ದೀಪಾವಳಿ ಸಂಭ್ರಮಕ್ಕಾಗಿ ಜಿಮೋಪೈ ಎಲೆಕ್ಟ್ರಿಕ್ ಸ್ಕೂಟರ್ ಮೇಲೆ ಭರ್ಜರಿ ಆಫರ್

ನೋಯ್ಡಾ ಮೂಲದ ಎಲೆಕ್ಟ್ರಿಕ್ ಸ್ಕೂಟರ್ ಉತ್ಪಾದನಾ ಕಂಪನಿಯಾದ ಜಿಮೋಪೈ ಎಲೆಕ್ಟ್ರಿಕ್ ಸ್ಕೂಟರ್ ಉತ್ಪದನಾ ಕಂಪನಿಯು ದಸರಾ ಮತ್ತು ದೀಪಾವಳಿ ಸಂಭ್ರಮಕ್ಕಾಗಿ ತನ್ನ ಪ್ರಮುಖ ಇವಿ ಸ್ಕೂಟರ್‌ಗಳ ಖರೀದಿ ಮೇಲೆ ಆಕರ್ಷಕ ಆಫರ್ ನೀಡುತ್ತಿದೆ.

ದೀಪಾವಳಿ ಸಂಭ್ರಮಕ್ಕಾಗಿ ಜಿಮೋಪೈ ಎಲೆಕ್ಟ್ರಿಕ್ ಸ್ಕೂಟರ್ ಮೇಲೆ ಆಫರ್

ಕೋವಿಡ್-19 ಪರಿಣಾಮ ಸಂಕಷ್ಟಕ್ಕೆ ಸಿಲುಕಿದ್ದ ಭಾರತೀಯ ಆಟೋ ಉದ್ಯಮವು ಇದೀಗ ಪರಿಸ್ಥಿತಿಗೆ ಅನುಗುಣವಾಗಿ ಚೇತರಿಸಿಕೊಳ್ಳುತ್ತಿದ್ದು, ಹಲವಾರು ಆಟೋ ಕಂಪನಿಗಳ ಹೊಸ ವಾಹನಗಳ ಮಾರಾಟದಲ್ಲಿ ಉತ್ತಮ ಬೆಳವಣಿಗೆ ಕಂಡುಬಂದಿದೆ. ಸಂಕಷ್ಟದಲ್ಲೂ ವಾಹನ ಮಾರಾಟವು ಚೇತರಿಸಿಕೊಂಡಿರುವುದು ಆಟೋ ಕಂಪನಿಗಳಲ್ಲಿ ಮತ್ತಷ್ಟು ಬಲತುಂಬಿದ್ದು, ದಸರಾ ಮತ್ತು ದೀಪಾವಳಿ ಸಂಭ್ರಮಾಚರಣೆ ವೇಳೆ ಮತ್ತಷ್ಟು ಹೊಸ ವಾಹನಗಳನ್ನು ಮಾರಾಟಗೊಳ್ಳುವ ನೀರಿಕ್ಷೆಯಲ್ಲಿವೆ.

ದೀಪಾವಳಿ ಸಂಭ್ರಮಕ್ಕಾಗಿ ಜಿಮೋಪೈ ಎಲೆಕ್ಟ್ರಿಕ್ ಸ್ಕೂಟರ್ ಮೇಲೆ ಆಫರ್

ಹೊಸ ವಾಹನಗಳ ಮಾರಾಟಕ್ಕೆ ಪೂರಕವಾಗಿ ಬಹುತೇಕ ಆಟೋ ಕಂಪನಿಗಳು ಹಲವಾರು ಆಫರ್ ನೀಡುತ್ತಿರುವುದಲ್ಲದೆ ಗ್ರಾಹಕರ ಆಕರ್ಷಣೆಗೆ ಕಾರಣವಾಗಿದ್ದು, ಜಿಮೋಪೈ ಕಂಪನಿಯು ಕೂಡಾ ತನ್ನ ಪ್ರಮುಖ ಇವಿ ಸ್ಕೂಟರ್‌ಗಳ ಖರೀದಿ ಮೇಲೆ ಆಕರ್ಷಕ ರಿಯಾಯ್ತಿ ದರಗಳನ್ನು ಘೋಷಣೆ ಮಾಡಿದೆ.

