Just In
- 3 min ago ಕ್ರ್ಯಾಶ್ ಟೆಸ್ಟ್ನಲ್ಲಿ ಕಳಪೆ ಪ್ರದರ್ಶನ ನೀಡಿ ನಿರಾಸೆ ಮೂಡಿಸಿದ ಮಧ್ಯಮ ವರ್ಗದ ಮೆಚ್ಚಿನ ಸ್ವದೇಶಿ ಕಾರು
- 54 min ago ಕ್ರ್ಯಾಶ್ಟೆಸ್ಟ್ನಲ್ಲಿ ಈ ಹೋಂಡಾ ಕಾರಿಗೆ ಕೇವಲ 2 ಸ್ಟಾರ್: ಆದರೂ ಭಾರತೀಯರಿಗೆ ಈ ಕಾರು ಅಚ್ಚುಮೆಚ್ಚು!
- 56 min ago ಹ್ಯುಂಡೈ ಕ್ರೆಟಾಗೆ ಪೈಪೋಟಿ ನೀಡಲು ಬರಲಿವೆ ಟಾಟಾ, ಸಿಟ್ರಸ್ ಕಾರುಗಳು.. ಇವೇ ಜನಸಾಮಾನ್ಯರ ಲ್ಯಾಂಬೋರ್ಗಿನಿಗಳು!
- 3 hrs ago Triber: 7 ಜನ ಹೋಗಬಹುದಾದ ರೆನಾಲ್ಟ್ ಟ್ರೈಬರ್ ಖರೀದಿಸಬೇಕೇ.. ಆನ್-ರೋಡ್ ಬೆಲೆ ಎಷ್ಟು, EMI ಏನು?
Don't Miss!
- Movies 'ರಾಮಾಯಣ' ಚಿತ್ರದ ಬಗ್ಗೆ ಮೊದಲ ಬಾರಿ ಮೌನ ಮುರಿದ ಯಶ್
- News ಮೋದಿ ಯಾರ ಪರ; ಪ್ರಧಾನಿಯಾಗಿ 16 ಲಕ್ಷ ಕೋಟಿ ಸಾಲ ಮನ್ನಾ ಮಾಡಿದ್ದು ಯಾರದ್ದು? ಸಿದ್ದರಾಮಯ್ಯ
- Finance ಬೆಂಗಳೂರಿನಲ್ಲಿ ಈ ಮೂರು ದಿನಗಳ ಕಾಲ ಮದ್ಯ ಮಾರಾಟ ನಿಷೇಧ, ದಿನಾಂಕ, ಸಮಯ ತಿಳಿಯಿರಿ
- Technology ಡೇಟಾ ಬಳಕೆಯಲ್ಲಿ ಚೀನಾ ಮೊಬೈಲ್ ಹಿಂದಿಕ್ಕಿದ ಜಿಯೋ, ಈಗ ವಿಶ್ವದಲ್ಲೇ ದೊಡ್ಡಣ್ಣ!
- Lifestyle Zero Shadow Day: ಬೆಂಗಳೂರಲ್ಲಿ ಇಂದು ಶೂನ್ಯ ನೆರಳು ದಿನ.! ಯಾವ ಸಮಯದಲ್ಲಿ ಗೊತ್ತಾ?
- Sports ಟಿ20 ವಿಶ್ವಕಪ್ಗಾಗಿ ಭಾರತದ ಟಾಪ್ 3 ಆಯ್ಕೆ ಮಾಡಿದ ಇರ್ಫಾನ್ ಪಠಾಣ್; ವಿರಾಟ್ ಕೊಹ್ಲಿ ಸ್ಥಾನವೇನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಬಿಡುಗಡೆಯಾಗಲಿದೆ ಬಹುನಿರೀಕ್ಷಿತ ಹೊಸ ಡುಕಾಟಿ ಪಾನಿಗಲೆ ವಿ2 ಬೈಕ್
ಇಟಲಿ ಮೂಲದ ದ್ವಿಚಕ್ರ ವಾಹನ ತಯಾರಕ ಸಂಸ್ಥೆಯಾದ ಡುಕಾಟಿ ತನ್ನ ಪಾನಿಗಲೆ ವಿ2 ಬೈಕಿನ ಟೀಸರ್ ವೀಡಿಯೋವನ್ನು ಈ ವರ್ಷದ ಏಪ್ರಿಲ್ ತಿಂಗಳಲ್ಲಿ ಬಿಡುಗಡೆಗೊಳಿಸಿತ್ತು. ನಂತರದ ಕೆಲವು ದಿನಗಳಲ್ಲಿ ಈ ಹೊಸ ಡುಕಾಟಿ ಪಾನಿಗಲೆ ವಿ2 ಬೈಕ್ ಭಾರತದಲ್ಲಿ ಬಿಡುಗಡೆಯಾಗಬೇಕಿತ್ತು.
