ಎಲೆಕ್ಟ್ರಿಕ್ ವಾಹನಗಳ ಖರೀದಿಯ ಮೇಲೆ ಸಿಗಲಿದೆ ಭಾರೀ ಪ್ರಮಾಣದ ಸಬ್ಸಿಡಿ

ಭಾರತದಲ್ಲಿ ಎಲೆಕ್ಟ್ರಿಕ್ ವಾಹನಗಳ ಬಳಕೆಯನ್ನು ಹೆಚ್ಚಿಸಲು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಹಲವಾರು ಕ್ರಮಗಳನ್ನು ಕೈಗೊಳ್ಳುತ್ತಿವೆ. ಎಲೆಕ್ಟ್ರಿಕ್ ವಾಹನಗಳ ಬಳಕೆಯನ್ನು ಹೆಚ್ಚಿಸುವ ಮೂಲಕ ವಾಯುಮಾಲಿನ್ಯದ ಸಮಸ್ಯೆಯನ್ನು ಬಗೆಹರಿಸಬಹುದು.

ಎಲೆಕ್ಟ್ರಿಕ್ ವಾಹನಗಳ ಖರೀದಿಯ ಮೇಲೆ ಸಿಗಲಿದೆ ಭಾರೀ ಪ್ರಮಾಣದ ಸಬ್ಸಿಡಿ

ಪೆಟ್ರೋಲ್, ಡೀಸೆಲ್ ವಾಹನಗಳಿಂದ ಹೆಚ್ಚಿನ ವಾಯುಮಾಲಿನ್ಯ ಉಂಟಾಗುತ್ತದೆ. ಎಲೆಕ್ಟ್ರಿಕ್ ವಾಹನಗಳ ಬಳಕೆಯಿಂದ ಕಚ್ಚಾ ತೈಲ ಆಮದು ಪ್ರಮಾಣವು ಸಹ ಕಡಿಮೆಯಾಗಲಿದೆ. ಆದರೆ ಎಲೆಕ್ಟ್ರಿಕ್ ವಾಹನಗಳ ಬೆಲೆಯು ಪೆಟ್ರೋಲ್, ಡೀಸೆಲ್ ವಾಹನಗಳಿಗಿಂತ ದುಬಾರಿಯಾಗಿರುವುದರಿಂದ ಜನರು ಎಲೆಕ್ಟ್ರಿಕ್ ವಾಹನಗಳನ್ನು ಖರೀದಿಸಲು ಹಿಂದೇಟು ಹಾಕುತ್ತಿದ್ದಾರೆ. ಈ ಕಾರಣಕ್ಕೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಎಲೆಕ್ಟ್ರಿಕ್ ವಾಹನಗಳ ಖರೀದಿಗೆ ಸಬ್ಸಿಡಿ ನೀಡುತ್ತಿವೆ.

ಎಲೆಕ್ಟ್ರಿಕ್ ವಾಹನಗಳ ಖರೀದಿಯ ಮೇಲೆ ಸಿಗಲಿದೆ ಭಾರೀ ಪ್ರಮಾಣದ ಸಬ್ಸಿಡಿ

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಇತ್ತೀಚೆಗೆ ಹೊಸ ಎಲೆಕ್ಟ್ರಿಕ್ ವಾಹನ ನೀತಿಯನ್ನು ಪ್ರಕಟಿಸಿದ್ದರು. ಇದರನ್ವಯ ಎಲೆಕ್ಟ್ರಿಕ್ ಕಾರು ಖರೀದಿಸುವವರಿಗೆ ರೂ.1.50 ಲಕ್ಷಗಳ ಸಹಾಯಧನ ನೀಡಲಾಗುವುದೆಂದು ಹೇಳಲಾಗಿದೆ. ಈಗ ಗುಜರಾತ್ ಮುಖ್ಯಮಂತ್ರಿ ವಿಜಯ್ ರೂಪಾನಿ ನೇತೃತ್ವದ ಸಹ ಇದೇ ರೀತಿಯ ಘೋಷಣೆ ಮಾಡಿದ್ದಾರೆ.