ದೀಪಾವಳಿ ಸಂಭ್ರಮಕ್ಕಾಗಿ ಜಿಮೋಪೈ ಎಲೆಕ್ಟ್ರಿಕ್ ಸ್ಕೂಟರ್ ಮೇಲೆ ಆಫರ್

ಜಿಮೋಪೈ ಕಂಪನಿಯು ಸದ್ಯ ಮಾರುಕಟ್ಟೆಯಲ್ಲಿ ಗ್ರಾಹಕರ ಬೇಡಿಕೆಯೆಂತೆ ಮಿಸೊ, ಅಸ್ಟ್ರಿಡ್, ಲೈಟ್ ಮತ್ತು ರೈಡರ್ ಇವಿ ಸ್ಕೂಟರ್ ಮಾದರಿಗಳನ್ನು ಮಾರಾಟ ಮಾಡುತ್ತಿದ್ದು, ರೂ. 2 ಸಾವಿರದಿಂದ ಗರಿಷ್ಠ ರೂ. 5,500 ತನಕ ಆಫರ್ ನೀಡುತ್ತಿದೆ.

ದೀಪಾವಳಿ ಸಂಭ್ರಮಕ್ಕಾಗಿ ಜಿಮೋಪೈ ಎಲೆಕ್ಟ್ರಿಕ್ ಸ್ಕೂಟರ್ ಮೇಲೆ ಆಫರ್

ಬ್ರಾಂಡ್ ಪ್ರಮುಖ ಇವಿ ಸ್ಕೂಟರ್ ಮಾದರಿಯಾದ ಅಸ್ಟ್ರಿಡ್ ಆವೃತ್ತಿಯ ಮೇಲೆ ರಿಯಾಯ್ತಿ ದರದ ಜೊತೆಗೆ ಹೆಚ್ಚುವರಿ ಆಕ್ಸೆಸರಿಸ್‌ಗಳು ಲಭ್ಯವಿದ್ದು, ಹೊಸ ಆಫರ್‌ಗಳು ಮುಂದಿನ ತಿಂಗಳು ನವೆಂಬರ್ 20ರ ತನಕ ಅನ್ವಯವಾಗಲಿವೆ. ಇದರೊಂದಿಗೆ ರೂ. 1 ಸಾವಿರ ಮೌಲ್ಯದ ಡಿಸ್ಕೌಂಟ್ ವೊಚರ್ ಕೂಡಾ ಲಭ್ಯವಾಗಲಿದ್ದು, ಕ್ರೆಡರ್ ಕಂಪನಿಯಲ್ಲಿ ಪೆಟ್ರೋಲ್ ದ್ವಿಚಕ್ರವಾಹನಗಳನ್ನು ಇವಿ ಸ್ಕೂಟರ್‌ಗೆ ಬದಲಾಯಿಸಿಕೊಳ್ಳುವ ಗ್ರಾಹಕರಿಗೆ ಡಿಸ್ಕೌಂಟ್ ವೋಚರ್ ಲಭ್ಯವಾಗಲಿದೆ.

ದೀಪಾವಳಿ ಸಂಭ್ರಮಕ್ಕಾಗಿ ಜಿಮೋಪೈ ಎಲೆಕ್ಟ್ರಿಕ್ ಸ್ಕೂಟರ್ ಮೇಲೆ ಆಫರ್

ಇನ್ನು ಕ್ರೆಡರ್ ಕಂಪನಿ ಜೊತೆಗೂಡಿ ಹೊಸ ಎಕ್ಸ್‌ಚೆಂಜ್ ಆಫರ್ ನೀಡುತ್ತಿರುವ ಜಿಮೋಪೈ ಕಂಪನಿಯು ಪೆಟ್ರೋಲ್ ದ್ವಿಚಕ್ರ ವಾಹನಗಳನ್ನು ಇವಿ ಸ್ಕೂಟರ್‌ನೊಂದಿಗೆ ಆಕರ್ಷಕ ಬೆಲೆಯಲ್ಲಿ ಎಕ್ಸ್‌ಚೆಂಜ್ ಆಫರ್ ಘೋಷಣೆ ಮಾಡಿದೆ.

