ಆಕರ್ಷಕ ವಿನ್ಯಾಸದ ಕ್ರೂಸರ್ ಎಲೆಕ್ಟ್ರಿಕ್ ಬೈಕ್ ಅನಾವರಣ

ಹೆಚ್ಚುತ್ತಿರುವ ಇಂಧನ ಬೆಲೆಗಳಿಂದಾಗಿ ಪರಿಸರ ಸ್ನೇಹಿ ಎಲೆಕ್ಟ್ರಿಕ್ ವಾಹನಗಳ ಮಾರಾಟವು ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಗ್ರಾಹಕರ ಬೇಡಿಕೆಗೆ ಅನುಗುಣವಾಗಿ ಹಲವಾರು ಆಟೋ ಕಂಪನಿಗಳು ವಿವಿಧ ಮಾದರಿಯ ಎಲೆಕ್ಟ್ರಿಕ್ ವಾಹನಗಳನ್ನು ಪರಿಚಯಿಸುತ್ತಿವೆ.

ಆಕರ್ಷಕ ವಿನ್ಯಾಸದ ಕ್ರೂಸರ್ ಎಲೆಕ್ಟ್ರಿಕ್ ಬೈಕ್ ಅನಾವರಣ

ಹೊಸ ಮಾದರಿಯ ಎಲೆಕ್ಟ್ರಿಕ್ ವಾಹನಗಳ ಉತ್ಪಾದನೆಯಲ್ಲಿ ಈಗಾಗಲೇ ಸಾಂಪ್ರಾದಾಯಿಕ ವಾಹನಗಳನ್ನು ಮಾರಾಟ ಮಾಡುತ್ತಿರುವ ಕಂಪನಿಗಳಿಂತಲೂ ಸ್ಟಾರ್ಟ್-ಅಪ್ ಕಂಪನಿಗಳು ಹೆಚ್ಚು ಗ್ರಾಹಕರ ಗಮನಸೆಳೆಯುವಲ್ಲಿ ಯಶಸ್ವಿಯಾಗುತ್ತಿದ್ದು, ಈಗಾಗಲೇ ಹಲವಾರು ಸ್ಟಾರ್ಟ್-ಅಪ್ ಕಂಪನಿಗಳು ವಿವಿಧ ಮಾದರಿಯ ಇವಿ ವಾಹನಗಳನ್ನು ಮಾರಾಟ ಮಾಡುವಲ್ಲಿ ಮುನ್ನಡೆ ಸಾಧಿಸುತ್ತಿವೆ.

ಆಕರ್ಷಕ ವಿನ್ಯಾಸದ ಕ್ರೂಸರ್ ಎಲೆಕ್ಟ್ರಿಕ್ ಬೈಕ್ ಅನಾವರಣ

ಈ ನಿಟ್ಟಿನಲ್ಲಿ ಹೊಸ ಪಯತ್ನಕ್ಕೆ ಕೈ ಹಾಕಿರುವ ಆಸ್ಟ್ರೇಲಿಯಾ ಮೂಲದ ಎಲೆಕ್ಟ್ರಿಕ್ ಮೊಬಿಲಿಟಿ ಸಲ್ಯೂಷನ್(ಇಮೊಸ್) ಕಂಪನಿಯು ಗ್ರಾಹಕರ ಬೇಡಿಕೆಯೆಂತೆ ಆಕರ್ಷಕ ಬೆಲೆಯಲ್ಲಿ ಎಲೆಕ್ಟ್ರಿಕ್ ಕ್ರೂಸರ್ ಬೈಕ್ ಮಾದರಿಯೊಂದನ್ನು ಸಿದ್ದಪಡಿಸಿ ಬಿಡುಗಡೆ ಮಾಡುತ್ತಿದೆ.

