ಭಾರತದಲ್ಲಿ ಬಿಡುಗಡೆಯಾಗಲಿದೆ ಜನಪ್ರಿಯ ಡುಕಾಟಿ ಬೈಕುಗಳು

ಜನಪ್ರಿಯ ದ್ವಿಚಕ್ರ ವಾಹನ ತಯಾರಕ ಕಂಪನಿಯಾದ ಡುಕಾಟಿ ತನ್ನ ಸರಣಿಯಲ್ಲಿರುವ ಜನಪ್ರಿಯ ಬೈಕುಗಳನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲು ಸಜ್ಜಾಗುತ್ತಿದೆ. ಈ ವರ್ಷದ ಅಂತ್ಯದಲ್ಲಿ ಡುಕಾಟಿ ಕಂಪನಿಯು ಭಾರತದಲ್ಲಿ ತನ್ನ ಜನಪ್ರಿಯ ಮಾದರಿಗಳನ್ನು ಬಿಡುಗಡೆಗೊಳಿಸಲಿದೆ.

ಭಾರತದಲ್ಲಿ ಬಿಡುಗಡೆಯಾಗಲಿದೆ ಜನಪ್ರಿಯ ಡುಕಾಟಿ ಬೈಕುಗಳು

ಡುಕಾಟಿ ಕಂಪನಿಯು ತನ್ನ ಹೊಸ ಪಾನಿಗಲೆ ವಿ2 ಬೈಕನ್ನು ಮುಂದಿನ ತಿಂಗಳು ಭಾರತದಲ್ಲಿ ಬಿಡುಗಡೆಗೊಳಿಸಲಿದೆ. ಈ ಬೈಕಿನ ಬಿಡುಗಡೆಯ ಬಳಿಕ ಇನ್ನು ಮೂರು ಹೊಸ ಬೈಕುಗಳನ್ನು ಡುಕಾಟಿ ಕಂಪನಿಯು ಭಾರತದಲ್ಲಿ ಬಿಡುಗಡೆಗೊಳಿಸಲಿದೆ. ಈ ಮೂರು ಬೈಕುಗಳಲ್ಲಿ ಒಂದು ಮಲ್ಟಿಸ್ಟ್ರಾಡಾ ಸರಣಿಯ ಬೈಕನ್ನು ಭಾರತದಲ್ಲಿ ಬಿಡುಗಡೆಗೊಳಿಸಲಿದೆ ಎಂದು ಡುಕಾಟಿ ಕಂಪನಿ ಹೇಳಿದೆ. ಆದರೆ ಡುಕಾಟಿ ಕಂಪನಿಯು ಮಲ್ಟಿಸ್ಟ್ರಾಡಾ ಸರಣಿಯ ಯಾವ ಬೈಕ್ ಎಂಬುದರ ಬಗ್ಗೆ ಕಂಪನಿಯು ಸ್ಪಷ್ಟ ಪಡಿಸಿಲ್ಲ.

ಭಾರತದಲ್ಲಿ ಬಿಡುಗಡೆಯಾಗಲಿದೆ ಜನಪ್ರಿಯ ಡುಕಾಟಿ ಬೈಕುಗಳು

ಆದರೆ ಭಾರತೀಯ ಮಾರುಕಟ್ಟೆಯಲ್ಲಿ ಮಲ್ಟಿಸ್ಟ್ರಾಡಾ ಸರಣಿಯ 950 ಅಡ್ವೆಂಚರ್-ಟೂರರ್ ಮಾದರಿಯನ್ನು ಬಿಡುಗಡೆಗೊಳಿಸಬಹುದು ಎಂದು ನಿರೀಕ್ಷಿಸುತ್ತೇವೆ. ಈ ವರ್ಷದ ಕೊನೆಯಲ್ಲಿ ಈ ಡುಕಾಟಿ ಮಲ್ಟಿಸ್ಟ್ರಾಡಾ 950 ಬೈಕ್ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಬಹುದು.

MOST READ: ಭಾರತಕ್ಕೆ ಲಗ್ಗೆ ಇಡಲಿದೆ ಜನಪ್ರಿಯ ಟ್ರಯಂಫ್ ಸ್ಟ್ರೀಟ್ ಟ್ರಿಪಲ್ ಆರ್ ಬೈಕ್

ಭಾರತದಲ್ಲಿ ಬಿಡುಗಡೆಯಾಗಲಿದೆ ಜನಪ್ರಿಯ ಡುಕಾಟಿ ಬೈಕುಗಳು

ಇನ್ನು ಡುಕಾಟಿ ಕಂಪನಿಯು ಸ್ಕ್ರ್ಯಾಂಬ್ಲರ್ 800 ಮಾದರಿಯನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲಿದೆ. ಡುಕಟಿ ಸ್ಕ್ರ್ಯಾಂಬ್ಲರ್ ಬೈಕುಗಳ ಸರಣಿಯಲ್ಲಿ ಹೆಚ್ಚು ಮಾರಾಟವಾಗುವ ಮಾದರಿಗಳಲ್ಲಿ ಇದು ಒಂದಾಗಿದೆ.

