ಅತಿ ಕಡಿಮೆ ಬೆಲೆಯಲ್ಲಿ ಬಿಎಸ್ಐ ಸರ್ಟಿಫೈಡ್ ಟ್ರೆಡ್ ಹೆಲ್ಮೆಟ್ ಬಿಡುಗಡೆ

ಸುರಕ್ಷಿತ ಬೈಕ್ ಚಾಲನೆಯನ್ನು ಖಾತ್ರಿಪಡಿಸಲು ಗುಣಮಟ್ಟದ ಹೆಲ್ಮೆಟ್ ಬಳಕೆಗೆ ಹೆಚ್ಚಿನ ಒತ್ತುನೀಡಲಾಗುತ್ತಿದ್ದು, ಡೆಟಲ್ ಹೆಲ್ಮೆಟ್ ಉತ್ಪಾದನಾ ಕಂಪನಿಯು ಬಿಎಸ್ಐ(ಬ್ಯೂರೋ ಆಫ್ ಇಂಡಿಯನ್ ಸ್ಟ್ಯಾಂಡರ್ಡ್ಸ್) ಪ್ರಮಾಣೀಕೃತ ಹೆಲ್ಮೆಟ್ ಮಾದರಿಯೊಂದನ್ನು ಬಿಡುಗಡೆ ಮಾಡಿದೆ.

ಅತಿ ಕಡಿಮೆ ಬೆಲೆಯಲ್ಲಿ ಬಿಎಸ್ಐ ಸರ್ಟಿಫೈಡ್ ಟ್ರೆಡ್ ಹೆಲ್ಮೆಟ್ ಬಿಡುಗಡೆ

ಸದ್ಯ ಮಾರುಕಟ್ಟೆಯಲ್ಲಿ ಮಾರುಕಟ್ಟೆಯಲ್ಲಿ ಅತ್ಯುತ್ತಮ ಗುಣಮಟ್ಟದ ಹಲವಾರು ಹೆಲ್ಮೆಟ್ ಮಾದರಿಗಳು ಮಾರುಕಟ್ಟೆಯಲ್ಲಿ ಲಭ್ಯವಿದ್ದರೂ ಗುಣಮಟ್ಟ ಮತ್ತು ಬ್ರಾಂಡ್ ನೆಮ್ ಆಧರಿಸಿ ಕನಿಷ್ಠ ರೂ. 1 ಸಾವಿರದಿಂದ ರೂ. 50 ಸಾವಿರ ತನಕವು ಬೆಲೆ ಹೊಂದಿವೆ. ಆದರೆ ಎಲ್ಲಾ ವರ್ಗದ ಗ್ರಾಹಕರಿಗೂ ದುಬಾರಿ ಬೆಲೆಯ ಹೆಲ್ಮೆಟ್ ಖರೀದಿ ಸಾಧ್ಯವಿಲ್ಲವಾದರೂ ಸುರಕ್ಷಿತ ಬೈಕ್ ಪ್ರಯಾಣಕ್ಕೆ ಕನಿಷ್ಠ ಬೆಲೆಯಲ್ಲಿಯಾದರೂ ಒಂದು ಗುಣಮಟ್ಟದ ಹೆಲ್ಮೆಟ್ ಬಳಕೆ ಅತಿಅವಶ್ಯಕವಾಗಿದೆ.

ಅತಿ ಕಡಿಮೆ ಬೆಲೆಯಲ್ಲಿ ಬಿಎಸ್ಐ ಸರ್ಟಿಫೈಡ್ ಟ್ರೆಡ್ ಹೆಲ್ಮೆಟ್ ಬಿಡುಗಡೆ

ಈ ನಿಟ್ಟಿನಲ್ಲಿ ಮಾರುಕಟ್ಟೆಯ ಅಧ್ಯಯನ ನಡೆಸಿರುವ ಡೆಟಲ್ ಹೆಲ್ಮೆಟ್ ಉತ್ಪಾದನಾ ಕಂಪನಿಯು ಟ್ರೆಡ್ ಎನ್ನುವ ಹೆಲ್ಮೆಟ್ ಮಾದರಿಯನ್ನು ಹೊಸ ಸುರಕ್ಷಾ ಮಾನದಂಡಗಳೊಂದಿಗೆ ಅಭಿವೃದ್ದಿಗೊಳಿಸಿದ್ದು, ಹೊಸ ಹೆಲ್ಮೆಟ್ ಮಾದರಿಯು ರೂ. 699ಕ್ಕೆ ಖರೀದಿಗೆ ಲಭ್ಯವಿದೆ.

