Just In
- 12 hrs ago ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- 13 hrs ago KTM Duke 125 ಬೆಲೆಗೆ ಯಾವೆಲ್ಲಾ ಬೈಕ್ಗಳು ಸಿಗುತ್ತೆ ಗೊತ್ತಾ?: ಪಲ್ಸರ್ನಿಂದ ಹಿಡಿದು MT 15 ವರೆಗೆ
- 14 hrs ago ಅಡ್ವೆಂಚರ್ ಬೈಕ್ ಪ್ರಿಯರಿಗೆ ಸಿಹಿಸುದ್ದಿ: ಬಿಡುಗಡೆಗೆ ಸಜ್ಜಾದ ಸುಜುಕಿ V-Strom 800 DE ಬೈಕ್
- 14 hrs ago Maruti Suzuki: 2024ರ ಮಾರುತಿ ಸ್ವಿಫ್ಟ್ ವಿಶೇಷತೆಗಳು: ಸನ್ರೂಫ್, 35 ಕಿ.ಮೀ ಮೈಲೇಜ್!
Don't Miss!
- News Gold Price: ಇಂದು ಮತ್ತಷ್ಟು ಹೆಚ್ಚಾದ ಬಂಗಾರದ ಬೆಲೆ: ಬೆಳ್ಳಿಯೂ ಬಲು ದುಬಾರಿ
- Technology AI Camera: ಎಐ ಕ್ಯಾಮೆರಾ ಆಯ್ಕೆ ಇರುವ ಅತ್ಯುತ್ತಮ ಸ್ಮಾರ್ಟ್ಫೋನ್ಗಳಿವು! ಬೆಲೆ ಎಷ್ಟು ?
- Sports IPL 2024: RCB vs KKR ಹೆಡ್-ಟು-ಹೆಡ್ ದಾಖಲೆ, ಪಿಚ್ ವರದಿ; ಚಿನ್ನಸ್ವಾಮಿಯಲ್ಲಿ ಗೆಲುವು ಯಾರಿಗೆ?
- Finance ವಿವಿಧ ರಾಜ್ಯಗಳ ನರೇಗಾ ಕಾರ್ಮಿಕರ ವೇತನ ದರ ಪರಿಷ್ಕರಣೆ, ವಿವರ
- Lifestyle ಯೇಸುವನ್ನು ಶಿಲುಬೆಗೆ ಹಾಕಿದ ದಿನವನ್ನು ಗುಡ್ ಪ್ರೈಡೇ ಎಂದು ಹೇಳುವುದೇಕೆ?
- Movies "ನಾವು ದಕ್ಷಿಣ ಭಾರತದವರಾಗಿದ್ರೂ ಭಾಷೆ ಬರುತ್ತೆ, ಸುಂದರವಾಗಿಯೂ ಇದ್ದೇವೆ"; ನಟಿ ಪ್ರಿಯಾಮಣಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಹಾರ್ಲೆ ಡೇವಿಡ್ಸನ್ ಸ್ಟ್ರೀಟ್ 750 ಲಿಮಿಟೆಡ್ ಎಡಿಷನ್ ಬೈಕಿನ ಮೇಲೆ ಭರ್ಜರಿ ರಿಯಾಯಿತಿ
ಹಾರ್ಲೇ ಡೇವಿಡ್ಸನ್ ಕಂಪನಿಯು ತನ್ನ ಸ್ಟ್ರೀಟ್ 750 ಲಿಮಿಟೆಡ್ ಎಡಿಷನ್ ಬೈಕಿನ ಮೇಲೆ ಭರ್ಜರಿ ರಿಯಾಯಿತಿಯನ್ನು ಘೋಷಿಸಿದೆ. ಸ್ಟ್ರೀಟ್ 750 ಲಿಮಿಟೆಡ್ ಎಡಿಷನ್ ಬೈಕಿನ ಮೇಲೆ ಅಧಿಕೃತ ಡೀಲರ್ ಗಳು ರೂ.72,000 ರೂ.ಗಳವರೆಗೆ ಭರ್ಜರಿ ರಿಯಾಯಿತಿ ನೀಡುತ್ತಿದ್ದಾರೆ.