ಭಾರತದಲ್ಲಿ ಬಿಡುಗಡೆಯಾಗಲಿದೆ ಜನಪ್ರಿಯ ಡುಕಾಟಿ ಬೈಕುಗಳು

ಇನ್ನು ಭಾರತೀಯ ಮಾರುಕಟ್ಟೆಯಲ್ಲಿ ಡುಕಾಟಿ ಕಂಪನಿಯು ಬಿಡುಗಡೆಗೊಳಿಸುವ ಮೂರನೇ ಬೈಕ್ ಸ್ಕ್ರ್ಯಾಂಬ್ಲರ್ 1100 ಮಾದರಿಯಾಗಿದೆ. ವಿದೇಶಿ ಮಾರುಕಟ್ಟೆಯಲ್ಲಿ ಈ ಬೈಕ್ ಉತ್ತಮವಾಗಿ ಮಾರಾಟವಾಗಿಲ್ಲ. ಆದರೆ ಭಾರತದಲ್ಲಿ ಗ್ರಾಹಕರನ್ನು ಸೆಳೆಯಬಹುದು ಎಂದು ಕಂಪನಿ ಚಿಂತಿಸಿದೆ.

MOST READ: ದುಬಾರಿಯಾಯ್ತು ಜನಪ್ರಿಯ ಬಿ‍ಎಸ್-6 ಬಜಾಜ್ ಪಲ್ಸರ್ ಎನ್ಎಸ್200 ಬೈಕ್

ಭಾರತದಲ್ಲಿ ಬಿಡುಗಡೆಯಾಗಲಿದೆ ಜನಪ್ರಿಯ ಡುಕಾಟಿ ಬೈಕುಗಳು

ಈ ಸ್ಕ್ರ್ಯಾಂಬ್ಲರ್ 1100 ಮಾದರಿಯನ್ನು ವಿದೇಶದಲ್ಲಿ ಯುರೋ 5 ನಿಯಮದ ಅನುಗುಣವಾಗಿ ಮಾರಾಟವಾಗುತ್ತಿದೆ. ಭಾರತದಲ್ಲಿ ಈ ಬೈಕನ್ನು ಬಿಎಸ್-6 ಮಾಲಿನ್ಯ ನಿಯಮಕ್ಕೆ ಅನುಗುಣವಾಗಿ ನವೀಕರಿಸಿ ವಿನ್ಯಾಸದಲ್ಲಿ ಕೆಲವು ಬದಲಾವಣೆಗಳನ್ನು ಮಾಡಿ ಬಿಡುಗಡೆಗೊಳಿಸಬಹುದು.

ಭಾರತದಲ್ಲಿ ಬಿಡುಗಡೆಯಾಗಲಿದೆ ಜನಪ್ರಿಯ ಡುಕಾಟಿ ಬೈಕುಗಳು

ಡುಕಾಟಿ ಕಂಪನಿಯು ಹೊಸ ಪಾನಿಗಲೆ ವಿ2 ಬೈಕನ್ನು ಕರೋನಾ ಸೋಂಕಿನ ಭೀತಿಯಿಂದ ಭಾರತದಲ್ಲಿ ಬಿಡುಗಡೆಗೊಳಿಸಲು ವಿಳಂಬ ಮಾಡಿದರು. ಇದಿಗ ಡುಕಾಟಿ ತನ್ನ ಪಾನಿಗಲೆ ವಿ2 ಬೈಕನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲು ಸಜ್ಜಾಗುತ್ತಿದೆ.

MOST READ: ಬಿಡುಗಡೆಯಾಯ್ತು ಬಹುನಿರೀಕ್ಷಿತ ಹೊಸ ಹೋಂಡಾ ಎಕ್ಸ್-ಬ್ಲೇಡ್ ಬೈಕ್

ಭಾರತದಲ್ಲಿ ಬಿಡುಗಡೆಯಾಗಲಿದೆ ಜನಪ್ರಿಯ ಡುಕಾಟಿ ಬೈಕುಗಳು

ಇದರ ಭಾಗವಾಗಿ ಡುಕಾಟಿ ಕಂಪನಿಯು ಈ ಪಾನಿಗಲೆ ವಿ2 ಬೈಕಿನ ಬುಕ್ಕಿಂಗ್ ಅನ್ನು ಸ್ವೀಕರಿಸಲು ಇತ್ತೀಚೆಗೆ ಪ್ರಾರಂಭಿಸಿದ್ದಾರೆ. ಈ ಡುಕಾಟಿ ಪಾನಿಗಲೆ ವಿ2 ಬೈಕ್ ಆಗಸ್ಟ್ ತಿಂಗಳ ಅಂತ್ಯದಲ್ಲಿ ಭಾರತದಲ್ಲಿ ಬಿಡುಗಡೆಯಾಗಲಿದೆ.

ಭಾರತದಲ್ಲಿ ಬಿಡುಗಡೆಯಾಗಲಿದೆ ಜನಪ್ರಿಯ ಡುಕಾಟಿ ಬೈಕುಗಳು

ಡುಕಾಟಿ ಪಾನಿಗಲೆ ವಿ2 ಉತ್ತಮ ಕಾರ್ಯಕ್ಷಮತೆ ಬೈಕ್ ಆಗಿದೆ. ಹೊಸ ಡುಕಾಟಿ ಪಾನಿಗಲೆ ವಿ2 ಬೈಕನ್ನು ಹಿಂದಿನ ಬಿಎಸ್-4 ಮಾದರಿಗೆ ಹೋಲಿಸಿದರೆ ಹೆಚ್ಚಿನ ಯಾವುದೇ ಬದಲಾವಣೆಗಳನ್ನು ಹೊಂದಿಲ್ಲ. ಆದರೆ ಹಿಂದಿನ ಮಾದರಿಗಿಂತ ತುಸು ಹೆಚ್ಚು ಬಿಹೆಚ್‍ಪಿ ಪವರ್ ಅನ್ನು ಉತ್ಪಾದಿಸುತ್ತದೆ.

More from DriveSpark

Article Published On: Friday, July 24, 2020, 21:00 [IST]
English summary
Ducati To launch Three More BS6 Compliant Motorcycles In India This Year. Read In Kannada.
Read more on ಡುಕಾಟಿ ducati
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+