MOST READ:ಒಂದು ವರ್ಷದಿಂದ ಚಲಿಸಿದರೂ ಇನ್ನೂ ಗುರಿ ಮುಟ್ಟದ ಟ್ರಕ್

ಎಲೆಕ್ಟ್ರಿಕ್ ವಾಹನಗಳ ಖರೀದಿಯ ಮೇಲೆ ಸಿಗಲಿದೆ ಭಾರೀ ಪ್ರಮಾಣದ ಸಬ್ಸಿಡಿ

ಗುಜರಾತ್ ನ ಕ್ಲೈಮೇಟ್ ಚೇಂಜ್ ಸೆಕ್ಟರ್ ನ 11ನೇ ವಾರ್ಷಿಕೋತ್ಸವದ ಮುನ್ನ ಎಲೆಕ್ಟ್ರಿಕ್ ವಾಹನಗಳ ಬಳಕೆಯನ್ನು ಉತ್ತೇಜಿಸುವ ಹೊಸ ಯೋಜನೆಯನ್ನು ಗುಜರಾತ್ ಸರ್ಕಾರವು ಘೋಷಿಸಿದೆ. ಇದರನ್ವಯ ಎಲೆಕ್ಟ್ರಿಕ್ ವಾಹನಗಳನ್ನು ಖರೀದಿಸುವವರಿಗೆ ಸಹಾಯಧನ ನೀಡಲಾಗುವುದು.

ಎಲೆಕ್ಟ್ರಿಕ್ ವಾಹನಗಳ ಖರೀದಿಯ ಮೇಲೆ ಸಿಗಲಿದೆ ಭಾರೀ ಪ್ರಮಾಣದ ಸಬ್ಸಿಡಿ

ಈ ಯೋಜನೆಯಡಿಯಲ್ಲಿ ಗುಜರಾತ್ ಸರ್ಕಾರವು ಶಾಲಾ - ಕಾಲೇಜು ವಿದ್ಯಾರ್ಥಿಗಳು, ರಿಕ್ಷಾ ಎಳೆಯುವವರು ಹಾಗೂ ಸ್ವಯಂ ಉದ್ಯೋಗಿಗಳಿಗೆ ಅನುದಾನ ನೀಡಲಿದೆ. ಅದರಂತೆ 9ನೇ ತರಗತಿ ಹಾಗೂ ಅದಕ್ಕಿಂತ ಮೇಲ್ಪಟ್ಟ ತರಗತಿಯಲ್ಲಿರುವ ವಿದ್ಯಾರ್ಥಿಗಳು ಎಲೆಕ್ಟ್ರಿಕ್ ದ್ವಿಚಕ್ರ ವಾಹನವನ್ನು ಖರೀದಿಸಿದರೆ ರೂ.12,000ಗಳವರೆಗೆ ಸಹಾಯಧನವನ್ನು ಪಡೆಯಲಿದ್ದಾರೆ.

MOSTREAD: ಇನ್ನು ಮುಂದೆ ಈ ಬಣ್ಣದ ಕಾರುಗಳ ನೋಂದಣಿ ಕಾನೂನುಬದ್ದ

ಎಲೆಕ್ಟ್ರಿಕ್ ವಾಹನಗಳ ಖರೀದಿಯ ಮೇಲೆ ಸಿಗಲಿದೆ ಭಾರೀ ಪ್ರಮಾಣದ ಸಬ್ಸಿಡಿ

ಇದೇ ವೇಳೆ ರಿಕ್ಷಾ ಎಳೆಯುವವರು ಹಾಗೂ ಸ್ವಯಂ ಉದ್ಯೋಗಿಗಳು ಎಲೆಕ್ಟ್ರಿಕ್ ತ್ರಿಚಕ್ರ ವಾಹನವನ್ನು ಖರೀದಿಸಿದರೆ ರೂ.48,000ಗಳ ಸಹಾಯಧನವನ್ನು ಪಡೆಯಲಿದ್ದಾರೆ. ಈ ಯೋಜನೆಯನ್ನು ಗುಜರಾತ್ ಜನತೆ ಸ್ವಾಗತಿಸಿದ್ದಾರೆ.

ಎಲೆಕ್ಟ್ರಿಕ್ ವಾಹನಗಳ ಖರೀದಿಯ ಮೇಲೆ ಸಿಗಲಿದೆ ಭಾರೀ ಪ್ರಮಾಣದ ಸಬ್ಸಿಡಿ

ಸಾಮಾನ್ಯ ಜನರು ಮಾತ್ರವಲ್ಲದೆ ಎಲೆಕ್ಟ್ರಿಕ್ ವಾಹನ ತಯಾರಕ ಕಂಪನಿಗಳು ಸಹ ಈ ಯೋಜನೆಯನ್ನು ಸ್ವಾಗತಿಸಿವೆ. ಇದರಿಂದಾಗಿ ಗುಜರಾತ್ ನಲ್ಲಿ ಎಲೆಕ್ಟ್ರಿಕ್ ವಾಹನಗಳ ಮಾರಾಟವು ಹೆಚ್ಚಾಗಲಿದೆ ಎಂದು ಹೇಳಲಾಗಿದೆ.