ಹಾರ್ಲೆ ಡೇವಿಡ್ಸನ್ ಸ್ಟ್ರೀಟ್ 750 ಲಿಮಿಟೆಡ್ ಎಡಿಷನ್ ಬೈಕ್ ಬಿಎಸ್-6 ಆವೃತ್ತಿಯಾಗಿದೆ. ಈ ಬೈಕಿನ ಬೆಲೆಯು ಭಾರತದ ಎಕ್ಸ್ ಶೋರೂಂ ಪ್ರಕಾರ ರೂ.5.47 ಲಕ್ಷಗಳಾಗಿದೆ. ರಿಯಾಯಿತಿ ಘೋಷಿಸಿದ ಬಳಿಕ ಈ ಬೈಕಿನ ಬೆಲೆಯು ಭಾರತದ ಎಕ್ಸ್ ಶೋರೂಂ ಪ್ರಕಾರ ರೂ.4.75 ಲಕ್ಷಗಳಾಗಿದೆ. ಭಾರತೀಯ ಮಾರುಕಟ್ಟೆಯಲ್ಲಿ ಹಾರ್ಲೆ ಡೇವಿಡ್ಸನ್ ಕಂಪನಿಯು 10 ವರ್ಷಗಳನ್ನು ಪೂರೈಸಿದ ಹಿನ್ನೆಲೆಯಲ್ಲಿ ಹಾರ್ಲೆ ಡೇವಿಡ್ಸನ್ ಸ್ಟ್ರೀಟ್ 750 ಲಿಮಿಟೆಡ್ ಎಡಿಷನ್ ಬೈಕುಗಳನ್ನು ಬಿಡುಗಡೆಗೊಳಿಸಲಾಗಿತ್ತು.
ಹೊಸ ಸ್ಟ್ರೀಟ್ 750 ಬೈಕ್ ಅನ್ನು ವಿಶೇಷವಾಗಿಸಲು ಕೇವಲ 300 ಬೈಕುಗಳನ್ನು ಮಾತ್ರ ಬಿಡುಗಡೆಗೊಳಿಸಲಾಗಿತ್ತು. 2020ರ ಹಾರ್ಲೆ ಡೇವಿಡ್ಸನ್ ಸ್ಟ್ರೀಟ್ 750 ಲಿಮಿಟೆಡ್ ಎಡಿಷನ್ ಬೈಕ್, ಹಾರ್ಲೆ ಡೇವಿಡ್ಸನ್ ಕಂಪನಿಯು ಬಿಎಸ್6 ನಿಯಮಗಳಿಗೆ ತಕ್ಕಂತೆ ತಯಾರಿಸಿದ ಮೊದಲ ಬೈಕ್ ಆಗಿದೆ.
MOST READ: ಹೊಸ ಬಿಎಂಡಬ್ಲ್ಯೂ ಆರ್ 18 ಕ್ರೂಸರ್ ಬೈಕ್ ಖರೀದಿಗೆ ಬುಕ್ಕಿಂಗ್ ಆರಂಭ
ಲಿಮಿಟೆಡ್ ಎಡಿಷನ್ ಬೈಕಿನ ವಿನ್ಯಾಸದಲ್ಲಿ ಯಾವುದೇ ಬದಲಾವಣೆಗಳಾಗಿಲ್ಲ. ಆದರೆ ಈ ಬೈಕಿನಲ್ಲಿರುವ ಟ್ಯಾಂಕ್ ಹಾಗೂ ಟೇಲ್ ಸೆಕ್ಷನ್ ಹೊಸ ಇಂಡಿಯನ್ ಮೋಟಿಫ್ ವಿನ್ಯಾಸವನ್ನು ಹೊಂದಿವೆ.
ಲಿಮಿಟೆಡ್ ಎಡಿಷನ್ ಬೈಕಿನಲ್ಲಿರುವ ಅಲಾಯ್ ವ್ಹೀಲ್ಗಳು ಕಪ್ಪು ಬಣ್ಣವನ್ನು ಹೊಂದಿವೆ. ಮುಂಭಾಗದಲ್ಲಿರುವ ಸಸ್ಪೆಂಷನ್ ಸೆಟಪ್ ಫೋರ್ಕ್ ಗೈಟರ್ಗಳೂ ಸಹ ಕಪ್ಪು ಬಣ್ಣವನ್ನು ಹೊಂದಿವೆ.
