Just In
Don't Miss!
- Education
ECIL Recruitment 2021: 3 ಟೆಕ್ನಿಕಲ್ ಅಧಿಕಾರಿ ಹುದ್ದೆಗಳಿಗೆ ನೇರ ಸಂದರ್ಶನ
- Movies
ಡಬ್ಬಿಂಗ್ ಸಿನಿಮಾಗಳ ಬಗ್ಗೆ ಹಿರಿಯ ನಟ ದೊಡ್ಡಣ್ಣ ಅಸಮಾಧಾನ
- News
ಕೊರೊನಾ ನಿಯಂತ್ರಣದಲ್ಲಿ ವಿಫಲ: ಇಟಲಿ ಪ್ರಧಾನಿ ಗಿಸೆಪ್ಪೆ ಕಾಂಟೆ ರಾಜೀನಾಮೆ
- Sports
ಐಎಸ್ಎಲ್: ಜೆಮ್ಷೆಡ್ಪುರ ವಿರುದ್ಧ ಕ್ಲೀನ್ ಶೀಟ್ ಗುರಿಯಲ್ಲಿ ಕೇರಳ ಬ್ಲಾಸ್ಟರ್ಸ್
- Finance
ಗಣರಾಜ್ಯೋತ್ಸವಕ್ಕೆ ಬಿಎಸ್ಎನ್ಎಲ್ನಿಂದ ವಿಶೇಷ ಆಫರ್
- Lifestyle
ನೀವು ಬಳಸಬಹುದಾದ ಡೈರಿ ಉತ್ಪನ್ನವಲ್ಲದ ಹಾಲುಗಳ ಬಗ್ಗೆ ಇಲ್ಲಿದೆ ಮಾಹಿತಿ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಸಾರ್ವಜನಿಕ ಬಳಕೆಯ ಇವಿ ಚಾರ್ಜಿಂಗ್ ನಿಲ್ದಾಣಗಳ ಸಮಸ್ಯೆ ಬಗೆಹರಿಸಲು ಬೃಹತ್ ಯೋಜನೆಗೆ ಚಾಲನೆ
ಭಾರತದಲ್ಲಿ ಎಲೆಕ್ಟ್ರಿಕ್ ವಾಹನಗಳಿಗೆ ಉತ್ತಮ ಬೇಡಿಕೆಯಿದ್ದರೂ ಚಾರ್ಜಿಂಗ್ ನಿಲ್ದಾಣಗಳ ಕೊರತೆ ಎದ್ದುಕಾಣುತ್ತಿದ್ದು, ಸರ್ಕಾರಿ ವಲಯದಲ್ಲಿ ಮಾತ್ರವಲ್ಲದೆ ವಿವಿಧ ಆಟೋ ಉತ್ಪಾದನಾ ಕಂಪನಿಗಳು ಸಹ ಫಾಸ್ಟ್ ಚಾರ್ಜಿಂಗ್ ನಿಲ್ದಾಣಗಳ ಮೇಲೆ ಭಾರೀ ಹೂಡಿಕೆಯೊಂದಿಗೆ ಅಗತ್ಯ ಚಾರ್ಜಿಂಗ್ ನಿಲ್ದಾಣಗಳ ನಿರ್ಮಾಣ ಯೋಜನೆಗಳನ್ನು ಕೈಗೆತ್ತಿಗೊಳ್ಳುತ್ತಿವೆ.

ದೇಶಾದ್ಯಂತ ಎಲೆಕ್ಟ್ರಿಕ್ ವಾಹನಗಳ ಬಳಕೆಯನ್ನು ಹೆಚ್ಚಿಸುವತ್ತ ಹಲವಾರು ಯೋಜನೆಗಳನ್ನು ಜಾರಿಗೊಳಿಸಿದರೂ ಸಹ ಸಾರ್ವಜನಿಕ ಬಳಕೆಯ ಫಾಸ್ಟ್ ಚಾರ್ಜಿಂಗ್ ನಿಲ್ದಾಣಗಳ ಕೊರೆತೆಯಿಂದಾಗಿ ಹಲವಾರು ಗ್ರಾಹಕರು ಇವಿ ವಾಹನಗಳ ಖರೀದಿ ಮಾಡುವ ಯೋಜನೆಯಿದ್ದರೂ ಕೂಡಾ ಚಾರ್ಜಿಂಗ್ ನಿಲ್ದಾಣಗಳ ವಿಚಾರವಾಗಿ ಹಿಂದೇಟು ಹಾಕುತ್ತಿದ್ದಾರೆ. ಈ ಹಿನ್ನಲೆ ವಿವಿಧ ಆಟೋ ಉತ್ಪಾದನಾ ಕಂಪನಿಗಳು ಜಂಟಿ ಯೋಜನೆ ಅಡಿಯಲ್ಲಿ ಫಾಸ್ಟ್ ಚಾರ್ಜಿಂಗ್ ನಿಲ್ದಾಣಗಳ ಗ್ರಾಹಕರ ಸೆಳೆಯಲು ಯೋಜನೆಯಲ್ಲಿವೆ.