ಅತಿ ಕಡಿಮೆ ಬೆಲೆಯಲ್ಲಿ ಬಿಎಸ್ಐ ಸರ್ಟಿಫೈಡ್ ಟ್ರೆಡ್ ಹೆಲ್ಮೆಟ್ ಬಿಡುಗಡೆ

ಓಪನ್ ಫೇಸ್ ಹೆಲ್ಮೆಟ್ ಮಾದರಿಯಾಗಿರುವ ಟ್ರೆಡ್ ಹೆಲ್ಮೆಟ್ ಉತ್ಪನ್ನವು ಪಾಲಿಕಾರ್ಬೊನೇಟ್ (ಪಿಸಿ) ನಿಂದ ತಯಾರಿಸ್ಪಟ್ಟಿದ್ದು, ಸ್ಕ್ರ್ಯಾಚ್ ರೆಸಿಸ್ಟಂಟ್‌ನೊಂದಿಗೆ ಫ್ಲಿಪ್ ಅಪ್ ಪ್ರೆಸ್ ಬಟನ್ ಸೌಲಭ್ಯ ಹೊಂದಿದೆ.

ಅತಿ ಕಡಿಮೆ ಬೆಲೆಯಲ್ಲಿ ಬಿಎಸ್ಐ ಸರ್ಟಿಫೈಡ್ ಟ್ರೆಡ್ ಹೆಲ್ಮೆಟ್ ಬಿಡುಗಡೆ

ಹಾಗೆಯೇ ರಾತ್ರಿ ವೇಳೆಯಲ್ಲಿ ಹೆಚ್ಚುವರಿ ಸುರಕ್ಷತೆಗಾಗಿ ಹೆಲ್ಮೆಟ್ ಮೇಲೆ ಬಿಳಿ ಪ್ರತಿಫಲಿತ ಪಟ್ಟಿಯನ್ನು ಸಹ ಒದಗಿಸಿದ್ದು, ಬ್ಯೂರೋ ಆಫ್ ಇಂಡಿಯನ್ ಸ್ಟ್ಯಾಂಡರ್ಡ್ಸ್ ಮಾನದಂಡಗಳಿಗೆ ಅನುಗುಣವಾಗಿ ಹೆಲ್ಮೆಟ್ ಒಳಭಾಗದಲ್ಲೂ ಉತ್ತಮ ಕುಷನ್ ನೀಡಲಾಗಿದೆ.

ಅತಿ ಕಡಿಮೆ ಬೆಲೆಯಲ್ಲಿ ಬಿಎಸ್ಐ ಸರ್ಟಿಫೈಡ್ ಟ್ರೆಡ್ ಹೆಲ್ಮೆಟ್ ಬಿಡುಗಡೆ

ಇನ್ನು ದೇಶಾದ್ಯಂತ ಬಹುತೇಕ ರಾಜ್ಯಗಳಲ್ಲಿ ಬೈಕ್ ಸವಾರರ ಜೊತೆಗೆ ಹಿಂಬದಿಯ ಸವಾರರಿಗೂ ಹೆಲ್ಮೆಟ್ ಬಳಕೆಯನ್ನು ಕಡ್ಡಾಯಗೊಳಿಸಿದ್ದರೂ ದಂಡದಿಂದ ತಪ್ಪಿಸಿಕೊಳ್ಳುವುದಕ್ಕಾಗಿ ಕಳಪೆ ಹೆಲ್ಮೆಟ್‌ಗಳ ಬಳಕೆಯು ಹೆಚ್ಚಳವಾಗಿದ್ದು, ಇವು ಬೈಕ್ ಸವಾರರಿಗೆ ರಕ್ಷಣೆ ನೀಡುವ ಬದಲಾಗಿ ಪ್ರಾಣಕ್ಕೆ ಕುತ್ತು ತರುತ್ತಿವೆ ಎಂದರೆ ತಪ್ಪಾಗುವುದಿಲ್ಲ. ಭಾರತದಲ್ಲಿ ಬೈಕ್ ಸವಾರರಿಗೆ ಕಡ್ಡಾಯವಾಗಿ ಹೆಲ್ಮೆಟ್ ಬಳಕೆಯನ್ನು ಜಾರಿಗೆ ತರುವಲ್ಲಿ ಆಯಾ ರಾಜ್ಯಗಳ ಸಾರಿಗೆ ಇಲಾಖೆಗಳು ಉತ್ತಮ ಬದಲಾವಣೆ ತರುವಲ್ಲಿ ಯಶಸ್ವಿಯಾಗುತ್ತಿದ್ದರೂ ಕಳಪೆ ಹೆಲ್ಮೆಟ್ ಬಳಕೆಯನ್ನು ತಡೆಯುವಲ್ಲಿ ವಿಫಲವಾಗುತ್ತಿವೆ.