MOST READ: ಭಾರತದಲ್ಲಿಯೂ ಬಿಡುಗಡೆಯಾಗಲಿದೆ ದುಬಾರಿ ಬೆಲೆಯ ಫೋರ್ಜಾ ಮ್ಯಾಕ್ಸಿ ಸ್ಕೂಟರ್

ದೀಪಾವಳಿ ಸಂಭ್ರಮಕ್ಕಾಗಿ ಜಿಮೋಪೈ ಎಲೆಕ್ಟ್ರಿಕ್ ಸ್ಕೂಟರ್ ಮೇಲೆ ಆಫರ್

ಕ್ರೆಡರ್ ಕಂಪನಿಯು ಸೆಕೆಂಡ್ ಹ್ಯಾಂಡ್ ಬೈಕ್ ಮಾರಾಟದಲ್ಲಿ ಮುಂಚೂಣಿಯಲ್ಲಿದ್ದು, ವಿವಿಧ ರಾಜ್ಯಗಳಲ್ಲಿ ಮಾರಾಟ ಮಳಿಗೆಗಳನ್ನು ಹೊಂದಿದೆ. ಇದೀಗ ಜಿಮೋಪೈ ಜೊತೆಗೂಡಿ ಹೊಸ ಯೋಜನೆಗೆ ಚಾಲನೆ ನೀಡಿರುವ ಕ್ರೆಡರ್ ಕಂಪನಿಯು ಸಾಮಾನ್ಯ ಬೈಕ್ ಮಾದರಿಗಳೊಂದಿಗೆ ಎಲೆಕ್ಟ್ರಿಕ್ ಸ್ಕೂಟರ್‌ಗಳ ಎಕ್ಸ್‌ಚೆಂಜ್ ಆಫರ್ ನೀಡುತ್ತಿದ್ದು, ಆಸಕ್ತ ಗ್ರಾಹಕರು ತಮ್ಮ ಸಾಮಾನ್ಯ ಬೈಕ್‌ಗಳನ್ನು ಎಥರ್ ಎಲೆಕ್ಟ್ರಿಕ್ ಸ್ಕೂಟರ್‌ನೊಂದಿಗೆ ಬದಲಾಯಿಸಿಕೊಳ್ಳಲು ಸುವರ್ಣಾವಕಾಶವಾಗಿದೆ.

ದೀಪಾವಳಿ ಸಂಭ್ರಮಕ್ಕಾಗಿ ಜಿಮೋಪೈ ಎಲೆಕ್ಟ್ರಿಕ್ ಸ್ಕೂಟರ್ ಮೇಲೆ ಆಫರ್

ಕ್ರೆಡರ್ ಕಂಪನಿಯು ಸಾಮಾನ್ಯ ಬೈಕ್‌ಗಳನ್ನು ಆಕರ್ಷಕ ಬೆಲೆಗಳೊಂದಿಗೆ ಖರೀದಿ ಮಾಡಲಿದ್ದು, ಎಲೆಕ್ಟ್ರಿಕ್ ಸ್ಕೂಟರ್ ಖರೀದಿಗೆ ಸುಲಭ ಎಕ್ಸ್‌ಚೆಂಜ್ ಆಫರ್ ನೀಡಲಿದೆ. ಕ್ರೆಡರ್ ಕಂಪನಿ ಅಡಿಯಲ್ಲಿ ಹಲವಾರು ಬ್ರಾಂಡ್ ಎಲೆಕ್ಟ್ರಿಕ್ ಸ್ಕೂಟರ್ ಲಭ್ಯಲಿದ್ದು, ಜಿಮೋಪೈ ಇವಿ ಸ್ಕೂಟರ್‌ಗಳು ಕೂಡಾ ಆಕರ್ಷಕವಾಗಿವೆ.

MOST READ: ಅತಿ ಕಡಿಮೆ ಬೆಲೆಯಲ್ಲಿ ಹೆಚ್ಚು ಮೈಲೇಜ್ ನೀಡುವ ರೆಟ್ರೊ ಎಲೆಕ್ಟ್ರಿಕ್ ಬೈಕ್ ಬಿಡುಗಡೆ

ದೀಪಾವಳಿ ಸಂಭ್ರಮಕ್ಕಾಗಿ ಜಿಮೋಪೈ ಎಲೆಕ್ಟ್ರಿಕ್ ಸ್ಕೂಟರ್ ಮೇಲೆ ಆಫರ್

ಜಿಮೊಪೈ ಮಿಸೊ ಮಿನಿ ಎಲೆಕ್ಟ್ರಿಕ್ ಸ್ಕೂಟರ್ ಮಾದರಿಯು ಸದ್ಯ ಭಾರೀ ಜನಪ್ರಿಯತೆ ಗಳಿಸುತ್ತಿದ್ದು, ಒಂದು ಬಾರಿ ಪೂರ್ಣ ಪ್ರಮಾಣದ ಚಾರ್ಚ್ ಮಾಡಿದರೆ 75 ಕಿ.ಮೀ ಮೈಲೇಜ್ ನೀಡುವ ಮಿಸೊ ಇವಿ ಸ್ಕೂಟರ್ ರೂ.44 ಸಾವಿರ ಬೆಲೆ ಹೊಂದಿದೆ.

Most Read Articles

Kannada
English summary
Gemopai Electric Scooters Discounts For October 2020. Read in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X