ಆದರೆ ಡುಕಾಟಿ ಕಂಪನಿಯು ಈ ಹೊಸ ಪಾನಿಗಲೆ ವಿ2 ಬೈಕನ್ನು ಕರೋನಾ ಸೋಂಕಿನ ಭೀತಿಯಿಂದ ಭಾರತದಲ್ಲಿ ಬಿಡುಗಡೆಗೊಳಿಸಲು ವಿಳಂಬ ಮಾಡಿದರು. ಇದಿಗ ಡುಕಾಟಿ ತನ್ನ ಪಾನಿಗಲೆ ವಿ2 ಬೈಕನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲು ಸಜ್ಜಾಗುತ್ತಿದೆ. ಇದರ ಭಾಗವಾಗಿ ಡುಕಾಟಿ ಕಂಪನಿಯು ಈ ಪಾನಿಗಲೆ ವಿ2 ಬೈಕಿನ ಬುಕ್ಕಿಂಗ್ ಅನ್ನು ಸ್ವೀಕರಿಸಲು ಇತ್ತೀಚೆಗೆ ಪ್ರಾರಂಭಿಸಿದ್ದಾರೆ. ಈ ಡುಕಾಟಿ ಪಾನಿಗಲೆ ವಿ2 ಬೈಕ್ ಆಗಸ್ಟ್ ತಿಂಗಳ ಅಂತ್ಯದಲ್ಲಿ ಭಾರತದಲ್ಲಿ ಬಿಡುಗಡೆಯಾಗಲಿದೆ.
ಈ ಹೊಸ ಡುಕಾಟಿ ಪಾನಿಗಲೆ ವಿ2 ಬೈಕನ್ನು ಖರೀದಿಸಲು ಬಯಸುವ ಗ್ರಾಹಕರು ಟೋಕನ್ ಮೊತ್ತ ರೂ.1 ಲಕ್ಷ ಪಾವತಿಸಿ ಬುಕ್ಕಿಂಗ್ ಮಾಡಿಕೊಳ್ಳಬಹುದಾಗಿದೆ. ಇನ್ನು ಹೂಸ ಪಾನಿಗಲೆ ವಿ2 ಬೈಕ್ ಕೆಲವು ಸಣ್ಣ ಬದಲಾವಣೆಯೊಂದಿಗೆ ಬಿಡುಗಡೆಯಾಗಲಿದೆ.
MOST READ: ದುಬಾರಿಯಾಯ್ತು ಜನಪ್ರಿಯ ಬಿಎಸ್-6 ಬಜಾಜ್ ಪಲ್ಸರ್ ಎನ್ಎಸ್200 ಬೈಕ್
ಈ ಹೊಸ ಪಾನಿಗಲೆ ವಿ2 ಬೈಕ್ ಫ್ರಂಟ್ ಫೇರಿಂಗ್, ಮತ್ತು ಸಿಂಗಲ್ ಸೈಡ್ ಸ್ವಿಂಗಾರ್ಮ್ ಅನ್ನು ಒಳಗೊಂಡಿರುತ್ತದೆ. ಈ ಹೊಸ ಡುಕಾಟಿ ಪಾನಿಗಲೆ ವಿ2 ಬೈಕ್ ಆಕರ್ಷಕ ಲುಕ್ ಅನ್ನು ಹೊಂದಿರಲಿದೆ. ಪಾನಿಗಲೆ ವಿ4 ಬೈಕಿನಲ್ಲಿರುವಂತಹ ಕೆಲವು ಸ್ಟೈಲಿಂಗ್ ಅಂಶಗಳು ಹೊಸ ಪಾನಿಗಲೆ ವಿ2 ಬೈಕಿನಲ್ಲಿರುತ್ತದೆ.
ಈ ಡುಕಾಟಿ ಪಾನಿಗಲೆ ವಿ2 ಬೈಕ್ ಬ್ರ್ಯಾಂಡ್ ಸಿಗ್ನೇಚರ್ ಪ್ರೊಜೆಕ್ಟರ್ ಹೆಡ್ ಲ್ಯಾಂಪ್, ಏರ್ ಡ್ಯಾಮ್ ಮತ್ತು ವಿ-ಆಕಾರದ ಡಿಆರ್ಎಲ್ ಅನ್ನು ಹೊಂದಿರಲಿದೆ. ಡುಕಾಟಿ ಪಾನಿಗಲೆ ವಿ2 ಬೈಕಿನಲ್ಲಿ ಇನ್ಸ್ ಟ್ರೂಮೆಂಟ್ ಕ್ಲಸ್ಟರ್ ಕ್ಲಸ್ಟರ್ಗಾಗಿ 4.3-ಇಂಚಿನ ಟಿಎಫ್ಟಿ ಡಿಸ್ ಪ್ಲೇಯನ್ನು ಹೊಂದಿರಲಿದೆ. ಈ ಬೈಕಿನಲ್ಲಿ ಸ್ಲಂಗ್ ಅಂಡರ್ ಎಕ್ಸಾಸ್ಟ್ ಅನ್ನು ಹೊಂದಿದೆ.