MOST READ: ಹೆಲ್ಮೆಟ್ ಬಳಕೆ ಮಾಡಿದ್ರೆ ಸಾಲದು, ಈ ವಿಚಾರಗಳನ್ನು ತಪ್ಪದೇ ತಿಳಿದುಕೊಳ್ಳಿ..!

ಅತಿ ಕಡಿಮೆ ಬೆಲೆಯಲ್ಲಿ ಬಿಎಸ್ಐ ಸರ್ಟಿಫೈಡ್ ಟ್ರೆಡ್ ಹೆಲ್ಮೆಟ್ ಬಿಡುಗಡೆ

ವಾಹನ ಸವಾರರು ದುಬಾರಿ ದಂಡದಿಂದ ತಪ್ಪಿಸಿಕೊಳ್ಳುವ ಉದ್ದೇಶದಿಂದ ಗುಣಮಟ್ಟದ ಬಗ್ಗೆ ತಡೆಕೆಡಿಸಿಕೊಳ್ಳದೆ ಮಾರುಕಟ್ಟೆಯಲ್ಲಿ ಲಭ್ಯವಾಗುವ ಕಳಪೆ ಗುಣಮಟ್ಟದ ಹೆಲ್ಮೆಟ್‌ಗಳನ್ನು ಬಳಸುತ್ತಿರುವುದು ವಾಹನ ಸವಾರರ ಪ್ರಾಣ ಹಾನಿಗೆ ಕಾರಣವಾಗುತ್ತಿವೆ.

ಅತಿ ಕಡಿಮೆ ಬೆಲೆಯಲ್ಲಿ ಬಿಎಸ್ಐ ಸರ್ಟಿಫೈಡ್ ಟ್ರೆಡ್ ಹೆಲ್ಮೆಟ್ ಬಿಡುಗಡೆ

ಇದೇ ವಿಚಾರವಾಗಿ ಕಠಿಣ ನಿರ್ಧಾರಗಳನ್ನು ತೆಗೆದುಕೊಂಡಿರುವ ಕೇಂದ್ರ ಸಾರಿಗೆ ಇಲಾಖೆಯು ಸುಪ್ರೀಂಕೋರ್ಟ್ ನಿರ್ದೇಶನದಂತೆ ಹೊಸ ನಿಯಮವೊಂದನ್ನು ಜಾರಿಗೆ ತಂದಿದ್ದು, 2021ರ ಜೂನ್‌ 1 ರಿಂದ ಐಎಸ್ಐ ಪ್ರಮಾಣೀಕೃತ ಹೆಲ್ಮೆಟ್‌ಗಳನ್ನು ಮಾತ್ರ ಬಳಕೆ ಮಾಡಬೇಕು ಎಂಬ ಆದೇಶ ಹೊರಡಿಸಿದೆ.

MOST READ: ಬೈಕ್ ಚಾಲನೆ ವೇಳೆ ಕಳಪೆ ಹೆಲ್ಮೆಟ್ ಬಳಕೆಯನ್ನು ತಪ್ಪಿಸಲು ಹೊಸ ರೂಲ್ಸ್ ಜಾರಿಗೆ ತಂದ ಸಾರಿಗೆ ಇಲಾಖೆ

ಅತಿ ಕಡಿಮೆ ಬೆಲೆಯಲ್ಲಿ ಬಿಎಸ್ಐ ಸರ್ಟಿಫೈಡ್ ಟ್ರೆಡ್ ಹೆಲ್ಮೆಟ್ ಬಿಡುಗಡೆ

ಈ ಹಿಂದೆ ಐಎಸ್ಐ ಪ್ರಮಾಣೀಕೃತ ಹೆಲ್ಮೆಟ್ ಮಾತ್ರ ಮಾರಾಟ ಮಾಡಬೇಕೆಂಬ ನಿಯಮವನ್ನು ಜಾರಿಗೆ ತಂದಿರುವ ಸಾರಿಗೆ ಇಲಾಖೆ ಇದೀಗ ಬಳಕೆದಾರರಿಗೂ ಕಠಿಣ ನಿಯಮಗಳನ್ನು ಜಾರಿಗೆ ತಂದಿದ್ದು, ಐಎಸ್ಐ ಪ್ರಮಾಣೀಕೃತವಲ್ಲದ ಹೆಲ್ಮೆಟ್ ಬಳಕೆ ಮಾಡುವ ವಾಹನ ಸವಾರರಿಗೂ ನಿಗದಿತ ಮಟ್ಟದ ದಂಡ ವಿಧಿಸಲಿದೆ.

Most Read Articles

Kannada
English summary
Detel Launches BIS Certified Helmet. Read in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X