MOST READ: ಬಹಿರಂಗವಾಯ್ತು ಬಿಎಸ್-6 ಹೀರೋ ಎಕ್ಸ್ಪಲ್ಸ್ 200 ಬೈಕಿನ ಮಾಹಿತಿ
ಈ ಕಾಸ್ಮೆಟಿಕ್ ಅಪ್ಡೇಟ್ಗಳ ಹೊರತಾಗಿ, 2020ರ ಹೊಸ ಹಾರ್ಲೆ ಡೇವಿಡ್ಸನ್ ಸ್ಟ್ರೀಟ್ 750 ಬೈಕಿನಲ್ಲಿ ಬೇರೆ ಯಾವುದೇ ಬದಲಾವಣೆಗಳಾಗಿಲ್ಲ. ಈ ಬೈಕಿನಲ್ಲಿ ಸ್ಟ್ಯಾಂಡರ್ಡ್ ಮಾದರಿಯ ಬೈಕಿನಲ್ಲಿರುವಂತಹ ಮೆಕಾನಿಕಲ್ ಅಂಶಗಳನ್ನು ಅಳವಡಿಸಲಾಗಿದೆ. ಇವುಗಳಲ್ಲಿ 749 ಸಿಸಿ ವಿ ಟ್ವಿನ್ ಲಿಕ್ವಿಡ್ ಕೂಲ್ಡ್ ಪೆಟ್ರೋಲ್ ಎಂಜಿನ್ ಸೇರಿದೆ.
ಈ ಎಂಜಿನ್ 3,750 ಆರ್ಪಿಎಂನಲ್ಲಿ 60 ಎನ್ಎಂ ಟಾರ್ಕ್ ಉತ್ಪಾದಿಸುತ್ತದೆ. ಈ ಎಂಜಿನ್ಗೆ ಆರು ಸ್ಪೀಡಿನ ಗೇರ್ಬಾಕ್ಸ್ ಜೋಡಿಸಲಾಗಿದೆ. ಈ ಬೈಕಿನಲ್ಲಿರುವ ಸಸ್ಪೆಂಷನ್ ಕಾರ್ಯಗಳನ್ನು ಮುಂಭಾಗದಲ್ಲಿರುವ ಟೆಲಿಸ್ಕೋಪಿಕ್ ಫ್ರಂಟ್ ಫೋರ್ಕ್ಸ್ ಹಾಗೂ ಹಿಂಭಾಗದಲ್ಲಿರುವ ಟ್ವಿನ್ ಶಾಕ್ಗಳನ್ನು ನಿರ್ವಹಿಸುತ್ತವೆ.
MOST READ: ಇತಿಹಾಸ ಪುಟ ಸೇರಿದ ಜನಪ್ರಿಯ ಬಜಾಜ್ ಡಿಸ್ಕವರ್ ಬೈಕುಗಳು
ಬ್ರೇಕಿಂಗ್ಗಳಿಗಾಗಿ ಎರಡೂ ತುದಿಯಲ್ಲಿ ಡಿಸ್ಕ್ ಬ್ರೇಕ್ಗಳಿವೆ. ಡ್ಯುಯಲ್ ಚಾನೆಲ್ ಎಬಿಎಸ್ ಸ್ಟ್ಯಾಂಡರ್ಡ್ ಆಗಿ ನೀಡಲಾಗುತ್ತದೆ. ಲೈವ್ವೈರ್ ಎಲೆಕ್ಟ್ರಿಕ್ ಬೈಕಿನ ಅನಾವರಣದ ಜೊತೆಗೆ ಹಾರ್ಲೆ ಡೇವಿಡ್ಸನ್ ಸ್ಟ್ರೀಟ್ 750 ಲಿಮಿಟೆಡ್ ಎಡಿಷನ್ ಬೈಕ್ ಅನ್ನು ಬಿಡುಗಡೆಗೊಳಿಸಲಾಯಿತು.
ಸ್ಟ್ರೀಟ್ 750 ಲಿಮಿಟೆಡ್ ಎಡಿಷನ್ ಬೈಕ್ ಅನ್ನು, ಅಮೇರಿಕಾ ಮೂಲದ ಹಾರ್ಲೆ ಡೇವಿಡ್ಸನ್ ಕಂಪನಿಯು ಭಾರತದಲ್ಲಿ 10 ವರ್ಷಗಳನ್ನು ಪೂರೈಸಿದ ಹಿನ್ನೆಲೆಯಲ್ಲಿ ಬಿಡುಗಡೆಗೊಳಿಸಲಾಗಿದೆ. ಹಾರ್ಲೆ ಡೇವಿಡ್ಸನ್ ಸ್ಟ್ರೀಟ್ 750 ಬೈಕ್ ದೇಶಿಯ ಮಾರುಕಟ್ಟೆಯಲ್ಲಿ ರಾಯಲ್ ಎನ್ಫೀಲ್ಡ್ ಕಾಂಟಿನೆಂಟಲ್ ಜಿಟಿ 650 ಹಾಗೂ ಇಂಟರ್ಸೆಪ್ಟರ್ 650 ಬೈಕುಗಳಿಗೆ ಪೈಪೋಟಿ ನೀಡುತ್ತದೆ.