MOSTREAD: ಟೊಯೊಟಾ ಇನೋವಾ ಕ್ರಿಸ್ಟಾ ಕಾರಿನ ರೂಫ್ ಸೀಳಿದ ಬಂಡೆ

ಎಲೆಕ್ಟ್ರಿಕ್ ವಾಹನಗಳ ಖರೀದಿಯ ಮೇಲೆ ಸಿಗಲಿದೆ ಭಾರೀ ಪ್ರಮಾಣದ ಸಬ್ಸಿಡಿ

ಈ ಹಣಕಾಸು ವರ್ಷದ ಅಂತ್ಯದ ವೇಳೆಗೆ ಗುಜರಾತ್ ನಲ್ಲಿ ಕನಿಷ್ಠ 10,000 ಎಲೆಕ್ಟ್ರಿಕ್ ದ್ವಿಚಕ್ರ ಹಾಗೂ 5,000 ಎಲೆಕ್ಟ್ರಿಕ್ ತ್ರಿಚಕ್ರ ವಾಹನಗಳನ್ನು ಮಾರಾಟ ಮಾಡುವ ಗುರಿಯನ್ನು ಹೊಂದಲಾಗಿದೆ.

ಎಲೆಕ್ಟ್ರಿಕ್ ವಾಹನಗಳ ಖರೀದಿಯ ಮೇಲೆ ಸಿಗಲಿದೆ ಭಾರೀ ಪ್ರಮಾಣದ ಸಬ್ಸಿಡಿ

2022ರ ವೇಳೆಗೆ 1 ಲಕ್ಷ ಎಲೆಕ್ಟ್ರಿಕ್ ವಾಹನಗಳು ರಾಜ್ಯದ ರಸ್ತೆಗಳಲ್ಲಿ ಚಲಿಸಬೇಕೆಂದು ಗುಜರಾತ್ ಸರ್ಕಾರದ ಗುರಿಯಾಗಿದೆ. ಈ ಗುರಿಯನ್ನು ಸಾಧಿಸುವ ಪ್ರಯತ್ನದ ಭಾಗವಾಗಿ ಎಲೆಕ್ಟ್ರಿಕ್ ವಾಹನಗಳಿಗೆ ಸಬ್ಸಿಡಿ ನೀಡುವ ಯೋಜನೆಯನ್ನು ಗುಜರಾತ್ ಸರ್ಕಾರವು ಘೋಷಿಸಿದೆ.

MOSTREAD: ನ್ಯಾನೋ ಕಾರಿಗೆ ಗುದ್ದಿ ಅಪ್ಪಚ್ಚಿಯಾದ ಹೋಂಡಾ ಸಿಟಿ ಕಾರು

ಎಲೆಕ್ಟ್ರಿಕ್ ವಾಹನಗಳ ಖರೀದಿಯ ಮೇಲೆ ಸಿಗಲಿದೆ ಭಾರೀ ಪ್ರಮಾಣದ ಸಬ್ಸಿಡಿ

ಎಲೆಕ್ಟ್ರಿಕ್ ವಾಹನಗಳಿಗೆ ಸಬ್ಸಿಡಿ ನೀಡುವುದರ ಜೊತೆಗೆ ಗುಜರಾತ್ ಸರ್ಕಾರವು ಹೆಚ್ಚಿನ ಸಂಖ್ಯೆಯ ಚಾರ್ಜಿಂಗ್ ಕೇಂದ್ರಗಳನ್ನು ನಿರ್ಮಿಸುವ ಪ್ರಯತ್ನಗಳನ್ನು ಮಾಡುತ್ತಿದೆ. ಸದ್ಯಕ್ಕೆ ಭಾರತದಲ್ಲಿ ಎಲೆಕ್ಟ್ರಿಕ್ ವಾಹನಗಳಿಗೆ ಮೂಲಸೌಕರ್ಯಗಳ ಕೊರತೆಯಿದೆ.

Most Read Articles

Kannada
English summary
Gujarat Government announces electric vehicle subsidy scheme. Read in Kannada.
Story first published: Monday, September 21, 2020, 16:07 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X