ಯಾಚ್ ರೆಸಿಸ್ಟಂಟ್‌ನೊಂದಿಗೆ ಫ್ಲಿಪ್ ಅಪ್ ಪ್ರೆಸ್ ಬಟನ್ ಸೌಲಭ್ಯ ಹೊಂದಿದೆ.

ಹಾಗೆಯೇ ರಾತ್ರಿ ವೇಳೆಯಲ್ಲಿ ಹೆಚ್ಚುವರಿ ಸುರಕ್ಷತೆಗಾಗಿ ಹೆಲ್ಮೆಟ್ ಮೇಲೆ ಬಿಳಿ ಪ್ರತಿಫಲಿತ ಪಟ್ಟಿಯನ್ನು ಸಹ ಒದಗಿಸಿದ್ದು, ಬ್ಯೂರೋ ಆಫ್ ಇಂಡಿಯನ್ ಸ್ಟ್ಯಾಂಡರ್ಡ್ಸ್ ಮಾನದಂಡಗಳಿಗೆ ಅನುಗುಣವಾಗಿ ಹೆಲ್ಮೆಟ್ ಒಳಭಾಗದಲ್ಲೂ ಉತ್ತಮ ಕುಷನ್ ನೀಡಲಾಗಿದೆ.

ಇನ್ನು ದೇಶಾದ್ಯಂತ ಬಹುತೇಕ ರಾಜ್ಯಗಳಲ್ಲಿ ಬೈಕ್ ಸವಾರರ ಜೊತೆಗೆ ಹಿಂಬದಿಯ ಸವಾರರಿಗೂ ಹೆಲ್ಮೆಟ್ ಬಳಕೆಯನ್ನು ಕಡ್ಡಾಯಗೊಳಿಸಿದ್ದರೂ ದಂಡದಿಂದ ತಪ್ಪಿಸಿಕೊಳ್ಳುವುದಕ್ಕಾಗಿ ಕಳಪೆ ಹೆಲ್ಮೆಟ್‌ಗಳ ಬಳಕೆಯು ಹೆಚ್ಚಳವಾಗಿದ್ದು, ಇವು ಬೈಕ್ ಸವಾರರಿಗೆ ರಕ್ಷಣೆ ನೀಡುವ ಬದಲಾಗಿ ಪ್ರಾಣಕ್ಕೆ ಕುತ್ತು ತರುತ್ತಿವೆ ಎಂದರೆ ತಪ್ಪಾಗುವುದಿಲ್ಲ. ಭಾರತದಲ್ಲಿ ಬೈಕ್ ಸವಾರರಿಗೆ ಕಡ್ಡಾಯವಾಗಿ ಹೆಲ್ಮೆಟ್ ಬಳಕೆಯನ್ನು ಜಾರಿಗೆ ತರುವಲ್ಲಿ ಆಯಾ ರಾಜ್ಯಗಳ ಸಾರಿಗೆ ಇಲಾಖೆಗಳು ಉತ್ತಮ ಬದಲಾವಣೆ ತರುವಲ್ಲಿ ಯಶಸ್ವಿಯಾಗುತ್ತಿದ್ದರೂ ಕಳಪೆ ಹೆಲ್ಮೆಟ್ ಬಳಕೆಯನ್ನು ತಡೆಯುವಲ್ಲಿ ವಿಫಲವಾಗುತ್ತಿವೆ.
MOST READ: ಹೆಲ್ಮೆಟ್ ಬಳಕೆ ಮಾಡಿದ್ರೆ ಸಾಲದು, ಈ ವಿಚಾರಗಳನ್ನು ತಪ್ಪದೇ ತಿಳಿದುಕೊಳ್ಳಿ..!

ವಾಹನ ಸವಾರರು ದುಬಾರಿ ದಂಡದಿಂದ ತಪ್ಪಿಸಿಕೊಳ್ಳುವ ಉದ್ದೇಶದಿಂದ ಗುಣಮಟ್ಟದ ಬಗ್ಗೆ ತಡೆಕೆಡಿಸಿಕೊಳ್ಳದೆ ಮಾರುಕಟ್ಟೆಯಲ್ಲಿ ಲಭ್ಯವಾಗುವ ಕಳಪೆ ಗುಣಮಟ್ಟದ ಹೆಲ್ಮೆಟ್‌ಗಳನ್ನು ಬಳಸುತ್ತಿರುವುದು ವಾಹನ ಸವಾರರ ಪ್ರಾಣ ಹಾನಿಗೆ ಕಾರಣವಾಗುತ್ತಿವೆ.

ಇದೇ ವಿಚಾರವಾಗಿ ಕಠಿಣ ನಿರ್ಧಾರಗಳನ್ನು ತೆಗೆದುಕೊಂಡಿರುವ ಕೇಂದ್ರ ಸಾರಿಗೆ ಇಲಾಖೆಯು ಸುಪ್ರೀಂಕೋರ್ಟ್ ನಿರ್ದೇಶನದಂತೆ ಹೊಸ ನಿಯಮವೊಂದನ್ನು ಜಾರಿಗೆ ತಂದಿದ್ದು, 2021ರ ಜೂನ್ 1 ರಿಂದ ಐಎಸ್ಐ ಪ್ರಮಾಣೀಕೃತ ಹೆಲ್ಮೆಟ್‌ಗಳನ್ನು ಮಾತ್ರ ಬಳಕೆ ಮಾಡಬೇಕು ಎಂಬ ಆದೇಶ ಹೊರಡಿಸಿದೆ.
MOST READ: ಬೈಕ್ ಚಾಲನೆ ವೇಳೆ ಕಳಪೆ ಹೆಲ್ಮೆಟ್ ಬಳಕೆಯನ್ನು ತಪ್ಪಿಸಲು ಹೊಸ ರೂಲ್ಸ್ ಜಾರಿಗೆ ತಂದ ಸಾರಿಗೆ ಇಲಾಖೆ

ಈ ಹಿಂದೆ ಐಎಸ್ಐ ಪ್ರಮಾಣೀಕೃತ ಹೆಲ್ಮೆಟ್ ಮಾತ್ರ ಮಾರಾಟ ಮಾಡಬೇಕೆಂಬ ನಿಯಮವನ್ನು ಜಾರಿಗೆ ತಂದಿರುವ ಸಾರಿಗೆ ಇಲಾಖೆ ಇದೀಗ ಬಳಕೆದಾರರಿಗೂ ಕಠಿಣ ನಿಯಮಗಳನ್ನು ಜಾರಿಗೆ ತಂದಿದ್ದು, ಐಎಸ್ಐ ಪ್ರಮಾಣೀಕೃತವಲ್ಲದ ಹೆಲ್ಮೆಟ್ ಬಳಕೆ ಮಾಡುವ ವಾಹನ ಸವಾರರಿಗೂ ನಿಗದಿತ ಮಟ್ಟದ ದಂಡ ವಿಧಿಸಲಿದೆ.