ಹೊಸ ಡುಕಾಟಿ ಪಾನಿಗಲೆ ವಿ2 ಬೈಕಿನ ಟೀಸರ್ ಬಿಡುಗಡೆ
ಜನಪ್ರಿಯ ದ್ವಿಚಕ್ರ ವಾಹನ ಉತ್ಪಾದನಾ ಕಂಪನಿಯಾದ ಡುಕಾಟಿ ತನ್ನ ಪಾನಿಗಲೆ ವಿ2 ಬೈಕಿನ ಟೀಸರ್ ಚಿತ್ರವನ್ನು ಬಿಡುಗಡೆಗೊಳಿಸಿದೆ. ಈ ಹೊಸ ಡುಕಾಟಿ ಪಾನಿಗಲೆ ವಿ2 ಬೈಕನ್ನು ಶೀಘ್ರದಲ್ಲೇ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲಿದೆ.

ಡುಕಾಟಿ ಇಂಡಿಯಾ ಕಂಪನಿಯು ಸಾಮಾಜಿಕ ಜಾಲತಾಣದಲ್ಲಿ ಹೊಸ ಡುಕಾಟಿ ಪಾನಿಗಲೆ ವಿ2 ಬೈಕಿನ ಟೀಸರ್ ಚಿತವನ್ನು ಬಿಡುಗಡೆಗೊಳಿಸಲಾಗಿದೆ. ಡುಕಾಟಿ ಪಾನಿಗಲೆ ವಿ2 ಬೈಕು ಮೊದಲ ಬಾರಿಗೆ ಜಾಗತಿಕವಾಗಿ 2019ರ ಇಐಸಿಎಂಎದಲ್ಲಿ ಅನಾವರಣಗೊಳಿಸಲಾಗಿತು. ಡುಕಾಟಿ ಕಂಪನಿಯು ಈ ಹೊಸ ಪಾನಿಗಲೆ ವಿ2 ಬೈಕನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸುವ ದಿನಾಂಕವನ್ನು ಬಹಿರಂಗಪಡಿಸಲಿಲ್ಲ. ಮುಂಬರುವ ವಾರಗಳಲ್ಲಿ ಭಾರತದಲ್ಲಿ ಈ ಹೊಸ ಡುಕಾಟಿ ಪಾನಿಗಲೆ ವಿ2 ಬೈಕ್ ಬಿಡುಗಡೆಯಾಗಬಹುದು ಎಂದು ನಿರೀಕ್ಷಿಸುತ್ತೇವೆ.

ಸದ್ಯ ದೇಶಾದ್ಯಂತ ಕರೋನಾ ಭೀತಿಯಿಂದ ಲಾಕ್‌ಡೌನ್ ಇದೆ, ಆದರೆ ಲಾಕ್‌ಡೌನ್ ಮುಗಿದ ಬಳಿಕ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಬಹುದು, ಡುಕಾಟಿ ಕಂಪನಿಯು ಭಾರತೀಯ ಮಾರುಕಟ್ಟೆಯಲ್ಲಿ ತನ್ನ ಮೊದಲ ಬಿಎಸ್-6 ಮಾದರಿಯಾಗಿ ಪಾನಿಗಲೆ ವಿ2 ಬೈಕನ್ನು ಬಿಡುಗಡೆಗೊಳಿಸುತ್ತಿದೆ.
MOST READ: ಲಾಕ್‌ಡೌನ್ ನಡುವೆಯೂ ಭರ್ಜರಿ ಮಾರಾಟ ಕಂಡ ಚೇತಕ್ ಎಲೆಕ್ಟ್ರಿಕ್ ಸ್ಕೂಟರ್

ಹೊಸ ಡುಕಾಟಿ ಪಾನಿಗಲೆ ವಿ2 ಬೈಕ್ 955 ಸಿಸಿ ಸೂಪರ್-ಕ್ವಾಡ್ರೊ ಎಲ್-ಟ್ವಿನ್ ಎಂಜಿನ್ ಅನ್ನು ಹೊಂದಿದೆ. ಈ ಎಂಜಿನ್ 10,750 ಆರ್‌ಪಿಎಂನಲ್ಲಿ 155 ಬಿಹೆಚ್‌ಪಿ ಮತ್ತು 9,000 ಆರ್‌ಪಿಎಂನಲ್ಲಿ 104 ಎನ್ಎಂ ಪೀಕ್ ಟಾರ್ಕ್ ಅನ್ನು ಉತ್ಪಾದಿಸುತ್ತದೆ.

ಈ ಎಂಜಿನ್ ನೊಂದಿಗೆ ಆರು-ಸ್ಪೀಡ್ ಗೇರ್‌ಬಾಕ್ಸ್ ಅನ್ನು ಅಳವಡಿಸಲಾಗಿದೆ. ಇದರೊಂದಿಗೆ ಬೈ ಡೈರಕ್ಷನ್ ಕ್ವಿಕ್-ಶಿಫ್ಟರ್ ಅನ್ನು ಸ್ಟ್ಯಾಂಡರ್ಡ್ ಆಗಿ ಜೋಡಿಸಲಾಗಿದೆ. ಪಾನಿಗಲೆ ವಿ2 ಬೈಕ್ ತನ್ನ ಸರಣಿಯಲ್ಲಿರುವ ಪಾನಿಗಲೆ ವಿ4 ಬೈಕ್ ಮಾದರಿಗೆ ಹೋಲುತ್ತದೆ.
MOST READ: ಹೊಸ ರಾಯಲ್ ಎನ್‍ಫೀಲ್ಡ್ ಮೆಟಿಯೋರ್ 350 ಫೈರ್‌ಬಾಲ್ ಬೈಕಿನ ಬೆಲೆ ಮಾಹಿತಿ ಬಹಿರಂಗ