ಫಾಸ್ಟ್ ಚಾರ್ಜಿಂಗ್ ನಿಲ್ದಾಣ ಲಭ್ಯತೆಯಿದ್ದಲ್ಲಿ ಎಲೆಕ್ಟ್ರಿಕ್ ವಾಹನಗಳ ಮಾರಾಟವನ್ನು ಸುಧಾರಿಸಬಹುದು ಎನ್ನುವ ಯೋಜನೆಯಲ್ಲಿರುವ ಆಟೋ ಉತ್ಪಾದನಾ ಕಂಪನಿಗಳು ಹೆಚ್ಚಿನ ಮಟ್ಟದಲ್ಲಿ ಚಾರ್ಜಿಂಗ್ ನಿಲ್ದಾಣಗಳ ನಿರ್ಮಾಣಕ್ಕೆ ಚಾಲನೆ ನೀಡಿದ್ದು, ಎಲೆಕ್ಟ್ರಿಕ್ ವಾಹನಗಳ ಉತ್ಪಾದನಾ ಕಂಪನಿಯಾದ ಇಬೈಕ್‌ಗೊ ಕೂಡಾ ಭಾರೀ ಪ್ರಮಾಣದಲ್ಲಿ ಚಾರ್ಜಿಂಗ್ ನಿಲ್ದಾಣಗಳನ್ನು ತೆರೆಯಲು ಸಿದ್ದತೆ ನಡೆಸಿದೆ.

ಮುಂದಿನ ತಿಂಗಳು ಡಿಸೆಂಬರ್ 1ಕ್ಕೆ ಸಾರ್ವಜನಿಕ ಬಳಕೆಯ ಚಾರ್ಜಿಂಗ್ ನಿಲ್ದಾಣ ನಿರ್ಮಾಣಕ್ಕೆ ಅಧಿಕೃತವಾಗಿ ಚಾಲನೆ ನೀಡಲಿರುವ ಇಬೈಕ್‌ಗೊ ಕಂಪನಿಯು 2021ರ ಫೆಬ್ರುವರಿ ಅಂತ್ಯಕ್ಕೆ ಒಟ್ಟು ಮೂರು ಸಾವಿರ ಚಾರ್ಜಿಂಗ್ ನಿಲ್ದಾಣಗಳನ್ನು ತೆರೆಯಲು ಯೋಜಿಸಿದೆ.

ಆರಂಭಿಕ ಹಂತವಾಗಿ ದೆಹಲಿ, ಮುಂಬೈ-ಪುಣೆ, ಬೆಂಗಳೂರು, ಚೆನ್ನೈ ಮತ್ತು ಹೈದ್ರಾಬಾದ್‌ನಲ್ಲಿ 3 ಸಾವಿರ ಚಾರ್ಜಿಂಗ್ ನಿಲ್ದಾಣಗಳನ್ನು ತೆರೆಯುತ್ತಿದ್ದು, ಮುಂದಿನ ಒಂದು ವರ್ಷದಲ್ಲಿ 12 ಸಾವಿರದಿಂದ 15 ಸಾವಿರ ಫಾಸ್ಟ್ ಚಾರ್ಜಿಂಗ್ ನಿಲ್ದಾಣಗಳನ್ನು ಹೊಂದುವ ವಿಶ್ವಾಸ ವ್ಯಕ್ತಪಡಿಸಿದ್ದು, ಇಬೈಕ್‌ಗೊ ಚಾರ್ಜಿಂಗ್ ನಿಲ್ದಾಣಗಳು ಸದ್ಯಕ್ಕೆ ದ್ವಿಚಕ್ರ ಮತ್ತು ತ್ರಿ ಚಕ್ರ ಎಲೆಕ್ಟ್ರಿಕ್ ವಾಹನಗಳಿಗೆ ಮಾತ್ರವೇ ಚಾರ್ಜಿಂಗ್ ಸೌಲಭ್ಯವನ್ನು ಒದಗಿಸುತ್ತಿದೆ.