MOST READ: ಬಿಡುಗಡೆಯಾಯ್ತು ಬಹುನಿರೀಕ್ಷಿತ ಹೊಸ ಹೋಂಡಾ ಎಕ್ಸ್-ಬ್ಲೇಡ್ ಬೈಕ್
ಡುಕಾಟಿ ಪಾನಿಗಲೆ ವಿ2 ಬೈಕಿನಲ್ಲಿ ಬ್ರೇಕಿಂಗ್ ಸಿಸ್ಟಂಗಾಗಿ ಬ್ರೆಂಬೊ ಎಂ4.32 ಮೊನೊಬ್ಲೋಕ್ ಕ್ಯಾಲಿಪರ್ಗಳು ಮತ್ತು ಮುಂಭಾಗದಲ್ಲಿ ಡ್ಯುಯಲ್ ಡಿಸ್ಕ್ ಹೊಂದಿರುವ ಬ್ರೆಂಬೊ ಮಾಸ್ಟರ್ ಸಿಲಿಂಡರ್ಗಳು ಮತ್ತು ಹಿಂಭಾಗದಲ್ಲಿ ಒಂದೇ ಡಿಸ್ಕ್ ಬ್ರೇಕ್ ಅನ್ನು ಹೊಂದಿದೆ.
ಹೂಸ ಡುಕಾಟಿ ಪಾನಿಗಲೆ ವಿ2 ಬೈಕಿನಲ್ಲಿ 955 ಸಿಸಿ ಸೂಪರ್ಕ್ವಾಡ್ರೊ ಎಲ್-ಟ್ವಿನ್ ಎಂಜಿನ್ ಅನ್ನು ಅಳವಡಿಸಲಾಗಿದೆ. ಈ ಎಂಜಿನ್ 155 ಬಿಹೆಚ್ಪಿ ಮತ್ತು 104 ಎನ್ಎಂ ಟಾರ್ಕ್ ಉತ್ಪಾದಿಸುತ್ತದೆ. ಎಂಜಿನ್ ಅನ್ನು 6-ಸ್ಪೀಡ್ ಗೇರ್ಬಾಕ್ಸ್ಗೆ ಜೋಡಿಸಲಾಗಿದೆ.
ಡುಕಾಟಿ ಪಾನಿಗಲೆ ವಿ2 ಬೈಕ್ ತನ್ನ ಸಂಪೂರ್ಣ ಎಲೆಕ್ಟ್ರಾನಿಕ್ಸ್ ಕಿಟ್ ಅನ್ನು 959 ಮಾದರಿಯಿಂದ ಎರವಲು ಪಡೆಯುತ್ತದೆ. ಈ ಹೊಸ ಡುಕಾಟಿ ಪಾನಿಗಲೆ ವಿ2 ಬೈಕಿನಲ್ಲಿ ಟ್ರಾಕ್ಷನ್ ಕಂಟ್ರೋಲ್ ಅನ್ನು ನೀಡಿದೆ.
MOST READ: ಭಾರತಕ್ಕೆ ಲಗ್ಗೆ ಇಡಲಿದೆ ಜನಪ್ರಿಯ ಟ್ರಯಂಫ್ ಸ್ಟ್ರೀಟ್ ಟ್ರಿಪಲ್ ಆರ್ ಬೈಕ್
ಡುಕಾಟಿ ಪಾನಿಗಲೆ ವಿ2 ಉತ್ತಮ ಕಾರ್ಯಕ್ಷಮತೆ ಬೈಕ್ ಆಗಿದೆ. ಹೊಸ ಡುಕಾಟಿ ಪಾನಿಗಲೆ ವಿ2 ಬೈಕನ್ನು ಹಿಂದಿನ ಬಿಎಸ್-4 ಮಾದರಿಗೆ ಹೋಲಿಸಿದರೆ ಹೆಚ್ಚಿನ ಯಾವುದೇ ಬದಲಾವಣೆಗಳನ್ನು ಹೊಂದಿಲ್ಲ. ಆದರೆ ಹಿಂದಿನ ಮಾದರಿಗಿಂತ 5 ಬಿಹೆಚ್ಪಿ ಪವರ್ ಹೆಚ್ಚು ಉತ್ಪಾದಿಸುತ್ತದೆ. ಈ ಹೊಸ ಪಾನಿಗಲೆ ವಿ2 ಬೈಕ್ ಭಾರತೀಯ ಮಾರುಕಟ್ಟೆಯಲ್ಲಿ ಶೀಘ್ರದಲ್ಲೇ ಬಿಡುಗಡೆಯಾಗಲಿದೆ