ಆಕರ್ಷಕ ವಿನ್ಯಾಸದ ಕ್ರೂಸರ್ ಎಲೆಕ್ಟ್ರಿಕ್ ಬೈಕ್ ಅನಾವರಣ

ಆಸ್ಟ್ರೇಲಿಯಾದಲ್ಲಿ ಇದೇ ವರ್ಷಾಂತ್ಯಕ್ಕೆ ಖರೀದಿ ಲಭ್ಯವಾಗಲಿರುವ ಇಸೊಸ್ ಕಂಪನಿ ಉತ್ಪಾದಿತ ಡಬ್ಲ್ಯುವೈಎಲ್‌ಡಿ ಎಲೆಕ್ಟ್ರಿಕ್ ಕ್ರೂಸರ್ ಬೈಕ್ ಮಾದರಿಯು ಹಲವಾರು ಹೊಸ ವೈಶಿಷ್ಟ್ಯತೆಯ ತಾಂತ್ರಿಕ ಸೌಲಭ್ಯಗಳನ್ನು ಪಡೆದುಕೊಂಡಿದ್ದು, ಸಿಂಗಲ್ ಸೀಟ್ ಜೊತೆಗೆ ಅಪೆ ಹ್ಯಾಂಗರ್ ಹ್ಯಾಂಡಲ್‌ಬಾರ್ ಸೌಲಭ್ಯ ಪಡೆದಕೊಂಡಿದೆ.

ಆಕರ್ಷಕ ವಿನ್ಯಾಸದ ಕ್ರೂಸರ್ ಎಲೆಕ್ಟ್ರಿಕ್ ಬೈಕ್ ಅನಾವರಣ

ಹೊಸ ಎಲೆಕ್ಟ್ರಿಕ್ ಬೈಕ್ ಮಾದರಿಯಲ್ಲಿ 18-ಇಂಚಿನ ಟೈರ್, ಅಗಲ್ ಹಿಂಬದಿಯ ಫೆಂಡರ್ ಸೌಲಭ್ಯಗಳನ್ನು ಒಳಗೊಂಡಿದ್ದು, ಫಾವರ್ಡ್ ಮೌಂಟೆಡ್ ಫುಟ್‌ಪೆಗ್ ಸೌಲಭ್ಯದೊಂದಿಗೆ ಆರಾಮದಾಯಕ ರೈಡಿಂಗ್ ಒದಗಿಸುತ್ತದೆ.

ಆಕರ್ಷಕ ವಿನ್ಯಾಸದ ಕ್ರೂಸರ್ ಎಲೆಕ್ಟ್ರಿಕ್ ಬೈಕ್ ಅನಾವರಣ

ಹೊಸ ಮಾದರಿಯ ಎಲೆಕ್ಟ್ರಿಕ್ ಕ್ರೂಸರ್ ಬೈಕ್ ಮಾದರಿಯ ಮಾರಾಟಕ್ಕೆ ಈಗಾಗಲೇ ಅಗತ್ಯ ಪರವಾನಿಗೆ ಕೂಡಾ ಲಭ್ಯವಾಗಿದ್ದು, ಮಾಹಿತಿಗಳ ಪ್ರಕಾರ ಹೊಸ ಬೈಕ್ ಮಾದರಿಯು 1.5kW, 2kW ಮತ್ತು 3kW ಎಲೆಕ್ಟ್ರಿಕ್ ಮೋಟಾರ್ ಆಯ್ಕೆಯೊಂದಿಗೆ 60 ವೊಲ್ಟ್ ಲೀಥಿಯಂ ಅಯಾನ್ ಬ್ಯಾಟರಿ ಪ್ಯಾಕ್ ಹೊಂದಿದೆ.