ನಗರದ ಪ್ರಮುಖ ಕಡೆಗಳಲ್ಲಿ ತಲೆ ಎತ್ತಲಿರುವ ಇಬೈಕ್‌ಗೊ ನಿಲ್ದಾಣಗಳ ಮಾಹಿತಿಗಾಗಿ ಮೊಬೈಲ್ ಅಪ್ಲಿಕೇಷನ್ ಕೂಡಾ ಲಭ್ಯವಿದ್ದು, ಎಲೆಕ್ಟಿಕ್ ವಾಹನ ಸವಾರರು ಅಪ್ಲಿಕೇಷನ್ ಮೂಲಕ ಚಾರ್ಜಿಂಗ್ ನಿಲ್ದಾಣಗಳನ್ನು ಸುಲಭವಾಗಿ ಪತ್ತೆಹಚ್ಚಬಹುದು.

ಜೊತೆಗೆ ಚಾರ್ಜಿಂಗ್ ನಿಲ್ದಾಣಗಳಲ್ಲಿ ಚಾರ್ಜಿಂಗ್ ಲಭ್ಯತೆ ಮತ್ತು ಎಷ್ಟು ವಾಹನಗಳು ಚಾರ್ಜಿಂಗ್‌ಗಾಗಿ ಸರತಿ ಸಾಲಿನಲ್ಲಿವೆ ಎನ್ನುವ ಮಾಹಿತಿಯನ್ನು ಸಹ ನೀಡಲಿದ್ದು, ಇದು ಚಾರ್ಜಿಂಗ್ ಸೌಲಭ್ಯಕ್ಕಾಗಿ ಗ್ರಾಹಕರು ಕಾಯುವ ತೊಂದರೆಯನ್ನು ತಪ್ಪಿಸುತ್ತದೆ.

ಜೊತೆಗೆ ಚಾರ್ಜಿಂಗ್ ನಿಲ್ದಾಣಗಳಲ್ಲಿ ಬೇರೆ ವಾಹನಗಳು ಚಾರ್ಜಿಂಗ್‌ಗಾಗಿ ಸರತಿಯಲ್ಲಿರುವಾಗ ಲಭ್ಯವಿರುವ ಹತ್ತಿರದ ಮತ್ತೊಂದು ಚಾರ್ಜಿಂಗ್ ನಿಲ್ದಾಣದ ಮಾಹಿತಿ ನೀಡುವ ಇಬೈಕ್‌ಗೊ ಅಪ್ಲಿಕೇಷನ್ ವಾಹನ ಸವಾರರಿಗೆ ಸಾಕಷ್ಟು ಸಹಾಕರಿಯಾಗಲಿದ್ದು, ಅತಿ ಕಡಿಮೆ ದರದಲ್ಲಿ ಚಾರ್ಜಿಂಗ್ ಒದಗಿಸಲಿದೆ.
MOST READ: ಪ್ರತಿ ಚಾರ್ಜ್‌ಗೆ ಬರೋಬ್ಬರಿ 240ಕಿ.ಮೀ ಮೈಲೇಜ್ ನೀಡುವ ಇವಿ ಸ್ಕೂಟರ್ ಬಿಡುಗಡೆ ಮಾಡಲಿದೆ ಓಲಾ