ಅಲ್ಲದೇ ಪಾನಿಗಲೆ ವಿ4 ಮಾದರಿಯಿಂದ ಕೆಲವು ಫೀಚರ್ ಗಳನ್ನು ಎರವಲು ಪಡೆದುಕೊಂಡಿದೆ. ಈ ಬೈಕ್ ಸಿಂಗಲ್ ಸೈಡಡ್ ಸ್ವಿಂಗಾರ್ಮ್ ಅನ್ನು ಒಳಗೂಂಡಿದೆ. ಜೊತೆಗೆ 6-ಎಕ್ಸಸ್ ಐಎಂಯುನ ಟ್ರಾಕ್ಷನ್ ಕಂಟ್ರೋಲ್, ವ್ಹೀಲ್ ಕಂಟ್ರೋಲ್, ಕಾರ್ನರಿಂಗ್ ಎಬಿಎಸ್, ಎಂಜಿನ್ ಬ್ರೇಕಿಂಗ್ ಕಂಟ್ರೋಲ್ ಮತ್ತು ಇತರ ಹಲವಾರು ಫೀಚರ್ ಗಳನ್ನು ಅಳವಡಿಸಲಾಗಿದೆ.

ಹೊಸ ಡುಕಾಟಿ ಪಾನಿಗಲೆ ವಿ2 ಬೈಕಿನ ಮೊನೊಶಾಕ್ ಫ್ರೇಮ್ ತನ್ನ 959 ಪಾನಿಗಲೆ ಮಾದರಿಯ ರೀತಿಯಲ್ಲಿದೆ. ಹೊಸ ಪಾನಿಗಲೆ ವಿ2 ಬೈಕಿನ ಸಸ್ಪೆಂಷನ್ ಮತ್ತು ಬ್ರೇಕಿಂಗ್ ಯುನಿಟ್ ಅನ್ನು ಹೊಂದರಲಿದೆ.
MOST READ: ಇತಿಹಾಸ ಪುಟ ಸೇರಿದ ಜನಪ್ರಿಯ ಬಜಾಜ್ ಡಿಸ್ಕವರ್ ಬೈಕುಗಳು

ಹೊಸ ಡುಕಾಟಿ ಪಾನಿಗಲೆ ವಿ2 ಬೈಕಿನ ಶೋವಾದಿಂದ 43 ಎಂಎಂ ಸಂಪೂರ್ಣ ಹೊಂದಾಣಿಕೆ ಮಾಡಬಹುದಾದ ಬಿಗ್ ಪಿಸ್ಟನ್ ಫೋರ್ಕ್‌ಗಳನ್ನು ಮತ್ತು ಹಿಂಭಾಗದಲ್ಲಿ ಸ್ಯಾಚ್ಸ್‌ನಿಂದ ಮೊನೊ-ಶಾಕ್ ಸೆಟಪ್ ಅನ್ನು ಒಳಗೊಂಡಿದೆ. ಈ ಬೈಕಿನಲ್ಲಿ ಸವಾರನ ಸುರಕ್ಷತೆಗೆ ಹೆಚ್ಚಿನ ಪ್ರಾಮುಖ್ಯತೆಯನ್ನು ನೀಡಿದ್ದಾರೆ. ಸುರಕ್ಷತೆಗಾಗಿ ಮುಂಭಾಗದಲ್ಲಿ ಡ್ಯುಯಲ್ 320 ಎಂಎಂ ಸೆಮಿ ಫ್ಲೋಟಿಂಗ್ ಡಿಸ್ಕ್ ಮತ್ತು ಹಿಂಭಾಗದಲ್ಲಿ ಒಂದೇ 245 ಎಂಎಂ ಡಿಸ್ಕ್ ಬ್ರೇಕ್ ಅನ್ನು ಅಳವಡಿಸಿದ್ದಾರೆ.

ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಜನಪ್ರಿಯ ಬೈಕುಗಳಲ್ಲಿ ಡುಕಾಟಿ ಪಾನಿಗಲೆ ವಿ2 ಕೂಡ ಒಂದಾಗಿದೆ.ಭಾರತೀಯ ಮಾರುಕಟ್ಟೆಯಲ್ಲಿ ಈ ಬೈಕಿಗೆ ಸ್ಪರ್ಧಾತ್ಮಕ ಬೆಲೆಯನ್ನು ನಿಗದಿಪಡಿಸಬಹುದು, ಡುಕಾಟಿ ಪಾನಿಗಲೆ ವಿ2 ಬೈಕಿನ ಬೆಲೆಯು ಭಾರತೀಯ ಎಕ್ಸ್ ಶೋರೂಂ ಪ್ರಕಾರ ರೂ.15 ಲಕ್ಷಗಳಾಗಿರಬಹುದು ಎಂದು ನಿರೀಕ್ಷಿಸುತ್ತೇವೆ.


Click it and Unblock the Notifications