MOST READ: ಅತಿ ಕಡಿಮೆ ಬೆಲೆಯಲ್ಲಿ ಹೆಚ್ಚು ಮೈಲೇಜ್ ನೀಡುವ ರೆಟ್ರೊ ಎಲೆಕ್ಟ್ರಿಕ್ ಬೈಕ್ ಬಿಡುಗಡೆ

ಹೊಸ ಬೈಕಿನಲ್ಲಿ 12Ah, 20Ah ಮತ್ತು 30Ah ಪವರ್‌ಟ್ರೈನ್ ಮಾದರಿಗಳು 95ಎನ್ಎಂ ಟಾರ್ಕ್ ಉತ್ಪಾದನೆಯೊಂದಿಗೆ ಪ್ರತಿ ಚಾರ್ಜ್‌ಗೆ ಗರಿಷ್ಠ 95 ಕಿ.ಮೀ ಮೈಲೇಜ್ ಪಡೆದುಕೊಂಡಿದ್ದು, ಪೂರ್ಣ ಪ್ರಮಾಣದ ಚಾರ್ಜಿಗ್‌ಗೆ ಗರಿಷ್ಠ 5 ಗಂಟೆ ತೆಗೆದುಕೊಳ್ಳಲಿದೆ.

ಆಕರ್ಷಕ ವಿನ್ಯಾಸದ ಕ್ರೂಸರ್ ಎಲೆಕ್ಟ್ರಿಕ್ ಬೈಕ್ ಅನಾವರಣ

82 ಕೆ.ಜಿ ತೂಕ ಹೊಂದಿರುವ ಡಬ್ಲ್ಯುವೈಎಲ್‌ಡಿ ಎಲೆಕ್ಟ್ರಿಕ್ ಕ್ರೂಸರ್ ಬೈಕ್ ಮಾದರಿಯು ಗರಿಷ್ಠ 200 ಲೋಡ್ ಸಾಮರ್ಥ್ಯವನ್ನು ಪಡೆದುಕೊಂಡಿದ್ದು, ಭಾರತೀಯ ರೂಪಾಯಿ ಲೆಕ್ಕಾಚಾರದಲ್ಲಿ ಈ ಹೊಸ ಬೈಕ್ ಮಾದರಿಯು ರೂ.1.60 ಲಕ್ಷ ಬೆಲೆ ಹೊಂದಿರಲಿದೆ ಎನ್ನಲಾಗಿದೆ.

MOST READ: ಭಾರತದಲ್ಲಿಯೂ ಬಿಡುಗಡೆಯಾಗಲಿದೆ ದುಬಾರಿ ಬೆಲೆಯ ಫೋರ್ಜಾ ಮ್ಯಾಕ್ಸಿ ಸ್ಕೂಟರ್

ಆಕರ್ಷಕ ವಿನ್ಯಾಸದ ಕ್ರೂಸರ್ ಎಲೆಕ್ಟ್ರಿಕ್ ಬೈಕ್ ಅನಾವರಣ

ಈ ಹೊಸ ಎಲೆಕ್ಟ್ರಿಕ್ ಬೈಕ್ ಮಾದರಿಯು ಸದ್ಯಕ್ಕೆ ಭಾರತದಲ್ಲಿ ಬಿಡುಗಡೆಯಾಗುವ ಬಗೆಗೆ ಯಾವುದೇ ಖಚಿತ ಮಾಹಿತಿ ಇಲ್ಲವಾದರೂ ಭವಿಷ್ಯದಲ್ಲಿ ಈ ಇವಿ ಬೈಕ್ ಮಾದರಿಯು ವಿಶ್ವದ ಪ್ರಮುಖ ಮಾರುಕಟ್ಟೆಗಳಿಗೆ ರಫ್ತುಗೊಳ್ಳುವ ಸಾಧ್ಯತೆಗಳಿದ್ದು, ಡಬ್ಲ್ಯುವೈಎಲ್‌ಡಿ ಎಲೆಕ್ಟ್ರಿಕ್ ಕ್ರೂಸರ್ ಬೈಕ್ ಸೇರಿದಂತೆ ಹಲವಾರು ಇವಿ ಬೈಕ್ ಮಾದರಿಗಳು ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆಗೆ ಸಿದ್ದವಾಗಿವೆ.

Most Read Articles

Kannada
English summary
EMoS WYLD Electric Cruiser Motorcycle Unveiled. Read in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X