ಇನ್ನು ಪೆಟ್ರೋಲ್ ಮತ್ತು ಡೀಸೆಲ್ ವಾಹನಗಳ ಮಾರಾಟವನ್ನು ತಗ್ಗಿಸಲು ಮತ್ತು ಎಲೆಕ್ಟ್ರಿಕ್ ವಾಹನಗಳ ಬಳಕೆಯನ್ನು ಹೆಚ್ಚಿಸಲು ಹಲವಾರು ಯೋಜನೆಗಳನ್ನು ಜಾರಿಗೆ ತಂದಿರುವ ಕೇಂದ್ರ ಸರ್ಕಾರವು ಇದೀಗ ಕೇಂದ್ರ ಸರ್ಕಾರವು ಈಗಾಗಲೇ ಎಲೆಕ್ಟ್ರಿಕ್ ವಾಹನಗಳ ಅಭಿವೃದ್ದಿಪಡಿಸುವ ಆಟೋ ಕಂಪನಿಗಳ ಜೊತೆಗೆ ಎಲೆಕ್ಟ್ರಿಕ್ ವಾಹನ ಖರೀದಿಸುವ ಗ್ರಾಹಕರಿಗೂ ಕೂಡಾ ಆಕರ್ಷಕ ಆಫರ್‌ಗಳನ್ನು ನೀಡಲಾಗುತ್ತಿದ್ದು, ಜಿಎಸ್‌ಟಿ ವಿನಾಯ್ತಿ, ಗರಿಷ್ಠ ಸಬ್ಸಡಿ, ತೆರಿಗೆ ವಿನಾಯ್ತಿಗಳನ್ನು ನೀಡಲಾಗುತ್ತಿದೆ. ಆದರೂ ಕೂಡಾ ಎಲೆಕ್ಟ್ರಿಕ್ ವಾಹನಗಳಿಗೆ ಪೂರಕವಾಗಿ ಹೆಚ್ಚಿನ ಮಟ್ಟದ ಸಾರ್ವಜನಿಕ ಬಳಕೆಯ ಫಾಸ್ಟ್ ಚಾರ್ಜಿಂಗ್ ನಿಲ್ದಾಣ ಕೊರೆತೆ ಎದುರಾಗಿದ್ದು, ಕೇಂದ್ರ ಸರ್ಕಾರವು ಈ ವಿಚಾರವಾಗಿ ಮಹತ್ವದ ನಿರ್ಧಾರ ಕೈಗೊಂಡಿದೆ.

ಭಾರತದಲ್ಲಿ ವಿವಿಧ ಮಾದರಿಯ ಹಲವು ಎಲೆಕ್ಟ್ರಿಕ್ ಕಾರು ಮತ್ತು ದ್ವಿಚಕ್ರ ವಾಹನ ಮಾದರಿಗಳು ಮಾರಾಟವಾಗುತ್ತಿದ್ದು, ಬೆಲೆಗಳಿಗೆ ಅನುಗುಣವಾಗಿ ಮೈಲೇಜ್ ಪಡೆದುಕೊಂಡಿವೆ. ದುಬಾರಿ ಬೆಲೆಯ ಇವಿ ವಾಹನಗಳು ಹೆಚ್ಚಿನ ಮಟ್ಟದ ಮೈಲೇಜ್ ರೇಂಜ್ ಹೊಂದಿದ್ದರೆ ಬಜೆಟ್ ಬೆಲೆಯ ಇವಿ ವಾಹನಗಳು ಕಡಿಮೆ ಮೈಲೇಜ್‌ನೊಂದಿಗೆ ನಗರ ಪ್ರದೇಶದಲ್ಲಿನ ಸಂಚಾರಕ್ಕೆ ಮಾತ್ರವೇ ಸೀಮಿತವಾಗಿವೆ.
MOST READ: ಅತಿ ಹೆಚ್ಚು ಮೈಲೇಜ್ ನೀಡುವ ಟಾಪ್ 10 ಬಜೆಟ್ ಬೆಲೆಯ ಬೈಕುಗಳಿವು..!

ಜೊತೆಗೆ ಪ್ರಸ್ತುತ ಮಾರುಕಟ್ಟೆಯಲ್ಲಿ ಎಲೆಕ್ಟ್ರಿಕ್ ವಾಹನಗಳು ಸ್ವಂತ ಬಳಕೆ ಮಾತ್ರ ಮಾರಾಟವಾಗುತ್ತಿದ್ದು, ವಾಣಿಜ್ಯ ಬಳಕೆಗೂ ಇವಿ ವಾಹನಗಳು ಮಾರಾಟ ಹೆಚ್ಚಳವಾಗಬೇಕೆಂಬ ಯೋಜನೆ ರೂಪಿಸಲಾಗುತ್ತಿದೆ. ಇದಕ್ಕೆ ಪೂರಕವಾಗಿ ಯಾವುದೇ ಪ್ರದೇಶಗಳಿಗೂ ಹೋದರೂ ಚಾರ್ಜಿಂಗ್ ಸೌಲಭ್ಯ ಲಭ್ಯವಾಗುವಂತೆ ಯೋಜನೆ ಸಿದ್ದಪಡಿಸಲಾಗಿದೆ.